Breaking News
Home / ರಾಜಕೀಯ (page 20)

ರಾಜಕೀಯ

ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಸಂಕಲ್ಪ ಪತ್ರ’ ಹೆಸರಿನ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ವೇಳೆ ರಕ್ಷಣ ಅಸಚಿವ ರಾಜ್ ನಾಥ್ …

Read More »

ಚೆಕ್‌ಪೋಸ್ಟ್ನಲ್ಲಿ 12 ಕೋಟಿ ರೂ. ಮೌಲ್ಯದ ಆಭರಣ ವಶ

ದಾವಣಗೆರೆ : ನಗರದ ಹದಡಿ ರಸ್ತೆಯಲ್ಲಿರುವ ಲೋಕಿಕೆರೆ ಚೆಕ್‌ಪೋಸ್ಟ್ನಲ್ಲಿ ಗುರುವಾರ ರಾತ್ರಿ 12 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ಎಸ್.ಎಸ್.ಟಿ ತಂಡ ವಶಪಡಿಸಿಕೊಂಡಿದೆ. ವಾಹನ ಬೆಂಗಳೂರಿನಿಂದ ದಾವಣಗೆರೆಗೆ ಬಂದಿತ್ತು. ಎಸ್.ಎಸ್.ಟಿ ತಂಡದ ಮುಖ್ಯಸ್ಥ ಆರ್.ಮಲ್ಲಿಕಾರ್ಜುನ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮತ್ತು ಕೆಟಿಜೆ ನಗರ ಠಾಣೆಯ ಪೊಲೀಸರಿದ್ದ ತಂಡವು ವಾಹನದ ತಪಾಸಣೆ ನಡೆಸಿತು. ವಾಹನದಲ್ಲಿ ಪೆಂಡೆಂಟ್, ಡಾಲರ್, ವಜ್ರದ ಹರಳು ಸೇರಿ ಆಭರಣಗಳು ಇದ್ದವು. ಅವುಗಳಿಗೆ …

Read More »

ಕಳ್ಳನ ಬಂಧನ: 3 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

ಸುರತ್ಕಲ್‌: ಇಲ್ಲಿನ ಮುಂಚೂರು ಸಮೀಪ ರೈಲ್ವೇ ಹಳಿ ಬಳಿಯ ಬಾಡಿಗೆ ಮನೆಯೊಂದರಿಂದ ನಗದು ಸಹಿತ ಚಿನ್ನ, ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದ ಆರೋಪಿಯನ್ನು 24 ಗಂಟೆಯಲ್ಲೇ ಪೊಲೀಸರು ಬಂಧಿಸಿದ್ದಾರೆ. ಹೊಸಕೋಟೆ ನಿವಾಸಿ ಜಂಬಯ್ಯ (24) ಬಂಧಿತ ಆರೋಪಿ. ಈತ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ ಅನ್ನು ವಶಕ್ಕೆ ಪಡೆಯಲಾಗಿದೆ.

Read More »

ಜಿಲ್ಲೆಯ ವಿವಿಧೆಡೆ ಮಳೆ: ಕಾರಿನ ಮೇಲೆ ಬಿದ್ದ ಮರ

ಬೆಳಗಾವಿ: ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಒಂದು ತಾಸಿನವರೆಗೆ ಉತ್ತಮ ಮಳೆ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ 5ರ ಸುಮಾರಿಗೆ ಆರಂಭವಾದ ಮಳೆ ಗುಡುಗು- ಮಿಂಚಿನ ಜತೆಗೆ ಸುರಿಯಿತು. ಇಲ್ಲಿನ ಅನಗೋಳ ಪ್ರದೇಶದಲ್ಲಿರುವ ಸಂತ ಮೀರಾ ಶಾಲೆಯ ಬಳಿ ಮಳೆ, ಗಾಳಿಯ ರಭಸಕ್ಕೆ ಮರವೊಂದು ಬುಡಸಮೇತ ಕಿತ್ತು ಕಾರಿನ ಮೇಲಿ ಬಿದ್ದಿದೆ. ಕಾರು ಜಖಂಗೊಂಡಿದ್ದು ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಮಹಾದ್ವಾರ ರಸ್ತೆ, ಭೋವಿ ಗಲ್ಲಿಯಲ್ಲಿ …

Read More »

ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೊ.ರಾಜು ಆಲಗೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಏ. 15 ರಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ ತಿಳಿಸಿದರು.   ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು

Read More »

ಚುನಾವಣೆ ಬಳಿಕ ಬೆಳಗಾವಿಯಲ್ಲೇ ‘ಪೆನ್ ಡ್ರೈವ್’ ಬಿಡುಗಡೆ

ಬೆಳಗಾವಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಎಂಎಲ್ಸಿ ಬಿಜೆಪಿ ಹರಿಪ್ರಸಾದ್ ಅವರು ಸ್ಪೋಟಕ ಹೇಳಿಕೆಯ ನೀಡಿದ್ದು ಲೋಕಸಭೆ ಚುನಾವಣೆಯಲ್ಲಿ ನಾನು ಸ್ಟಾರ್ ಕ್ಯಾಂಪೇನರ್ ಇದಿನಿ ನನ್ನ ಯಾರು ಉಪಯೋಗಿಸಿಕೊಳ್ಳಲು ಆಗುವುದಿಲ್ಲ ಆದರೆ ಕಾಂಗ್ರೆಸ್ ಪಕ್ಷಕ್ಕೆ ನನ್ನ ಉಪಯೋಗವಿದೆ ಹಾಗಾಗಿ ಬೆಳಗಾವಿಯಲ್ಲಿ ಬಂದು ಪೆನ್ಡ್ರೈವ್ ಬಿಡುಗಡೆ ಮಾಡುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಸಮುದಾಯದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು ನಾನು ಸ್ಟಾರ್ ಕ್ಯಾಂಪೇನರ್ ನನ್ನನ್ನು ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಏನೆ …

