Breaking News

ರಾಜಕೀಯ

40 ಪರ್ಸೆಂಟ್ ಕಮಿಷನ್ ವಿಚಾರ ನಮ್ಮ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದು ತಿಳಿಸಿದರೂ ಸ್ಪಂದಿಸಿಲ್ಲ : ಡಿ. ಕೆಂಪಣ್ಣ

ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ವಿಚಾರವಾಗಿ ಮಾತನಾಡಿರುವ ಕರ್ನಾಟಕ ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ, ಡಿ. ಕೆಂಪಣ್ಣ, ನಮ್ಮ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದು ತಿಳಿಸಿದರೂ ಸ್ಪಂದಿಸಿಲ್ಲ ಎಂದು ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ, ಯಾವುದೇ ಕಾಮಗಾರಿ ಮಾಡಬೇಕಾದರೂ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗುತ್ತದೆ. ಅದಕ್ಕಾಗಿ ಈ ಹಿಂದೆ ಯಡಿಯೂರಪ್ಪಗೆ ನಾವು ಪತ್ರ ಬರೆದಿದ್ದೆವು. ಆದರೆ ಯಡಿಯೂರಪ್ಪನವರು ಸರಿಯಾಗಿ ಸ್ಪಂದಿಸಿಲ್ಲ. ಪ್ರಧಾನಿ …

Read More »

ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ

ಮೈಸೂರು: ಪ್ರತಿಷ್ಠಿತ ಕೆ ಎಂ ಎಫ್ ಕಂಪನಿಯ ನಂದಿನಿ ತುಪ್ಪದ ಹೆಸರಲ್ಲಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲದ ಮೇಲೆ ಪೊಲಿಸರು ದಾಳಿ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮುಂಡಿ ಬೆಟ್ಟದ ಹಿಂಭಾಗ ಹೊಸಹುಂಡಿ ಗ್ರಾಮದಲ್ಲಿ ಗೌಡನ್ ನಲ್ಲಿ ಟನ್ ಗಟ್ಟಲೆ ನಕಲಿ ತುಪ್ಪ ಹಾಗೂ ಲೇಬಲ್ ಗಳ ಮುದ್ರಣ ಘಟಕ ಪತ್ತೆಯಾಗಿದೆ. ನಂದಿನಿ ತುಪ್ಪಕ್ಕೆ ಡಾಲ್ಡಾ ಬೆರೆಸಿ ಮಾರಾಟ ಮಾಡುತ್ತಿದ್ದ ಜಾಲ ಇದಾಗಿದ್ದು, ಜಿವನ್ ತುಪ್ಪದ ಕಂಪನಿಯಿಂದ …

Read More »

ಬೆಳಗಾವಿಯಲ್ಲಿಪಂಚಮಸಾಲಿ ಸಮಾಜದ ಜೊತೆಗೆ ಸಿಎಂ ಬೊಮ್ಮಾಯಿ ಮಿಟಿಂಗ್

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.  ಸಿಎಂ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರು, ಮುಖಂಡರ ಸಭೆಯನ್ನು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆದಿದ್ದಾರೆ. ಬೆಳಗಾವಿ ಹೊರ ವಲಯದಲ್ಲಿರುವ ಮೇರಿಟ್ ಹೋಟೆಲ್‍ನಲ್ಲಿ ಸಂಜೆ 7 ಗಂಟೆಗೆ ಸಭೆ ಕರೆಯಲಾಗಿದೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಳಂಬದ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರಕ್ಕೆ …

Read More »

ವಿದ್ಯಾರ್ಥಿನಿಯರಿಗೆ ಹಾಜರಾತಿ ಸಡಿಲಿಕೆ, 240 ದಿನ ಹೆರಿಗೆ ರಜೆ

ನವದೆಹಲಿ: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ಎಲ್ಲಾ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಮಹಿಳಾ ವಿದ್ಯಾರ್ಥಿಗಳಿಗೆ ಹಾಜರಾತಿ ಸಂಬಂಧಿತ ಸಡಿಲಿಕೆಗಳ ಜೊತೆಗೆ ಹೆರಿಗೆ ರಜೆಯನ್ನು ನೀಡಲು ಸೂಕ್ತ ನಿಯಮಗಳು ಮತ್ತು ಮಾನದಂಡಗಳನ್ನು ರೂಪಿಸಲು ನಿರ್ದೇಶಿಸಿದೆ.   ಯುಜಿಸಿಯಿಂದ ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ, ಯುಜಿಸಿ ನಿಯಮಾವಳಿ 2016 ರ ತನ್ನ ನಿಬಂಧನೆಗಳಲ್ಲಿ ಒಂದನ್ನು ಉಲ್ಲೇಖಿಸಿ ಮಹಿಳಾ ಅಭ್ಯರ್ಥಿಗಳಿಗೆ 240 ದಿನಗಳವರೆಗೆ ಎಂಫಿಲ್ ಮತ್ತು ಪಿಹೆಚ್‌ಡಿ ಸಂಪೂರ್ಣ ಅವಧಿಯಲ್ಲಿ ಒಮ್ಮೆ ಹೆರಿಗೆ ರಜೆ …

Read More »

ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ.

