Breaking News

ರಾಜಕೀಯ

ಬಿರುಕಿನಿಂದ ವಾಲಿದ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ವರಿಗೆ ಮತ ಹಾಕ್ತೀರಾ: ಸಿದ್ದರಾಮಯ್ಯ

ಬೆಂಗಳೂರು: ನಗರದ ಬಿನ್ನಿಪೇಟೆಯಲ್ಲಿ ನಿರ್ಮಿಸಲಾದ ಏಳು ಅಂತಸ್ತಿನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ಶನಿವಾರ ಬಿರುಕಿನಿಂದಾಗಿ 1.5 ಅಡಿಗಳಷ್ಟು ಅಪಾಯಕಾರಿಯಾಗಿ ವಾಲಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಟ್ಟಡಗಳ ಕುಸಿತ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ, ಕುಸಿದ ಮನೆಗಳಿಂದ ಕುಟುಂಬಗಳನ್ನು ಸ್ಥಳಾಂತರಿಸುವಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರೇ ಈಗ ಸ್ಥಳಾಂತರಗೊಳ್ಳಬೇಕಾದ ದುಸ್ಥಿತಿ ಬಂದೊದಗಿದೆ. ವಾಲಿದ ‘ಬಿ’ ಬ್ಲಾಕ್ ಕಟ್ಟಡದಲ್ಲಿ ವಾಸಿಸುತ್ತಿರುವ 38 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಲ್ಲಿ ಪಕ್ಕದಲ್ಲಿರುವ ‘ಸಿ’ ಬ್ಲಾಕ್ ಕಟ್ಟಡದಿಂದಲೂ ಸ್ಥಳಾಂತರಿಸಲು ಚಿಂತನೆ …

Read More »

ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ H.D.K. ಆರ್‌ಎಸ್‌ಎಸ್‌ ವಿರುದ್ಧ ಟೀಕೆ: ಜೋಶಿ

ಧಾರವಾಡ: ‘ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ನಾವು ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯದ ವಿರೋಧಿಗಳಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಾಂದ್ರಕ ಘಟಕಕ್ಕೆ ಶನಿವಾರ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಮುಗ್ಧ ಮುಸ್ಲಿಮರ ಮತಕ್ಕಾಗಿ ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ಭೂತದಂತೆ ಇವರು ತೋರಿಸುತ್ತಿದ್ದಾರೆ. …

Read More »

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ದೇವನಹಳ್ಳಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದು ಅಲ್ಪಸಂಖ್ಯಾತರ ಮತಗಳು ನಿರ್ಣಯವಾಗಿರುವುದರಿಂದ, ಅಲ್ಪಸಂಖ್ಯಾತರ ಬಗ್ಗೆ ಮೃದುಧೋರಣೆ ತೋರಿಸುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದರು. ತಾಲೂಕಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 2004 ರಿಂದ ರಾಜಕೀಯಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ಅವರು ಮುಸಲ್ಮಾನರಿಗೆ ಏನು ಮಾಡಿದ್ದಾರೆ. ಅಲ್ಪ ಸಂಖ್ಯಾತರಿಗೆ ಸಿದ್ದರಾಮಯ್ಯ ಮಾಡಿದಷ್ಟು ಯಾರು ಮಾಡಲಿಲ್ಲ. ಜಾಫರ್ ಷರೀಫ್ ಅವರ ಮೊಮ್ಮಗನ ಮೇಲೆ ಅಷ್ಟೊಂದು …

Read More »

ಇನ್ನೆರಡು ದಿನಗಳಲ್ಲಿ ಶಾಲೆ ಪುನರಾರಂಭ.? ಶನಿವಾರ, ಭಾನುವಾರ ತರಗತಿ ನಡೆಸುವ ಬಗ್ಗೆಯೂ ಚಿಂತನೆ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲೆ ಪುನರಾರಂಭದ ಬಗ್ಗೆ ನಿರ್ಧರಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 1 ರಿಂದ 5 ನೇ ತರಗತಿ ಶಾಲೆ ಆರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳಲಿದೆ ಎಂಬುದನ್ನು ನೀಡಬೇಕಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಇನ್ನೆರಡು ದಿನಗಳಲ್ಲಿ ತೀರ್ಮಾನ ಪ್ರಕಟಿಸಲಾಗುವುದು ಎಂದರು. ದೇವರ …

Read More »

