Breaking News

ರಾಜಕೀಯ

ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ : ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.   ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ …

Read More »

ಅಕ್ರಮವಾಗಿ ಗೋವು ಸಾಗಾಟ: ಆರೋಪಿಗಳ ಬಂಧನ

ಉಡುಪಿ: ಭಜರಂಗದಳದ ಕಾರ್ಯಕರ್ತರ ಮೇಲೆ ವಾಹನ ನುಗ್ಗಿಸಿ, ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಳಿ ಜಾನುವಾರು ಸಾಗಾಟ ತಡೆಯಲು ಯತ್ನಿಸಿ ಮಾರಣಾಂತಿಕ ದಾಳಿಗೊಳಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಹೋದರರಾದ ಚರಣ್ ಹಾಗೂ ಕಿರಣ್ ಅವರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು

Read More »

ಡಿ.14ಕ್ಕೆ ಡಿಕೆಶಿಗೆ ಎಲ್ಲ ಉತ್ತರ ಕೊಡುತ್ತೇನೆ: ಅವತ್ತು ಬೇಕಾದ್ರೆ ವಾರ್ ಆಗಲಿ: ಡಿಕೆಶಿಗೆ ರಮೇಶ ಜಾರಕಿಹೊಳಿ ಓಪನ್ ಚಾಲೆಂಜ್..!

ನನ್ನ ವ್ಯಕ್ಯಿತ್ವ ಏನು, ಡಿಕೆಶಿ ವ್ಯಕ್ತಿತ್ವ ಏನು ಎಂದು ಹೇಳ್ತಿನಿ. ಬೇಕಾದರೆ ಓಪನ್ ವಾರ್ ಆಗಲಿ. ಫಲಿತಾಂಶದ ದಿನ ಎಲ್ಲದಕ್ಕೂ ತಕ್ಕ ಉತ್ತರ ಕೊಡುತ್ತೇನೆ ಎಂದು ಕನಕಪುರ ಬಂಡೆ ಡಿಕೆ ಶಿವಕುಮಾರ್‍ಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಎಂಎಲ್‍ಸಿ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರ ಮಧ್ಯ ಮಾತಿನ ಸಮರ ಮುಂದುವರಿದಿದೆ. ಮೊನ್ನೆಯಷ್ಟೇ ರಮೇಶ ಜಾರಕಿಹೊಳಿ ವಿರುದ್ಧ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದರು. ಇದೀಗ ಡಿಕೆಶಿ …

Read More »

ನಮ್ಮದು ಯಾವಾಗಲೂ ಎ ಟೀಮ್, ಎ ಫಾರ್ ಎ ಒನ್-ಲಖನ್ ಜಾರಕಿಹೊಳಿ ಟಾಂಗ್ ಪರಿಷತ್ ಚುನಾವಣಾ ಅಖಾಡದಲ್ಲಿ ಸಹೋದರರ ಸವಾಲ್

ಬೆಳಗಾವಿ ತಾಲೂಕಿನ ಸುಳೇಬಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ, ಯಾರ್ಯಾರೋ ಎ ಟೀಮ್ ಬಿ ಟೀಮ್ ಅಂತಾ ಏನೇನೋ ಹೇಳ್ತಾರೆ. ನಾವು ಯಾವಾಗಲೂ ಎ ಟೀಮ್. ಅಂದ್ರೆ ಎ ಫಾರ್ ಎ1. ನಮ್ಮದು ಎ ಟೀಮ್, ಅವರೇ ಬಿ ಟೀಮ್. ನಾವು ನೀವು ಎ ಟೀಮ್ ಅಂದ್ರೆ ಮತದಾರರು ಎಲ್ಲಾರೂ ನಮ್ಮನ್ನು ನೋಡಿ ಎ ಟೀಮ್ ಎನ್ನಬೇಕು. ಅವರದ್ದು ಒಂದು ಬಿ ಇನ್ನೊಂದು ಸಿ …

Read More »

ಈಸಿ ಲೋನ್, ಈಸಿ ಇನ್ ಸ್ಟಾಲ್ ಮೆಂಟ್ ಎಂದು ಲೋನ್ ಕೊಡುವ ರೀತಿಯಲ್ಲಿ ಪಕ್ಷೇತರ ಅಭ್ಯರ್ಥಿ  ಪ್ರಚಾರ ಮಾಡುತ್ತಾರೆ.: ಸತೀಶ ಜಾರಕಿಹೊಳಿ

ಬೆಳಗಾವಿ:  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲು ಗುರಿ ಇಟ್ಟುಕೊಂಡಿದ್ದೇವೆ ಎಂದರು. ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆಯಿಂದ ಮತವಿಭಜನೆ ಪ್ರಶ್ನೆಯೇ ಇಲ್ಲ. ವಿವೇಕರಾವ್ ಈಗಾಗಲೇ ರಮೇಶ ಜಾರಕಿಹೊಳಿ ಜೊತೆಗೆ ಗುರುತಿಸಿಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ …

Read More »

ಅಭಿಮಾನಿಗಳಿಗೆ ಇಲ್ಲಿ ‘ಕಿಚ್ಚ’ನೇ ದೇವರು.. ಸುದೀಪ್​ಗೆ ಗುಡಿ ನಿರ್ಮಿಸುತ್ತಿರುವ ರಾಯಚೂರು ಫ್ಯಾನ್ಸ್​

