ಧಾರವಾಡ: ಬೈಕ್ ಮತ್ತು ಗೂಡ್ಸ್ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
Read More »ಸೆ.20ಕ್ಕೆ ಸಿಇಟಿ ಫಲಿತಾಂಶ ಸಾಧ್ಯತೆ?
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ. ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ …
Read More »ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಮಹಿಳೆಯೊಬ್ಬಳ ಆತ್ಮಹತ್ಯೆ
ಹುಡುಗಿಯರಿಗೆ ಪಾನಿಪುರಿ ಅಂದ್ರೆ ಪಂಚಪ್ರಾಣ. ಮಹಿಳೆಯೊಬ್ಬಳು ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ನಿವಾಸಿಯಾಗಿರುವ ಪ್ರತೀಕ್ಷಾ ಸರ್ವಾಡೆ ೨೦೧೯ ರಲ್ಲಿ ಗಹಿನಿನಾಥ್ ಸರ್ವಾಡೆ ಎಂಬವರನ್ನು ಮದುವೆಯಾಗಿದ್ದರು. ಗಹಿನಿನಾಥ್ ಸರ್ವಾಡೆ ಕೆಲಸದಿಂದ ಬರುವಾಗ ಪತ್ನಿಗೆ ತಿಳಿಸದೇ ಪಾನಿಪೂರಿಯನ್ನು ತಂದಿದ್ದರು. ಅಡುಗೆ ಮಾಡಿಟ್ಟಿದ್ದ ಪತ್ನಿ ಪ್ರತೀಕ್ಷಾ ಇದೇ ಕಾರಣಕ್ಕೆ ಕೋಪ ಮಾಡಿಕೊಂಡಿದ್ದಾಳೆ. ಮರುದಿನ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ. …
Read More »ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಬಂಧಿಸಿದ ಸಿಐಡಿ
ಚಿಕ್ಕಮಗಳೂರು, ಸೆ.1 ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. 2021 ಮೇ 10ರಂದು ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‍ಐ ಆಗಿದ್ದ ಅರ್ಜುನ್ ಎಂಬುವರು ಠಾಣಾವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬಾತನನ್ನು ಪ್ರಕರಣವೊಂದರ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಪಿಎಸ್‍ಐ ಅರ್ಜುನ್ ಅವರು …
Read More »ಅತ್ಯಾಚಾರ ತಡೆದಿದ್ರೆ ಬೇಷ್ ಅನ್ನಬಹುದಿತ್ತು|ಸರ್ಕಾರ-ಪೊಲೀಸ್ ವಿರುದ್ಧ ಸಿದ್ಧರಾಮಯ್ಯ ಆಕ್ರೋಶ
ಮೈಸೂರು : ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಬಹಳ ಹೇಯ ಕೃತ್ಯ. ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ. ಸರ್ಕಾರ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಕಿಡಿ ಕಾರಿದರು. ಇಂದು (ಸೆ.01) ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದರು. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು …
Read More »ದೆವ್ವದ ವೇಷ ಧರಿಸಿ ಕೆಲಸ ಮಾಡ್ತಿದ್ದ ಹೋಟೆಲ್ನಲ್ಲೇ ಕಳ್ಳತನ ಮಾಡಿದ ಸರ್ವರ್
ಬೆಂಗಳೂರು: ವ್ಯಕ್ತಿಯೋರ್ವ ತಾನು ಕೆಲಸ ಮಾಡುತ್ತಿದ್ದ ಹೋಟೆಲ್ನಲ್ಲೇ ದೆವ್ವದ ವೇಷ ಹಾಕಿಕೊಂಡು ಕಳ್ಳತನ ಮಾಡಿರುವ ಘಟನೆ ಆನೇಕಲ್ನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀನಿಧಿ ಉಪಚಾರ ಹೋಟೆಲ್ನಲ್ಲಿ ನಿನ್ನೆ ನಡೆದಿದೆ. ಹಳೇ ಸಿನಿಮಾದ ಕಳ್ಳರ ರೀತಿ ಸರ್ವರ್ ಅಪ್ಪಣ್ಣ ಶೆಟ್ಟಿ ಮೈತುಂಬಾ ಬಿಳಿ ಬಣ್ಣದ ಬಟ್ಟೆ ಮುಚ್ಚಿಕೊಂಡು ಬಂದು ಕೃತ್ಯ ಎಸಗಿದ್ದಾನೆ. ಸರ್ವರ್ ಅಪ್ಪಣ್ಣ ಕಳ್ಳತನ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈತ 25 ದಿನಗಳ ಹಿಂದೆ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದ್ದ ಆಗಿನಿಂದಲೇ …
