Breaking News

ರಾಜಕೀಯ

ಪ್ರತಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಯಡಿಯೂರಪ್ಪ ಎಚ್ಚರಿಕೆ

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ದಾವಣಗೆರೆಯ ಬಿಜೆಪಿ …

Read More »

ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!

ಬೆಳಗಾವಿ: ಪ್ರವಾಹದಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಅಧಿವೇಶನ ಮುಗಿದ ಬಳಿಕ ಬಾಕಿ ಉಳಿದಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ನೆರೆ ಪರಿಹಾರಕ್ಕಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಎದುರು ಸಂತ್ರಸ್ತರು ಧರಣಿ ನಡೆಸುತ್ತಿರುವ ವಿಚಾರದ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಅಧಿವೇಶನ ಮುಗಿದ ಬಳಿಕ ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಯಾದ ಮನೆಗಳ …

Read More »

ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..

ಚಿಕ್ಕೋಡಿ: ರಾಜ್ಯದಲ್ಲಿ ಮೌಢ್ಯ ನಿಷೇಧವಿದ್ದರೂ ಹಾಡಹಗಲೇ ಮಹಾರಾಷ್ಟ್ರದ ಮಾಂತ್ರಿಕ ವಾಮಾಚಾರ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಅಣ್ಣಪ್ಪಾ ಕಾಕನಕಿ ಎಂಬವರ ಮನೆ ಮುಂದೆ ಅಶೋಕ ಕಾಕನಕಿ ಮಹಾರಾಷ್ಟ್ರದಿಂದ ಮಾಂತ್ರಿಕನನ್ನು ಕರೆಸಿ ವಾಮಾಚಾರ ಮಾಡಿದ್ದಾರೆ ಎಂದು ಅಣ್ಣಪ್ಪಾ ಕಾಕನಕಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಾರಾಷ್ಟ್ರದ ತಾಂತ್ರಿಕ ಬಂದು ಮನಬಂದಂತೆ ಕುಣಿದು ವಾಮಾಚಾರ ಮಾಡಿರುವ ವೀಡಿಯೋ ವೈರಲ್ ಆಗಿದೆ. ಹಳದಿ ಭಂಡಾರ ಚೆಲ್ಲಿ, ನಿಂಬೆಹಣ್ಣು ಎಸೆದು …

Read More »

ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪನವರ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್

ಕೊಪ್ಪಳ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಮಾಜಿ ಸಿಎಂ ಯಡಿಯೂರಪ್ಪ ಅಧಿಕಾರ ಹೋಗಿದೆ ಎಂದು ಕೊಪ್ಪಳದಲ್ಲಿ ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.   ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡ ಬಗ್ಗೆ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅವರ ಅಧಿಕಾರ ಹೋಗಿದೆ. ಮೀಸಲಾತಿ ಕೊಡ್ತೀನಿ ಎಂದು ಯಡಿಯೂರಪ್ಪ ಅವರು ಮೀಸಲಾತಿ ಕೊಡಲಿಲ್ಲ. ಅದೇ ಕಾರಣಕ್ಕಾಗಿಯೇ ಅವರ ಅಧಿಕಾರ ಹೋಯ್ತು. ಸ್ವಾಮೀಜಿ ಅವರ ಶಾಪವೇ ಯಡಿಯೂರಪ್ಪ ಅವರಿಗೆ ತಟ್ಟಿದೆ …

Read More »

ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

ವಿಜಯಪುರ: ನಗರದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಯಾರೋ ಬೈಕ್‍ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮ ಬೈಕ್ ಮೇಲಿಂದ ಬಿದ್ದು, ಗಾಯಗೊಂಡು ಯುವಕ, ಯುವತಿ ಒದ್ದಾಡಿದ್ದಾರೆ. ಅಲ್ಲದೆ ಸಹಾಯಕ್ಕಾಗಿ ಅಂಗಲಾಚಿದ ಹೃದಯವಿದ್ರಾವಕ ಘಟನೆ ನಡೆದಿದೆ.   ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಕಾಪಾಡುವಂತೆ ಯುವಕ, ಯುವತಿ ಅಂಗಲಾಚುತ್ತಿದ್ದ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಒದ್ದಾಡುತ್ತ, ಕಾಪಾಡಿ ಎಂದು ಬೈಕ್ ಸವಾರರಾದ ಸಚಿನ್, ಸುಜಾತಾ …