ರಾಯಚೂರು: ಚಲನಚಿತ್ರ ನಟರನ್ನು ಆರಾಧಿಸಿ ಅವರ ಹೆಸರಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಶ್ರೇಯೋಭಿವೃದ್ಧಿ ಪ್ರಾರ್ಥಿಸುವುದು ಅಭಿಮಾನಿಗಳು ನಡೆಸಿಕೊಂಡು ಬಂದಿರುವ ಕಾರ್ಯವಾಗಿದೆ. ಆದರೆ ರಾಯಚೂರಲ್ಲಿ ತಮ್ಮ ನೆಚ್ಚಿನ ನಟನ ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳು ಮುಂದಾಗಿದ್ದಾರೆ. ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ಥಳಿ ಕೆತ್ತಿಸಿರುವ ಅಭಿಮಾನಿಗಳು ಅವರಿಗಾಗಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಮೊದಲು ಮಾನವನಾಗು ಎಂಬ …

Read More »

ಬೆಳಗಾವಿಯಲ್ಲೂ ಇಬ್ಬರು ದಂತ ವೈದ್ಯಕೀಯ ವಿದ್ಯಾರ್ಥಿನಿಯರಿಗೆ ವಕ್ಕರಿಸಿದ ಕೊರೊನಾ

ಬೆಳಗಾವಿ: ಇಲ್ಲಿನ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಒಳಗಾದ ಇಬ್ಬರೂ ವಿದ್ಯಾರ್ಥಿನಿಯರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಇವರು ನಗರದ ಖಾಸಗಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಸತಿ ನಿಲಯದಲ್ಲಿರುವ ಈ ಇಬ್ಬರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಬ್ಬರಲ್ಲೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿರಲಿಲ್ಲ.‌ …

Read More »

ಮುಂದಿನ ಎರಡು ತಿಂಗಳ ಕಾಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳಿಗೆ ಬ್ರೇಕ್ 1d

ಬೆಂಗಳೂರು: ಶಾಲಾ, ಕಾಲೇಜು ಮತ್ತು ಹಾಸ್ಟಲ್‍ಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಲ್ಲಾ ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದೂಡಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶಿಸಿದೆ.ಶಿಕ್ಷಣ ಸಂಸ್ಥೆಗಳಲ್ಲಿ ಸಮ್ಮೇಳನಗಳು, ಸೆಮಿನಾರ್ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳನ್ನು ಮುಂದೂಡಬೇಕು ಕನಿಷ್ಠ ಭೌತಿಕ ಹಾಜರಾತಿಯೊಂದಿಗೆ ಕಾರ್ಯಕ್ರಮವನ್ನು ನಡೆಸಬಹುದು. ಇಲ್ಲವೇ ಹೆಚ್ಚು ಭಾಗವಹಿಸಬೇಕಾದ ಸಂಧರ್ಭದಲ್ಲಿ ವರ್ಚುವಲ್ ಮೋಡï ಮೂಲಕ ಹಾಜರಾಗಬಹುದು ಎಂದು ಸೂಚಿಸಿದೆ. 18 ವರ್ಷಕ್ಕಿಂತ …

Read More »

ಮಹಿಳೆ ಕೆಟಗರಿ ಅಲ್ಲ!: ಹೈಕೋರ್ಟ್‌

ಬೆಂಗಳೂರು : ‘ಮೀಸಲಾತಿ ವಿಷಯದಲ್ಲಿ ಮಹಿಳೆ ಮೀಸಲು ಕೆಟಗರಿ ಅಲ್ಲ, ಅದೊಂದು ಲಿಂಗಸೂಚಕ ಮಾತ್ರ’ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಶಿರಾ ನಗರಸಭೆಯ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ನವೆಂಬರ್ 25ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿದ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.   ಈ ಸಂಬಂಧ ಅಬ್ದುಲ್ಲಾ ಖಾನ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ‘ಬಿಸಿಎ (ಮಹಿಳೆ) ಅಥವಾ ಸಾಮಾನ್ಯ (ಮಹಿಳೆ) …

Read More »

ಗಿಫ್ಟ್‌ ಡೀಡ್‌ ವರ್ಗಾವಣೆ: ಪೂರ್ವಾನ್ವಯ ಸಲ್ಲ

ಬೆಂಗಳೂರು: ‘ಗಿಫ್ಟ್ ಡೀಡ್ ಮೂಲಕ ಮಗಳಿಗೆ ನೀಡಿದ್ದ ಆಸ್ತಿ ವರ್ಗಾವಣೆ‌ ರದ್ದುಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ, ಹೈಕೋರ್ಟ್‌, ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ಹವಣೆ ಮತ್ತು ಕಲ್ಯಾಣ ಕಾಯ್ದೆ-2007ರ ಕಲಂ 23(1) ನಿಬಂಧನೆಗಳನ್ನು, ಕಾಯ್ದೆ ಜಾರಿಯಾದ ನಂತರದ ಅವಧಿಯಲ್ಲಿ ಅನ್ವಯಸಬಹುದೇ ಹೊರತು, ಪೂರ್ವಾನ್ವಯ ಮಾಡಲಾಗದು’ ಎಂದು ಅಭಿಪ್ರಾಯಪಟ್ಟಿದೆ.   ಈ ಸಂಬಂಧ ತುಮಕೂರಿನ ಕಮಲಮ್ಮ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ …

Read More »