Breaking News

ರಾಜಕೀಯ

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಮಂಗಳವಾರ ಹೈಕಮಾಂಡ್‌ ನಾಯಕರ ಜತೆ ಚರ್ಚಿಸುವ ನಿರೀಕ್ಷೆಯಿದೆ. ರವಿವಾರ ದಿಲ್ಲಿಗೆ ತೆರಳಿರುವ ಡಿಕೆಶಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಗೆ ಕಾಲಾವಕಾಶ ಕೋರಿದ್ದಾರೆ. ಪಂಜಾಬ್‌ ಪ್ರವಾಸದಲ್ಲಿರುವ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮಂಗಳವಾರ ದಿಲ್ಲಿಗೆ ಆಗಮಿಸಲಿದ್ದು ಡಿಕೆಶಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕೆಪಿಸಿಸಿ ಪದಾಧಿಕಾರಿಗಳa ಪಟ್ಟಿ, ಹಿಂದುಳಿದ, …

Read More »

ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನವನ್ನು ವಿತರಿಸುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರವಿವಾರ ರಾತ್ರಿ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದ …

Read More »

ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಲು ಮುಂದಾದ್ರಾ ಕೋನರೆಡ್ಡಿ..?

ಧಾರವಾಡ: ಜೆಡಿಎಸ್​ ನವಲಗುಂದ ಶಾಸಕ ಕೋನರೆಡ್ಡಿ ಜೆಡಿಎಸ್ ತೊರೆದು ಕೈ ಪಡೆ ಸೇರ್ತಾರಾ ಎಂಬ ಚರ್ಚೆ ಶುರುವಾಗಿದೆ. ಕೋನರಡ್ಡಿ ಜೆಡಿಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಮೊನ್ನೆಯಷ್ಟೇ ನಡೆದ ಹು-ಧಾ ಪಾಲಿಕೆ ಚುನಾವಣೆ ಸೋಲು ಹಿನ್ನೆಲೆ ಹೊಣೆ ಹೊತ್ತು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬೆನ್ನಲ್ಲೇ 2023 ಚುನಾವಣೆಗೆ ಕೋನರಡ್ಡಿ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೈ ನಾಯಕರ ಜೊತೆ ಕೋನರೆಡ್ಡಿ ಒಂದು ಸುತ್ತು ಮಾತುಕತೆ ನಡೆಸಿದ್ದಾರೆ ಎನ್ನಲಾಗ್ತಿದೆ.. …

Read More »

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ …

Read More »

ಪ್ರತಿಭಟನೆ ವೇಳೆ ಸಿಂಘು ಗಡಿಯಲ್ಲಿ ಮೃತಪಟ್ಟ ರೈತ: ʼಹೃದಯಾಘಾತʼ ಎಂದ ಪೊಲೀಸರು

ಹೊಸದಿಲ್ಲಿ: ಇಂದು ದೇಶಾದ್ಯಂತ ರೈತ ಸಂಘಟನೆಗಳು ಬಂದ್‌ ಗೆ ಕರೆ ನೀಡಿವೆ. ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಹರ್ಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರೈತನೋರ್ವ ಮೃತಪಟ್ಟಿದ್ದು, ಇದು ಹೃದಯಾಘಾತದಿಂದ ಸಂಭವಿಸಿದ ಸಾವು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ ಎಂದು indiatoday ವರದಿ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ …

Read More »

ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಕಾಲಿನ ಮೇಲೆ ಹರಿದ ಕಾರು..!

ಬೆಂಗಳೂರು: ಭಾರತ್ ಬಂದ್ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ದೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈತ ಸಂಘಟನೆಗಳಿಂದ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಗೊರಗುಂಟೆ ಪಾಳ್ಯ ಜಂಕ್ಷನ್​​ನಲ್ಲಿ ಪ್ರತಿಭಟನಾ ಜಾಥಾ ನಡೆಯುತ್ತಿತ್ತು. ಈ ವೇಳೆ ಕೆಲವು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ರೈತ ಮುಖಂಡನ ಕಾರನ್ನ ಅಡ್ಡ ಹಾಕಲು ಡಿಸಿಪಿ ಧರ್ಮೇಂದ್ರ ಕುಮಾರ್​​ ಮುಂದಾಗಿದ್ದಾರೆ. ಆಗ ಕಾರು ಚಾಲಕ ಗಾಡಿಯನ್ನ …

Read More »

ಸಕಾಲಕ್ಕೆ ಬಾರದ ಆಂಬ್ಯುಲೆನ್ಸ್.. ಫುಟ್​ಪಾತ್​ನಲ್ಲಿಯೇ ಮಲಗಿದ ರೋಗಿ..!

