ಗದಗ: ಮುಂದಿನ ಆದೇಶದವರೆಗೆ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯನ್ನು ಗೆಜೆಟ್‌ನಲ್ಲಿ ಪ್ರಕಟಿಸದಂತೆ ಹೈಕೋರ್ಟ್ ಧಾರವಾಡ ಪೀಠ ಆದೇಶ ನೀಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಖುಷಿ ತರಿಸಿದ್ದರೆ; ಚುನಾವಣೆಯನ್ನು ನಿಯಮಾನುಸಾರವೇ ನಡೆಸಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಎಲ್ಲ ವಿಡಿಯೊ ದಾಖಲೆಗಳು ನಮ್ಮ ಬಳಿ ಇವೆ ಎಂಬ ಅಧಿಕಾರಿಗಳ ಹೇಳಿಕೆ ಬಿಜೆಪಿ ಪಾಳಯದಲ್ಲಿ ಆಶಾಭಾವ ಮೂಡಿಸಿದೆ. ಗದಗ ಬೆಟಗೇರಿ ನಗರಸಭೆಗೆ ಡಿ.27ರಂದು ಚುನಾವಣೆ ನಡೆದು, ಡಿ.30ರಂದು ಫಲಿತಾಂಶ ಪ್ರಕಟವಾಗಿತ್ತು. 35 ವಾರ್ಡ್‌ಗಳ ಪೈಕಿ …
Read More »ಪಿಸುಮಾತಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್
ಬೆಂಗಳೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಸಿದ್ದರಾಮಯ್ಯ ಬಳಿ ಅಂದು ಪುಲಿಕೇಶಿ ನಗರದಿಂದ ಜನ ಬಂದಿರುವ ಬಗ್ಗೆ ಮಾತಾಡಿದ್ದಷ್ಟೇ. ಅದರ ಹೊರತಾಗಿ ನಾನು ಬೇರೇನೂ ಮಾತನಾಡಿಲ್ಲ.ನೋಟಿಸ್‌ಗೆ ಎರಡು ಮೂರು ದಿನದಲ್ಲಿ ಉತ್ತರಿಸುತ್ತೇನೆ ಎಂದು ಮಾಜಿ ಶಾಸಕ ಅಶೋಕ್ ಪಟ್ಟಣ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ನೀಡಿರುವ ವಿಚಾರ ಮಾಧ್ಯಮಗಳಿಂದ ಗೊತ್ತಾಗಿದೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ. ಯುವ ಕಾಂಗ್ರೆಸ್ ಕಾಲದಿಂದಲೂ ಡಿ.ಕೆ ಶಿವಕುಮಾರ್ ನಾನು ಸ್ನೇಹಿತರು. ನನಗೆ ನೋಟಿಸ್ ಇನ್ನೂ …
Read More »80 ನಿಮಿಷದಲ್ಲಿ 136 ಅಕ್ಕಿ ಕಾಳುಗಳ ಮೇಲೆ ನಾಡಗೀತೆ ಪದ್ಯ ಬರೆದು ಸಾಧನೆ
ಹಾವೇರಿ ಮೂಲದವರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಮೈಕ್ರೋ ಪರಮೇಶ್ 80 ನಿಮಿಷದಲ್ಲಿ 136 ಅಕ್ಕಿ ಕಾಳುಗಳ ಮೇಲೆ ನಾಡಗೀತೆ ಪದ್ಯ ಬರೆದು ಸಾಧನೆ ಮಾಡಿದ್ದಾರೆ.ಅತಿ ಕಡಿಮೆ ಅವಧಿಯಲ್ಲಿ ಮತ್ತು ಕನಿಷ್ಠ ಅಕ್ಕಿ ಕಾಳಿನ ಮೇಲೆ ನಾಡಗೀತೆ ಬರೆದ ದಾಖಲೆ ಸೃಷ್ಟಿಸಿದ್ದಾರೆ. ಈ ಸಾಧನೆಗಾಗಿ ವಂಡರ್ ರೆಕಾರ್ಡ್ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್‌ನವರು ಪರಮೇಶ್‌ರನ್ನು ಸಂಪರ್ಕಿಸಿದ್ದಾರೆ. ಅವರ ಮುಂದೆ ಶೀಘ್ರವೇ ತಮ್ಮ ಸಾಧನೆಯನ್ನು ಪ್ರದರ್ಶಿಸಲಿದ್ದಾರೆ. ಪರಮೇಶ್ವರ್ ಅವರು ಅಕ್ಕಿ ಕಾಳಿನ …
Read More »ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ
ಬೆಂಗಳೂರು: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿ ಮೇಲಿದೆ. ಆದರೆ, ಆರ್ಥಿಕ ಸಂಕಷ್ಟದ ಮಧ್ಯೆ ಬಜೆಡ್ ಮಂಡಿಸುವ ಇಕ್ಕಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸಿಲುಕಿದ್ದಾರೆ. ಸದ್ಯದ ಆರ್ಥಿಕ ಸ್ಥಿತಿಗತಿ ಏನಿದೆ ಎಂಬ ವರದಿ ಇಲ್ಲಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿಎಂ ನಿರ್ಧರಿಸಿದ್ದಾರೆ. 2023 ವಿಧಾನಸಭೆ ಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿಗೆ ಈ …
Read More »ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ,ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ …
