ರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ …
Read More »ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ :
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು. ‘ಅಲ್ಪ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ …
Read More »ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ಪಿಎಸ್‌ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. …
Read More »ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ – ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ
ಬೆಂಗಳೂರು: ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುತ್ತಿರುವ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ತೆರವುಗೊಳಿಸುವಂತ ಗೆಜೆಟ್ ಅಧಿಸೂಚನೆಯಲ್ಲಿ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು …
Read More »ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ …
Read More »ರಾಜ್ಯದಲ್ಲೂ ಪೆಟ್ರೋಲ್ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್ 2 ರೂ ಮತ್ತು ಡೀಸೆಲ್ 1 ರೂ. ನಷ್ಟು ಅಗ್ಗವಾಗಿದೆ. ಇದದ ಬೆನ್ನಲ್ಲೇ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಕಡಿಮೆ ಮಾಡಬೇಕು ಎಂಬ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಹೀಗಾಗಿ, ತೆರಿಗೆ ಇಳಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ …
Read More »ಉಲ್ಟಾ ಹೊಡೆದ ರೈತರ ಲೆಕ್ಕಾಚಾರ, ಪ್ರಕೃತಿಯ ಮುನಿಸು ದೇಶ ವಿದೇಶಕ್ಕೆ ಟೊಮೇಟೊ ರಪ್ತು ಮಾಡುತ್ತಿದ್ದ ಮಾರುಕಟ್ಟೆಗೆ ಬರಗಾಲ
ಏಷ್ಯಾದಲ್ಲೇ ಎರಡನೇ ದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆ ಸದಾ ಜನರಿಂದ ತುಂಬಿ ತುಳುಕುತ್ತಿದ್ದು ಈಗ ಖಾಲಿ ಖಾಲಿ ಹೊಡೆಯುತ್ತಿದೆ. ಅಲ್ಲಲ್ಲಿ ಅಲ್ಪ ಸ್ವಲ್ಪ ಟೊಮೇಟೊ ಬಾಕ್ಸ್ಗಳು ಕಂಡು ಬರುತ್ತಿವೆ.ಕೋಲಾರ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಹಾಗೂ ಉಲ್ಟಾಹೊಡೆದ ರೈತರ ಲೆಕ್ಕಾಚಾರದ ಪರಿಣಾಮವಾಗಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲೇ ಟೊಮೇಟೊಗೆ ಬರ …
Read More »ಬೆಳಗಾವಿ: ‘ಪ್ರವಾಹ ಸಂದರ್ಭದಲ್ಲಿ ಜನ-ಜಾನುವಾರು ತಕ್ಷಣ ರಕ್ಷಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು.: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ‘ಪ್ರವಾಹ ಸಂದರ್ಭದಲ್ಲಿ ಜನ-ಜಾನುವಾರು ತಕ್ಷಣ ರಕ್ಷಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಜೀವ ಹಾನಿಯಾದರೆ 24 ಗಂಟೆಗಳಲ್ಲಿ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ಸಂಭವನೀಯ ಪ್ರವಾಹ ನಿರ್ವಹಣೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಶನಿವಾರ ವಿಡಿಯೊ ಸಂವಾದ ನಡೆಸಿದರು. ‘ಮನೆಗಳಿಗೆ ನೀರು ನುಗ್ಗಿದಾಗ ಆ ಕುಟುಂಬಗಳಿಗೆ ಪರಿಹಾರ ಒದಗಿಸುವಲ್ಲಿ ವಿಳಂಬ ಮಾಡಬಾರದು. ಮಳೆಗಾಲ ಆರಂಭಗೊಳ್ಳಲಿರುವುದರಿಂದ ನದಿತೀರದ ಗ್ರಾಮಗಳಿಗೆ ಭೇಟಿ ನೀಡಿ …
Read More »ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’
ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’ ಎಂದು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಹಾಗೂ ಟಿಎಚ್‌ಒ ಕಾರ್ಯಾಲಯಗಳ ಸಹಯೋಗದಲ್ಲಿ ಇಲ್ಲಿನ ವಡಗಾವಿಯ ಮಾಧವಾಪುರದ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಮಳೆಯಾದಾಗ ಡೆಂಗಿ, ಮಲೇರಿಯಾ, ಚಿಕೂನ್ …
Read More »ಲೋಕಾಯುಕ್ತ: ಅಹವಾಲು ಸ್ವೀಕಾರ 24ರಿಂದ
ಬೆಳಗಾವಿ: ಜಿಲ್ಲೆಯ ತಾಲ್ಲೂಕುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮತ್ತಿತರ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರು, ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ಅಹವಾಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮೇ 24ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ರಾಮದುರ್ಗದ ಪ್ರವಾಸಿ ಮಂದಿರದಲ್ಲಿ ಡಿಎಸ್ಪಿ ಜೆ.ರಘು, ಖಾನಾಪುರ ಪ್ರವಾಸಿ ಮಂದಿರದಲ್ಲಿ ಡಿಎಸ್ಪಿ ಬಿ.ಎಸ್. ಪಾಟೀಲ ಅವರಿಗೆ ದೂರು ನೀಡಬಹುದು. ಮೇ 25ರಂದು ಚಿಕ್ಕೋಡಿ, ನಿಪ್ಪಾಣಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ …
Read More »
Laxmi News 24×7