Breaking News

ರಾಜಕೀಯ

ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ರಿಸಲ್ಟ್

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ ಮೂರನೇ ವಾರದಲ್ಲಿ ಪ್ರಕಟ ವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ.   ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.  

Read More »

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ ಉಮಾದೇವಿ ಹೇಳಿದರು.   ಪಟ್ಟಣದ ಜಿಜೆಸಿಪಿ ಕಾಲೇಜು ಬಳಿ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು, ನಿಗದಿತ ವೇತನವಿಲ್ಲದೆ ಅನಿಶ್ಚಿತೆಯಿಂದ ಬದುಕುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ವೇತನದ ಭದ್ರತೆ ಕಲ್ಪಿಸಬೇಕು, ಆರ್ ಸಿ ಎಚ್ ಪೋರ್ಟಲ್ ಮೂಲಕ ನೀಡಲಾಗುತ್ತಿರುವ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ನಿಗದಿತ …

Read More »

ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

ನವದೆಹಲಿ/ ಬೆಂಗಳೂರು: ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ  ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ. ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ …

Read More »

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಪತ್ನಿ ಆತ್ಮಹತ್ಯೆ

ಚೆನ್ನೈ: ತನ್ನ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದಿರುವುದಕ್ಕೆ ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದ ರಮ್ಯಾ ಆತ್ಮಹತ್ಯೆ ಶರಣಾದ ಗೃಹಿಣಿ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಎಂಬವರನ್ನು ವಿವಾಹವಾಗಿದ್ದರು. ಮೂಲಗಳ ಪ್ರಕಾರ, ರಮ್ಯಾ ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಮದುವೆಯ ನಂತರ ತನ್ನ ತಾಯಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು. ಇದೇ ವೇಳೆ …

Read More »

ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು. ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ. …

Read More »

ಮೇ 11ರಂದು ಬೆಳಗಾವಿಯಲ್ಲಿ ಶರದ್‌ ಪವಾರ್‌ ಪ್ರವಾಸ

ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್‌ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.   ‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. …

Read More »

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’: ರೈತರ ಪ್ರತಿಭಟನೆ

ಬೆಳಗಾವಿ: ‘ಭಾರತಮಾಲಾ ಯೋಜನೆಯಲ್ಲಿ ಕೈಗೊಳ್ಳುತ್ತಿರುವ ಪಣಜಿ-ಹೈದರಾಬಾದ್ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ-ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’ ಎಂದು ಒತ್ತಾಯಿಸಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ‘ಈ ಹೆದ್ದಾರಿ ನಿರ್ಮಾಣಕ್ಕಾಗಿ ಸರ್ಕಾರ ಬೆಳಗಾವಿ ತಾಲ್ಲೂಕಿನ ಬಸ್ತವಾಡ, ಕಮಕಾರಟ್ಟಿ, ಶಗನಮಟ್ಟಿ, ತಾರೀಹಾಳ, ಚಂದನಹೊಸೂರ, ಗಣಿಕೊಪ್ಪ, ಮರಿಕಟ್ಟಿ, ಹಣ್ಣಿಕೇರಿ, ಜಕನಾಯ್ಕನಕೊಪ್ಪ, ನಾಗನೂರ ಮತ್ತಿತರ ಗ್ರಾಮಗಳ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ …

Read More »

ಲಕ್ಷ್ಮಿ ಹೆಬ್ಬಾಳಕರ ಸಕ್ಕರೆ ಕಾರ್ಖಾನೆಯದ್ದೂ ಬಾಕಿ ಇದೆ: ಸಚಿವ ಎಸ್‌.ಟಿ. ಸೋಮಶೇಖರ್

ಬೆಳಗಾವಿ: ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ₹6 ಸಾವಿರ‌ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಎಂದು ಸಹಕಾರ ‌ಸಚಿವ ಎಸ್‌.ಟಿ. ಸೋಮಶೇಖರ್ ತಿಳಿಸಿದರು. ಶಾಸಕ ರಮೇಶ ಜಾರಕಿಹೊಳಿ ಅವರ ಸೌಭಾಗ್ಯಲಕ್ಷಿ ಸಕ್ಕರೆ ಕಾರ್ಖಾನೆಯಿಂದ ಹಣ ಬಾಕಿ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಯಾವೆಲ್ಲ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆಯೋ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.   ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ. …

Read More »

ಹೊಸಕೋಟಿ ಗ್ರಾಮವು ರಸ್ತೆ, ಚರಂಡಿ, ವೈದ್ಯಕೀಯ ಸೌಕರ್ಯ, ಶಿಕ್ಷಣ, ಆರೋಗ್ಯ ಸೇವೆ, ಸಾರಿಗೆ ಮೊದಲಾದ ಮೂಲ ಸೌಲಭ್ಯಗಳಿಂದ ವಂಚಿತ

ನೇಸರಗಿ (ಬೆಳಗಾವಿ ಜಿಲ್ಲೆ): ಸಮೀಪದ ಹೊಸಕೋಟಿ ಗ್ರಾಮವು ರಸ್ತೆ, ಚರಂಡಿ, ವೈದ್ಯಕೀಯ ಸೌಕರ್ಯ, ಶಿಕ್ಷಣ, ಆರೋಗ್ಯ ಸೇವೆ, ಸಾರಿಗೆ ಮೊದಲಾದ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಹಣಬರಹಟ್ಟಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಗ್ರಾಮ ಬರುತ್ತದೆ. ಪಟ್ಟಣದಿಂದ ದೂರವಿರುವ ಅಲ್ಲಿನ ಜನರಿಗೆ ನಾಗರಿಕ ಸವಲತ್ತುಗಳು ಮರೀಚಿಕೆಯಾಗಿವೆ. ಬೈಲಹೊಂಗಲ ತಾಲ್ಲೂಕು ಕೇಂದ್ರದಿಂದ 25 ಕಿ.ಮೀ., ನೇಸರಗಿ ಹೋಬಳಿ ಕೇಂದ್ರದಿಂದ 7 ಕಿ.ಮೀ. ದೂರದಲ್ಲಿ ಈ ಗ್ರಾಮವಿದೆ. 2,400 ಮತದಾರರು ಸೇರಿದಂತೆ 2,600 ಜನಸಂಖ್ಯೆ ಹೊಂದಿದೆ. ಇಲ್ಲಿಂದ …

Read More »

ನನ್ನ ಹೇಳಿಕೆಗೆ ನೋಟಿಸ್‌ ಅಲ್ಲ, ಪ್ರಮೊಷನ್ ಸಿಗುತ್ತೆ: ಬಸನಗೌಡ ಪಾಟೀಲ ಯತ್ನಾಳ

ಕಲಬುರಗಿ: ‘₹ 2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂಬ ಹೇಳಿಕೆ ಬಗ್ಗೆ ನನಗೆ ನೋಟಿಸ್ ಸಿಗಲ್ಲ. ಬದಲಾಗಿ ಪ್ರಮೊಷನ್ ಸಿಗುತ್ತದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ‘ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕಾಂಗ ಸಭೆಯಲ್ಲಿ ಪ್ರಶ್ನಿಸಿದ್ದೆ. ಆಗ ಕೊಟ್ಟ ನೋಟಿಸ್‌ಗೆ 17 ಪುಟ ಉತ್ತರ ಬರೆದಿದ್ದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ …

Read More »