Read More »

ಮುಸ್ಲಿಂ ಯುವತಿಗೆ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ; ಅರ್ಧ ದಿನದಲ್ಲಿ ಆರೋಪಿಗಳು ಅರೆಸ್ಟ್

ಬೆಂಗಳೂರು(ಸೆ.19): ತೆಲಂಗಾಣದ(Telangana) ನೈತಿಕ ಪೊಲೀಸ್​​ಗಿರಿ ಪ್ರಕರಣದ ಬೆನ್ನಲ್ಲೇ ಕರ್ನಾಟಕದಲ್ಲೂ ಅಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ಕೆಲದಿನಗಳ ಹಿಂದೆ ತೆಲಂಗಾಣದ ನಿಜಾಮಾಬಾದ್​​ನಲ್ಲಿ ಮುಸ್ಲಿಂ ಯುವತಿ(Muslim Girl)ಯನ್ನು ಬೈಕ್​​ನಲ್ಲಿ ಕೂರಿಸಿಕೊಡಿದ್ದ ಹಿಂದೂ ಯುವಕನನ್ನು ಪುಂಡರ ಗುಂಪೊಂದು ಅಪಹರಿಸಿ, ಹಲ್ಲೆ ಮಾಡಿತ್ತು. ಅದರ ಬೆನ್ನಲ್ಲೇ ತೆಲಂಗಾಣ ಪೊಲೀಸರು 5 ಮಂದಿ ಯುವಕರನ್ನು ಬಂಧಿಸಿದ್ದರು. ಈಗ ಅದೇ ರೀತಿಯ ಘಟನೆ ಕರ್ನಾಟಕದಲ್ಲೂ(Karnataka) ನಡೆದಿದೆ. ಮುಸ್ಲಿಂ ಯುವತಿಯನ್ನು ತನ್ನ ಬೈಕ್ ನಲ್ಲಿ ಕೂರಿಸಿಕೊಂಡಿದ್ದ ಹಿಂದೂ ಯುವಕನ ಮೇಲೆ …

Read More »

ನನ್ನ ಪ್ರವಾಸ ಆರಂಭವಾಗಿದೆ : ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಬಿಎಸ್ ವೈ

ದಾವಣಗೆರೆ : ರಾಜ್ಯದಲ್ಲಿ ನನ್ನ ಪ್ರವಾಸ ಆರಂಭವಾಗಿದ್ದು ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 ರಿಂದ 140 ಸೀಟ್ ಗೆದ್ದು ಅಧಿಕಾರಕ್ಕೆ ಮತ್ತೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಯಿಂದ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ದಾವಣಗೆರೆಗೆ ಬಂದಿದ್ದ ಬಿಎಸ್ ವೈ ನನ್ನ ಪ್ರವಾಸ ಈಗಾಗಲೇ ಪ್ರಾರಂಭವಾಗಿದೆ, ರಾಜ್ಯದಲ್ಲಿ ಎಲ್ಲಾ ಕಡೆ ಸಂಚರಿಸಿ 130 -140 ಸೀಟ್ …

Read More »

