Breaking News

ರಾಜಕೀಯ

ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ; ಆಗಸಕ್ಕೆ ಹಾರುತ್ತಿರುವ ನಿರ್ದೇಶಕರು ಇವರೇ?

ಬೈಕೋನೂರ್: ಇದೇ ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾವೊಂದರ ಚಿತ್ರೀಕರಣಕ್ಕೆ ರೋಸ್ಕೋಸ್ಮೀಸ್ ಅನುಮತಿ ನೀಡಿದೆ. ನಟಿ ಯೂಲಿಯಾ ಪೆರೆಸಿಲ್ಡ್, ನಿರ್ದೇಶಕ ಕ್ಲಿಮ್ ಶಿಪೆಂಕೊ ಮತ್ತು ಗಗನಯಾತ್ರಿ ಆಂಟನ್ ಶಕಾಪ್ಲೆರೋವ್ ಮಂಗಳವಾರ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಎಂದು ರಷ್ಯಾದ ರಾಜ್ಯ ಬಾಹ್ಯಾಕಾಶ ನಿಗಮ ರೋಸ್ಕೋಸ್ಮೋಸ್ ತಿಳಿಸಿದೆ. ಮುಖ್ಯ ಮತ್ತು ಬ್ಯಾಕಪ್ ಸಿಬ್ಬಂದಿಯನ್ನು ಅನುಮೋದಿಸಲಾಗಿದೆ. ರೋಸ್ಕೋಸ್ಮೋಸ್ ಮತ್ತು ರಷ್ಯಾದ ಚಾನೆಲ್ ಒನ್ ಕಳೆದ ನವೆಂಬರ್‌ನಲ್ಲಿ ಬಾಹ್ಯಾಕಾಶದಲ್ಲಿ ಚಲನಚಿತ್ರವನ್ನು ನಿರ್ಮಿಸುವ ಯೋಜನೆಯನ್ನು ಅನಾವರಣಗೊಳಿಸಿತು. ನಟಿ …

Read More »

ಅಖಿಲೇಶ್ ಯಾದವ್ ನಿವಾಸದ ಹೊರಗೆ ಪ್ರತಿಭಟನಾಕಾರರಿಂದ ಪೊಲೀಸ್ ವಾಹನಕ್ಕೆ ಬೆಂಕಿ

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ನಿವಾಸದ ಹೊರಗೆ ಸೋಮವಾರ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು. ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಹೋಗದಂತೆ ಪೊಲೀಸರು ತಡೆದ ನಂತರ ಅವರ ನಿವಾಸದ ಬಳಿ ಧರಣಿ ಕುಳಿತಿದ್ದ ಸ್ಥಳದಿಂದ ಕೆಲವೇ ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ನಂತರ ಅಖಿಲೇಶ್ ಯಾದವ್ ಅವರನ್ನು ವಶಕ್ಕೆ ಪಡೆಯಲಾಯಿತು.   ವೀಡಿಯೊದಲ್ಲಿ, ಪೊಲೀಸರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುವುದನ್ನು …

Read More »

ಸಚಿನ್ ಗೆ ಸಂಕಷ್ಟ: ತೆರಿಗೆ ವಂಚನೆ ಆರೋಪ, ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜನ ಹೆಸರು

ಹೊಸದಿಲ್ಲಿ: 2016ರಲ್ಲಿ ಸಂಚಲನ ಮೂಡಿಸಿದ್ದ ಪನಾಮಾ ಪೇಪರ್ಸ್ ನಂತೆ ಇದೀಗ ‘ಪಂಡೋರಾ ಪೇಪರ್’ ಎಂಬ ರಹಸ್ಯ ಹಣಕಾಸು ಮಾಹಿತಿ ಬಿಡುಗಡೆಯಾಗಿದೆ. ಇದರಲ್ಲಿ ಹಲವಾರು ಭಾರತೀಯ ಪ್ರಸಿದ್ಧ ವ್ಯಕ್ತಿಗಳ ಹೆಸರು ಉಲ್ಲೇಖಿಸಲಾಗಿದೆ. ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರು ಕೂಡಾ ಪಂಡೋರಾ ಪೇಪರ್ಸ್ ನಲ್ಲಿದೆ. ದಿವಾಳಿ ಎಂದು ಘೋಷಿಸಿರುವ ಅನಿಲ್ ಅಂಬಾನಿ, ಬಯೋಕಾನ್ ಸಂಸ್ಥೆಯ ಕಿರಣ್ ಮುಂಜುದಾರ್ ಶಾ ಪತಿ ಸೇರಿದಂತೆ ಸುಮಾರು 300 ಭಾರತೀಯರನ್ನು ಹೆಸರಿಸಲಾಗಿದೆ. ಸಚಿನ್ ತೆಂಡೂಲ್ಕರ್ …

