ರಾಜಕೀಯ

ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಯೋಚಿಸಿಲ್ಲ : ಗೋವಾ ಸಿಎಂ ಸಾವಂತ್

ಪಣಜಿ : ಗೋವಾದಲ್ಲಿ ಕೊವಿಡ್ ಎರಡನೇಯ ಅಲೆಯ ವೇಗ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಕುರಿತಂತೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ಬಗ್ಗೆ ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕೋವಿಡ್ ಎರಡನೇಯ ಅಲೆ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಯಶಸ್ವಿಯಾಗುವ ಮಾರ್ಗದಲ್ಲಿದೆ. ರಾಜ್ಯದಲ್ಲಿ …

Read More »

ಕತ್ತಿಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

ಬೆಂಗಳೂರು: ಮನೆ ಬಳಿ ನಿಂತಿದ್ದ ವೃದ್ಧೆಯ ಮಾಂಗಲ್ಯ ಸರ ಎಗರಿಸಿದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಸಾಸುವೆಘಟ್ಟದ ಬಳಿ ನಡೆದಿದೆ. 2 ಲಕ್ಷ ರೂಪಾಯಿ ಬೆಲೆಬಾಳುವ ಗಂಗಮ್ಮ(60) ನವರ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಡಿಯೋ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ …

Read More »

ಅಂತಾರಾಜ್ಯ ಡ್ರಗ್ಸ್‌ ಪೆಡ್ಲರ್‌ ಗಳ ಬಂಧನ

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಗಾಂಜಾ, ಎಂಡಿಎಂಎ ಸೇರಿ ವಿವಿಧ ಮಾದರಿಯ ಡ್ರಗ್ಸ್‌ಗಳನ್ನು ತಂದು ನಗರದಲ್ಲಿ ವಿದ್ಯಾರ್ಥಿಗಳು,ಟೆಕ್ಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಪೆಡ್ಲರ್‌ ಗಳನ್ನು ಪಶ್ಚಿಮ ವಿಭಾಗದ ಸಿ.ಟಿ.ಮಾರು ಕಟ್ಟೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪಪ್ಪುರಾಮ್‌ ಅಲಿಯಾಸ್‌ ಪಪ್ಪು (20), ಚುನ್ನಿಲಾಲ್‌ ಅಲಿಯಾಸ್‌ ಸುನೀಲ್‌ (20) ಬಂಧಿತರು. ಇಬ್ಬರು ಅತ್ತಿಬೆಲೆಯಲ್ಲಿ ವಾಸವಾಗಿದ್ದರು. ಆರೋಪಿಗಳಿಂದ ಎರಡು ಕೋಟಿ ರೂ. ಮೌಲ್ಯದ ಒಂದುಕೆ.ಜಿ.820 ಗ್ರಾಂ ಬ್ರೌನ್‌ ಶುಗರ್‌, 859 ಗ್ರಾಂ ಎಂಡಿಎಂಎ, …

Read More »

ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ

ನವದೆಹಲಿ/ಬೆಂಗಳೂರು: ಕೃಷಿ ಸಚಿವಬಿ.ಸಿ.ಪಾಟೀಲ್ ನವದೆಹಲಿಯಲ್ಲಿ ಮಂಗಳವಾರ ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕೇಂದ್ರದ ರಾಜ್ಯ ರಾಸಾಯನಿಕ ಸಚಿವ ಭಗವಂತ್ ಖೂಬಾ ಅವರನ್ನು ಭೇಟಿ ಮಾಡಿ, ರಾಜ್ಯದ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು. ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ನಿರೀಕ್ಷೆ ಮೀರಿ ಸುಮಾರು 77 ಲಕ್ಷ ಹೆಕ್ಟೇರ್ ದಾಖಲೆಯ ಪ್ರಮಾಣದಷ್ಟು ಬಿತ್ತನೆ ಆಗಿತ್ತು. ಈ ಬಾರಿಯೂ ಕೂಡ ಬೇಗನೇ ಬಿತ್ತನೆಯಾಗಿದ್ದು,ಕೃಷಿ ಚಟುವಟಿಕೆ ಚುರುಕು ಪಡೆದಿದೆ. …

Read More »

