Breaking News

ರಾಜಕೀಯ

ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…

ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …

Read More »

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್…

ಜೂನ್ 22 ರಂದು ಸೂರ್ಯ ನಮಸ್ಕಾರ ಮ್ಯಾರಾಥಾನ್… ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದಿಂದ ಬೆಳಗಾವಿಯಲ್ಲಿ ಹೊಸ ಉಪಕ್ರಮ; ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ವಿಶ್ವ ಯೋಗ ದಿನದ ಅಂಗವಾಗಿ ಬೆಳಗಾವಿಯ ಇತಿಹಾಸದಲ್ಲೇ ಮೊದಲ ಬಾರಿ ಬೃಹತ್ ಸನಾತನ ಸಂಸ್ಕೃತಿ ಏವಂ ಯೋಗ ಸೇವಾ ಸಂಘದ ವತಿಯಿಂದ ಜೂನ್ 22 ರಂದು ಸೂರ್ಯನಮಸ್ಕಾರ ಮ್ಯಾರಾಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಪ್ರಶಾಂತ ಕಟಕೋಳ ಅವರು ತಿಳಿಸಿದರು. …

Read More »

ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ

ಜಾತಿಗಣತಿ : ಧರ್ಮ ಮತ್ತು ಹಿಂದೂ ಜಾತಿ ಕಾಲಂ ನಲ್ಲಿ ‘ಗಾಣಿಗ’ ಎಂದು ಬರೆಸಬೇಕು- ಗಾಣಿಗ ಸಮಾಜದ ಸಭೆಯಲ್ಲಿ ತೀರ್ಮಾನ ಗಾಣಿಗ ಸಮಾಜದ ಸಭೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿತು ಈ ಸಭೆಯು ಗಾಣಿಗ ಸಮಾಜದ ಗುರು ಪೀಠದ ಗುರುಗಳಾದ ಡಾಕ್ಟರ್ ಶ್ರೀ ಜಯಬಸವಕುಮಾರ ಸ್ವಾಮಿಗಳು ಮತ್ತು ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಜರುಗಿ ಜಾತಿ ಗಣತಿಯಲ್ಲಿ ಏನು ನೋಂದಣಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ಜಾತಿ …

Read More »

ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ

ಬಾಲ ಕಾರ್ಮಿಕ ರಿಂದ ದೇಶದ ಅಭಿವೃದ್ಧಿ ಕುಂಠಿತ – ನ್ಯಾಯಾಧೀಶ ರಾಜಣ್ಣ ಸಂಕನ್ನವರ ಬಾಲ ಕಾರ್ಮಿಕರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಹುಕ್ಕೇರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ರಾಜಣ್ಣ ಸಂಕನ್ನವರ ಹೇಳಿದರು. ಹುಕ್ಕೇರಿ ತಾಲೂಕಿನ ಕೊಟಬಾಗಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು. ಹುಕ್ಕೇರಿ ತಾಲೂಕಾ ಆಡಳಿತ , ಕಾರ್ಮಿಕ ಇಲಾಖೆ, ತಾಲೂಕಾ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ …

Read More »

ಇನ್ನೂ 2 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಹಾಗೂ ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು …

Read More »

ಶಿವರಾಜ ತಂಗಡಗಿ ಬೆಂಗಾವಲು ವಾಹನ ಅಪಘಾತ

ಗಂಗಾವತಿ (ಕೊಪ್ಪಳ): ಸಚಿವ ಶಿವರಾಜ ತಂಗಡಗಿ ಪ್ರಯಾಣಿಸುತ್ತಿದ್ದ ವಾಹನವನ್ನು ಹಿಂಬಾಲಿಸುತ್ತಿದ್ದ ನಿಗಮದ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಚಾಲಕ ಅಮರೇಶ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಚಿತ್ರದುರ್ಗ-ಹಿರಿಯೂರು ಮಧ್ಯೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಕಾನಹೊಸಳ್ಳಿ ಬಳಿ ಘಟನೆ ನಡೆದಿದೆ. ಗಂಗಾವತಿಯಲ್ಲಿ ಸಂಜೆವರೆಗೂ ಕೆಡಿಪಿ ಸಭೆ ನಡೆಸಿದ ಸಚಿವ ಶಿವರಾಜ ತಂಡಗಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಶಿವರಾಜ ತಂಗಡಗಿ ಪ್ರಯಾಣಿಸುತ್ತಿದ್ದ ಹಿಂದಿದ್ದ ಈ ಗಸ್ತು ವಾಹನದ …

