Breaking News

ರಾಜಕೀಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಕಿಚ್ಚನ ಬೆನ್ನಿಗೆ ನಿಂತ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಆದರೆ ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಪರ ನಿಂತಿದ್ದಾರೆ. ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ‌ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ.‌ ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. …

Read More »

ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನಕ್ಕೆ ಪೈಲೆಟ್‌ ಗೈರು!

ಬೆಂಗಳೂರು: ಪೈಲೆಟ್‌ ಅನುಪಸ್ಥಿತಿಯಿಂದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ ಬೆಳವಣಿಗೆ ಬುಧವಾರ ನಡೆದಿದೆ. ಇದನ್ನು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. “ಮಧ್ಯಾಹ್ನ ಮಂಗಳೂರಿಗೆ ತೆರಳಬೇಕಿತ್ತು. ಆದರೆ, ಪೈಲೆಟ್‌ ಒಬ್ಬರು ಬಾರದ ಕಾರಣ ವಿಮಾನ ಮೇಲೇರಲಿಲ್ಲ’ ಎಂದು ಮೂಡುಬಿದಿರೆ ಕಾರ್ಯಕ್ರಮದಲ್ಲಿ ಸಿಎಂ ಹೇಳಿದರು. ಆದರೆ ಅಧಿಕಾರಿಗಳ ಮೂಲದ ಪ್ರಕಾರ ತಾಂತ್ರಿಕ ಸಮಸ್ಯೆ ಉಂಟಾಗಿದ್ದರಿಂದ ವಿಮಾನ ಮೇಲೇರದೆ ಸಿಎಂ ನಂತರ ಪ್ರತ್ಯೇಕ ಹೆಲಿಕ್ಯಾಪ್ಟರ್‌ ಮೂಲಕ ಮೂಡುಬಿದಿರೆಗೆ ತೆರಳುವಂತಾಯಿತು ಎನ್ನಲಾಗಿದೆ.

Read More »

ಗೆಳೆಯನ ಪತ್ನಿ ಜೊತೆ ಅನೈತಿಕ ಸಂಬಂಧ; ಪಾರ್ಟಿ ಮಾಡಿ ತಲೆ ಮೇಲೆ ಕಲ್ಲೆತ್ತಿ ಹಾಕಿ ಬರ್ಬರ ಕೊಲೆ

ಆರೋಪಿ ತಿರುಪತಿ ಪತ್ನಿ ಜೊತೆ ಮೃತ ತಿರುಪತಿ ಅನೈತಿಕ ಸಂಬಂಧ ಹೊಂದಿದ್ದ. ಪತ್ನಿ ಜೊತೆಗಿನ ಅನೈತಿಕ ಸಂಬಂಧ ಬಿಡುವಂತೆ ಆರೋಪಿ ತಿರುಪತಿ ಬೇಡಿಕೊಂಡಿದ್ದ. ಇಡೀ ಊರಿಗೆ ವಿಷಯ ಗೊತ್ತಾಗುತ್ತಿದೆ ತನ್ನ ಪತ್ನಿ ಸಹವಾಸ ಬಿಡುವಂತೆ ಮನವಿ ಮಾಡಿದ್ದ.ರಾಯಚೂರು: ಗೆಳೆಯನ ಪತ್ನಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಅನಾಥ ಹೆಣವಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಣಕಲ್ನಲ್ಲಿ ನಡೆದಿದೆ. ಗೆಳೆಯ ಕೈಕಾಲು ಬಿದ್ದರೂ ಅನೈತಿಕ ಸಂಬಂಧ ಬಿಡದ ಹಿನ್ನೆಲೆ ಕೊನೆಗೆ …

Read More »

ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆ; 10 ಶ್ವಾನಗಳಿಗೆ ವಿಷವುಣಿಸಿ ಕೊಂದ ದುರುಳರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ. ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.   ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ …

Read More »

ಮಕ್ಕಳಾಗದ ದಂಪತಿಗಳೇ ಈ ವಕೀಲೆ ಟಾರ್ಗೆಟ್ :ಈ ಕಿಲಾಡಿ ಲೇಡಿ ಮಾಡಿದ್ದೇನು ಗೊತ್ತಾ?