ರಾಯಚೂರು: ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದೆ ರೋಗಿಯೋರ್ವ ಆಸ್ಪತ್ರೆ ಆವರಣದಲ್ಲಿಯೇ ಮಲಗಿ ಪರದಾಡಿದ ಘಟನೆ ಜಿಲ್ಲೆಯ ರಿಮ್ಸ್ ಆಸ್ಪತ್ರೆ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗೆ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು ಎನ್ನಲಾಗಿದೆ. ಅರ್ಧ ಗಂಟೆಯಿಂದ ಆಂಬ್ಯುಲೆನ್ಸ್​ಗಾಗಿ ಕಾದರೂ ಬಾರದ ಆಂಬ್ಯುಲೆನ್ಸ್ ನಿಂದ ಕಂಗಾಲಾದ ರೋಗಿ ಆಸ್ಪತ್ರೆ ಫುಟ್​ಪಾತ್​ ಮೇಲೆಯೇ ಮಲಗಿದ್ದಾನೆ. ಫುಟ್​ಪಾತ್​ ಮೇಲೆ ಮಲಗಿದ ಸಾಕಷ್ಟು ಹೊತ್ತಿನ ಬಳಿಕ ಆಂಬ್ಯುಲೆನ್ಸ್ ಆಗಮಿಸಿದ್ದು …

Read More »

“ಹಿಂದೂ ಧರ್ಮದ ಮೇಲೆ ಕ್ರಿಶ್ಚಿಯನ್‌ ಹಾಗೂ ಇಸ್ಲಾಂ ಧರ್ಮಗಳು ನಡೆಸುತ್ತಿರುವ ದಾಳಿಯನ್ನು ಖಂಡಿಸುತ್ತೇವೆ”

ಮಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹಿಂದೂ ವಿರೋಧಿಗಳಿಂದ ದೇವಸ್ಥಾನಗಳ ಮೇಲೆ ದಾಳಿ ನಡೆಯುತ್ತಿದೆ. ರಾಜ್ಯ ಸರ್ಕಾರ, ನ್ಯಾಯಾಲಯದ ಆದೇಶದ ನೆಪದಲ್ಲಿ ದೇವಸ್ಥಾನಗಳನ್ನು ತೆರವು ಮಾಡುತ್ತಿದೆ” ಎಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ‌ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದ ಯೋಗೇಶ್ ಮುತಾ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಹೆಚ್ಚಾಗಿ ಕ್ರಿಶ್ಚಿಯನ್‌ ಮತಾಂತರ ನಡೆಯುತ್ತಿದ್ದು, ಮತಾಂತರದ ವಿರುದ್ದ ಹಿಂದೂ ಸಮಾಜವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್‌ 30 ಹಾಗೂ 31ರಂದು …

Read More »

ರಾಜ್ಯದ ಜನರ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಸಾದ್ಯವಿಲ್ಲ: ದೇವೇಗೌಡರ ಗುಡುಗು

ಜೆಡಿಎಸ್ ಅವರಿವರ ಜೊತೆ ಸೇರುವ ಪಕ್ಷ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಟ್ವೀಟ್ ಮಾಡಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಕ ಈಗ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ. 2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ …

Read More »

, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ

ಬೆಳಗಾವಿ: ಭಾರತ್ ಬಂದ್ ಹಿನ್ನೆಲೆಯಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನಾ ಕಾವು ಏರುತ್ತಿದ್ದು, ಬೆಳಗಾವಿ ಬಸ್ ನಿಲ್ದಾಣದ ಮುಂದೆ ವಿವಿಧ ರೈತ ಸಂಘಟನೆಗಳು ಟೈರ್​ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿವೆ.   ಇಂದು ಭಾರತ​ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರದ ಮೂರು ಕೃಷಿ ಕಾಯ್ದೆ, ಖಾಸಗೀಕರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಬೀದಿಗೆ ಇಳಿದಿವೆ. ಜಿಲ್ಲೆಯಲ್ಲಿ ಕೂಡ ಪ್ರತಿಭಟನೆ ಜೋರಾಗಿದ್ದು ಬಸ್ ಬಂದ್ ಮಾಡುವಂತೆ ವಿವಿಧ ಸಂಘಟನೆಗಳು …

Read More »