Read More »ಶಾಲೆಗಳು ರೀ ಓಪನ್..! ಆದ್ರೆ ಬಸ್ಗಳೇ ಇಲ್ಲ.. ನಿತ್ಯ ನಡೆಯುತ್ತಲೇ ಹೋಗಬೇಕಾಗಿದೆ ವಿದ್ಯಾರ್ಥಿಗಳು
ಗದಗ : ಶಿಕ್ಷಣ ಇಲಾಖೆಯೇನೋ ಹಲವಾರು ಅಡೆತಡೆಗಳ ನಡುವೆಯೂ ಶಾಲೆಗಳನ್ನು ಆರಂಭಿಸಿದೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹೋಗಬೇಕಾದ್ರೆ ನಿತ್ಯವು 4 ಕಿ.ಮೀ ನಷ್ಟು ದೂರ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದ್ದು, ಶಾಲಾ ಸಮಯಕ್ಕೆ ಸರಿಯಾದ ಬಸ್ ಇಲ್ಲದೆ ವೇದನೆ ಅನುಭವಿಸುತ್ತಿದ್ದಾರೆ. ಹೌದು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಸ್ಥಗಿತಗೊಂಡ ಬಸ್ ಪುನರಾರಂಭವಾಗದ ಪರಿಣಾಮ, ವಿದ್ಯಾರ್ಥಿಗಳು ದಿನನಿತ್ಯ ಶಾಲೆಗೆ 4 ಕಿ.ಮೀ ನಡೆದುಕೊಂಡು ಹೋಗುವ ಪರಿಸ್ಥಿತಿ …
Read More »ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗಡೆ ಬಸವರಾಜ ಬೊಮ್ಮಾಯಿ ಮಾತ್ರ
ಹಾವೇರಿ: ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ, ಕ್ಷೇತ್ರದ ಒಳಗಡೆ ಬಸವರಾಜ ಬೊಮ್ಮಾಯಿ ಮಾತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿಯ ಜನತೆಯಲ್ಲಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ನಮ್ಮ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ …
Read More »ತೂಕದ ಅಡ್ಜೆಸ್ಟ್ಮೆಂಟ್ ನಲ್ಲಿ ವಂಚನೆ : 7 ಅಂಗಡಿಗಳಿಗೆ ನೋಟಿಸ್, ಮೂವರು ಅರೆಸ್ಟ್ !
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ವಂಚನೆ ಎಂಟ್ರಿ ಕೊಟ್ಟಿದ್ದು ಕಣ್ಣಿಗೆ ಕಾಣುವಂತೆ ನಡೆದರೂ ಜನರು ಇದರಿಂದ ಮೋಸ ಹೋಗುತ್ತಿದ್ದಾರೆ. ತೂಕದ ಯಂತ್ರಕ್ಕೆ ಟೆಕ್ನಾಲಜಿ ಬಳಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡಲು ಹೊರಟಿದ್ದ ಹಲವು ಅಂಗಡಿಗಳ ಮಾಲೀಕರಿಗೆ ಪೊಲೀಸರು ನೋಟೀಸ್ ನೀಡಿದ್ದಾರೆ. ಹಾಗೂ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜಗೋಪಾಲನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಜನರನ್ನು ಮೋಸ ಮಾಡುವ ಅಂಗಡಿಗಳ ಅಸಲಿ ಸತ್ಯ ಬಯಲು ಮಾಡಿದ್ದಾರೆ. ಮಾಂಸ, ತರಾಕಾರಿ ಸೇರಿದಂತೆ ಹಲವು ಅಂಗಡಿಗಳಲ್ಲಿ …
Read More »ಮೈಸೂರು ಅತ್ಯಾಚಾರ ಪ್ರಕರಣ: ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ ಆರೋಪಿ!
ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಯು ಚಾಕುವಿನಿಂದ ಪೊಲೀಸರನ್ನೇ ಇರಿಯಲು ಮುನ್ನುಗ್ಗಿದ್ದ! ತಮಿಳುನಾಡಿನ ತಿರ್‌ಪೂರ್ ಜಿಲ್ಲೆಯ ಮನೆಯಲ್ಲಿದ್ದ ಆತನನ್ನು ಬಂಧಿಸಲು ತೆರಳಿದ್ದ ಪೊಲೀಸರು ಸ್ವಲ್ಪ ಯಾಮಾರಿದ್ದರೂ ಮಾರಣಾಂತಿಕ ಹಲ್ಲೆಗೆ ಗುರಿಯಾಗುತ್ತಿದ್ದ ಅಪಾಯಕಾರಿ ಸನ್ನಿವೇಶವೂ ನಿರ್ಮಾಣವಾಗಿತ್ತು. ‘ಖಚಿತ ಮಾಹಿತಿ ಮೇರೆಗೆ ಆ.28ರಂದು ರಾತ್ರಿ 1 ಗಂಟೆಯಲ್ಲಿ ಕೇವೂರು ಗ್ರಾಮದ ತೋಟವೊಂದರಲ್ಲಿ ಆರೋಪಿಯ ಮನೆ ಸೇರಿದಂತೆ ಅಲ್ಲಿದ್ದ 10ರಿಂದ 12 ಮನೆಗಳ ಶೋಧ ಕಾರ್ಯ ನಡೆದಿತ್ತು. ಆ ವೇಳೆಯಲ್ಲೇ ಆರೋಪಿ ಕುಟುಂಬದವರ ಜತೆ ಇರದೆ …
Read More »
Laxmi News 24×7