ದಾವಣಗೆರೆ: ರಾಜ್ಯ ಸರ್ಕಾರ ಅ.1 ರೊಳಗೆ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ಸೌಲಭ್ಯ ಒದಗಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಅಂದಿನಿಂದಲೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 1 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್‌ರವರ ಜನ್ಮದಿನದ …
Read More »ಮಹಿಳೆಯ ಮೇಲೆ ದಾಳಿ ಮಾಡಿದ ಚಿರತೆ, ಮುಂದೇನಾಯ್ತು : ಭಯಾನಕ Video Viral
ಮುಂಬೈ : ಮುಂಬೈನಲ್ಲಿ ಮಧ್ಯ ವಯಸ್ಕ ಮಹಿಳೆ ಮೇಲೆ ಹೊಂಚು ಹಾಕಿಕೊಂಡಿದ್ದ ಚಿರತೆಯೊಂದು ದಾಳಿ ಮಾಡಿದ್ದು, ಮಹಿಳೆ ತನ್ನ ವಾಕಿಂಗ್ ಸ್ಟಿಕ್ ನಿಂದ ಚಿರತೆಯೊಂದಿಗೆ ಹೋರಾಡಿದ್ದು, ಚಿರತೆ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆದಿದೆ. ಮುಂಬೈನ ಆರೆಯಲ್ಲಿ ಚಿರತೆ ಮಹಿಳೆ ಮೇಲೆ ದಾಳಿ ಮಾಡಲು ಹೊರಟಿತ್ತು. ಮೂರು ದಿನಗಳಲ್ಲಿ ಅದೇ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ಈ ಮಹಿಳೆ ಚಿರತೆಯನ್ನು ಎಷ್ಟು ಧೈರ್ಯದಿಂದ ಎದುರಿಸಿದಳು ಎಂಬುದನ್ನು ದೃಶ್ಯಾವಳಿಗಳು ತೋರಿಸುತ್ತವೆ. ಸದ್ಯ …
Read More »ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮ
ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮವೊಂದನ್ನು ಹಾಕಿಕೊಂಡಿದ್ದಾರೆ. *ಜನಸ್ನೆಹಿ ಪೊಲೀಸ್* ಕಾರ್ಯಕ್ರಮದ ಅಡಿಯಲ್ಲಿ ಇವತ್ತಿನಿಂದ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಎಲ್ಲ ಅಧಿಕಾರಿಗಳು ಕಾಲ್ನಡಿಗೆ ಗಸ್ತು ನಡೆಯಲಿದ್ದಾರೆ. ಅವರವರ ಠಾಣೆಯ ಬೀಟ್ ಪ್ರದೇಶಗಳಲ್ಲಿ ಬೀಟ್ ಸಿಬ್ಬಂದಿ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿಯೊಂದಿಗೆ *ಪ್ರತಿದಿನ ಸಾಯಂಕಾಲ 7 ಗಂಟೆಯಿಂದ 9 ಗಂಟೆವರೆಗೆ *ಕಾಲ್ನಡಿಗೆ ಗಸ್ತು* ನಡೆಸಲಿದ್ದಾರೆ. ತನ್ಮೂಲಕ ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಕಾರ ಕೋರಲಿದ್ದಾರೆ. ಈ ಕಾರ್ಯಾಚರಣೆಯು ಇನ್ನು …
Read More »ಕೆಎಂಎಫ್ ಸಂಸ್ಥೆ ಇಡೀ ದೇಶದಲ್ಲಿ ನಂಬರ್ 1 ಸಂಸ್ಥೆಯಾಗಬೇಕು: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ. 29: “ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ” ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ”ಹಾಲಿನ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ …
Read More »ಅಡವಿಟ್ಟ ಮಾಂಗಲ್ಯ ಸರ ಬಿಡಿಸಿಕೊಳ್ಳಲು ಬಂದಾಗ ನಕಲಿ ಚಿನ್ನವೆಂದ ಬ್ಯಾಂಕ್ ಮ್ಯಾನೇಜರ್! ಮಹಿಳೆಯ ಕಣ್ಣೀರು
ಹಾಸನ: ಅಡವಿಡುವಾಗ ಅಸಲಿ ಬಂಗಾರವಾಗಿದ್ದ ಮಾಂಗಲ್ಯ ಸರ, ಇದೀಗ ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಬಂದಾಗ ನಕಲಿ ಚಿನ್ನ ಎನ್ನುತ್ತಿರುವ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಂಗಲ್ಯ ಸರ ಬಿಡಿಸಿಕೊಳ್ಳಲು ಬಂದ ಚನ್ನರಾಯಪಟ್ಟಣದ ಹಿರೇಹಳ್ಲಿ ಗ್ರಾಮದ ಜಯಮ್ಮ ಎಂಬಾಕೆ ಬ್ಯಾಂಕ್ ಮ್ಯಾನೇಜರ್ ಹೇಳಿದ್ದನ್ನು ಕೇಳಿ ಕಂಗಾಲಾಗಿದ್ದಾಳೆ. ಮಗನ ಕಾಯಿಲೆಗೆಂದು ವರ್ಷದ ಹಿಂದೆ ಜಯಮ್ಮ 30 ಗ್ರಾಂ ಮಾಂಗಲ್ಯದ ಸರವನ್ನು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ಅಡವಿಟ್ಟಿದ್ದರು. ಇದೀಗ ಅಡವಿಟ್ಟಿದ್ದ …
Read More »ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ
