Breaking News

ರಾಜಕೀಯ

ಧಾರ್ಮಿಕ ಕಟ್ಟಡ ರಕ್ಷಣೆ ವಿಧೇಯಕ ಅಂಗೀಕಾರ

ಸಾರ್ವಜನಿಕ ಸ್ಥಳ ಗಳಲ್ಲಿರುವ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ಮಸೂದೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರವಾಗಿದೆ.”ಮೈಸೂರಿನಲ್ಲಿ 261 ಸ್ಥಳಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 161ನ್ನು ಸ್ಥಳಾಂತರಿಸಲಾಗಿದೆ” ಎಂದು ಚರ್ಚೆಯ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. “ಸರ್ಕಾರದ ಕಟ್ಟಡಗಳನ್ನು ಸರ್ಕಾರದ ಗಮನಕ್ಕೆ ಬಾರದೇ ಒಡೆಯಲು ಸಾಧ್ಯವಿಲ್ಲ. ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದು ಈ ಮಸೂದೆ ತರಲಾಗಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಆಡಳಿತದ ಸಂದರ್ಭ ಎಲ್ಲವನ್ನೂ ತೆರವುಗೊಳಿಸಿಲ್ಲ. ಹಿಂದಿನ ಸರ್ಕಾರಗಳ ಅವಧಿಯ …

Read More »

ಹಂಪಿ ಎಲ್ಲಿ ಹೆಲಿಟೂರಿಸಂ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ

ಹಂಪಿ: ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಲ್ಲಿ ಹೆಲಿ ಟೂರಿಸಂ ಕೂಡ ಒಂದಾಗಿದ್ದು, ಯೋಜನೆಯ ಆರಂಭಿಕ ಭಾಗವಾಗಿ ಹಂಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಹಂಪಿಯಲ್ಲಿ ಹೆಲಿ ಟೂರಿಸಂ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.ಅಕ್ಟೋಬರ್ ಆರಂಭದಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಹೆಲಿ-ಟೂರಿಸಂ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈಗಾಗಲೇ ಜಿಲ್ಲಾ ಉಸ್ತವಾರಿ ಸಚಿವ ಆನಂದ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು …

Read More »

ಸೆಪ್ಟಂಬರ್ 28ರಿಂದ ಯಲ್ಲಮ್ಮ ದರ್ಶನಕ್ಕೆ ಅವಕಾಶ

ಬೆಳಗಾವಿ – ಭಕ್ತರ ಬಹುನಿರೀಕ್ಷಿತ, ಬುಹರಾಜ್ಯಗಳ ಭಕ್ತರ ಆರಾಧ್ಯ ದೇವತೆ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಮುಹೂರ್ತ ನಿಗದಿಯಾಗಿದೆ. ಸೆಪ್ಟಂಬರ್ 28ರಿಂದ ಯಲ್ಲಮ್ಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, 16 ಷರತ್ತನ್ನು ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Read More »

ಮದ್ಯದಂಗಡಿ ವಿರೋಧಿಸಿ ಬೃಹತ್‌ ಪ್ರತಿಭಟನೆ

ಚಿಕ್ಕಮಗಳೂರು: ಕಡೂರು ತಾಲೂಕುಎಮ್ಮೆದೊಡ್ಡಿ ಗ್ರಾಮದಲ್ಲಿ ಗ್ರಾಮಸ್ಥರವಿರೋಧದ ನಡುವೆ ಪ್ರಭಾವಿಗಳುಅಕ್ರಮವಾಗಿ ಮದ್ಯದಂಗಡಿ ತೆರೆದಿದ್ದು, ಅಬಕಾರಿಮತ್ತು ಪೊಲೀಸ್‌ಇಲಾಖೆಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ನಗರದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು. ಮಂಗಳವಾರ ನಗರದ ತಾಪಂಕಚೇರಿಯಿಂದ ಆಜಾದ್‌ ಪಾರ್ಕ್‌ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆನಡೆಸಿದ ಗ್ರಾಮಸ್ಥರು. ಮದ್ಯದಂಗಡಿತೆರವುಗೊಳಿಸುವಂತೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಮಾತನಾಡಿದಪ್ರತಿಭಟನಾಕಾರರು, ಎಮ್ಮೆದೊಡ್ಡಿಗ್ರಾಪಂ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು,ಬಹುತೇಕ ಜನರು ಎಮ್ಮೆದೊಡ್ಡಿಗ್ರಾಮವನ್ನೇ ಅವಲಂಬಿಸಿದ್ದಾರೆ.   ಈ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡಕ್ಕೆ ಸೇರಿದ ಜನರು ಹೆಚ್ಚಿನಸಂಖ್ಯೆಯಲ್ಲಿ ವಾಸವಿದ್ದು ಕೂಲಿಕಾರ್ಮಿಕರು ಹೆಚ್ಚಿದ್ದಾರೆ …

Read More »

