ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ ಮುಂದುವರಿದಿದೆ. ಧರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಹಲವು ಕಾಂಗ್ರೆಸ್ ಸದಸ್ಯರು ವಿರೋಧ ಪಕ್ಷದವರ ಮೊಗಸಾಲೆಯಲ್ಲಿ ಕ್ರಿಕೆಟ್ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಇನ್ನು ಧರಣಿ ಹಿನ್ನೆಲೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಜಯನಗರದ ಖಾಸಗಿ ಹೋಟೆಲ್‍ನಿಂದ ರಾತ್ರಿ ಊಟ ಬಂದಿದ್ದು, ಸ್ಪೀಕರ್ ಸಚಿವಾಲಯದಿಂದ ವೆಜ್ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ …
Read More »ಕಲಾತಪಸ್ವಿ ರಾಜೇಶ್’ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಅಭಿನಯಿಸಿದ್ದಾರೆ. ವಿದ್ಯಾರಣ್ಯಪುರದಲ್ಲಿರುವ ನಿವಾಸದಲ್ಲಿ ಇಂದು ಸಂಜೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ʼಕಲಾತಪಸ್ವಿ ರಾಜೇಶ್’ ಎಂಬುದು ಅವರ ಆತ್ಮಚರಿತ್ರೆಯ ಹೆಸರು. ತಮಿಳು ಚಿತ್ರರಂಗದಿಂದ ಅಂದಿನ …
Read More »ಅನುಷ್ಠಾನಗೊಂಡ ಕಾಮಗಾರಿ ಪೂರ್ಣದ ನಿರೀಕ್ಷೆ
ಶಿವಮೊಗ್ಗ: ಹಿಂದಿನ ವರ್ಷ 2021-22ನೇ ಸಾಲಿನ ಬಜೆಟ್ ಮಂಡಿಸುವಾಗ ಜಿಲ್ಲೆಯವರೇ ಆದ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದರು. ಸಹಜವಾಗಿಯೇ ಇದ್ದ ನಿರೀಕ್ಷೆಗಳಂತೆ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಂತಹ ನಿರೀಕ್ಷೆಗಳಿಲ್ಲದಿದ್ದರೂ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಘೋಷಿಸಬೇಕಿದೆ. ದಶಕದಿಂದ ನನೆಗುದಿಗೆ ಬಿದ್ದಿದ್ದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗೆ ಬಜೆಟ್ ನೀಡುವ ಮೂಲಕ ಮತ್ತಷ್ಟು ಹಣ ನೀಡಿದ್ದರು. ಸೋಗಾನೆ ವಿಮಾನ ನಿಲ್ದಾಣದಲ್ಲಿ ಏರ್‌ಬಸ್ …
Read More »ಸಮಾಜದ ಅಭಿವೃದ್ಧಿಗೆ ಸಂಘಟನೆ ಮುಖ್ಯ
ಆನವಟ್ಟಿ: ಶ್ರಮಿಕ ವರ್ಗವಾದ ಭೋವಿ ಜನಾಂಗ ಹೊಟ್ಟೆಪಾಡಿಗಾಗಿ, ಅಲೆಮಾರಿ ಹಾಗೂ ಅರೆಅಲೆಮಾರಿ ಬದುಕು ಕಟ್ಟಿಕೊಂಡಿದೆ. ಜನಾಂಗದ ಅಭಿವೃದ್ಧಿಗಾಗಿ ಸಂಘಟನೆ ಬಲಗೊಳಿಸುವ ಜೊತೆಗೆ ಶೈಕ್ಷಣಿಕ ಕ್ರಾಂತಿಯಾಗಬೇಕು ಎಂದು ಬಾಗಲಕೋಟೆ-ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು. ಇಲ್ಲಿಗೆ ಸಮೀಪದ ಹುರುಳಿ ಗ್ರಾಮದಲ್ಲಿ ತಾಲ್ಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘವು ಸೋಮವಾರ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಭೋವಿ ಜನಾಂಗದ …
Read More »ಹಿಜಾಬ್ ವಿವಾದದಿಂದ ರಾಜ್ಯದಲ್ಲಿ ಅಸ್ಥಿರತೆ: ವಿ.ಎಸ್.ಉಗ್ರಪ್ಪ
ಶಿವಮೊಗ್ಗ: ಹಿಜಾಬ್-ಕೇಸರಿ ಶಾಲು ವಿವಾದದ ಪರಿಣಾಮ ರಾಜ್ಯದಲ್ಲಿ ಅಸ್ಥಿರತೆ, ಅಶಾಂತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್. ಉಗ್ರಪ್ಪ ಪ್ರತಿಪಾದಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ‘ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಭಾಷಣವನ್ನು ರಾಜ್ಯಪಾಲರಿಂದ ಮಾಡಿಸಿದ್ದಾರೆ. ಸರ್ಕಾರಗಳ ಹಿನ್ನೋಟ, ಮುನ್ನೋಟವನ್ನು ಜನರ ಮುಂದೆ ಇಡಬೇಕಿತ್ತು. ಅದು ರಾಜ್ಯಪಾಲರ ಭಾಷಣದಲ್ಲಿ ಅಡಕವಾಗಿರಬೇಕು. ರಾಜ್ಯಪಾಲರ ಭಾಷಣ ಒಂದು ರೀತಿ ‘ಓಲ್ಡ್ ವೈನ್ ಇನ್ ನ್ಯೂ ಬಾಟಲ್’ ಎನ್ನುವಂತಿದೆ’ ಎಂದು …
Read More »ಇದಪ್ಪಾ ಸುದ್ದಿ: ನಟಿ ಸನ್ನಿ ಲಿಯೋನ್ ಹೆಸರಿನಲ್ಲಿ ಸಾಲ ಪಡೆದ ಭೂಪ!
