ಬೆಂಗಳೂರು: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ರೆಸಿಡೆಂಟ್ ಡಾಕ್ಟರ್ಸ್ ಇಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ನಡೆಸಲಿದ್ದಾವೆ. ವೈದ್ಯರಿಗೆ ಏಪ್ರಿಲ್ ತಿಂಗಳಿನಿಂದ ತಿಂಗಳಿಗೆ 10,000 ಕೋವಿಡ್ ಭತ್ಯೆ ಘೋಷಿಸಲಾಗಿತ್ತು. ಆದರೆ ಈ ಬಗ್ಗೆ ಇನ್ನೂ ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿಲ್ಲ, ಇದಲ್ಲದೇ ಕೋವಿಡ್ ಅಪಾಯ ಭತ್ಯೆಗೆ ತಕ್ಷಣವೇ ಹಣವನ್ನು ಮಂಜೂರು ಮಾಡಬೇಕು ಹಾಗೂ ಸ್ನಾತಕೋತ್ತರ ಪದವೀಧರರು ಮತ್ತು ಇಂಟರ್ನ್‌ಗಳಿಗೆ ಸಕಾಲದಲ್ಲಿ ಸ್ಟೈ ಫಂಡ್ ಪಾವತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. …
Read More »ಪೆಟ್ರೋಲ್ ಬಂಕ್ ಮಾದರಿಯಲ್ಲಿ ಬ್ಯಾಟರಿ ಬದಲಾವಣೆ ನಿಲ್ದಾಣಗಳ ಸ್ಥಾಪನೆಗೆ ಮುಂದಾದ ಬೌನ್ಸ್
ಎಲೆಕ್ಟ್ರಿಕ್ ಸ್ಕೂಟರ್ ಬಾಡಿಗೆ ನೀಡುವ ಸ್ಟಾರ್ಟ್‌ಅಪ್ ಬೌನ್ಸ್ ತನ್ನದೇ ನಿರ್ಮಾಣದ ಮೊದಲ ಇ-ಸ್ಕೂಟರ್ ಆದ ಇನ್ಫಿನಿಟಿಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡಲಿದೆ. ಪಾರ್ಕಿಂಗ್ ಪರಿಹಾರಗಳನ್ನು ನೀಡುವ ಪ್ಲಾಟ್‌ಫಾರಂ ಪಾರ್ಕ್+ ಜೊತೆಗೆ ಸಹಯೋಗ ಮಾಡಿಕೊಂಡಿರುವ ಬೌನ್ಸ್, 10ಕ್ಕಿಂತ ಹೆಚ್ಚು ನಗರಗಳ 3,500 ರಷ್ಟು ಸ್ಥಳಗಳಲ್ಲಿ ಬ್ಯಾಟರಿ ಬದಲಾವಣೆಗೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮುಂದಾಗಿದೆ. ಈ ಸ್ಮಾರ್ಟ್ ಸವಲತ್ತು ವಸತಿ ಸಮುದಾಯಗಳು, ಪಾರ್ಕಿಂಗ್ ನಿಲ್ದಾಣಗಳು, ಮಾಲ್‌ಗಳು, ಕಾರ್ಪೋರೇಟ್ ಕಚೇರಿಗಳು ಸೇರಿದಂತೆ ಜನಸಮೂಹ ಸೇರುವ …
Read More »ಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ರಾದ ಡೊನಾಲ್ಡ್ ಟ್ರಂಪ್ ಭೇಟಿಯಾದ ಡಾ. ಪ್ರಭಾಕರ್ ಕೋರೆ
ವಾಷಿಂಗ್ಟನ್ : ಇತ್ತೀಚಿಗೆ ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರು ಅಮೆರಿಕ ದೇಶಕ್ಕೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ರಾದ ಡೊನಾಲ್ಡ್ ಟ್ರಂಪ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಉದ್ಯಮಿ ರವಿಶಂಕರ್ ಭೂಪಲಾಪೂರ್ ದಂಪತಿಗಳ ಮಗಳಾದ ಡಾ. ಮನಾಲಿ ಮತ್ತು ಅಂಕಿತ್ ಅವರ ಮದುವೆಯ ಸಮಾರಂಭದಲ್ಲಿ ಟ್ರಂಪ್ ಅವರನ್ನು ಭೇಟಿಯಾದರು. ಕುಶಲೋಪಹರಿಯಾಗಿ ಟ್ರಂಪ್ ಅವರೊಂದಿಗೆ ಮಾತನಾಡಿದ ಡಾ. ಕೋರೆ ಅವರು, ಪ್ರಸ್ತುತ ಜಾಗತಿಕ ಶೈಕ್ಷಣಿಕ ಹಾಗೂ …
Read More »C.M. ಆಗ್ತಾರಾ ಮುರಾಗೇಶ್ ನಿರಾಣಿ ಏನಿದು ಈಶ್ವರಪ್ಪ ಹೊಸ ಬಾಂಬ್