ಬಸ್‌ ಸೌಲಭ್ಯ ಒದಗಿಸುವಂತೆ ಆಗ್ರಹ: ಮಳೆಯಲ್ಲೇ ವಿದ್ಯಾರ್ಥಿನಿಯರ ಪ್ರತಿಭಟನೆ

ಸೇಡಂ: ತಾಲ್ಲೂಕಿನ ಮಲ್ಲಾಬಾದ್ ಮಾರ್ಗದಿಂದ ಬೊಂದೆಂಪಲ್ಲಿ ಗ್ರಾಮಕ್ಕೆ ಬಸ್ ಒದಗಿಸುವಂತೆ ಮುಧೋಳ ಬಸ್ ನಿಲ್ದಾಣದಲ್ಲಿ ಮಂಗಳವಾರ ಶಾಲಾ ವಿದ್ಯಾರ್ಥಿನಿಯರು ಸುರಿಯುತ್ತಿರುವ ಮಳೆಯಲ್ಲಿಯೇ ಬಸ್‌ ತಡೆದು ಪ್ರತಿಭಟನೆ ನಡೆಸಿದರು. ಶಾಲಾ-ಕಾಲೇಜು ಆರಂಭವಾಗಿ ಅನೇಕ ದಿನಗಳಾಗುತ್ತಾ ಬಂದಿವೆ. ಈವರೆಗೂ ಬಸ್ ಆರಂಭವಾಗಿಲ್ಲ. ಬಸ್ ಓಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿದ್ದೇವೆ. ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಿಲ್ಲ. ಶಾಲಾ-ಕಾಲೇಜುಗಳು ನಿತ್ಯವು ನಡೆಯುತ್ತಿವೆ. ಖಾಸಗಿ ವಾಹನಗಳಿಗೆ ಹಣ ಕೊಟ್ಟು ಬರಲು ಸಾಧ್ಯವಾಗುತ್ತಿಲ್ಲ. ನಮ್ಮಂತಹ ಮಧ್ಯಮ ವರ್ಗದವರು ಶಾಲೆಗೆ …

Read More »

ಮನೆ ನಿರ್ಮಾಣಕ್ಕೆ ಆಗ್ರಹಿಸಿ ಮಳೆಯನ್ನೂ ಲೆಕ್ಕಿಸದೇ ಡಿಸಿ ಕಛೇರಿ ಎದುರು ಮಹಿಳೆಯರ ಪ್ರತಿಭಟನೆ

ವಿಜಯಪುರ : ಮನೆ ನಿರ್ಮಾಣಕ್ಕೆ ಆಗ್ರಹಿಸಿ ಕೊಲ್ಹಾರ ಪಟ್ಟಣದ ಕೊಳಚೆ ಪ್ರದೇಶದ ಮಹಿಳೆಯರು ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆ ಆರಂಭಿಸಿದ್ದಾರೆ. ಬುಧವಾರ ನಗರದಲ್ಲಿನ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿದ 50-60 ಜನರಿದ್ದ ಕೊಲ್ಹಾರ ಸ್ಲಂ ನಿವಾಸಿ ಮಹಿಳೆಯರು ಭಾರೀ ಮಳೆಯಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೋಲ್ಹಾರ ಪಟ್ಟಣದಲ್ಲಿ ಕಳೆದ 25 ವರ್ಷಗಳಿಂದ ಸುಮಾರು 300 ಕುಟುಂಬಗಳು ವಾಸವಾಗಿರುವ ತಮನ್ನು ಸ್ಥಳ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಸೂಚಿಸಿದ್ದನ್ನು ವಿರೋಧಿಸಿ …

Read More »

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 26,964 ಕೋವಿಡ್ ಪ್ರಕರಣ ಪತ್ತೆ : 34,167 ಮಂದಿ ಗುಣಮುಖ

ನವ ದೆಹಲಿ : ಭಾರತದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 26,964 ಹೊಸ ಪ್ರಕರಣಗಳು ಪತ್ತೆಯಾಗಿದ್ದು 383 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆಪ್ಟೆಂಬರ್ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 383 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಒಟ್ಟು 4,45,768 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಇದೆ ಅವಧಿಯಲ್ಲಿ 34,167 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇದರೊಂದಿಗೆ ಒಟ್ಟು 3,27,83,741 …

Read More »

ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆಗೆ ‘ಬಿಗ್ ಟ್ವಿಸ್ಟ್’..! ಸುರಂಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ

ತುಮಕೂರು : ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು …

Read More »

ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ. ಅಂದಹಾಗೇ …

Read More »

ಕನ್ನಡ ಸಿನಿಮಾ ಮಾಡಲು ರಶ್ಮಿಕಾಗೆ ಟೈಮ್‌ ಇಲ್ವಂತೆ!

ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯಾದ ನಟಿ ರಶ್ಮಿಕಾ ಮಂದಣ್ಣ ಈಗ ಕನ್ನಡಕ್ಕಿಂತ ಪರಭಾಷೆಯಲ್ಲೇ ಹೆಚ್ಚು ಬಿಝಿಯಾಗಿರುವ ನಟಿ. ಸದ್ಯ ತೆಲುಗಿನಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ, ಇದರ ನಡುವೆಯೇ ಬಾಲಿವುಡ್‌ಗೂ ಅಡಿಯಿಟ್ಟಿದ್ದಾರೆ. ಇನ್ನು ತೆಲುಗು, ತಮಿಳು, ಹಿಂದಿ ಹೀಗೆ ಬೇರೆ ಬೇರೆ ಭಾಷೆಗಳಲ್ಲಿ ರಶ್ಮಿಕಾ ಅಭಿನಯಿಸುತ್ತಿರುವ ಸಿನಿಮಾಗಳು ಒಂದರ ಹಿಂದೊಂದು ಅನೌನ್ಸ್‌ ಆಗುತ್ತಿದ್ದರೂ, ಕನ್ನಡದಲ್ಲಿ ಮಾತ್ರ ರಶ್ಮಿಕಾ ಅಭಿನಯಿಸಲಿರುವ ಸಿನಿಮಾಗಳ ಬಗ್ಗೆ ಯಾವುದೇ …

Read More »