ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ಅನ್ನು ಬೆಳಗಾವಿ ಪೊಲೀಸರು ವಾಪಸ್ ಕಳುಹಿಸಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಖಾಸಗಿ ಬಸ್ ಅನ್ನು ವಾಪಸ್ ಕಳುಹಿಸಲಾಗಿದೆ. ಖಾಸಗಿ ಬಸ್ ಪುಣೆಯಿಂದ ಬೆಳಗಾವಿಗೆ ಬರುತ್ತಿತ್ತು. ರಾಜ್ಯದಲ್ಲಿ ಕೊರೊನಾ ಹಾಗೂ ಒಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಜಿಲ್ಲಾಡಳಿತದ ವತಿಯಿಂದ ಹೈಅಲರ್ಟ್ ಮಾಡಲಾಗಿದೆ.
Read More »ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರುಗತಿಯಲ್ಲಿ ಸಾಗಿ ಸಾವಿರದ ಗಡಿದಾಟಿ ಹೊಸ ಪ್ರಕರಣ ಪತ್ತೆಯಾಗ್ತಿವೆ. ಇದೇ ವೇಳೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ ಏರಿಕೆ ಆಗಿದೆ. ಇವತ್ತು ಹೊಸದಾಗಿ 10 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಕೂಡ ಏರಿಕೆ ಕಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ 8 ಕೇಸ್ ಗಳು ಪತ್ತೆಯಾಗಿದೆ. ಇವರಲ್ಲಿ 5 ಜನ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಧಾರವಾಡದಲ್ಲಿ 2 ಕೇಸ್ …
Read More »ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ಇನ್ಮುಂದೆ ಸಿಗಲಿದೆ ಫ್ರಿ ಡ್ರೈವಿಂಗ್ ಲೈಸೆನ್ಸ್
ಬಾಗಲಕೋಟೆ : ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ …
Read More »ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಸರ್ಕಾರದಿಂದ ಆದೇಶ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಿಗೆ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಎಂದು ಪುನರ್ ನಾಮಕರಣ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ಮಕ್ಕಳಿಗೆ ಒಂದರಿಂದ ಐದನೇ ತರಗತಿವರೆಗೆ ಶಿಕ್ಷಣ ನೀಡಲು 68 ವಸತಿ ಶಾಲೆಗಳನ್ನು ತೆರೆಯಲಾಗಿದೆ. 8500 ವಿದ್ಯಾರ್ಥಿಗಳು ಈ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ಶಾಲೆಗಳಿಗೆ ಅಂಬೇಡ್ಕರ್ ಹೆಸರನ್ನು ನಾಮಕರಣ ಮಾಡಲಾಗುವುದು. ಅಂಬೇಡ್ಕರ್ ಅವರ ಹೋರಾಟ, ದೇಶಕ್ಕೆ ಅವರು …
Read More »ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತೆ ಮಹಾಂತೇಶ ಹಿರೇಮಠ್ ಅವರನ್ನೇ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಎಂಎಲ್ಸಿ ಚುನಾವಣೆ ಹಿನ್ನೆಲೆ ಡಿಸಿ ಮಹಾಂತೇಶ ಹಿರೇಮಠರನ್ನು ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡಿ ಆರ್.ವೆಂಕಟೇಶಕುಮಾರ್ ಅವರನ್ನು ಡಿಸಿಯಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ಅವಧಿಗೆ ನೇಮಕ ಮಾಡಿತ್ತು. ಇದೀಗ ಪುನಃ ಮಹಾಂತೇಶ ಹಿರೇಮಠ್ ಅವರನ್ನೆ ಬೆಳಗಾವಿ ಡಿಸಿಯಾಗಿ ನಿಯುಕ್ತಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ
Read More »ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮಹಿಳೆ ಸಾವಿತ್ರಿಬಾಯಿ ಫುಲೆ.