Read More »

ಕೊಲೆಗೆಡುಕ ಸರ್ಕಾರ’ – ಟ್ವೀಟ್ ಮೂಲಕ ಹೆಚ್.ಡಿ.ಕೆ ಕಿಡಿ

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೇಳಿದ್ದಾರೆ. …

Read More »

ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆ

ನವದೆಹಲಿ, ಅಕ್ಟೋಬರ್ 04: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಕುರಿತು ಆಡಳಿತ ಪಕ್ಷವನ್ನು ಟೀಕಿಸಿರುವ ಅವರು, ‘ಈ ಘಟನೆ ಬಗ್ಗೆ ಮೌನ ತಾಳಿರುವವರು ಈಗಾಗಲೇ ಸತ್ತಿದ್ದಾರೆ’ ಎಂದು ಕಟುವಾಗಿ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ‘ಅಮಾನವೀಯ ಹತ್ಯಾಕಾಂಡ’ ಎಂದು …

Read More »

26 ಸಾವಿರ ಕೋಟಿಗೆ ಎಸ್‌ಬಿ ಎನರ್ಜಿ ಇಂಡಿಯಾ ಕಂಪನಿ ಅದಾನಿ ತೆಕ್ಕೆಗೆ

ನವದೆಹಲಿ: ಅದಾನಿ ಗ್ರೀನ್‌ ಎನರ್ಜಿ ಲಿಮಿಟೆಡ್‌ (ಎಜಿಇಎಲ್‌) ಕಂಪನಿಯು ₹26 ಸಾವಿರ ಕೋಟಿಗೆ (3.5 ಶತಕೋಟಿ ಡಾಲರ್) ಎಸ್‌ಬಿ ಎನರ್ಜಿ ಇಂಡಿಯಾ ಕಂಪನಿಯನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದೆ. ‘ಜಗತ್ತಿನ ಅತಿದೊಡ್ಡ ಸೌರ ವಿದ್ಯುತ್‌ ಅಭಿವೃದ್ಧಿ ಕಂಪನಿಯಾದ ಎಜಿಇಎಲ್‌ ಯಶಸ್ವಿಯಾಗಿ ಎಸ್‌ಬಿ ಎನರ್ಜಿ ಹೋಲ್ಡಿಂಗ್ಸ್‌ ಲಿಮಿಟೆಡ್‌ (ಎಸ್‌ಬಿ ಎನರ್ಜಿ ಇಂಡಿಯಾ) ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿದೆ. ಎಲ್ಲಾ ನಗದು ವ್ಯವಹಾರವನ್ನೇ ಒಳಗೊಂಡ ಈ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಳೆದ ಮೇ 8ರಂದೇ ಖಚಿತಗೊಳಿಸುವ ಒಪ್ಪಂದ ಮಾಡಿಕೊಳ್ಳಲಾಗಿತ್ತು’ …

Read More »

ಎರಡು ಕ್ಷೇತ್ರಗಳಿಗೆ 6 ಹೆಸರು ಸೂಚಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ಈ ತಿಂಗಳ 30ರಂದು ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ಕ್ಷೇತ್ರಗಳಿಗೆ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳನ್ನು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನೇತೃತ್ವದಲ್ಲಿ ನಡೆದ ರಾಜ್ಯ ಕೋರ್‌ ಕಮಿಟಿ ಸಭೆ ರವಿವಾರ ಅಂತಿಮಗೊಳಿಸಿದ್ದು, ಒಟ್ಟು ಆರು ಮಂದಿಯ ಹೆಸರನ್ನು ವರಿಷ್ಠರಿಗೆ ಕಳುಹಿಸಲು ತೀರ್ಮಾನಿಸಿದೆ. ಸ್ಥಳೀಯವಾಗಿ ನಡೆಸಿದ ಸಮೀಕ್ಷೆ ಹಾಗೂ ಕೋರ್‌ ಕಮಿಟಿ ಸದಸ್ಯರ ಅಭಿಪ್ರಾಯದ ಹಿನ್ನೆಲೆಯಲ್ಲಿ ಹಾನಗಲ್‌ಗೆ ಸಂಸದ ಶಿವಕುಮಾರ್‌ ಉದಾಸಿ ಪತ್ನಿ ರೇವತಿ, ಕಲ್ಯಾಣ ಕುಮಾರ್‌ ಶೆಟ್ಟರ್‌ ಹಾಗೂ …

