ತುಮಕೂರು: 500 ಕೋಟಿ ರೂಪಾಯಿ ಅನುದಾನ ವಿಚಾರವಾಗಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಮತ್ತು ಸಂಸದ ಜಿ.ಎಸ್.ಬಸವರಾಜ್ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಶನಿವಾರ ನಡೆಯಿತು. ಗುಬ್ಬಿ ತಾಲೂಕಿನ ಸಿ. ನಂದಿಹಳ್ಳಿಯಲ್ಲಿ ಬೆಸ್ಕಾಂ ವಿದ್ಯುತ್ ಎಂಎಸ್‌ಎಸ್ ಘಟಕ ಉದ್ಘಾಟನಾ ಸಮಾರಂಭದ ವೇಳೆ ಈ ಘಟನೆ ನಡೆದಿದೆ. ಭಾಷಣ ಮಾಡುವ ವೇಳೆ ಸಂಸದ ಬಸವರಾಜು ಅವರು, ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರದಿಂದ 550 ಕೋಟಿ …
Read More »ಭದ್ರಾ ಮೇಲ್ದಂಡೆ ಶೀಘ್ರದಲ್ಲೇ ರಾಷ್ಟ್ರೀಯ ಯೋಜನೆಯಾಗಲಿದೆ: ಗೋವಿಂದ ಕಾರಜೋಳ
ಚಿತ್ರದುರ್ಗ, ಆಗಸ್ಟ್ 14: “ಮಧ್ಯ ಕರ್ನಾಟಕದ ಬಹು ನಿರೀಕ್ಷಿತ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಕಾಮಗಾರಿ ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ,” ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬೆಂಗಳೂರಿನಿಂದ ದಾವಣಗೆರೆಗೆ ಹೋಗುವ ಮಾರ್ಗ ಮಧ್ಯೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಆಗಬೇಕು ಎನ್ನುವುದು ನಿಮ್ಮ ಆಸೆ ಹಾಗೂ …
Read More »ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ, ಯಾವುದೇ ಸಂದರ್ಭದಲ್ಲಿ ಪತನ:ಸಿದ್ದರಾಮಯ್ಯ
ಗೊಂದಲ ಮುಂದುವರಿದಿದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ. ಯಾವುದೇ ಸಂದರ್ಭದಲ್ಲಿ ಪತನಗೊಳ್ಳುವ ಸಾಧ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ್, ರಾಮದಾಸ ಮತ್ತಿತರ ಶಾಸಕರು ದೆಹಲಿಗೆ ಹೋಗಿ ಬಂದು ಮಾಡುತ್ತಿದ್ದಾರೆ. ಹೀಗಾಗಿ ಈ ಸರ್ಕಾರ ಬಹಳ ದಿನ ಬಾಳುವುದಿಲ್ಲ ಎಂದರು. ಕೋವಿಡ್ ಮೂರನೇ …
Read More »ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಬೆಳಗಾವಿಯ ಖಾಸಗಿ ಹೋಟೆಲ್ ಹಿಂದೂ ಪರಿಷತ್ ಮತ್ತು ಭಜರಂಗ ದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ.
ಬೆಳಗಾವಿಯ ಖಾಸಗಿ ಹೋಟೆಲ್ ಒಂದು ಬಿರಿಯಾನಿ ಜಾಹೀರಾತಿನಲ್ಲಿ ಹಿಂದೂ ಸಂತರಿಗೆ ಅಪಮಾನ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಕ್ರಂ ಆಮ್ಟೆ ಅವರಿಗೆ ದೂರು ಸಲ್ಲಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೋಟೆಲ್ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾಹಿರಾತು ವಿವಾದ ಸೃಷ್ಟಿಸುತ್ತಿದ್ದಂತೆಯೇ ಪೋಸ್ಟ್ ಡಿಲೀಟ್ ಮಾಡಿ, ಹೊಟೆಲ್ ಕ್ಷಮೆಯಾಚಿಸಿದೆ. …
Read More »ಅಧಿವೇಶನ ಬೆಂಗಳೂರಲ್ಲಿಯೋ ಅಥವಾ ಬೆಳಗಾವಿಯಲ್ಲಿಯೋ ಎಂಬುದನ್ನೂ ಸರ್ಕಾರ ತಿಳಿಸಲಿದೆ.
