ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಸುರಿಯುತ್ತಿದೆ. ಅಪ್ಪು ನಿಧನದಿಂದ ಆಘಾತಕ್ಕೆ ಒಳಗಾಗಿದ್ದ ಅಭಿಮಾನಿಯೊರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಶಿಂಧೊಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಶಿಂಧೊಳ್ಳಿ ಗ್ರಾಮದ ಪರಶುರಾಮ ದೇಮಣ್ಣವರ್ ಮೃತ ಅಭಿಮಾನಿ. ನಟ ಪುನೀತ್ ರಾಜಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ ಮೃತ ಪರಶುರಾಮ್ ಟಿವಿಯಲ್ಲಿ ಅಪ್ಪು ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ. ಇದೇ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ …
Read More »ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಆಯೋಜಿಸಿರುವ ನಿಸರ್ಗದ ಬಗೆಗಿನ ಮನಮೋಹಕ ಚಿತ್ರಗಳ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಸಾಕಷ್ಟು ವಿದ್ಯಾರ್ಥಿಗಳು, ಪೇಂಟಿಂಗ್ಸ್ ರಸಿಕರನ್ನು ಚಿತ್ರಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಹೌದು ಬೆಳಗಾವಿಯ ಟಿಳಕವಾಡಿಯಲ್ಲಿರುವ ಕೆ.ಬಿ.ಕುಲಕರ್ಣಿ ಆರ್ಟ ಗ್ಯಾಲರಿಯ ವರೆರ್ಕರ್ ನಾಟ್ಯಗ್ರಹದಲ್ಲಿ ಅಕ್ಟೋಬರ್ 25ರಿಂದ ಅಕ್ಟೋಬರ್ 31ವರೆಗೆ ನಿಸರ್ಗದ ಬಗೆಗಿನ ಚಿತ್ರಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿವಿಧ ಕಾಲೇಜು, ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿ ನಿಸರ್ಗದ ರಮಣೀಯ ಚಿತ್ರಗಳನ್ನು ಕಣ್ತುಂಬಿಕೊಂಡರು. ಎಲ್ಲ ಚಿತ್ರಗಳು ಕೂಡ ನಮ್ಮ ನಿಸರ್ಗವನ್ನು ಕಾಪಾಡುವ …
Read More »ಅಪ್ಪು ಅಂತ್ಯಸಂಸ್ಕಾರ ರಾಜ್ ಸಮಾಧಿ ಪಕ್ಕದಲ್ಲೇ
ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ ಕಾರಣ, …
Read More »ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ:: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಹಾಲು ಉತ್ಪಾದಕರ ಮಕ್ಕಳ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ 100 ವಿದ್ಯಾರ್ಥಿಗಳ ವಸತಿಗಾಗಿ ವಿದ್ಯಾರ್ಥಿನಿಲಯ …
Read More »ಹಿಂದಿನ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸಿದ ಮೇಲಾದರೂ ಶಾಸಕರು ಸಮಾಧಾನದಿಂದ ಇದ್ದಾರೋ ಇಲ್ಲವೋ:
ಬೆಳಗಾವಿ: ಶಾಸಕರು ಹಾಗೂ ನಗರಸಭೆ ಮಾಜಿ ಅಧ್ಯಕ್ಷರ ನಡುವಿನ ತಿಕ್ಕಾಟ ಅವರ ವೈಯಕ್ತಿಕ ಸಮಸ್ಯೆಯಾಗಿದೆ. ಹಿಂದಿನ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸಿದ ಮೇಲಾದರೂ ಶಾಸಕರು ಸಮಾಧಾನದಿಂದ ಇದ್ದಾರೋ ಇಲ್ಲವೋ ಎಂದು ಅವರೇ ಹೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹೊಸ ಅಧ್ಯಕ್ಷರನ್ನೂ ಕೂಡ ಅಧಿಕಾರದಿಂದ ಇಳಿಸುತ್ತಾರೋ, ಮುಂದುವರೆಸುತ್ತಾರೋ …
Read More »ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ
ಬೆಂಗಳೂರು – ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಸರಕಾರಿ ಒಪ್ಪಿಗೆ ನೀಡಿದೆ. ಕನ್ನಡ ಚಿತ್ರರಂಗದ ನಾಯಕನಟ ಪುನೀತ್ ರಾಜ್‌ಕುಮಾರ್ ಶುಕ್ರವಾರ ಅಪರಾಹ್ನ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಡಾ||ರಾಜ್‌ಕುಮಾರ್ ಪ್ರತಿಷ್ಠಾನದಲ್ಲಿನ ಡಾ|| ರಾಜ್‌ಕುಮಾರ್ ಸಮಾಧಿ ಸಮೀಪ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿರುತ್ತಾರೆ. ಆದ …
Read More »ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಮತದಾನ
ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 …
Read More »ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ: ಎಚ್.ಡಿ ದೇವೇಗೌಡ ಬೇಸರ
ಬೆಂಗಳೂರು: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಂಬನಿ ಮಿಡಿದಿದ್ದಾರೆ. ‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಅವರ ನಟಿಸಿದ್ದ ‘ಪೃಥ್ವಿ’ ಮತ್ತು ‘ರಾಜಕುಮಾರ’ …
Read More »ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ: ಕಮಲ್ ಪಂತ್
ಬೆಂಗಳೂರು: ‘ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಗಣ್ಯರಿಗೆ ಪ್ರತ್ಯೇಕ ದ್ವಾರದ ಮೂಲಕ ಪ್ರವೇಶ ನೀಡಲಾಗುತ್ತದೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೂ ಅವಕಾಶ ನೀಡಲಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು. ‘ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು. ‘ಮುಂಜಾಗ್ರತಾ ದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದಿಂದ …
Read More »ಫಿಟ್ನೆಸ್ ವಿಚಾರವಾಗಿ ಪುನೀತ್ ರಾಜ್‌ಕುಮಾರ್ ಯುವಕರಿಗೆ ರೋಲ್ ಮಾಡೆಲ್ ಆಗಿದ್ದರು. ಅಂತಹವರನ್ನು ಭಗವಂತ ಇಷ್ಟು ಬೇಗ ಕರೆಸಿಕೊಳ್ಳುತ್ತಾನೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್
.ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್‌ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಎಸ್.ಎಂ. ಕೃಷ್ಣ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಾ. ರಾಜ್‌ಕುಮಾರ್ ಕುಟುಂಬದ ಜೊತೆ ಆಪ್ತ ಸಂಬಂಧ ಹೊಂದಿದ್ದ ಡಿಕೆ ಶಿವಕುಮಾರ್ ಅಪ್ಪು ಜೊತೆಗಿನ ತಮ್ಮ …
Read More »
Laxmi News 24×7