ಬಾಗಲಕೋಟೆ: ನಮ್ಮ ನಾಯಕ ಮುರುಗೇಶ್ ನಿರಾಣಿ ಬೇಗನೇ ಸಿಎಂ ಆಗ್ತಾರೆ. ಯಾವ ಸಂದರ್ಭದಲ್ಲಿ ಎಂದು ಗೊತ್ತಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕುತೂಹಲ ಮೂಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಈಶ್ವರಪ್ಪ, ನಮ್ಮ ನಾಯಕ ನಿರಾಣಿಯವರು ಶೀಘ್ರದಲ್ಲಿಯೇ ಸಿಎಂ ಆಗ್ತಾರೆ. ಆದರೆ ಯಾವ ಸಂದರ್ಭದಲ್ಲಿ ಎಂಬುದು ನನಗೆ ಗೊತ್ತಿಲ್ಲ. ನಾಳೇನೆ ಆಗ್ತಾರಾ?, ಬೊಮ್ಮಾಯಿಯನ್ನು ಕೆಳಗಿಳಿಸ್ತಾರಾ? ಹೀಗೆಂದು ಮಾಧ್ಯಮದವರು ಬರಬೇಡಿ… ನಿರಾಣಿಗೆ ಸಿಎಂ ಆಗುವ ಶಕ್ತಿ ಇದೆ, ಇವತ್ತಲ್ಲ ನಾಳೆ …
Read More »ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿ ಆಗಿರುವುದರಿಂದ ಕಾಂಗ್ರೆಸ್ ಗೆ ತೊಂದರೆ ಆಗುತ್ತಾ? ಡಿಕೆಶಿ ಹೇಳಿದ್ದೇನು
ಹುಬ್ಬಳ್ಳಿ – ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ನರೇಗಾ ಯೋಜನೆಯಿಂದ ಪಂಚಾಯ್ತಿಗಳಿಗೆ ಕೋಟ್ಯಂತರ ರುಪಾಯಿ ಅನುದಾನ ಬಂದಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ನರೇಗಾ ಇಲ್ಲದಿದ್ದರೆ ಪಂಚಾಯ್ತಿಗಳಿಗೆ ಜೀವವೇ ಇಲ್ಲ. ಅವುಗಳಿಗೆ ಶಕ್ತಿ ಬಂದಿದೆ ಎಂದರೆ ಕಾಂಗ್ರೆಸ್ ಸರಕಾರದ ನರೇಗಾ ಯೋಜನೆಯಿಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದೆ ಎಸ್.ಎಂ. ಕೃಷ್ಣ ಅವರ ಸರಕಾರವಿದ್ದಾಗ ಇದೇ ಧಾರವಾಡದಲ್ಲಿ ಬೇಲೂರು …
Read More »ರಮೇಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕಾಂಗ್ರೆಸ್ ಕೆಡವಲು ಫುಲ್ ಜೋರಾಗಿ ತಯಾರಿ ನಡೆಸಿದ ಸಾಹುಕಾರ
ನವದೆಹಲಿ – ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಸಹೋದರ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರ ಮಾಡಲು ಬಿಜೆಪಿ ರಾಷ್ಟ್ರೀಯ ನಾಯಕರ ಅನುಮತಿ ಪಡೆಯಲು ಮಾಜಿ ಸಚಿವ ರಮೇಶ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಭಾನುವಾರ ಸಂಜೆ ವಿಧಾನಪರಿಷತ್ ಹಾಲಿ ಸದಸ್ಯ ವಿವೇಕರಾವ್ ಪಾಟೀಲ ಅವರೊಂದಿಗೆ ದೆಹಲಿ ತಲುಪಿರುವ ರಮೇಶ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಳೀನ್ ಕುಮಾರ ಕಟೀಲ್ ಅವರಿಗೆ ವಿವೇಕರಾವ್ ಪಾಟೀಲ …
Read More »ಅಧಿವೇಶನವನ , ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶ:ಪ್ರಹ್ಲಾದ್ ಜೋಷಿ