ಬೆಂಗಳೂರು: “ರಾಜ್ಯಸಭೆಯಲ್ಲಿ ಈಚೆಗೆ ನಡೆದ ಘಟನೆ ಅತ್ಯಂತ ವಿಷಾದಕರ. ಹೊಣಗೇಡಿತನದಿಂದ ವರ್ತಿಸಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು’ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯಸಭೆ ಸಭಾಪತಿ ಹಾಗೂ ಲೋಕಸಭಾಧ್ಯಕ್ಷರನ್ನು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಗಳು ಪ್ರಜಾಪ್ರಭುತ್ವದ ದೇಗುಲಗಳು. ಅಲ್ಲಿ ಈ ರೀತಿ ಬೇಜವಾಬ್ದಾರಿತನದಿಂದ ನಡೆದುಕೊಳ್ಳುವುದು ಅಕ್ಷಮ್ಯ. ಆದ್ದರಿಂದ ಈ ಸಂಬಂಧ ಕ್ರಮಕ್ಕೆ ಆಗ್ರಹಿಸಿ ಸಭಾಪತಿ ಹಾಗೂ ಸಭಾಧ್ಯಕ್ಷರು ಇಬ್ಬರಿಗೂ ಪತ್ರ ಬರೆಯಲಾಗುವುದು. ಅಗತ್ಯಬಿದ್ದರೆ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು …
Read More »ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್ ವಿರುದ್ದ ಮಾತ್ರ ಎಂದ ಈಶ್ವರಪ್ಪ
ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ …
Read More »ರೋಗಗ್ರಸ್ಥ ನಿಗಮಗಳನ್ನು ಲಾಭದತ್ತ ಕೊಂಡೊಯ್ಯಲು ಸಚಿವ ಮುರುಗೇಶ್ ನಿರಾಣಿ ಯೋಜನೆ
ಬೆಂಗಳೂರು: ರೋಗಗ್ರಸ್ಥ ನಿಗಮಗಳಲ್ಲಿ ಬಂಡವಾಳವನ್ನು ಹಿಂತೆಗೆದುಕೊಂಡು ಪುನಶ್ಚೇತನಗೊಳಿಸಿ ಲಾಭದತ್ತ ಕೊಂಡೊಯ್ಯಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಸಿಮೆಂಟ್ ಕಾರ್ಪೋರೇಷನ್, ಮೈಶುಗರ್, ಮೈಸೂರು ಪೇಪರ್ ಮಿಲ್ಸ್ ಸೇರಿದಂತೆ ಹಲವಾರು ನಿಗಮಗಳು ಮತ್ತು ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ತಾವು ಎರಡು ದಿನಗಳ ಹಿಂದೆ ದೆಹಲಿಗೆ …
Read More »ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿ ಮತ್ತೆ ರಾಜಮನೆತನದ ವಶಕ್ಕೆ
ಬೆಂಗಳೂರು- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಾವಿರಾರು ಎಕರೆ ಭೂಮಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ಕೈ ಚೆಲ್ಲಿದೆ. ಮೈಸೂರಿನ ಸರ್ವೆ ನಂಬರ್ 4 ರ ಭೂಮಿ ಸ್ವಾಮ್ಯತೆಯ ಬಿ ಖರಾಬ್ ನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಮೂಲಕ ಮೈಸೂರು ರಾಜ ಮನೆತನ ಸೇರಿದಂತೆ ಅಲ್ಲಿನ ಭೂ ಮಾಲೀಕರು ಕಾನೂನು ಹೋರಾಟದಲ್ಲಿ ಜಯ ಗಳಿಸಿದ್ದಾರೆ. ಮೈಸೂರಿನ ಸರ್ವೆ ನಂಬರ್ 4 ಮಾತ್ರವಲ್ಲದೆ, ಚೌಡಳ್ಳಿ ಸರ್ವೆ …
Read More »ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ ಭಾರತ ಮಾತೆ ಉಳಿಸಿಕೊಳ್ಳಬಹುದು: ಸಿಟಿ ರವಿಗೆ ಎಚ್ಡಿಕೆ ತಿರುಗೇಟು
ರಾಮನಗರ: ಮೊದಲು ನಮ್ಮ ಕನ್ನಡ ತಾಯಿ ಉಳಿಸಿಕೊಂಡರೆ, ಭಾರತ ಮಾತೆಯನ್ನು ಉಳಿಸಿಕೊಳ್ಳಬಹುದು ಎನ್ನುವ ಮೂಲಕ ಮೇಕೆದಾಟು ವಿಚಾರದಲ್ಲಿ ನಾನು ಭಾರತದ ಪರ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇಕೆದಾಟು ವಿಚಾರವಾಗಿ ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಅಲ್ಲದೆ, ಮುಖ್ಯಮಂತ್ರಿಗಳ ಬಳಿ ಸಮಯ …
Read More »ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ಇತರರಿಗೂ ಕರೆ ಕೊಡುತ್ತೇನೆ: ಸಿಎಂ ಬೊಮ್ಮಾಯಿ
ಉಡುಪಿ: ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು …
Read More »
Laxmi News 24×7