ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ಮುಖ್ಯ …
Read More »ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಜಮೀರ್ ಅಹ್ಮದ್
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಮೃತಪಟ್ಟ ಎರಡು ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ. ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಫೋಟ ಪ್ರಕರಣದಲ್ಲಿ ಮನೋಹರ್ ಮತ್ತು ಅಸ್ಲಮ್ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ವೈಯಕ್ತಿಕವಾಗಿ ಪರಿಹಾರ ಮೊತ್ತ ಘೋಷಿಸಿದರು. ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟರೆ ಐದು ಮಂದಿಗೆ ಗಾಯವಾಗಿದೆ. ಎಲ್ಲರೂ ಸ್ಥಳೀಯರೇ ಆಗಿದ್ದು, …
Read More »ಮೋದಿ-ಕಮಲಾ ಹ್ಯಾರೀಸ್ ದ್ವಿಪಕ್ಷೀಯ ಮಾತುಕತೆ; ಇಂಡೋ-ಫೆಸಿಫಿಕ್ ಪ್ರದೇಶದ ಬಗ್ಗೆ ಫೋಕಸ್
ನವದೆಹಲಿ: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿಯಾದರು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಇಬ್ಬರು ನಾಯಕರುಗಳು ಇಂಡೋ-ಫೆಸಿಫಿಕ್ ಪ್ರದೇಶದ ಬಗ್ಗೆ ಹೆಚ್ಚು ಗಮನ ಹರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ಅಭಿವೃದ್ಧಿ, ಎರಡೂ ದೇಶಗಳ ಸ್ನೇಹ ಸಂಬಂಧ, ಸಂಸ್ಕೃತಿ ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆಯೂ ಚರ್ಚೆ …
Read More »ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಯಾರೂ ಗಂಭೀರವಾಗಿ ಪರಿಗಣಿಸಿಲ್ಲ : ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಿರಂತರವಾಗಿ ಆ ಭಾಗದಲ್ಲಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಸಂದರ್ಭದಲ್ಲಿ ಪೊಲೀಸರು ನಿದ್ದೆ ಮಾಡ್ತಿದ್ರಾ? ಎಂದು ಪ್ರಶ್ನಿಸಿದರು. ಈ ಕುರಿತು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು …
Read More »ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರದಂದು ಡಾಲ್ಮಿಯಾ ಭಾರತ ಸಿಮೆಂಟ್ ಲಿ., ಯಾದವಾಡ ಯುನಿಟ್‍ದಿಂದ 30 ಲಕ್ಷ ರೂ. ವೆಚ್ಚದ ಮೂರು …
Read More »ಅಪಘಾತಕ್ಕೆ ಪರಿಹಾರ ನೀಡಿಲ್ಲ; ದಾವಣಗೆರೆಯಲ್ಲಿ ಎರಡು ಸರ್ಕಾರಿ ಬಸ್ಗಳು ಜಪ್ತಿ
ದಾವಣಗೆರೆ: ಅಪಘಾತ ಪರಿಹಾರ ನೀಡದ ಹಿನ್ನೆಲೆ ಸರ್ಕಾರಿ ಬಸ್ಗಳನ್ನ ಜಪ್ತಿ ಮಾಡಲಾಗಿದೆ. ದಾವಣಗೆರೆ ಬಸ್ ನಿಲ್ದಾಣದಲ್ಲಿ 2 ಕೆಎಸ್ಆರ್‌ಟಿಸಿ ಬಸ್ಗಳನ್ನ ಜಪ್ತಿ ಮಾಡಿದ್ದಾರೆ. 2009ರ ಆಗಸ್ಟ್ 8ರಂದು ಕೆಎಸ್ಆರ್‌ಟಿಸಿ ಬಸ್ ಅಪಘಾತವಾಗಿತ್ತು. ಸುದೀಪ್ ಎಂಬುವವರು ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಕಾಲು ಕಳೆದುಕೊಂಡಿದ್ದ ಸುದೀಪ್ಗೆ ಪರಿಹಾರ ನೀಡುವಂತೆ ಆದೇಶ ನೀಡಲಾಗಿತ್ತು. ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡದ ಹಿನ್ನೆಲೆ ಬಸ್ಗಳನ್ನ ಜಪ್ತಿ ಮಾಡಲಾಗಿದೆ. 2009ರ …
Read More »ಶಿಕ್ಷಕರ ಹುದ್ದೆ ಭರ್ತಿ ಮಾಡಿ- ಶಾಲೆಗೆ ಬೀಗ ಜಡಿದು ಮಕ್ಕಳೊಂದಿಗೆ ಪಾಲಕರು ಧರಣಿ
ಗದಗ: ತಾಲೂಕು ಕದಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಇಂಗ್ಲಿಷ್ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕೆಂದು ಮಕ್ಕಳು ಪಾಲಕರೊಂದಿಗೆ ಪ್ರತಿಭಟನೆ ಮಾಡಿದರು. ಶಾಲೆ ಬಂದ್ ಮಾಡಿ, ಕೊಠಡಿಗಳಿಗೆ ಬೀಗ ಜಡಿದು ಶಿಕ್ಷಣಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ 3 ವರ್ಷಗಳಿಂದ ಮಕ್ಕಳ ಅಳಲು ಆಲಿಸದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಶಾಲೆಯಲ್ಲಿ ಮೊದಲು 2ವರ್ಷ ವಾರಕ್ಕೆ ಎರಡು ದಿನದಂತೆ ಅತಿಥಿ ಶಿಕ್ಷಕರು ಬಂದು ಪಾಠ …
Read More »ಕೆಎಸ್ಆರ್‌ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ
ಬೆಂಗಳೂರು: ಕೆಎಸ್ಆರ್‌ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್ಆರ್‌ಟಿಸಿ ನಿಗಮ ಬೇಡಿಕೆ ಇಟ್ಟಿದೆ. ಆರ್ಥಿಕ ಪರಿಸ್ಥಿತಿ …
Read More »ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ
ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ …
Read More »ವಿಶ್ಲೇಷಣೆ: ಸದನದ ಕಲಾಪ ಮತ್ತು ಹಳೆಯ ವರಸೆ
ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊತ್ತು ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚೆಗೆ ವಿಧಾನಸೌಧ ತಲುಪಲು ಚಕ್ಕಡಿ ಏರಿದರು, ಸೈಕಲ್ ತುಳಿದರು. ಬೆಲೆ ಏರಿಕೆ ಸಂಕಟವನ್ನು ಸರ್ಕಾರಕ್ಕೆ ತಲುಪಿಸುವುದರ ಜೊತೆಗೆ ತಮ್ಮ ಜನಪರ ಕಾಳಜಿಯನ್ನು ಮತದಾರರಿಗೆ ಮುಟ್ಟಿಸುವ ಆಶಯ ಅವರ ಕಾರ್ಯಕ್ರಮದಲ್ಲಿ ಅಡಕವಾಗಿದ್ದು ರಹಸ್ಯವೇನಲ್ಲ. ಆದರೆ, ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಗಿಳಿದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ …
Read More »
Laxmi News 24×7