ಇಂದಿನಿಂದ IPL ಎರಡನೇ ಇನ್ನಿಂಗ್ಸ್ ಆರಂಭ : ಮುಂಬೈ-ಚೆನ್ನೈ ಜಟಾಪಟಿ

ದುಬೈ: ಮೇ ಆರಂಭದಲ್ಲಿ ಕೋವಿಡ್‌ ಕಾರಣದಿಂದ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ 2021ರ ಐಪಿಎಲ್‌ಗೆ ಬರೋಬ್ಬರಿ ನಾಲ್ಕೂವರೆ ತಿಂಗಳ ಬಳಿಕ ಯುಎಇಯಲ್ಲಿ ಮುಂದುವರಿಯುವ ಮುಹೂರ್ತ ಕೂಡಿಬಂದಿದೆ. ಭಾನುವಾರದಿಂದ ಅ.15ರ ತನಕ ದುಬೈ, ಶಾರ್ಜಾ, ಅಬುಧಾಬಿಯಲ್ಲಿ ಉಳಿದ 31 ಪಂದ್ಯಗಳು ನಡೆಯಲಿದ್ದು, ಕ್ರಿಕೆಟ್‌ ಪ್ರೇಮಿಗಳು ಮತ್ತೂಂದು ಕಂತಿನ ರೋಮಾಂಚನವನ್ನು ಅನುಭವಿಸುವ ಸಂಭ್ರಮದಲ್ಲಿದ್ದಾರೆ. ಮೇ 2ರಂದು ಅಹ್ಮದಾಬಾದ್‌ನಲ್ಲಿ ಪಂಜಾಬ್‌-ಡೆಲ್ಲಿ ನಡುವಿನ ಮುಖಾಮುಖೀ ಬಳಿಕ ಜೈವಿಕ ಸುರಕ್ಷಾ ವಲಯದಲ್ಲೂ ಕೊರೊನಾ ಕೇಸ್‌ ಕಂಡುಬಂದುದರಿಂದ ಪಂದ್ಯಾವಳಿಯನ್ನು ನಿಲ್ಲಿಸಲಾಗಿತ್ತು. …

Read More »

ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ವಂಚನೆ

ಬೆಂಗಳೂರು: ಸೈಟ್ ಮಾರಾಟ ಮಾಡಿಕೊಡುವುದಾಗಿ ನಂಬಿಸಿ ನಿವೃತ್ತ ಎಸಿಪಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪೆನಿ ಒಂದರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಎಸಿಪಿ ಲವಕುಮಾರ್ ಎಂಬುವರು ಜಿಗಣಿಯ ನವ್ಯ ಲೇಔಟ್‍ನಲ್ಲಿ 90 ಲಕ್ಷ ಮೌಲ್ಯದ ಮೂರು ನಿವೇಶನ ಹೊಂದಿದ್ದರು. ಕೆಲದಿನಗಳ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ನಿರ್ಮಾಣ್ ಶೆಲ್ಟರ್ಸ್ ಕಂಪೆನಿ ಸಂಪರ್ಕಿಸಿ ತಮ್ಮ ಬಳಿಯಿರುವ ನಿವೇಶನಗಳನ್ನು ಮಾರಾಟ ಮಾಡಿಕೊಡಿಕೊಡುವುದಾಗಿ ಹೇಳಿದ್ದು, …

Read More »

ತಂದೆಯಿಂದಲೇ ಕಂದಮ್ಮನ ಕೊಲೆ!

ಚಿಕ್ಕೋಡಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ಎರಡೂವರೆ ವರ್ಷದ ಮಗು ಬೋರ್​ವೆಲ್​ನಲ್ಲಿ ಸಿಕ್ಕಿ ಪ್ರಾಣ ಬಿಟ್ಟಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಮಗುವನ್ನು ಹೊಡೆದು ಕೊಲೆ ಮಾಡಿ ಬೋರ್​ವೆಲ್​ಗೆ  ಎಸೆದಿರುವುದಾಗಿ ಬೆಳಕಿಗೆ ಬಂದಿದೆ. ಶರತ್ ಸಿದ್ದಪ್ ಹಸರೆ (2) ಮೃತ ದುರ್ದೈವಿ. ಹೆತ್ತ ತಂದೆಯೇ ಶರತ್ ನನ್ನು ಹೊಡೆದು ಕೊಂದು ಬೋರ್​ವೆಲ್​ಗೆ ಹಾಕಿ ಮಗು ಕಾಣೆಯಾಗಿದೆ, ಬೋರ್​ವೆಲ್​ನಲ್ಲಿ ಸಿಲುಕಿರುವ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದನು. ಆದರೆ …

Read More »