Breaking News

ರಾಜಕೀಯ

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ ಕೂರ್ಮರಾವ್ ನೇಮಕ : ರಾಜ್ಯ ಸರ್ಕಾರ ಆದೇಶ

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ. ಅಂದಹಾಗೆ ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.

Read More »

ಸಿಎಂ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: 13ಕ್ಕೂ ಅಧಿಕ ಜನರ ಜೇಬಿಗೆ ಕತ್ತರಿ

ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಗೆ ಆಗಮಿಸಿದ್ದರು, ಕಾರ್ಯಕ್ರಮದ ವೇಳೆ 13ಕ್ಕೂ ಅಧಿಕ ಜನರ ಜೇಬಿಗೆ ಖದೀಮರು ಕತ್ತರಿ ಹಾಕಿ, ಒಂದೂವರೆ ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹೊನ್ನಪ್ಪ ಅವರ ಜೇಬಿನಲ್ಲಿದ್ದ 50 ಸಾವಿರ ರೂ.ಗಳಲ್ಲಿ 49 ಸಾವಿರ ರೂ. ದೋಚಿದ್ದಾರೆ. ಹೊನ್ನಪ್ಪ ಮಾತ್ರವಲ್ಲದೆ …

Read More »

ಹರ್ಯಾಣ: ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡ ರೈತ ಹೃದಯಾಘಾತದಿಂದ ಸಾವು

ಚಂಡಿಗಢ, ಅ. 29: ಕರ್ನಲ್ನಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡಿದ್ದ ರೈತ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಕೆಯು ಹಿರಿಯ ನಾಯಕ ಗುರ್ನಾಮ್ ಸಿಂಗ್ ಚಾದುನಿ ಹೇಳಿದ್ದಾರೆ. ಒಂದೂವರೆ ಎಕರೆ ಭೂಮಿ ಹೊಂದಿದ್ದ ರೈತ ಸುಶೀಲ್ ಕಾಜಲ್ ಕಳೆದ 9 ತಿಂಗಳಿಂದ ನಡೆಯುತ್ತಿರುವ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಲ್ ಟೋಲ್ ಪ್ಲಾಝಾದಲ್ಲಿ ಶನಿವಾರ ನಡೆದ ಪ್ರತಿಭಟನೆ ಸಂದರ್ಭ ಪೊಲೀಸರ ಲಾಠಿ ಪ್ರಹಾರದಿಂದ ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ …

Read More »

ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು

ಮೈಸೂರು : ರಾಜ್ಯದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ್ದಂತ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ.   ಇಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕೆ ಬೇಡಿಕೆ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ ಮಾಡಿದೆ. ಉದ್ಯೋಗ ಸೃಷ್ಟಿ ಶೇ.50 ತೆರಿಗೆ ವಿನಾಯಿತಿ ಬೆಂಗಳೂರು ಮಟ್ಟದ ನಗರ ಸೌಲಭ್ಯ ನಗರದಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆ ಮುಕ್ತ ಆಡಳಿತ ವ್ಯವಸ್ಥೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿ ಮಹಾನಗರಪಾಲಿಕೆ ಚುನಾವಣೆಗೆ ಪಕ್ಷದ ಚಿನ್ಹೆಯ ಮೇಲೆ ಸ್ಪರ್ಧಿಸುವುದಾಗಿ ಮೊದಲು ಘೋಷಿಸಿದ್ದೇನೆ ನಾನು ಎಂದು ತಿಳಿಸಿದರು. ನಾವು ನೂರಾರು ಆಶ್ವಾಸನೆ ನೀಡುವುದಿಲ್ಲ. ಆದರೆ ಜನರಿಗೆ ನೆಮ್ಮದಿಯ …

Read More »

ಮಿಸ್ಟರ್‌ ಫರ್ಫೆಕ್ಟ್‌ ʼMS ಧೋನಿʼ ವಿಶ್ವದ 2ನೇ ಶ್ರೀಮಂತ ಕ್ರಿಕೆಟಿಗ : ತಿಂಗಳಿಗೆ ʼಮಾಹಿʼ ಗಳಿಸುವುದೆಷ್ಟು ಗೊತ್ತಾ?

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 2020ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ʼನಿಂದ ನಿವೃತ್ತರಾಗಿರಬಹುದು. ಆದ್ರೆ, ಇದು ಕ್ರಿಕೆಟಿಗನ ಜನಪ್ರಿಯತೆ, ಅಭಿಮಾನಿಗಳು, ಅನುಯಾಯಿಗಳ ಮೇಲೆ ಪರಿಣಾಮ ಬೀರಿಲ್ಲ. ಹಾಗಾಗಿನೇ ಇವ್ರು ಇನ್ನೂ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿ ಉಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ಮುನ್ನಡೆಸುತ್ತಿರುವ ಧೋನಿ, ಜಾಹೀರಾತುಗಳು ಮತ್ತು ಪ್ರೋಮೋಗಳನ್ನ ಒಳಗೊಂಡ ಲೀಗ್ʼನ ಫೇಸ್‌ ಆಗಿದ್ದಾರೆ. ಇನ್ನು ವಿಶ್ವದಾದ್ಯಂತ ಲೀಗ್ʼನ ಬೆಳವಣಿಗೆ ಮತ್ತು …

Read More »

ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು

ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಶಾಪವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿ ದೊರೆತು ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಿದೆ. ರಾಜ್ಯದಲ್ಲಿ …

Read More »

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಸಚಿವ ಈಶ್ವರಪ್ಪ ಭೇಟಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿನೋಬ ನಗರದಲ್ಲಿನ ನಿವಾಸಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಚರ್ಚಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ತವರು ಜಿಲ್ಲೆಗೆ ಬಂದಿರುವ ಯಡಿಯೂರಪ್ಪ ಅವರ ಜತೆ ಉಪಾಹಾರ ಸೇವಿಸುತ್ತಾ ಅರ್ಧ ತಾಸು ಮಾತುಕತೆ ನಡೆಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಮ್ಮ ಗಮನಕ್ಕೆ ತಾರದೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೇರವಾಗಿ ಹಣ ಬಿಡುಗಡೆ ಮಾಡಿದ್ದಾರೆ ಎಂದು …

Read More »

ಹಿಂದಿನಿಂದ ಬಂದು ಯುವತಿಗೆ ಮುತ್ತಿಟ್ಟು ಓಡಿದ ಯುವಕ:

ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪ್ರಾಪ್ತೆ ದೊಡ್ಡಮ್ಮನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, …

Read More »

ಮೈಸೂರು ಗ್ಯಾಂಗ್​ರೇಪ್​ ಪ್ರಕರಣ: ಭಯಾನಕವಾಗಿದೆ ಆರೋಪಿಗಳ ಹಿನ್ನೆಲೆ, ದುಷ್ಕೃತ್ಯವೇ ಇವರ ಫುಲ್​ ಟೈಂ ಕೆಲ್ಸ!

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣದ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇನ್ನೊರ್ವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಈಗಾಗಲೇ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಬಂಧಿತರೆಲ್ಲರೂ ತಮಿಳುನಾಡಿನ ತಿರುಪ್ಪೂರ್ ಹಾಗೂ ಸೂಸೈಪುರಂ ಗ್ರಾಮದವರಾಗಿದ್ದು, ಆರೋಪಿಗಳನ್ನು ಭೂಪತಿ, ಜೋಸೆಫ್​, ಮುರುಗೇಶನ್​ ಮತ್ತು ಪ್ರಕಾಶ್​ ಎಂದು …

Read More »