ನವದೆಹಲಿ, ಫೆಬ್ರವರಿ 17: ನೀಲಿ ಸಿನಿಮಾಗಳಲ್ಲೇ ಸಖತ್ ಸದ್ದು ಮಾಡುತ್ತಾ ಬಾಲಿವುಡ್ ಅಂಗಳಕ್ಕೆ ಲಗ್ಗೆಯಿಟ್ಟ ಸ್ಟಾರ್ ನಟಿ ಸನ್ನಿ ಲಿಯೋನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಅಂಥ ಸ್ಟಾರ್ ನಟಿಯ ಪ್ಯಾನ್ ಕಾರ್ಡ್ ಅನ್ನು ಬಳಸಿಕೊಂಡು ವ್ಯಕ್ತಿಯೊಬ್ಬ ಎರಡು ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದಾನೆ. ಈ ಕುರಿತು ಸ್ವತಃ ನಟಿ ಸನ್ನಿ ಲಿಯೋನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನನಗೇ ಈ ರೀತಿ ಆಗಿ ಬಿಟ್ಟಿದೆ. ಹುಚ್ಚರು. ಕೆಲವು ಮೂರ್ಖರು …
Read More »ಹಿಜಾಬ್ ಗಲಾಟೆ ನಡೆದ ಶಾಲೆಯಲ್ಲಿ ಮಕ್ಕಳಿಗೆ ಡಿಸಿ, ಎಸ್ ಪಿಯಿಂದ ಗಣಿತ ಪಾಠ
ಚಿಕ್ಕಮಗಳೂರು :ಚಿಕ್ಕಮಗಳೂರು ತಾಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್ಗಾಗಿ ಗಲಾಟೆ ನಡೆದಿತ್ತು. ಶಾಲೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಭೇಟಿ ನೀಡಿ, ಶಾಲಾ ಮಕ್ಕಳಿಗೆ ಪಾಠ ಮಾಡಿರುವ ಘಟನೆ ನಡೆದಿದೆ. ಶಾಲೆಯ ಎಲ್ಲ ಮಕ್ಕಳಿಗೆ ಡಿಸಿ, ಎಸ್ಪಿ, ಸಿಇಓ ಪಾಠ ಮಾಡಿದ್ದಾರೆ. ಡಿಸಿ-ಎಸ್ಪಿ ಮಕ್ಕಳಿಗೆ ಗಣಿತ ಪಾಠ ಮಾಡಿದರೆ, ಜಿಲ್ಲಾ ಪಂಚಾಯಿತಿಯ ಸಿಇಒ ಸಮಾಜ ವಿಜ್ಞಾನ ಪಾಠ ಮಾಡಿದ್ದಾರೆ. ನಿನ್ನೆ …
Read More »ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದರೂ ಒದ್ದು ಒಳಗೆ ಹಾಕಿ ಸರ್ಕಾರ ಎಷ್ಟು ದಿನ ಇವರನ್ನು ಸಂಬಾಳಿಸಬೇಕು. ಗಲಾಟೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಹಿಜಬ್ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಪ್ರಕರಣ ಈಗಾಗಲೇ ಕೋರ್ಟ್‍ನಲ್ಲಿದೆ. ಕೋರ್ಟ್‍ನಲ್ಲಿರುವಾಗಲೇ ದುರದ್ದೇಶದಿಂದ ಗಲಾಟೆ ಮಾಡಲಾಗುತ್ತಿದೆ. ಮಧ್ಯಂತರದ ಆದೇಶ ಎಲ್ಲಿ ಪಾಲನೆ ಆಗುತ್ತಿಲ್ಲವೋ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ನ್ಯಾಯಾಲಯ ಹಿಜಬ್ ಪರ ಅಥವಾ ವಿರುದ್ಧವಾದರೂ …
Read More »ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು : ಪರಿಷತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ!
ಬೆಂಗಳೂರು : ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಶುಕ್ರವಾರದ ಕಲಾಪ ಬಲಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ, ಆರೋಪ-ಪ್ರತ್ಯಾರೋಪಗಳ ಘೋಷಣೆ ಮೊಳಗಿ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು. ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಈಶ್ವರಪ್ಪ ವಿಷಯದ ಗದ್ದಲ ಆರಂಭಗೊಂಡಿದ್ದರಿಂದ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಮುಂದೂಡಿಕೆಯಾಗಿದ್ದ ಕಲಾಪ ಪುನಾರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ …
Read More »ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್ಗೆ ತಳ್ಳಿದ್ದರು!
ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು.ತುಮಕೂರು: ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದು ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ (Illicit relationship) ಅಣ್ಣನ ಜೊತೆ ಸೇರಿ ತಾಯಿಯನ್ನೇ ಮಗಳು ಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪುನೀತ್ (26) …
Read More »
Laxmi News 24×7