ಮಕ್ಕಳಾಗದ ದಂಪತಿಗಳನ್ನ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನು ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚಿಸುತ್ತಿದ್ದ ಭಾನುಮತಿಯನ್ನು ವಶಕ್ಕೆ ಪಡೆಯಲಾಗಿದೆ. ವೃತ್ತಿಯಲ್ಲಿ ವಕೀಲೆಯಾಗಿದ್ದ ಭಾನುಮತಿ, ಮಕ್ಕಳ ಕಳ್ಳತನ ಪ್ರಕರಣದ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದಳು. ಪೋಷಕರನ್ನ ಪುಸಲಾಯಿಸಿ, ಕದ್ದು ಮಕ್ಕಳನ್ನ ತಂದು ಇತರ ಆರೋಪಿಗಳು ಭಾನುಮತಿಗೆ ನೀಡುತ್ತಿದ್ದರು. ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯ್ತನದ ಹೆಸರಿನಲ್ಲಿ ಯಾರದ್ದೋ ಮಕ್ಕಳನ್ನ ನೀಡಿ ವಂಚನೆ ಮಾಡುತ್ತಿದ್ದರು …

Read More »

ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ

ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್‌ (29) ಕೊಲೆಯಾದ ವ್ಯಕ್ತಿ.   ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್‌ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು …

Read More »

ಆರಗ ಜ್ಞಾನೇಂದ್ರ ಗೃಹ ಸಚಿವ ಹುದ್ದೆಯಲ್ಲಿರಲು ನಾಲಾಯಕ್ :ಶಾಸಕ ಅಬ್ಬಯ್ಯ ಪ್ರಸಾದ್

ಮಾಹಿತಿ ಕೊರತೆಯಿರುವ ಆರಗ ಜ್ಞಾನೇಂದ್ರ ಹೋಮ್​​ ಮಿನಿಸ್ಟರ್ ಹುದ್ದೆಯಲ್ಲಿ ಇರಲು ನಾಲಾಯಕ್ , ಎಂದು ಹುಬ್ಬಳ್ಳಿ- ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ಡಬಲ್ ಸ್ಯ್ಟಾಂಡ್ ಎಂದು ಆರಗ ಜ್ಞಾನೇಂದ್ರ ಆರೋಪ ಮಾಡಿದ್ದರು.   ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಹೋಮ್ ಮಿನಿಸ್ಟರ್​​ಗೆ ಮಾಹಿತಿ ಕೊರತೆಯಿದೆ. ಗದ್ದಲ ಗಲಾಟೆಯಿಂದಲೇ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ತಂತ್ರ. ಎಸ್​​ಡಿಪಿಐ, ಪಿಎಫ್‌ಐ …

Read More »

ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಸರ್ಕಾರದಿಂದ ಎಚ್ಚರಿಕೆ: ಮಾಹಿತಿ ಸಂಗ್ರಹಿಸಲು ಆದೇಶ

ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ.   ಅಲ್ಲದೇ ಬೇಡ …

Read More »

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಖಚಿತ :ಸಿಎಂ ಬೊಮ್ಮಾಯಿ ಸ್ಪಷ್ಟನೆ

ಪಿಎಸ್‍ಐ ನೇಮಕಾತಿಯ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನರುಚ್ಚರಿಸಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಇದನ್ನು ಈಗಾಗಲೇ ಇದನ್ನು ಸಿಐಡಿಗೆ ವಹಿಸಿದ್ದೇವೆ.   ತನಿಖಾ ತಂಡದವರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಿಂದೆ ನಡೆದಿರುವ ನೇಮಕಾತಿ ಹಾಗೂ ಕಳೆದ ಫೆಬ್ರವರಿಯಲ್ಲಿ …

Read More »