Breaking News

ರಾಜಕೀಯ

ಸಂಪುಟಕ್ಕೆ ಪುತ್ರ: ಬಿಎಸ್‌ವೈ ಲಾಬಿ?

ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣದಿಂದಾಗಿ ಸಿಎಂ ಹೊಸದಿಲ್ಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದ್ದಾರೆ. ಅದಕ್ಕಾಗಿ ಬೊಮ್ಮಾಯಿ 2 ಬಾರಿ ರಾಷ್ಟ್ರ ರಾಜಧಾನಿಗೆ ಪ್ರವಾಸ ಕೈಗೊಂಡಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ಸಚಿವಾಕಾಂಕ್ಷಿಗಳು …

Read More »

ಸೆ.13ರಂದು ಗಜಪಡೆ ಆಗಮನ, ಅ.7ಕ್ಕೆ ದಸರಾ ಉದ್ಘಾಟನೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಪಯಣ ಸೆ.13ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ನಡೆಯಲಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯಲಿದೆ. ಬುಧವಾರ ದಸರಾ ಆಚರಣೆ ಸಂಬಂಧ ಅರಮನೆ ಮಂಡಳಿ ಸಭಾಂಗಣದಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಕೋವಿಡ್‌ ಹಿನ್ನೆಲೆ ಕಳೆದ ಬಾರಿಯಂತೆ ಈ ಬಾರಿಯೂ ಅರಮನೆಗೆ ಸೀಮಿತವಾಗುವಂತೆ …

Read More »

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ …

Read More »

ಅಭಿಮನ್ಯು ಹೆಗಲಿಗೆ ಅಂಬಾರಿ, 157 ವೃತ್ತಗಳಲ್ಲಿ ದೀಪಾಲಂಕಾರ -ಹೇಗಿರಲಿದೆ ಮೈಸೂರು ದಸರಾ..?

‘ಮೈಸೂರು ದಸರಾ’ ಸಂಬಂಧ ಇಂದು ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಏನೆಲ್ಲಾ ತೀರ್ಮಾನ ಮಾಡಲಾಯಿತು ಅನ್ನೋದ್ರ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.     8 ಆನೆಗಳು ಭಾಗಿ ವೀರನಹೊಸಹಳ್ಳಿಯಿಂದ ಎಂಟು ಆನೆ ಕರೆ ತರುತ್ತೇವೆ. ಸೆಪ್ಟೆಂಬರ್ 13 ರಂದು ಬೆಳಗ್ಗೆ 9.30ಕ್ಕೆ ಗಜಪಡೆ ಪೂಜೆ, 16 ರಂದು ಅರಮನೆ ಬಳಿ ಗಜಪಡೆ ಸ್ವಾಗತ ನೀಡಲಾಗುತ್ತದೆ. ಅಕ್ಟೋಬರ್ 16 …

Read More »

ಭ್ರಷ್ಟಚಾರ ಕೇಸಲ್ಲಿ ಸಿಕ್ಕಿಬಿದ್ದ ಅಧಿಕಾರಿ; ಎಸಿಬಿಗೆ ಮಾಹಿತಿ ನೀಡ್ತೀರಾ? ಎಂದು ಪಕ್ಕದ ಮನೆಯವ್ರ ಮೇಲೆ ಹಲ್ಲೆ

ದಾವಣಗೆರೆ: ಎಸಿಬಿ ದಾಳಿಗೆ ಮಾಹಿತಿ‌ ನೀಡಿದ್ದಾರೆ ಎಂಬ ಆರೋಪ ಮಾಡಿ ಸರ್ಕಾರ ಅಧಿಕಾರಿ ಹಾಗೂ ಸಂಬಂಧಿಕರು ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ನಗರಸಭೆಯ ಯೋಜನಾ ನಿರ್ದೇಶಕ ಎಚ್.ಕೆ.ಕೃಷ್ಣಪ್ಪ ಹಾಗೂ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಅಂತ ಇದೇ ಗ್ರಾಮದ ಎಚ್.ಜೆ.ಗಣೇಶ ಅವರ ಕುಟುಂಬಸ್ಥರಯ ಆರೋಪ ಮಾಡಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Read More »

ಅರ್ಕಾವತಿ ಹಗರಣ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​​

ಬೆಂಗಳೂರು: ಅರ್ಕಾವತಿ ಲೇಔಟ್ ಭೂ ಅವ್ಯವಹಾರ ಹಗರಣ ಕೇಸ್​ಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾ. ಸಚಿನ್​ ಶಂಕರ್​ ಮಗದುಮ್ ನೇತೃತ್ವದ ವಿಭಾಗೀಯ ಪೀಠದಿಂದ ನೊಟೀಸ್ ಜಾರಿ ಮಾಡಲಾಗಿದ್ದು, ಈ ಮನವಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆಕ್ಷೇಪಣೆ ಬಳಿಕ ನವೆಂಬರ್ 15ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ವಿಭಾಗೀಯ ಪೀಠ …

Read More »

ಕೆಎಂಸಿ ಚುನಾವಣೆ ರದ್ದು ಆದೇಶಕ್ಕೆ ತಡೆ

ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಡಾ.ಮಧುಸೂಧನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು. ‘2020ರ ಜನವರಿ …

Read More »

ಮಕ್ಕಳ ಬ್ಯಾಗ್ ಮೇಲೆ ರಾಜಕೀಯ ನಾಯಕರ ಚಿತ್ರ ಮುದ್ರಿಸುವಂತಿಲ್ಲ: ಹೈಕೋರ್ಟ್

ಮದ್ರಾಸ್ : ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಬ್ಯಾಗ್, ಪಠ್ಯ ಪುಸ್ತಕಗಳನ್ನು ವಿತರಿಸುತ್ತದೆ. ಈ ಸಾಮಾಗ್ರಿಗಳ ಮೇಲೆ ಮುಖ್ಯಮಂತ್ರಿ ಅಥವಾ ಇನ್ಯಾರೇ ರಾಜಕೀಯ ನಾಯಕರ ಚಿತ್ರಗಳನ್ನು ಮುದ್ರಿಸಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಪಿ.ಟಿ ಆದಿಕೇಶವಲು ಅವರ ನ್ಯಾಯಪೀಠವು ಆದೇಶ ಹೊರಡಿಸಿದೆ. ಮಕ್ಕಳಿಗೆ ಮತದಾನದ ಹಕ್ಕು ಇರುವುದಿಲ್ಲ. …

Read More »

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More »

ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ. ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ …

Read More »