ದೇಶದಲ್ಲಿ ಇಂದು ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 24 ರಿಂದ 25 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 30 ರಿಂದ 35 ಪೈಸೆಯಷ್ಟು ಹೆಚ್ಚಳ ಕಂಡಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ 101.64 ರೂ. ಆಗಿದ್ದು, ಡೀಸೆಲ್ ದರ 89.87 ರೂ. ತಲುಪಿದೆ. ಮಹಾರಾಷ್ಟ್ರ: ಲೀಟರ್ ಪೆಟ್ರೋಲ್ ದರ 107.71 ರೂ. ಆಗಿದ್ದು, ಡೀಸೆಲ್ ದರ 97.52 …
Read More »₹13,165 ಕೋಟಿ ರಕ್ಷಣಾ ಉಪಕರಣಗಳ ಖರೀದಿಗೆ ರಾಜನಾಥ್ ಸಿಂಗ್ ಅನುಮೋದನೆ
ನವದೆಹಲಿ: ಸೇನಾ ಪಡೆಗಳಿಗೆ ಮತ್ತಷ್ಟು ಶಕ್ತಿ ತುಂಬಲು ರಕ್ಷಣಾ ಸ್ವಾಧೀನ ಮಂಡಳಿ ಮುಂದಾಗಿದೆ. ಹೀಗಾಗಿಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ರಕ್ಷಣಾ ಸ್ವಾಧೀನ ಮಂಡಳಿ (ಡಿಎಸಿ) ₹13,165 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಉಪಕರಣಗಳನ್ನು ಖರೀದಿಸಲು ಅನುಮತಿ ನೀಡಿದೆ. ಭಾರತೀಯ ಮೂರು ಸೇನಾ ಪಡೆಗಳಿಗೂ ಎಎಲ್‌ಎಚ್ ಹೆಲಿಕಾಪ್ಟರ್ ಸೇರಿದಂತೆ ಹಲವು ರಕ್ಷಣಾ ಉಪಕರಣಗಳನ್ನು ಈ ಯೋಜನೆಯಡಿ ಖರೀದಿಸಲಾಗುತ್ತದೆ. ಈ ಕ್ರಮದಿಂದಾಗಿ ಸ್ಥಳೀಯವಾಗಿ ಅವಲಂಬನೆಯಾಗುವ ಮೂಲಕ ಆತ್ಮ ನಿರ್ಭರ …
Read More »ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಬ್ಬ ಮಾಜಿ ಶಾಸಕ ಮತ್ತು ಒಬ್ಬ ಹಾಲಿ ಶಾಸಕರನ್ನು ತಮ್ಮ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಿಕೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಶೃಂಗೇರಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕವಾಗಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಎಂ.ಪಿ. ರೇಣುಕಾಚಾರ್ಯ ಮತ್ತು ಡಿ.ಎನ್. ಜೀವರಾಜ್ ಅವರು ಈ ಹಿಂದೆ ಬಿ ಎಸ್ ಯಡಿಯೂರಪ್ಪ …
Read More »ಲೇ ನೀವೆಲ್ಲ ಹೀರೋಗಳಾ…ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಪರಿಸ್ಥಿತಿ ಕಂಡು ವಕೀಲ ಜಗದೀಶ್ ಗರಂ
ನಮ್ಮ ತಾಯಿ ಆರೋಗ್ಯ ಸರಿಯಿಲ್ಲ, ನಮ್ಮ ಅಕ್ಕನ ಆರೋಗ್ಯ ಸರಿಯಲ್ಲ, ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿ ಬೇಡುತ್ತಿದ್ದ ನಟಿ ವಿಜಯಲಕ್ಷ್ಮಿ ಅವರು ತನ್ನ ತಾಯಿಯನ್ನು ಕಳೆದುಕೊಂಡಿದ್ದಾರೆ. 75 ವರ್ಷದ ವಿಜಯಾ ಸುಂದರಂ ಅವರು ಸೆಪ್ಟಂಬರ್ 29ರಂದು ಕೊನೆಯುಸಿರೆಳೆದರು. ವಿಜಯಲಕ್ಷ್ಮಿ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ತಾಯಿಯನ್ನು ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಇಂಥ ಕಷ್ಟದ ಪರಿಸ್ಥಿತಿಯಲ್ಲೂ, ಅಸಹಾಯಕ ಸ್ಥಿತಿಯಲ್ಲಿ ಕಣ್ಣೀರಿಡುತ್ತಿದ್ದ ಕುಳಿತ್ತಿದ್ದ ಹೆಣ್ಣುಮಗಳ ಸಹಾಯಕ್ಕೆ ಯಾರು …
Read More »2022ರ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ: ನಡ್ಡಾ ವಿಶ್ವಾಸ
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದಲ್ಲಿ ‘ಡಬಲ್ ಎಂಜಿನ್’ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೊಂದಿಗೆ 2022ರ ವಿಧಾನಸಭಾ ಚುನಾವವಣೆಯಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರತಿಪಾದಿಸಿದರು. ಬುಧವಾರ ವರ್ಚುವಲ್ ಸಭೆಯಲ್ಲಿ ಪಕ್ಷದ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಉಸ್ತುವಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಚುನಾವಣಾ ಕಾರ್ಯಗಳಲ್ಲಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ನಿರ್ಣಾಯಕ ಪಾತ್ರವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಬಲವರ್ಧನೆಗೊಳಿಸುವಂತೆ ಸೂಚಿಸಿದರು. ಬೂತ್ …
Read More »
Laxmi News 24×7