ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ( PU Board ) ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ …
Read More »ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು, ಬೆಂಗಳೂರಿಗೆ ಅಗ್ರಸ್ಥಾನ
ನವದೆಹಲಿ:ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್‌ಕಾರ್‌ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ, ಭಾರತದ ಸಿಲಿಕಾನ್ ವ್ಯಾಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಇಂದೋರ್, ಡ್ರೈವಿಂಗ್ ಎಥಿಕ್ಸ್‌ನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಜೂಮ್‌ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್‌ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ನವೆಂಬರ್ 2020 ಮತ್ತು ನವೆಂಬರ್ 2021 ರ ನಡುವೆ ಸಂಗ್ರಹಿಸಿದ ಡೇಟಾವು ಮಧ್ಯಪ್ರದೇಶದ ರಾಜಧಾನಿ …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ: ಸತೀಶ್ ಜಾರಕಿಹೊಳಿ
ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಸ್ವರ್ಣ ಮಹೋತ್ಸವ ಹಾಗೂ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ಯ್ರ ಸಿಕ್ಕು 60 ವರ್ಷಗಳ ಅವಧಿಯಲ್ಲಿ ಡಾ. …
Read More »31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ
ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಹತ್ಯೆಗೈದಿದ್ದ ಹಂತಕ ಪೆರಾರಿವಾಲನ್‌ನನ್ನು 31 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೆರಾರಿವಾಲನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೆರಾರಿವಾಲನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ …
Read More »ಇನ್‍ಸ್ಟಾದಲ್ಲಿ ಆರಂಭ, ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್
ಬೆಂಗಳೂರು: ನಗರದ ಎರಡು ಪ್ರತಿಷ್ಠಿತ ಖಾಸಗಿ ಶಾಲೆ ವಿದ್ಯಾರ್ಥಿನಿಯರ ಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಬೀದಿಯಲ್ಲಿ ಬಡಿದಾಡಿಕೊಂಡ ವೀಡಿಯೋ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಾರಂಭವಾಗಿದ್ದು ಹೇಗೆ? ಇನ್‍ಸ್ಟಾಗ್ರಾಮ್ ಮೆಸೇಜ್‍ನಲ್ಲಿ ಯುವಕನೊಬ್ಬನ ತಂದೆ ವಿಚಾರವಾಗಿ ಗಲಾಟೆ ಪ್ರಾರಂಭವಾಗಿದೆ. ಇವನ ಬೆಂಬಲಕ್ಕೆ ವಿದ್ಯಾರ್ಥಿನಿಯರು ಬಂದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ನಡುವೆ ‘ನಮ್ಮ ಸ್ಕೂಲ್ ಟಾಪ್ ಸ್ಕೂಲ್’ ಎಂದು ಅವಾಜ್ ಹಾಕುತ್ತ ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ದಾರೆ. ಅಷ್ಟಕ್ಕೆ ಮುಗಿಯದೆ ವಿದ್ಯಾರ್ಥಿನಿಯರು, ಮನೆಯ ಬಳಿ …
Read More »ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು
ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. …
Read More »ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಆರ್‌ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
Read More »ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ,B.S.Y.ಗೆ ಶರಣಾದ B.J.P.
ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ಅಂತ ವರಿಷ್ಠರಿಗೆ ಮನವರಿಕೆಯಾಗಿದೆ. ಅವರ ಬೇಡಿಕೆಯಂತೆ ಪುತ್ರನಿಗೆ ಸೂಕ್ತ ಸ್ಥಾನಮಾನ ನೀಡಲು ಹೈಕಮಾಂಡ್ ಒಲವು ತೋರಿದೆ. ಈ ಮೂಲಕ ಹಲವು ದಶಕಗಳಿಂದ ಬಿಎಸ್‌ವೈ ಹಿಡಿತದಲ್ಲಿದ್ದು ಕೈ ತಪ್ಪಿ ಹೋಗಲಿದೆ ಎನ್ನುವಷ್ಟರಲ್ಲೇ ಮತ್ತೆ ರಾಜ್ಯ ಬಿಜೆಪಿ ಅವರ ತೆಕ್ಕೆಗೆ ಜಾರತೊಡಗಿದೆ. ಹೌದು. ವಿಜಯೇಂದ್ರ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಪರಿಷತ್‌ಗೆ ಶಿಫಾರಸ್ಸು ಮಾಡುವುದರೊಂದಿಗೆ ಪಕ್ಷ ಯಡಿಯೂರಪ್ಪ ಅವರಿಗೆ ಶರಣಾಗಿದೆ. ವರಿಷ್ಠರು ಒಲವು ತೋರಿದ …
Read More »ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು
ವಿಜಯಪುರ : ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ. ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕುರಿಗಾಹಿ …
Read More »ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶೀಘ್ರ 8650 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …
Read More »
Laxmi News 24×7