Breaking News

ರಾಜಕೀಯ

ಕಾಂಗ್ರೆಸ್​ ಪಾಳಯದಲ್ಲಿ ಸಿದ್ದು-ಡಿಕೆಶಿ ಬಣದ ಇಬ್ಬರು ಶಾಸಕರ ನಡುವೆ ಆಂತರಿಕ ಸಮರ

ಬೆಂಗಳೂರು: ಕಾಂಗ್ರೆಸ್​ನ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್​ ಜಬ್ಬಾರ್​ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಬಣ ರಾಜಕೀಯ ಬಯಲಾಗಿದ್ದು, ಕೈ ನಾಯಕರಿಗೆ ಭಾರಿ ಮುಜುಗರ ತಂದೊಡಿದೆ. ಅರಮನೆ ಮೈದಾನದಲ್ಲಿ ಮಂಗಳವಾರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲವರು ಡಿಕೆಶಿ.. ಡಿಕೆಶಿ.. ಜಮೀರ್ ಜಮೀರ್​ ಎಂದು ಘೋಷಣೆ ಕೂಗುತ್ತಿದ್ದರು. ಇನ್ನು ಮುಂದು ವರೆದು ಜಮೀರ್​ ಫೋಟೋ ಹಿಡಿದು ಜಮೀರ್​ ಜಮೀರ್​ ಎಂದು ಜೋರಾಗಿ ಕೂಗುತ್ತಿದ್ದರು. …

Read More »

ಮಹಿಳೆ ಹಾಗೂ ಮಕ್ಕಳ ಸುರಕ್ಷತೆಗಾಗಿ ಹೊಸ ಐಟಿ ನಿಯಮಾವಳಿ; ಹೈಕೋರ್ಟ್‌ ಗೆ ಕೇಂದ್ರದಿಂದ ಮಹತ್ವದ ಮಾಹಿತಿ

2021ನೇ ಸಾಲಿನ ಐಟಿ ನಿಯಮಾವಳಿಗಳು ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯನ್ನು ಹೆಚ್ಚಿಸುವ ಬಗ್ಗೆ ಸ್ಪಷ್ಟ ಗಮನವನ್ನು ಹೊಂದಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ ಗೆ​ ಮಾಹಿತಿಯನ್ನು ರವಾನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ಎನ್​. ಪಟೇಲ್​ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್​​ ನೇತೃತ್ವದ ಪೀಠಕ್ಕೆ ಅಫಿಡವಿಟ್​ ಸಲ್ಲಿಸಿದ ಕೇಂದ್ರ ಸರ್ಕಾರವು ಐಟಿ ಹೊಸ ನಿಯಮಾವಳಿಗಳು ಅಶ್ಲೀಲತೆ ಹಾಗೂ ಭೌತಿಕ ಗೌಪ್ಯತೆಯನ್ನು ಉಲ್ಲಂಘಿಸುವಂತಹ ವಿಷಯಗಳನ್ನು ತೆಗೆದು ಹಾಕಲಿದೆ ಎಂದು ಹೇಳಿದೆ.   ‘ಐಟಿ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಮಾಡಿ ಆದೇಶ ಹೊರಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಅವರ ಕಚೇರಿಗೆ ವರ್ಗಾವಣೆ ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಮನವಿ ಸಲ್ಲಿಸುತ್ತಿರುವುದು ಖುದ್ದು ಸಿಎಂಗೆ ದೊಡ್ಡ ತಲೆ ನೋವು ಆಗಿದೆ.   ಈ ನಡುವೆ ವರ್ಗಾವಣೆ ನೀತಿಯ ಪ್ರಕಾರ (transfer policy) ಎಲ್ಲಾ ವೃಂದದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳನ್ನು ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗುತ್ತಿದೆ (Chief Minister for approval.). …

Read More »

ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ

ನವದೆಹಲಿ: ನಾಗರಿಕ ಪ್ರಪಂಚವೇ ತಲೆ ತಗ್ಗಿಸುವಂತ ಘೋರ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ಮಗಳ 8 ತಿಂಗಳ ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಗುವಿನ ಅಂತ್ಯಕ್ರಿಯೆಗೆಂದು ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ರಾಟಿಬಾದ್ ಠಾಣೆ ಅಧಿಕಾರಿ ಸುದೇಶ್ ತಿವಾರಿ …

Read More »

ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶ: ಲಾಕ್ ಡೌನ್ ಜಾರಿಯಾದಂತಾಗಿದೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ವಾಯುಗುಣಮಟ್ಟ ನಿರ್ವಹಣಾ ಆಯೋಗ ತಿಳಿಸಿದೆ. ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಉಷ್ಣ ವಿದ್ಯುತ್ ಸ್ಥಾವರಗಳನ್ನು ನವೆಂಬರ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. …

Read More »

ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ?