ಇಂಡಿಯಾಸ್ ಫಸ್ಟ್ ಲೇಡಿ ಟೀಚರ್ ಎಂದೇ ಪ್ರಸಿದ್ಧರಾಗಿರುವ ಮತ್ತು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿಬಾಯಿ ಫುಲೆ. ಇಂದು ಅವರ 191 ಜನ್ಮವಾರ್ಷಿಕೋತ್ಸವ ದಿನ. ಈ ದಿನದಂದು ಭಾರತದಲ್ಲಿ ಅಕ್ಷರ ಕ್ರಾಂತ್ರಿ ಮೊದಲ ಮಹಿಳಾ ಶಿಕ್ಷಕಿಯ ಕುರಿತಾದ ಒಂದಷ್ಟು ಆಸಕ್ತಿದಾಯಕ ಸಂಗತಿಗಳನ್ನು ಇಲಿ ನೀಡಲಾಗಿದೆ ತಪ್ಪದೇ ಓದಿ ತಿಳಿಯಿರಿ. ಸಾವಿತ್ರಿಬಾಯಿ ಫುಲೆ 1831ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ ‘ನೈಗಾಂನ್’ನಲ್ಲಿ ಹುಟ್ಟಿದರು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ …
Read More »ಒಂದೇ ದಿನ 60 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸಿದ ನಿರಾಣಿ ಶುಗರ್
ಬಾಗಲಕೋಟೆ: ದೇಶದ ಅತಿ ದೊಡ್ಡ ಸಕ್ಕರೆ ಸಮೂಹ ಸಂಸ್ಥೆಗಳಲ್ಲಿ ಒಂದಾದ ಜಿಲ್ಲೆಯ ಮುಧೋಳದ ನಿರಾಣಿ ಉದ್ಯಮ ಸಮೂಹ ಸಂಸ್ಥೆ ಒಂದೇ ದಿನದಲ್ಲಿ 60,975 ಮೆಟ್ರಿಕ್ ಟನ್ ಕಬ್ಬು ನುರಿಸುವ ಮೂಲಕ ಹೊಸ ದಾಖಲೆ ಬರೆದಿದೆ. ದಕ್ಷಿಣ ಭಾರತದಲ್ಲಿ ಒಂದೇ ದಿನದಲ್ಲಿ ಸಕ್ಕರೆ ಉದ್ಯಮ ಸಮೂಹವೊಂದು ಅತ್ಯಧಿಕ ಕಬ್ಬು ನುರಿಸಿದ ದಾಖಲೆ ಇದಾಗಿದೆ ಎಂದು ಸಮೂಹದ ತಾಂತ್ರಿಕ ಸಲಹೆಗಾರ ಆರ್. ವಿ. ವಟ್ನಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯಶಸ್ಸು ಬಾಗಲಕೋಟೆ, …
Read More »ಒಳನೋಟ| ಕ್ಯಾನ್ ಮಾಫಿಯಾ ಮನೆ ಮನೆಗೆ ವಿಷಯುಕ್ತ ನೀರು
ಕಲಬುರಗಿ: ಕುಡಿಯುವ ನೀರು ಪೂರೈಸುವ ಘಟಕಗಳು ಐಎಸ್‌ಐ ಗುರುತು ಹೊಂದಿರುವುದು ಕಡ್ಡಾಯ ಎಂಬ ಆದೇಶ ಪೂರ್ಣಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ. ಬೆಂಗಳೂರೂ ಸೇರಿ ರಾಜ್ಯದ ಎಲ್ಲಾ ನಗರ, ತಾಲ್ಲೂಕು ಕೇಂದ್ರಗಳಲ್ಲಿ ಕ್ಯಾನ್‌ಗಳ ಮೂಲಕ ವಿಷಯುಕ್ತ ನೀರು ಪೂರೈಕೆಯಾಗುತ್ತಿದೆ. ಕಲಬುರಗಿ ನಗರದಲ್ಲಿ 44 ನೀರು ಶುದ್ಧೀಕರಣ ಘಟಕಗಳು ಅನುಮತಿ ಪಡೆದಿದ್ದು, ಅವುಗಳಲ್ಲಿ 22ಕ್ಕೆ ಮಾತ್ರ ಐಎಸ್‌ಐ ಮಾರ್ಕ್ ಇದೆ. ಜಿಲ್ಲೆಯಾದ್ಯಂತ 400ಕ್ಕೂ ಹೆಚ್ಚು ಅನಧಿಕೃತ ನೀರು ಸರಬರಾಜು ಘಟಕಗಳಿವೆ. 20 ಲೀಟರ್ ನೀರಿನ ಒಂದು …
Read More »ಕೋರೆಗಾಂವ್ ವಿಜಯೋತ್ಸವ: ವಿಜಯಸ್ತಂಭ ಮೆರವಣಿಗೆ
ಚಾಮರಾಜನಗರ: 204ನೇ ಭೀಮ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ನಗರದಲ್ಲಿ ಶನಿವಾರ ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಶಾಖೆಯ ವತಿಯಿಂದ ಕೋರೆಗಾಂವ್ ವಿಜಯಸ್ತಂಭದ ಪ್ರತಿಕೃತಿಯ ಮೆರವಣಿಗೆ ನಡೆಯಿತು. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮೆರವಣಿಗೆಗೆ ಕಾಂಗ್ರೆಸ್ ಮುಖಂಡ ಎಸ್.ನಂಜುಂಡಸ್ವಾಮಿ ಅವರು ಚಾಲನೆ ನೀಡಿದರು. ಮೆರವಣಿಗೆಯು ಸತ್ಯಮಂಗಲ ರಸ್ತೆ, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಚಾಮರಾಜೇಶ್ವರ ಉದ್ಯಾನವನ ರಸ್ತೆ, ನಗರಸಭಾ ಕಚೇರಿ ಮೂಲಕ ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, …
Read More »ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 …
Read More »
Laxmi News 24×7