ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …
Read More »700 ಅಡಿಕೆ ಮರಗಳನ್ನು ಕಡಿದು ಹಾಕಿದ್ದ ಆರೋಪಿಯನ್ನ 5 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್
ಹಾವೇರಿ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ಬರೋಬ್ಬರಿ 700 ಅಡಿಕೆ ಮರಗಳನ್ನು ಕತ್ತರಿಸಿದ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಐದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಹೋದರರ ಮನೆಯಲ್ಲಿ ಬಾಡಿಗೆ ಇದ್ದವನೇ ಗಿಡಗಳನ್ನು ಕಡಿದಿರುವ ಆರೋಪಿ ಎನ್ನಲಾಗಿದೆ. ರಾಜಾಸಬ ಹೊಸಮನಿ ಎಂಬಾತನನ್ನು ಬಂಧಿಸಲಾಗಿದ್ದು ಈತ ತೋಟದಲ್ಲಿ ಬಂದ ಫಸಲಲ್ಲಿ ಶೇರ್ ಕೊಡುವಂತೆ ಕೇಳಿದ್ದನಂತೆ. ಈ ವಿಚಾರಕ್ಕೆ ರೈತರು ಹಾಗೂ ಆರೋಪಿ ನಡುವೆ ಜಗಳವಾಗಿತ್ತು.. ಈ ಹಿನ್ನಲೆ ರಾಜಾಸಾಬ ಹೊಸಮನಿಯನ್ನ ಮನೆ …
Read More »ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …
Read More »ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ
ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ. 6 …
Read More »ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ
ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …
Read More »ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ : ನಟ ಚೇತನ್
ಬೆಂಗಳೂರು: ಮೊದಲು ಕಾಂಗ್ರೆಸ್‍ನ್ನು ಸೋಲಿಸಬೇಕೆಂದು ಹೇಳಿದ್ದ ನಟ ಹಾಗೂ ಹೋರಾಟಗಾರ ಚೇತನ್ ಕುಮಾರ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಟೀಕಿಸಿದ್ದಾರೆ. ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆರೋಪಿಸಿದ್ದಾರೆ. 1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ …
Read More »ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?
ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾಣಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಗುಜರಾತ್ ನ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್ ಅವರನ್ನು ಭಾನುವಾರ (ಸೆ.12) ಕಳುಹಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ದಿಢೀರ್ ರಾಜೀನಾಮೆ ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ರಾಜ್ಯಪಾಲರಿಗೆ ರಾಜೀನಾಮೆ …
Read More »ಮೈಸೂರು ಗ್ಯಾಂಗ್ ರೇಪ್ ಪ್ರಕರಣ, ವಿಶೇಷ ಪ್ಯಾಸಿಕ್ಯೂಟರ್ ನೇಮಕ
ಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ ಪೋಷಕರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಅಗತ್ಯಬಿದ್ದರೆ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ. ಈ ಕುರಿತು ತನಿಖೆ ನಡೆಸಲು ಮುಂದಿನ ದಿನಗಳಲ್ಲಿ ವಿಶೇಷ ಪ್ಯಾಸಿಕ್ಯೂಟರುಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
Read More »ಧಾರವಾಡಿ ಎಮ್ಮೆ ತಳಿಗೆ ಸಿಕ್ಕಿತು ರಾಷ್ಟ್ರೀಯ ಮಾನ್ಯತೆ; ಈ ಎಮ್ಮೆಗೆ ಎಷ್ಟೆಲ್ಲಾ ವೈಶಿಷ್ಟ್ಯಗಳಿವೆ ಗೊತ್ತಾ?
ಧಾರವಾಡ(ಸೆ.12): ಧಾರವಾಡ ಪೇಡಾ ಅಂದ್ರೆ ಸಾಕು ಎಲ್ಲರ ಬಾಯಲ್ಲೂ ನೀರು ಬರುತ್ತೆ. ಇದರಿಂದಲ್ಲದೇ ಇಂದು ಧಾರವಾಡ ಪೇಡಾದ ಖ್ಯಾತಿ ವಿಶ್ವಮಟ್ಟಕ್ಕೇರಿದೆ. ಈ ಪೇಡಾ ಸ್ವಾದಿಷ್ಟಕ್ಕೆ ಕಾರಣವೇ ಧಾರವಾಡದ ಎಮ್ಮೆಯ ಹಾಲು. ಧಾರವಾಡ ಪೇಡಾದಂತೆಯೇ ಧಾರವಾಡದ ಎಮ್ಮೆಗೂ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ. ಹೌದು, ಇಷ್ಟು ದಿನ ಕೇವಲ ಧಾರವಾಡಕ್ಕೆ ಮಾತ್ರವೇ ಸೀಮಿತವಾಗಿದ್ದ ಧಾರವಾಡದ ಸ್ಥಳೀಯ ಎಮ್ಮೆ ತಳಿಗೆ ಈಗ ದೇಸಿ ತಳಿಯ ಸ್ಥಾನಮಾನ ನೀಡಲಾಗಿದೆ. ವಿಶೇಷ ತಳಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಸಿಕ್ಕಾಗ …
Read More »ಕಾಂಗ್ರೆಸಿಗರು 2 ದಶಕ ಅಧಿಕಾರಕ್ಕೆ ಬರುವ ಕನಸು ಕಾಣಬೇಡಿ: ನಳಿನ್
ಬೆಳ್ತಂಗಡಿ: ಕಾಂಗ್ರೆಸ್ಸಿಗರು ಇನ್ನೆರಡು ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದರು. ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯ ಸರಕಾರ ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂತಹ ಕಾರ್ಯಗಳು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಡೆಸಿಕೊಂಡು ಬಂದಿದ್ದ ಕೀಳುಮಟ್ಟದ …
Read More »
Laxmi News 24×7