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.ಈ ಚಳಿಗಾಲ ಅಧಿವೇಶನವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರಮುಖವಾಗಿ ಪರಿಗಣಿಸಿದೆ. ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟವು ಮಸೂದೆಯನ್ನು ಅಂಗೀಕರಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ …
Read More »ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ .ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗಿದ್ದು, ಈ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಅವರು ಇದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆಮಾಹಿತಿ ನೀಡಿದರು.ಇದೇ ವೇಳೆ ಅವರು ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಉಂಟಾಗಿರುವ ಕೋವಿಡ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿ ಸದ್ಯ ಆಸ್ಪತ್ರೆಯ ಒಪಿಡಿಯನ್ನು ಬಂದ್ …
Read More »ಶಾಲಾ ಮಕ್ಕಳು ನಿರ್ಮಿಸಿರುವ ಶಿವಾಜಿ ಮಹಾರಾಜರ ಕೋಟೆ
ಬೆಳಗಾವಿಯಟಳಕವಾಡಿಯ ಎಸ್‍ಕೆಇ ಸೊಸೈಟಿಯ ಹೈಸ್ಕೂಲ್ ವಿದ್ಯಾರ್ಥಿಗಳು ಅಖಂಡ ಹಿಂದೂ ಸಾಮ್ರಾಟ್ ಶಿವಾಜಿ ಮಹಾರಾಜರ ಜೀವನ ಹಾಗೂ ವೈಭವಯುತ ಆಡಳಿತವನ್ನು ಜನತೆಗೆ ತಿಳಿಸುವ ದೃಷ್ಟಿಯಿಂದ ಈ ಕಿಲ್ಲಾ ಮಾದರಿಗಳನ್ನು ತಮ್ಮದೇ ಆದ ಪರಿಕಲ್ಪನೆಯಲ್ಲಿ ನಿರ್ಮಾಣ ಮಾಡಿದ್ದಾರೆ. ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ ಮೂಡಿಬಂದ ಈ ಕಿಲ್ಲಾ ಮಾದರಿಗಳ ಉದ್ಘಾಟನೆಯನ್ನು ಲೋಕಮಾನ್ಯ ಸೊಸೈಟಿ ಹಾಗೂ ಭಗವೇವಾದಳ್ ಸಂಸ್ಥೆಯ ಪಧಾಧಿಕಾರಿಗಳು ನೆರವೇರಿಸಿ ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಶಿಸಿದರು. ಒಬ್ಬರಿಗಿಂತ ಒಬ್ಬರು ಶೂರ ಸೈನಿಕರು, ಒಂದಕ್ಕಿಂದ ಒಂದು ಅಭೇದ್ಯ ಕೋಟೆಗಳು, …
Read More »ಪ್ರಥಮ ಪ್ರಾಶಸ್ತ್ಯದಿಂದ ಮತಗಳೊಂದಿಗೆ ಮಹಾಂತೇಶ ಕವಟಗಿಮಠ ಜಯಭೇರಿ: ಶ್ರೀಮಂತ ಪಾಟೀಲ್
ಭಾರತೀಯ ಜನತಾ ಪಕ್ಷದ ಪರಿಷತ್ ಅಭ್ಯರ್ಥಿಯಾದ ಮಹಾಂತೇಶ್ ಕವಟಗಿಮಠ ಪ್ರಥಮ ಮತಗಳಿಂದ ಜಯಭೇರಿ ಸಾಧಿಸಿಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ್, ಬಿಜೆಪಿ ಪಕ್ಷದ ರಾಜ್ಯದ ಮುಖಂಡರು ಮಹಾಂತೇಶ್ ಕವಟಗಿಮಠ ಇವರಿಗೆ ಟಿಕೆಟ್ ನೀಡಿದ್ದು, ಪಕ್ಷದ ವತಿಯಿಂದ ಅವರ ಪರ ಮತಚಲಾಯಿಸಿ. ಪ್ರಥಮ ಪ್ರಾಶಸ್ತ್ಯದ ಮತಪಡೆದು ಆಯ್ಕೆಯಾಗಲಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಇದ್ದರೂ, ಮತ್ತೊಬ್ಬ …
Read More »
Laxmi News 24×7