80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ರಾಜ್ಯದ ಮೊದಲ ತೇಲುವ ಸೇತುವೆ (Floating bridge) ಉದ್ಘಾಟನೆಗೊಂಡ ನಾಲ್ಕೇ ದಿನಕ್ಕೆ ತುಂಡಾಗಿದೆ. ಮಲ್ಪೆ ಬೀಚ್ ನಲ್ಲಿ ತಲೆ ಎತ್ತಿದ್ದ ಸೇತುವೆ ಸಮುದ್ರದ ಅಲೆಗಳ ರಭಸಕ್ಕೆ ಹಾನಿಗೀಡಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರವಾಸಿಗರಿಗೆ ತೊಂದರೆ ಆಗಿಲ್ಲ. ಸಮುದ್ರದ ಅಲೆಗಳೊಂದಿಗೆ ತೇಲುವ ಈ ಸೇತುವೆ 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲ ವಿಸ್ತೀರ್ಣ ಹೊಂದಿತ್ತು. ಸೇತುವೆಯ ಎರಡು ಕಡೆಗಳಲ್ಲಿ ರೇಲಿಂಗ್ …
Read More »ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹ: ಆರೋಪಿಗಳನ್ನ ಬಂಧಿಸಿದ ಪೊಲೀಸರು
ಬೆಂಗಳೂರು: ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. , ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳು. ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದಿಕೊಳ್ಳಲಾಗಿದೆ. ಈ ಮೂವರು ಸರಾಯಿ ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ. ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ …
Read More »ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್
ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …
Read More »500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ …
Read More »‘ಸುಪ್ರೀಂ ಕೋರ್ಟ್ ಆದೇಶ ಎಲ್ಲರಿಗೂ ಅನ್ವಯ’
ಬೆಂಗಳೂರು: ‘ಧ್ವನಿವರ್ಧಕ ಬಳಕೆ ನಿರ್ಬಂಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ದೇವಸ್ಥಾನ, ಮಸೀದಿ ಎಲ್ಲವಕ್ಕೂ ಅನ್ವಯವಾಗುತ್ತದೆ. ಈ ವಿಚಾರದಲ್ಲಿ ಸಮಾಜಘಾತುಕ ಶಕ್ತಿಗಳು ರಾಜಕಾರಣ ಮಾಡಲು ಅವಕಾಶ ನೀಡುವುದಿಲ್ಲ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಮಸೀದಿಗಳಲ್ಲಿ ಆಜಾನ್ ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳ ಮೂಲಕ ಭಜನೆ ಮೊಳಗಿಸಬೇಕೆಂಬ ಹಿಂದುತ್ವ ಪರ ಸಂಘಟನೆಗಳ ಹೇಳಿಕೆ ಕುರಿತು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಯಾರೇ ತಪ್ಪು ಮಾಡಿದರೂ ನಾವು ಕ್ರಮ ಜರುಗಿಸುತ್ತೇವೆ. ಅವರು …
Read More »‘ಗ್ರಾಮ ಒನ್’ ಸೇರಿದಂತೆ ವಿವಿಧ ಸೇವಾ ಕೇಂದ್ರಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿ ಮೇಲೆ ನಿಗಾ ಇರಿಸಬೇಕು.: ಬೊಮ್ಮಾಯಿ
ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆಯಿಂದ ಸರ್ಕಾರದ ವರ್ಚಸ್ಸಿಗೆ ಹಾನಿಯಾಗುತ್ತದೆ. ಯಾವುದೇ ಸಂದರ್ಭದಲ್ಲೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಭಾನುವಾರ ಎಚ್ಚರಿಕೆ ನೀಡಿದರು. ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ನಾಲ್ಕು ಗಂಟೆಗಳ ಕಾಲ ವಿಡಿಯೊ ಕಾನ್ಫರೆನ್ಸ್ ನಡೆಸಿದ ಅವರು, ಆಡಳಿತದ ವಿವಿಧ ಹಂತದಲ್ಲಿರುವ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ತಾಕೀತು ಮಾಡಿದರು. ಚುನಾವಣಾ ವರ್ಷವಾಗಿರುವ ಕಾರಣದಿಂದಬಜೆಟ್ ಘೋಷಣೆಗಳನ್ನು ಕಾಲಮಿತಿ ಯೊಳಗೆ …
Read More »ನನಗಿನ್ನೂ ಸಿಎಂ ಅವಕಾಶವಿದೆ: ಸಚಿವ ಉಮೇಶ್ ಕತ್ತಿ
ಬ್ರಹ್ಮಾವರ: ನನಗಿನ್ನೂ 61 ವರ್ಷ. 75 ವರ್ಷದ ತನಕ ಯುವಕನೇ. ದೇವರ ದಯೆ, ರಾಜ್ಯದ ಜನತೆಯ ಆಶೀರ್ವಾದವಿದ್ದರೆ ನಾನು ಸಿಎಂ ಆಗುತ್ತೇನೆ ಎಂದು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ಹೇಳಿದರು. ಅವರು ನೀಲಾವರದಲ್ಲಿ ಕೀರ್ತಿಶೇಷ ಪೇಜಾವರ ಶ್ರೀಗಳ ಸ್ಮೃತಿ ವನಕ್ಕೆ ಭೂಮಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಸಿಎಂ ಆಗುವ ಅವಸರದಲ್ಲಿಲ್ಲ. ಪದವಿ ಬೇಕು ಎಂದು ಕೇಳುವುದಿಲ್ಲ. ಸಿಎಂ …
Read More »ಟೊಮೆಟೋ ದರ ಮತ್ತೆ ಏರಿಕೆ;
ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ. ಕಳೆದ ಡಿಸೆಂಬರ್ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ …
Read More »ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ
ಕಲಬುರಗಿ: ತೀವ್ರ ಕುತೂಹಲ ಕೆರಳಿಸಿರುವ ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ನೀರಾವರಿ ಇಲಾಖೆ ಎಂಜಿನಿಯರ್ ಮಂಜುನಾಥ ಮೇಳಕುಂದಿ 2021ರಲ್ಲಿ ಜೆಇ ಪರೀಕ್ಷೆಯಲ್ಲಿ ಅಕ್ರಮ ನಡೆಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿ ಜೈಲು ಪಾಲಾಗಿದ್ದ. ಆದರೂ, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ ಎನ್ನುವುದು ಈಗ ಬಯಲಾಗಿದೆ. 2021ರ ಡಿಸೆಂಬರ್‌ನಲ್ಲಿ ನಡೆದಿರುವ ಲೋಕೋಪಯೋಗಿ ಇಲಾಖೆ ಎಇ ಮತ್ತು ಜೆಇ ಪರೀಕ್ಷೆಯಲ್ಲೂ ಬ್ಲೂéಟೂತ್ ಬಳಕೆ …
Read More »ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ. ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು …
Read More »
Laxmi News 24×7