Read More »

ನಾವು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಜಾತಿ ಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

ಬೆಂಗಳೂರು: ‘ರಾಜ್ಯದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಜನಗಣತಿ) ವರದಿಯನ್ನು ಈಗಿನ ಸರ್ಕಾರ ಸ್ವೀಕರಿಸುವಂತೆ ಕಾಣುತ್ತಿಲ್ಲ. ಹೀಗಾಗಿ, ನಾವು (ಕಾಂಗ್ರೆಸ್‌) ಮತ್ತೆ ಅಧಿಕಾರಕ್ಕೆ ಬಂದ ಮೇಲೆ ವರದಿ ಸ್ವೀಕರಿಸುತ್ತೇವೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿಯಲ್ಲಿ ಭಾನುವಾರ ನಡೆದ ಗಾಣಿಗ ಸಮುದಾಯದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ‘ನನ್ನ ಅವಧಿಯಲ್ಲಿ ವರದಿ ಸಿದ್ಧಗೊಂಡಿರಲಿಲ್ಲ. ಈಗ ವರದಿ ಸಿದ್ಧವಾಗಿದೆ. ಆದರೆ, ಈಗಿನ …

Read More »

ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ

ತುಮಕೂರು: ಗಾಂಜಾ ಸೇದಲು ಬೆಂಕಿ ಪೊಟ್ಟಣ ಕೊಡದೇ ಇದ್ದಿದ್ದಕ್ಕೆ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿ‌ನ ಹುಚ್ಚನಹಟ್ಟಿ ಬಳಿ ನಡೆದಿದೆ. 6 ಜನರ ಯುವಕರ ಗುಂಪೊಂದು ಕುರಿಗಾಹಿಗಳನ್ನು ನೂಕಿದ್ದು, ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ತಿಪಟೂರು ನಗರದ ಗಗನ್, ರಾಕೇಶ್, ಅರ್ಜುನ್, ಸ್ವರೂಪ್ ಸೆರಿದಂತೆ ಒಟ್ಟು 6 ಜನ ಸೇರಿ ಕುರಿಗಾಹಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಕುರಿ ಮೇಯಿಸಲು ಬಂದಿದ್ದವರ ಮೇಲೆ ರಾಕ್ಷಸನಂತೆ ಎರಗಿದ …

Read More »

ಶಾರೂಖ್ ಖಾನ್ ಮಗ ಅರೆಸ್ಟ್! ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ..

ಹಡಗಿನಲ್ಲಿ ಮಾದಕ ಪಾರ್ಟಿ ಮಾಡಿದ ಆರೋಪದ ಅಡಿಯಲ್ಲಿ ಬಾಲಿವುಡ್ ಬಾದ್​ಶಾ ಶಾರುಖ್ ಖಾನ್ ಮಗ ಆರ್ಯನ್ ಖಾನ್​​ರನ್ನು ಎನ್​ಸಿಬಿ ಅಂದ್ರೆ ಮಾದಕ ವಸ್ತು ನಿಗ್ರಹ ದಳ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಮುಂಬೈನಿಂದ ಗೋವಾಗೆ ಹೋಗ್ತಿದ್ದ ಈ ಹಡಗಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಇದ್ರ ಬಗ್ಗೆ ಮಾಹಿತಿ ಪಡೆದ ಎನ್​ಸಿಬಿ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಹಡಗಿನಲ್ಲಿ ಪಾರ್ಟಿ ನಡೆಯುತ್ತಿದ್ದ ಜಾಗದಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು …

Read More »