Read More »

ಹಾವೇರಿ ರೈತನಿಗೆ ಒಲಿದ ಗೌರವ ಡಾಕ್ಟರೇಟ್

ಹಾವೇರಿ: ವೈವಿಧ್ಯಮಯ ಕೃಷಿಗಾಗಿ ಹಾವೇರಿಯ ಕಾಮನಹಳ್ಳಿ ಗ್ರಾಮದ ರೈತರೊಬ್ಬರು ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಶಾಲೆಯ ಮೆಟ್ಟಿಲು ಹತ್ತದ ರೈತ ಮುತ್ತಣ್ಣ ಭೀರಪ್ಪ ಪೂಜಾರ ಎಂಬವರು “ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು” ಎಂಬುದನ್ನು ನಿರೂಪಿಸಿದ್ದಾರೆ. ಇವರ ಸಮಗ್ರ ಕೃಷಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ದೊರೆತಿದೆ. ಅಷ್ಟೇ ಅಲ್ಲದೇ, ಧರ್ಮಸ್ಥಳ ಕೃಷಿ ಮೇಳ, ಜಿಲ್ಲಾ ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಹಲವು ಪ್ರಶಸ್ತಿಗಳು ಮುತ್ತಣ್ಣನವರನ್ನು ಅರಸಿಕೊಂಡು ಬಂದಿವೆ. 10 …

Read More »

ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಆರೋಪ ಪ್ರಕರಣ: ಖುಲಾಸೆ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಕೆಲ ವರ್ಷಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡಿದ್ದ ಮೂರೂವರೆ ವರ್ಷದ ಮಗಳ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯಾಗಿದ್ದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪ್ಯಾಸ್ಕಲ್ ಮಜುರಿಯರ್​ ಎಂಬಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿಯಿತು. ಮಜುರಿಯರ್ ಅವರ ಪತ್ನಿ ಸುಜಾ ಜೋನ್ಸ್ ಮಜುರಿಯರ್ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾ.ಕೆ.ಎಸ್.ಹೇಮಲತಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. …

Read More »

ನಿಗಮದ ಹಣ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಬಳ್ಳಾರಿ ಲೋಕಸಭಾ ಕ್ಷೇತ್ರ ಗೆದ್ದಿದೆ: ಜನಾರ್ದನ ರೆಡ್ಡಿ

ಗಂಗಾವತಿ(ಕೊಪ್ಪಳ): ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಮಾಡಿಕೊಂಡೇ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆದ್ದಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಯಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳು ಜನಸಾಮಾನ್ಯರು, ರೈತಾಪಿ ವರ್ಗದವರಿಂದ ನಗದು ಹಣ ಪಡೆದುಕೊಂಡು ನಿಗಮದ ಹಣವನ್ನು ಅವರ ಖಾತೆಗೆ …

Read More »

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು….‌

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು….‌ ಸಿಎಂ, ಡಿಸಿಎಂ ರಾಜೀನಾಮೆಗೆ ಅಗ್ರಹಿಸಿದ ವಿಜಯೇಂದ್ರ ಹಾಗೂ ಆರ್ ಅಶೋಕ ಆರ್ಸಿಬಿ ವಿಜಯೋತ್ಸವ ಕಾಲ್ತುಳಿತದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸಿತು.ಆರ್ಸಿಬಿ ತಂಡ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಮತ್ತು ಮುಖ್ಯಮಂತ್ರಿ, ಡಿಸಿಎಂ ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ, ನಗರದ …

Read More »