Read More »ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್
ಚಿಕ್ಕೋಡಿ: ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯ ಪ್ರವೇಶಕ್ಕೆ ಯತ್ನಿಸಿರುವ ಖಾಸಗಿ ಬಸ್ ಕಂಪನಿಗಳ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಕಳ್ಳದಾರಿಯ ಮೂಲಕ ಆರ್‍ಟಿಸಿಪಿಆರ್ ವರದಿ ಇಲ್ಲದೆ ಮುಂಬೈನಿಂದ ಬೆಂಗಳೂರಿಗೆ 17 ಜನ ಪ್ರಯಾಣಿಕರನ್ನು ಖಾಸಗಿ ಕಂಪನಿ ಬಸ್ ರಾಜ್ಯಕ್ಕೆ ಕರೆತರುತ್ತಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ಬಳಿ ಬಸ್‍ನನ್ನು ಪೊಲೀಸರು …
Read More »ಈ ಬಾರಿ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಬದಲಾಯಿಸಿಲ್ಲ.: ನಿರ್ಮಲಾ ಸೀತಾರಾಮನ್
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ ಬಾರಿಯ ಬಜೆಟ್‌ನಲ್ಲಿ ಜನರಿಂದ ಯಾವುದೇ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ಇಳಿದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ಬಳಿಕ ಇಲಾಖೆಯ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿರುವ ಜನರ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಬಾರದು ಎಂದು ಪ್ರಧಾನಿ ಮೋದಿ ಅವರು ಕಳೆದ ವರ್ಷ ಸೂಚಿಸಿದ್ದರು. ಈ ಕಾರಣಕ್ಕೆ …
Read More »ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿ, ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
ಮುಂಬೈ: ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರರಾದ c ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್‌ಬಿ ರೋಟೆ ಅವರು ರಾಣೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಕಳೆದ ಡಿಸೆಂಬರ್ 2021ರಲ್ಲಿ ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶಿವಸೇನಾ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣವನ್ನು ದಾಖಲಿಸಲಾಗಿತ್ತು.ಪ್ರಕರಣ ಸಂಬಂಧಿಸಿ ರಾಣೆಯನ್ನು 10 ದಿನಗಳ …
Read More »ತಗ್ಗಿದ ಕೋವಿಡ್ ಕೇಸ್.. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳಿಗಿದ್ದ ನಿರ್ಬಂಧ ತೆರವು
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿ ಆದೇಶಿಸಲಾಗಿದೆ. ಹೀಗಾಗಿ ಕುಕ್ಕೆ …
Read More »ದೇಶದ ಸಂವಿಧಾನ ಪಾಲಿಸದ ಸಮುದಾಯ ಪಾಕಿಸ್ತಾನಕ್ಕೆ ಹೋಗಲಿ
ವಿಜಯಪುರ : ಆರೋಪಿಗಳು ಯಾರೇ ಆಗಿರಲಿ, ಎಂಥವರೇ ಇರಲಿ, ಮುಂದೆ ಒಂದು ದಿನ ಅವರಿಗೆ ಶಿಕ್ಷೆ ತಪ್ಪಿದ್ದಲ್ಲ. ಅದರಲ್ಲೂ ಇಡಿಗೆ ಸಿಕ್ಕವರು ಅಷ್ಟು ಸುಲಭವಾಗಿ ಪಾರಾಗಲಾರರು. ಇಡಿ ಕೈಗೆ ಸಿಕ್ಕವರ ವಿರುದ್ಧ ಈಗಿಲ್ಲದಿದ್ರೂ ಇನ್ನು ಹತ್ತು ವರ್ಷಕ್ಕೆ ನಿಶ್ಚಿತವಾಗಿ ಕ್ರಮ ಆಗೇ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಮೊನ್ನೆ ಒಬ್ಬ ಬಸ್ ಕಂಡೆಕ್ಟರ್ ಸಿಕ್ಕಿದ್ದಾರೆ. ಅವರ ಮನೆಯಲ್ಲಿ ಸಾವಿರಾರು ಕೋಟಿ ಜಪ್ತಿ ಮಾಡಲಾಗಿದೆ. …
Read More »
Laxmi News 24×7