66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿ

ಬೆಳಗಾವಿ – ರಾಜ್ಯದಲ್ಲಿ  ಮೊದಲ ಬಾರಿ ಆನ್ ಲೈನ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾರ್ವಜನಿಕರೇ ಶಿಫಾರಸ್ಸು ಮಾಡಲು ಅವಕಾಶ ನೀಡಲಾಗಿತ್ತು. “ಸೇವಾ ಸಿಂಧು” ಮೂಲಕ ಎಲೆಮರೆಯ ಸಾಧಕರನ್ನು ಸಾರ್ವಜನಿಕರು ಗುರುತಿಸುವ ಅವಕಾಶ ಮಾಡಿ ಕೊಡಲಾಗಿತ್ತು.  ಈ ಪ್ರಕ್ರಿಯೆಗೆ ನಾಡಿನ ಜನರು ಭಾರಿ ಬೆಂಬಲ ವ್ಯಕ್ತ ಪಡಿಸಿದ್ದಾರೆ. ಕಳೆದ ಮೂರು ವರ್ಷಗಳ ಪೈಕಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಜನರ ಸ್ಪಂದನೆ ಹೆಚ್ಚಾಗಿದೆ.  2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ …

Read More »

ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದ ಲಕ್ಷ್ಮಣ ಸವದಿ

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮಧ್ಯೆ ಎರಡು ತಂಡಯಾಗಿದ್ದು, ಡಿಕೆಶಿ ಹಾಗೂ ಸಿದ್ದರಾಮಯ್ಯನವರ ತಂಡದ ಮಧ್ಯೆ ಯುದ್ಧ ಆರಂಭ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಜಿಲ್ಲೆಯ ಸಿಂದಗಿಯಲ್ಲಿ ಶನಿವಾರ ಮಾತನಾಡಿ, ಕಾಂಗ್ರೆಸ್ ನವರು ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮಾತನಾಡುತ್ತಾರೆ. ಅವರ ಅವರ ಲೋಪ ದೋಷಗಳನ್ನು ಅವರೇ ಜನತೆ ಮುಂದೇ ಹೇಳುತ್ತಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ …

Read More »

ಬಿ.ಎಸ್.ಯಡಿಯೂರಪ್ಪಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು

ಹಾವೇರಿ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್.ಸಂತೋಷ್ ಬಲವಂತವಾಗಿ ಪ್ರಚಾರಕ್ಕೆ ಕರೆ ತರುತ್ತಿದ್ದಾರೆ. ಸಿದ್ದರಾಮಯ್ಯಗೆ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಬಿಎಸ್​ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನೂ ಬೇಕಾಗಿಲ್ಲ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಉಪಚುನಾವಣೆಯ ಪ್ರಚಾರದ ವೇಳೆ ಹೇಳಿದ್ದಾರೆ. ಸಿದ್ದರಾಮಯ್ಯ ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಇವರ ಊಹೆಗೆ ನಾವು ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರು …

Read More »

ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್

ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.

Read More »

ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ

ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್‌ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.

Read More »

ಆಯುಧ ಪೂಜೆಗೆ ನಗರಸಭೆ ಸದಸ್ಯೆಗೆ ಆಹ್ವಾನ ನೀಡದ್ದಕ್ಕೆ ಮಾರಾಮಾರಿ..9 ಮಂದಿಗೆ ಗಾಯ

ಯಾದಗಿರಿ: ನಗರಸಭೆ ಸದಸ್ಯೆಗೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಬೆಂಬಲಿಗರು ಮತ್ತು ಆಯೋಜಕರ ನಡುವೆ ಮಾರಾಮಾರಿ ನಡೆದ ಘಟನೆ ನಗರದ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ನಡೆದಿದೆ. ವಿಜಯದಶಮಿ ನಿಮಿತ್ತ ಆಯುಧ ಪೂಜೆ ಹಿನ್ನೆಲೆಯಲ್ಲಿ ಲಾಡಿಸ್ ಗಲ್ಲಿಯ ಭವಾನಿ ಮಂದಿರದ ಬಳಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ ಜಯಮ್ಮ ಅವರಿಗೆ ಆಹ್ವಾನ ನೀಡಿಲ್ಲ ಎಂಬ ವಿಚಾರವಾಗಿ ನಗರಸಭೆ ಸದಸ್ಯೆ ಬೆಂಬಲಿಗರು ಮತ್ತು …

Read More »