Read More »

ಧಾರವಾಡ, ಬೆಳಗಾವಿ, ವಿಜಯನಗರ ಜಿಲ್ಲೆಗಳಲ್ಲಿ ಉತ್ತಮ ಮಳೆ

ಧಾರವಾಡ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಉತ್ತಮ ಮಳೆಯಾಯಿತು. ಹುಬ್ಬಳ್ಳಿ ನಗರ ಸೇರಿ ಧಾರವಾಡ ಜಿಲ್ಲೆ ವ್ಯಾಪ್ತಿಯ ಕಲಘಟಗಿ, ನವಲಗುಂದ, ಕುಂದಗೋಳ ಭಾಗದಲ್ಲಿ ಮಳೆಯಾಯಿತು. ಜೋರಾಗಿ ಮಳೆಯಾದ ಪರಿಣಾಮ ಹುಬ್ಬಳ್ಳಿಯ ಬಹುತೇಕ ಕಡೆ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಕೆಲ ಕಡೆ ಮರಗಳು ಉರುಳಿ ಬಿದ್ದವು. ಅಲ್ಲಲ್ಲಿ ವಿದ್ಯುತ್ ಪೂರೈಕೆ ಕಡಿತಗೊಳಿಸಲಾಯಿತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ ಹಾಗೂ ಯಮಕನಮರಡಿ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು …

Read More »

‘ಪರಿಮಳದವರು’ ನಾಟಕ ಪ್ರದರ್ಶನ 13ರಿಂದ

ಬೆಳಗಾವಿ: ‘ಇಲ್ಲಿನ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಏ.13, 14ರಂದು ಸಂಜೆ 6.30ಕ್ಕೆ ರಾಘವೇಂದ್ರ ಸ್ವಾಮೀಜಿ ಜೀವನಾಧಾರಿತವಾದ ‘ಪರಿಮಳದವರು’ ನಾಟಕ ಪ್ರದರ್ಶನಗೊಳ್ಳಲಿದೆ’ ಎಂದು ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಮಾನ್ಯ ರಂಗಮಂದಿರದಲ್ಲಿ ಮಾ.29ರಂದು ಈ ನಾಟಕ ಪ್ರದರ್ಶಿಸಿದ್ದೆವು. ವೀಕ್ಷಣೆಗೆ ಜನರು ಕಿಕ್ಕಿರಿದು ಸೇರಿದ್ದರು. ಇನ್ನೂ ಕೆಲವು ಪ್ರದರ್ಶನ ನೀಡಬೇಕೆಂದು ಒತ್ತಾಯಿಸಿದರು. ಹಾಗಾಗಿ ಈಗ ಮತ್ತೆ ಪ್ರದರ್ಶಿಸುತ್ತಿದ್ದೇವೆ’ ಎಂದರು. ‘ಶ್ರೀಪತಿ ಮಂಜನಬೈಲು ನಿರ್ದೇಶಿಸಿರುವ …

Read More »

ವರ್ಷ ಧಾರೆಗೆ ನೆಲಕ್ಕುರುಳಿದ ಮರ

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ‌ ಕೆಲ‌ ಗ್ರಾಮಗಳಲ್ಲಿ ಗುಡುಗು, ಜೋರಾದ ಗಾಳಿಯೊಂದಿಗೆ ಗುರುವಾರ ಮಳೆ ಸುರಿಯಿತು. ಕಾಯ್ದ ಭೂ ತಾಯಿ ಒಡಲಿಗೆ ಏಕಾಏಕಿ ಧರೆಗಿಳಿದ ಮಳೆರಾಯ ತುಸು ತಂಪೆರೆದ. ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನತೆ ಮಳೆಯ ಹನಿ ನೀರು ನೆತ್ತಿಯ ಮೇಲೆ ಬಿಳುತ್ತಿದ್ದಂತೆ ವರ್ಷಧಾರೆಗೆ ಮೈಯೊಡ್ಡಿ ಸಂಭ್ರಮಿಸಿದರು. ಪಟ್ಟಣ ಪ್ರದೇಶದಲ್ಲಿ ತುಂತುರು ಮಳೆ ಹನಿ ಸುರಿದರೆ ಮತಕ್ಷೇತ್ರದ ಇಂಚಲ, ಹಾರೂಗೊಪ್ಪ, ಮರಕುಂಬಿ, ಮುರಗೋಡ, ಸುತ್ತಗಟ್ಟಿ ಗ್ರಾಮದಲ್ಲಿ ಜೋರಾದ ಮಳೆ ಸುರಿಯಿತು. …

Read More »

ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು..: ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ದೊಡ್ಡವರು, ನಮ್ಮಿಂದ ಅಥವಾ ಪ್ರಹ್ಲಾದ್ ಜೋಶಿ ಅವರಿಂದ ಏನೇ ತಪ್ಪಾಗಿದ್ದರೂ ಕ್ಷಮಿಸಬೇಕು. ಆಗಿರುವ ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ. ಕೇಂದ್ರ ಹಾಗೂ ರಾಜ್ಯ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಂಗಾಲೇಶ್ವರ ಶ್ರೀಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ …

Read More »