ಲಕ್ನೋ, ನವೆಂಬರ್‌ 16: ಮುಂದಿನ ವರ್ಷ ಆರಂಭದಲ್ಲೇ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಚಾರ ಕಾರ್ಯವನ್ನು ಮಾಡುತ್ತಿದೆ. ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶವು ರಾಜಕೀಯವಾಗಿ ಹೆಚ್ಚು ಪ್ರಮುಖವಾದ ರಾಜ್ಯವಾಗಿದೆ. ಪ್ರಸ್ತುತ ಬಿಜೆಪಿಯು ಇಲ್ಲಿ ಆಡಳಿತವನ್ನು ಹೊಂದಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ 2022 ರ ಚುನಾವಣಾ ಫಲಿತಾಂಶ ಏನು ಆಗಲಿದೆ …

Read More »

ದೇವಸ್ಥಾನದಲ್ಲಿನ ಪೂಜಾ ವಿಧಾನ ನಿರ್ಣಯ ಕೋರ್ಟ್‌ ಕೆಲಸವಲ್ಲ: ಸುಪ್ರೀಂ

ನವದೆಹಲಿ: ದೇವಸ್ಥಾನದಲ್ಲಿನ ಪೂಜಾ ವಿಧಿ ವಿಧಾನ ಹೇಗಿರಬೇಕು ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್‌, ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯೊಂದರ ಸಂಬಂಧ ಯಾವುದೇ ಆದೇಶವನ್ನು ನೀಡಲು ನಿರಾಕರಿಸಿದೆ. ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪೂಜಾ ವಿಧಿವಿಧಾನಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ, ‘ದೇವಾಲಯದಲ್ಲಿ ಯಾವ ರೀತಿ ಪೂಜೆ ಮಾಡಬೇಕು? ತೆಂಗಿನಕಾಯಿಯನ್ನು ಹೇಗೆ ಒಡೆಯಬೇಕು? ದೇವರ ಮೂರ್ತಿಗೆ ಹೇಗೆ ಹೂಮಾಲೆ ಹಾಕಬೇಕು ಎಂದೆಲ್ಲ ನ್ಯಾಯಾಲಯ …

Read More »

ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಪಲ್ಟಿ, ಓರ್ವ ಮಹಿಳೆ ಸಾವು : ಮೂವರು ಗಂಭೀರ

ಮಾನ್ವಿ: ತಾಲ್ಲೂಕಿನ ಗಿಣವಾರ ಗ್ರಾಮದಿಂದ ಕಲ್ಲೂರು ಗ್ರಾಮದಲ್ಲಿನ ಹೊಲಕ್ಕೆ ಹತ್ತಿ ಬಿಡಿಸಲು ತೆರಳಿದ ಕೂಲಿ ಕಾರ್ಮಿಕರಿದ್ದ ಕ್ರೂಸರ್ ವಾಹನ ಮಾನ್ವಿ ರಾಯಚೂರು ರಸ್ತೆಯ ಬೊಮ್ಮನಾಳ್ ಕ್ರಾಸ್ ಬಳಿ ಪಲ್ಟಿ ಹೊಡೆದು 18 ಜನ ಗಾಯಗೊಂಡಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ.   ಗಿಣವಾರ ಗ್ರಾಮದ ನಿವಾಸಿ ಲಕ್ಷ್ಮಿದೇವಿ (45 ) ಮೃತಳು. 3 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗುತ್ತಿದ್ದು, ಮಾನ್ವಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು …

Read More »

ಸಿದ್ಧಸಿರಿ ಇಥೆನಾಲ್ ಕಾರ್ಖಾನೆಗೆ ಪೂಜೆ 22ಕ್ಕೆ

ಕಲಬುರಗಿ: ಜಿಲ್ಲೆಯ ಚಿಂಚೋಳಿಯಲ್ಲಿ ಸಿದ್ಧಸಿರಿ ಇಥೆನಾಲ್ ಹಾಗೂ ಪವರ್ ವಿಭಾಗದ ಪರಿವರ್ತಿತ ಕಾರ್ಖಾನೆಯ ವಾಸ್ತು ಪೂಜೆ, ಯಂತ್ರೋಪಕರಣಗಳು ಜೋಡಣಾ ಕಾರ್ಯಾರಂಭ ಹಾಗೂ ಸಿದ್ಧಸಿರಿ ಸಹಕಾರ ಸಂಸ್ಥೆಯ 136ನೇ ಶಾಖೆಯ ಉದ್ಘಾಟನಾ ಸಮಾರಂಭವನ್ನು ಇದೇ 22ರಂದು ಆಯೋಜಿಸಲಾಗಿದೆ ಎಂದು ವಿಜಯಪುರ ಶಾಸಕ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.   ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಂಚೋಳಿ ಷುಗರ್ಸ್‌ ಎಂದು ಕರೆಯಲಾಗುತ್ತಿದ್ದ ಸಕ್ಕರೆ ಕಾರ್ಖಾನೆ ಹಲವು …

Read More »

ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಮಂಗಳವಾರ (ನ.16) ಬೆಳಗ್ಗೆ ಈ ಭೀಕರ ಆಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸುಶಾಂತ್​ ಅಭಿಮಾನಿಗಳಿಗೆ ತೀವ್ರ ಆಘಾತ ಆಗಿದೆ.

Read More »