ಶಿವಮೊಗ್ಗ: 2023ರ ಚುನಾವಣೆ ಶಿವಮೊಗ್ಗ ಜಿಲ್ಲೆ ಪಾಲಿಗಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ನಿರ್ಗಮನದಿಂದ ತೆರವಾಗುವ ಕ್ಷೇತ್ರಗಳಿಗೆ ಮುಂದ್ಯಾರು? ಬಣ ರಾಜಕಾರಣದಿಂದ ಕಂಗೆಟ್ಟಿರುವ ಕಾಂಗ್ರೆಸ್ ವರಿಷ್ಠರು ಇದಕ್ಕೆ ಮದ್ದು ಅರೆಯುವರೆ? ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದೇ? ಎಂಬುದೆಲ್ಲ ಚುನಾವಣೆಗೆ ವರ್ಷವಿರುವಾಗಲೇ ಚರ್ಚೆಗೆ ಗ್ರಾಸವಾಗಿದೆ. ಉತ್ತರಾಧಿಕಾರಿ ಯಾರು?: ಶಿಕಾರಿಪುರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪರ್ಧಿಸುವುದಿಲ್ಲ ಎಂಬ ಮಾತು ಪಕ್ಷದೊಳಗೆ ಕೇಳಿ ಬರುತ್ತಿದೆ. ಹಾಗಾದರೆ ಅವರ …
Read More »ಬಂಗಾಳ ಕೊಲ್ಲಿಯಲ್ಲಿವಾಯುಭಾರ ಕುಸಿತ, ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ:
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ …
Read More »ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ
ಬೆಳಗಾವಿ/ಪಣಜಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು ಎಂದು ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಗೋವಾ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಗೋವಾದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದಣ್ಣ ಮೇಟಿ, ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು. ಗೋವಾಗೆ ಹರಿಯುವ ಮಹದಾಯಿ ನೀರನ್ನು ಕರ್ನಾಟಕ ಸರ್ಕಾರ ನಿಲ್ಲಿಸಬಾರದು. ನಮ್ಮ ಕರ್ಮಭೂಮಿ ಗೋವಾ, ಜನ್ಮಭೂಮಿ ಕರ್ನಾಟಕ. ಗೋವಾ ನಮಗೆ ಅನ್ನ …
Read More »ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್
ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ. ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ …
Read More »ಎಂಎಲ್‌ಸಿ ಚುನಾವಣೆ, ಪಟ್ಟಿಯಲ್ಲಿ ಲಕ್ಷ್ಮಣ ಸವದಿ ಹೆಸರು:
ಬೆಂಗಳೂರು, ಮೇ 16: ರಾಜ್ಯದ ಮುಂಬುರುವ ಎಂಎಲ್‌ಸಿ ಚುನಾವಣೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಬಿಜೆಪಿ ಕರ್ನಾಟಕ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ತಮ್ಮ ಹೆಸರು ಸೇರಿದಂತೆ 20 ಹೆಸರುಗಳನ್ನು ಬಿಜೆಪಿ ಕೋರ್ ಕಮಿಟಿಯ ಸಭೆಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಬಿಜೆಪಿಯ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಲಕ್ಷ್ಮಣ ಸವದಿ ಅವರ ಎಂಎಲ್‌ಸಿ ಅವಧಿಯು ಇದೇ ಜೂನ್‌ನಲ್ಲಿ ಕೊನೆಗೊಳ್ಳಲಿದ್ದು ಈ ಕುರಿತಂತೆ …
Read More »ಬಿಜೆಪಿಯಲ್ಲಿ ತಳಮಳ ಸೃಷ್ಟಿಸಿದ ವಿಜಯೇಂದ್ರ ಹೆಸರು; ವರಿಷ್ಠರತ್ತ ಎಲ್ಲರ ಚಿತ್ತ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯಲ್ಲಿ ಸೇರಿಸಿರುವುದು ಬಿಜೆಪಿ ಆಂತರಿಕ ವಲಯದಲ್ಲಿ ತಳಮಳ ಸೃಷ್ಟಿಸಿದೆ. ಕೋರ್ ಕಮಿಟಿಯ ಈ ನಿರ್ಣಯಕ್ಕೆ ರಾಷ್ಟ್ರೀಯ ನಾಯಕರು ಒಪ್ಪಿಗೆಯ ಮುದ್ರೆ ಹಾಕುವರೇ ಎಂಬ ಜಿಜ್ಞಾಸೆ ಈಗ ಆರಂಭವಾಗಿದೆ. ರಾಜ್ಯ ಬಿಜೆಪಿ ಕೋರ್ ಕಮಿಟಿ ಶಿಫಾರಸ್ಸು ಮಾಡಿದ ಹೆಸರುಗಳು ಹಾಗೂ ನಿರ್ಣಯಗಳನ್ನು ವರಿಷ್ಠರು ತಿರಸ್ಕರಿಸಿದ ಹಲವು ಉದಾಹರಣೆಗಳು ಇವೆ. ಈ ಹಿಂದೆ ಯಡಿಯೂರಪ್ಪ …
Read More »ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‌ಐ ಅಭ್ಯರ್ಥಿಗಳು; ಪತ್ರ ವೈರಲ್
ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗುತ್ತಿದ್ದಂತೆ ಕರ್ನಾಟಕ ಸರ್ಕಾರ (Karnataka Government) ಮರು ಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಜೊತೆಗೆ ದೇಶದ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ನೊಂದ ಪಿಎಸ್‌ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ಪುಟಗಳ ಪತ್ರ …
Read More »ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ
ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ. ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ. ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. …
Read More »ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?
ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜಿಲ್ಲೆಯಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ರಾಜಕೀಯ ವಲಯದಲ್ಲಿ ಚುನಾವಣೆ ಪೂರ್ವ ಚಟುವಟಿಕೆಗಳು ಗರಿಗೆದರಿವೆ. ಮುಖ್ಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ಬಿಂಬಿಸಲು ನಾನಾ ಕಸರತ್ತು ನಡೆಸುತ್ತಿದ್ದು, ಕುತೂಹಲ ಮೂಡಿಸಿದೆ. ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ (ಬ್ಯಾಡಗಿ, ಶಿಗ್ಗಾವಿ-ಸವಣೂರು, ರಾಣಿಬೆನ್ನೂರು, ಹಿರೇ ಕೆರೂರು, ಹಾವೇರಿ-ಮೀಸಲು) ಶಾಸಕರಿದ್ದಾರೆ. ಹಾನಗಲ್ಲ ಕ್ಷೇತ್ರ ಮಾತ್ರ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಈ ಬಾರಿಯ ಚುನಾ ವಣೆಯಲ್ಲಿ ಯಾವುದೇ …
Read More »ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…!
ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು. ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ …
Read More »
Laxmi News 24×7