ಹುಬ್ಬಳ್ಳಿ: ರಾಯಚೂರಿನ ಸಿಂದಗಿ ಹಾಗೂ ಕಲಬುರಗಿಯ ಬಡದಲ್ ಹಳ್ಳಿಯ ನಡುವೆ 177 ಕಿಮೀ ಉದ್ಧದ ಗ್ರೀನ್​​ಫೀಲ್ಡ್​ ಹೆದ್ದಾರಿ ನಿರ್ಮಾಣವಾಗಲಿದ್ದು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಭಾರತ್​​ ಮಾಲಾ ಯೋಜನೆಯ ಪರಿಯೋಜನೆಯಡಿ ಆರು ಪಥದ ಹೆದ್ದಾರಿ ನಿರ್ಮಾಣ ಆಗಲಿದೆ. ಉತ್ತರ ಕರ್ನಾಟಕದಲ್ಲಿ ನಿರ್ಮಾಣವಾಗಲಿರುವ ಮೊದಲ ಆರು ಪಥದ ರಾಷ್ಟ್ರೀಯ ಹೆದ್ದಾರಿ ಆಗಲಿದ್ದು, ಕೇಂದ್ರ ಸರ್ಕಾರ ಯೋಜನೆಗಾಗಿ ಒಂದು ಕಿಮೀಗೆ ಸುಮಾರು 25 ಕೋಟಿ ರೂಪಾಯಿ ವ್ಯಯ ಮಾಡಲಿದೆ. ರಾಷ್ಟ್ರೀಯ ಮಾಧ್ಯಮದ ವರದಿಯ …

Read More »

ಕನ್ನಡ ಧ್ವಜ ಸುಟ್ಟವರ ವಿರುದ್ಧ ಶಿವರಾಜ್​ಕುಮಾರ್ ಕೆಂಡ.. ತಕ್ಕ ಶಿಕ್ಷೆಗೆ ಆಗ್ರಹ

ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿರುವ ಘಟನೆ ಖಂಡಿಸಿ ನಟ ಶಿವರಾಜ್​​ ಕುಮಾರ್​ ಧ್ವನಿಯೆತ್ತಿದ್ದು ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿ ಆಕ್ರೋಶ ಹೊರಹಾಕಿದ ಶಿವರಾಜ್​ ಕುಮಾರ್​‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಆಗ್ರಹಿಸಿದ್ದಾರೆ. ಪ್ರಕರಣದ ಹಿನ್ನೆಲೆ.. …

Read More »

11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ

ಹಾವೇರಿ: ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ನವೆಂಬರ್ ತಿಂಗಳವರೆಗೆ ರಸ್ತೆ ಅಪಘಾತದಲ್ಲಿ 198 ಜನ ಅಸುನೀಗಿದ್ದಾರೆ. 461 ಮಂದಿ ಗಂಭೀರವಾಗಿ ಗಾಯಗೊಂಡರೆ, 677 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 7 ಅಪಘಾತ ವಲಯಗಳನ್ನು ಗುರುತಿಸಿದೆ. ಅದರಲ್ಲಿ 3 ಅಪಘಾತ ವಲಯಗಳು ಸಿಎಂ …

Read More »

ಫಾರ್ಮಸಿ ಇನ್ಸಪೆಕ್ಟರ್ ನೇಮಕಾತಿಗೆ ಅರ್ಹತಾ ನಿಯಮ ರೂಪಿಸಲಾಗಿದೆ: ಹೈಕೋರ್ಟ್​ಗೆ ಸರ್ಕಾರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಫಾರ್ಮಸಿ ಇನ್ಸ್‌ಪೆಕ್ಟರ್ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತಾ ನಿಯಮಗಳನ್ನು ರೂಪಿಸಿದ್ದು, ಅವುಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ‘ಫಾರ್ಮಸಿ ಕಾಯ್ದೆ-1948’ರ ನಿಯಮಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ನಿರ್ದೇಶನ ಕೋರಿ ಅಶೋಕ್ ಸ್ವಾಮಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು …

Read More »

ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಮಸ್ಯೆ ಶೀಘ್ರ ಪರಿಹರಿಸಲು ಕಾರ್ಮಿಕ ಸಚಿವರ ಸೂಚನೆ

ಬೆಳಗಾವಿ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸಮಸ್ಯೆ ಕುರಿತಂತೆ ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಸುವರ್ಣಸೌಧದ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದರು. ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಕಾರ್ಖಾನೆಯ ಕಾರ್ಮಿಕರ ಸಮಸ್ಯೆಯನ್ನು ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಅಹವಾಲನ್ನು ಸ್ವೀಕರಿಸಿ, ಕಾರ್ಮಿಕರಿಗೆ ನೀಡಬೇಕಾಗಿರುವ ಬಾಕಿ ವೇತನ, ಇತರೆ ಸೌಲಭ್ಯಗಳನ್ನು ಶೀಘ್ರವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು ಸಚಿವರ …

Read More »

40% ಕಮಿಷನ್ ವಿಚಾರವಾಗಿ ಸದನದಲ್ಲಿ ಗಂಭೀರ ಚರ್ಚೆ ನಡೆಸಲು ಕಾಂಗ್ರೆಸ್ ತೀರ್ಮಾನ

ಬೆಳಗಾವಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ಬೆಳಗ್ಗೆ ನಡೆಸಿ, ಸುವರ್ಣ ಸೌಧದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಎಪಿಎಂಸಿ ಕಾಯಿದೆ ವಾಪಸು ಪಡೆಯುವಂತೆ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಲಾಗಿದೆ.   ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ವಾಪಸು ಪಡೆಯುವಂತೆ ಒತ್ತಾಯ ಮಾಡುವುದು, ಕರೋನದಿಂದ ಸತ್ತವರಿಗೆ ಪರಿಹಾರ ಕೊಡುವ ವಿಚಾರ, ಮತಾಂತರ ತಿದ್ದುಪಡಿ ವಿಧೇಯಕ ಸರ್ಕಾರ ತಂದ್ರೆ ವಿರೋಧ …

Read More »