ದಾವಣಗೆರೆ: ಕರುನಾಡಿನಲ್ಲಿ ಕನ್ನಡವೇ ಆಡಳಿತ ಭಾಷೆ, ಎಲ್ಲ ವ್ಯವಹಾರಗಳು ಕನ್ನಡದಲ್ಲೇ ನಡೆಯಬೇಕು ಎಂಬುದು ಸರಕಾರದ ನಿಯಮ. ಆದರೆ ಕರುನಾಡಿನ ಲಾಂಛನದಲ್ಲೇ ಕನ್ನಡ ಮರೆಯಾಗಿರುವುದು ವಿಪರ್ಯಾಸ! ಇದು ವಿಚಿತ್ರವೆನಿಸಿದರೂ ಸತ್ಯ. ಆರು ದಶಕಗಳಿಂದ ನಮ್ಮ ಲಾಂಛನದಲ್ಲಿರುವ “ಸತ್ಯಮೇವ ಜಯತೇ’ ಹಿಂದಿಯಲ್ಲೇ ಇದೆ. ಕನ್ನಡ ಇಗೆ ಬದಲಾಯಿಸಿಲ್ಲ. ಹಿಂದಿ ಲಿಪಿಯಲ್ಲಿ “ಸತ್ಯಮೇವ ಜಯತೇ’ ಎಂದು ಬರೆದಿರುವ ಲಾಂಛನವನ್ನೇ ಇಂದು ಎಲ್ಲೆಡೆ ಬಳಕೆ ಮಾಡಲಾಗುತ್ತಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಗಳ ಲಾಂಛನಗಳಲ್ಲಿ ಆಯಾ ರಾಜ್ಯ …
Read More »ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ
ಬೆಳಗಾವಿ: ದೇವಾಲಯಗಳ ತೆರವು ಕಾರ್ಯಾಚರಣೆಗೆ ಈಗಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕುಂದಾನಗರಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಹಲವು ದೇವಾಲಯಗಳ ತೆರವಿಗೆ ಸಿದ್ಧತೆ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ ನೋಟೀಸ್ ಜಾರಿ ಮಾಡಿದೆ. ಈ ಸಾರ್ವಜನಿಕರು ಆಕ್ರೋಶ …
Read More »ಸಾವಿನಲ್ಲೂ ನಾಲ್ವರ ಪ್ರಾಣ ಉಳಿಸಿ ಸಾರ್ಥಕತೆ ಮೆರೆದ ಹಾವೇರಿ ಯುವತಿ
ಹಾವೇರಿ: 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಮಹಾನ್ ತಾಯಿ ಹೆಸರು ಕವನ ಮಳ್ಳಯ್ಯ ಹಿರೇಮಠ. ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಕವನ ಶಿಕಾರಿಪುರದ ಗಾಮೆಂಟ್ಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ …
Read More »ಟಿಪ್ಪುಸುಲ್ತಾನ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಡಳಿತಕ್ಕೆ ಮನವಿ
ರಾಯಚೂರು: ನಗರದ ಟಿಪ್ಪುಸುಲ್ತಾನ್ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ವಾರ್ಡ್ ಸಂಖ್ಯೆ 7 ಹಾಗೂ 8ರ ನಿವಾಸಿಗಳು ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು. ಟಿಪ್ಪುಸುಲ್ತಾನ್ ರಸ್ತೆಯು ನಗರದ ನುಖ್ಯ ರಸ್ತೆಯಾಗಿದ್ದು, ವಿಸ್ತರಣೆ ಕಾರ್ಯ ಆರಂಭಿಸಿ ಒಂದು ವರ್ಷ ಗತಿಸಿದರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದ ಅಂದ್ರೂನ್ ಕಿಲ್ಲಾ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಮಸ್ಯೆಯಾಗಿದೆ. …
Read More »ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣ
ಮಂಗಳೂರು : ಕೇರಳದ ಕೋಯಿಕ್ಕೊಡ್‌ನಲ್ಲಿ ನಿಫಾ ಸೋಂಕಿಗೆ 13 ವರ್ಷದ ಬಾಲಕ ಮೃತಪಟ್ಟ ವಾರದ ಬಳಿಕ ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಸೋಂಕಿನ ಲಕ್ಷಣಗಳು ಕಾಣಿಸಿವೆ. ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಗೆ ನಿಫಾ ಸೋಂಕಿನ ಲಕ್ಷಣಗಳು ಕಾಣಿಸಿದೆ ಎಂದು ಆರೋಗ್ಯ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ. ಸೋಂಕಿತರ ಸ್ಯಾಂಪಲ್‌ನ್ನು ಪುಣೆಯಲ್ಲಿರುವ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ವೈರಾಲಜಿ ಕೇಂದ್ರಕ್ಕೆ ಕಳುಹಿಸಲಾಗಿದೆ. ನಾವು ಜಾಗರೂಕರಾಗಿರಬೇಕು. ಆದರೆ ಭಯಪಡುವ ಅವಶ್ಯ …
Read More »ಹಿಂದಿ ಹೇರಿಕೆ ಸಲ್ಲದು ಎಂದ ನಟ ಧನಂಜಯ್-ನಿರ್ದೇಶಕ ಸಿಂಪಲ್ ಸುನಿ..!
ರಾಜ್ಯದಲ್ಲಿ ಹಿಂದಿ ಹೇರಿಕೆ (Hindi Imposition) ವಿಚಾರವಾಗಿ ಸಾಕಷ್ಟು ಸಲ ಚರ್ಚೆ ಹಾಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇನ್ನೂ ಸಹ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಈಗ ಮತ್ತೊಮ್ಮೆ ಹಿಂದಿ ಹೇರಿಕೆ ವಿಷಯ ಚರ್ಚೆಗೆ ಬಂದಿದೆ. ಸೆ.14ರಂದು ದೇಶದ ಹಲವೆಡೆ ಹಿಂದಿ ದಿವಸ್ (Hindi Diwas) ಅನ್ನು ಆಚರಣೆ ಮಾಡಲಾಗುತ್ತದೆ. ಉತ್ತರ ಭಾರತದಲ್ಲಿ ಹಿಂದಿ ದಿವಸ್ ಆಚರಣೆ ತುಂಬಾ ಜೋರಾಗಿ ನಡೆಯುತ್ತದೆ. ಆದರೆ ದಕ್ಷಿಣ ಭಾರತದಲ್ಲಿ ಈ ದಿನದ ಆಚರಣೇಗೆ ತೀವ್ರ …
Read More »ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು …
Read More »ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಉದಾಸಿ ಆಗಲಿಕೆ ನನ್ನ ಪಾಲಿಗೆ ಬಹಳ ದೊಡ್ಡ ನಷ್ಟವಾಗಿದೆ. ತಂದೆ ಸಮಾನ ರಾಗಿದ್ದ ಉದಾಸಿ ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲೂ ಬಹಳ ಪ್ರಮುಖ …
Read More »ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ
ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ …
Read More »ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ. ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ …
Read More »
Laxmi News 24×7