ನನಗೆ ವಯಸ್ಸಾದ ಕಾರಣ ರಾಜಕೀಯ ಬಿಟ್ಟಿರುವೆ: ಮಾಜಿ ಸಿಎಂ ಎಸ್.ಎಂ ಕೃಷ್ಣ

ಮದ್ದೂರು : ನನಗೆ ವಯಸ್ಸಾಗಿದೆ ಆದ ಕಾರಣ ರಾಜಕಾರಣವನ್ನು ಬಿಟ್ಟಿದ್ದೇನೆ ಹಾಗೂ ರಾಜಕಾರಣದಿಂದ ದೂರವಿದ್ದು, ಬಹಳ ವರ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ರವರು ತಿಳಿಸಿದರು. ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಉಗ್ರನರಸಿಂಹಸ್ವಾಮಿ ದೇವಸ್ಥಾನ ಹಾಗೂ ತಾಲ್ಲೂಕಿನ ಶ್ರೀ ವೈಧ್ಯನಾಥೇಶ್ವರ ದೇವಸ್ಥಾನಗಳಿಗೆ ಬೇಟಿ ನೀಡಿ ದೇವರ ದರ್ಶನ ಪಡೆದ 89 ವರ್ಷ ವಯಸ್ಸಿನ ಎಸ್‌ಎಂ ಕೃಣ್ಣ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸುಮಾರು …

Read More »

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ

ಮೈಸೂರು: ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಎನ್.ಎಂ.ನವೀನ್‌ ಕುಮಾರ್‌ ಬಿಡುಗಡೆ ಮಾಡಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಈ ವೇಳೆ ನವೀನ್‌ ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಲ್ಲಿ ನಡೆದಂತಹ ಅಭಿವೃದ್ಧಿ ಪರ್ವ ನ ಭೂತೋ ನ ಭವಿಷ್ಯತಿ ಎಂಬಂತಿದೆ ಎಂದು ಸ್ಮರಿಸಿದರು. ಬಿಜೆಪಿ ಸರ್ಕಾರದವರು ಯಾವುದೇ ಅಭಿವೃದ್ಧಿ ಕಾರ್ಯ …

Read More »

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಾಜಪೇಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದು ಬಿಜೆಪಿ ಸರ್ಕಾರ ಯಾವುದೇ ಸರ್ಕಾರ ಬಂದರೂ ವ್ಯಕ್ತಿಯ ಹೆಸರಿಡುವ ಪದ್ಧತಿಯನ್ನು ಬಿಟ್ಟು ಮುಖ್ಯಮಂತ್ರಿ ಅಥವಾ ಪ್ರಧಾನ ಮಂತ್ರಿ ಯೋಜನೆ ಅಂತ ಹೆಸರಿಟ್ಟರೆ ಯಾವುದೇ ಸರ್ಕಾರ ಸಿಎಂ ಬಂದರೂ ಅದು ಮುಂದುವರೆಯುತ್ತದೆ ಎಂದರು. ಹಿಂದುಗಳಿಗೆ ಶ್ರಾವಣ …

Read More »

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಸಂದಿರುವ ಈ ಸಂದರ್ಭ ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಅದರಂತೆ ಎಲ್ಲ ರಾಜ್ಯ ಸರಕಾರಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲು ಸೂಚಿಸಿದೆ. ಆದರೆ, ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಯಾವುದೇ ಯೋಜನೆ ರೂಪಿಸಿಕೊಳ್ಳಲು ಮುಂದಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಅಮೃತ ಮಹೋತ್ಸವ ಆಚರಣೆ ಸಂಬಂಧ ಸಚಿವ ಸಂಪುಟದ ಉಪ ಸಮಿತಿ ರಚನೆ, ವರ್ಷ …

Read More »

ಆನಂದ್‌ ಸಿಂಗ್‌, ಎಂಟಿಬಿ ನಾಗರಾಜ್‌ ಅತೃಪ್ತಿ ಬೆನ್ನಲ್ಲೇ ಈಗ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅತೃಪ್ತರ ಗುಂಪಿಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಎದ್ದಿರುವ ಅಸಮಾಧಾನ ಸದ್ಯಕ್ಕೆ ಶಮನವಾಗುವ ಸಾಧ್ಯತೆ ಕಾಣುತ್ತಿಲ್ಲ. ಆನಂದ್‌ ಸಿಂಗ್‌, ಎಂಟಿಬಿ ನಾಗರಾಜ್‌ ಅತೃಪ್ತಿ ಬೆನ್ನಲ್ಲೇ ಈಗ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅತೃಪ್ತರ ಗುಂಪಿಗೆ ಸೇರಿದ್ದಾರೆ. ತಮ್ಮ ಕುಟುಂಬದವರಿಗೆ ಸಚಿವ ಸ್ಥಾನ ನೀಡದೇ ಇರುವುದಕ್ಕೆ ಅಸಮಾಧಾನಗೊಂಡು, ವರಿಷ್ಠರ ಭೇಟಿಗಾಗಿ ನವದೆಹಲಿಗೆ ತೆರಳಿದ್ದಾರೆ. ಹಾಗೆಯೇ ಮಾಜಿ ಸಚಿವ ಯೋಗೇಶ್ವರ್‌ ಕೂಡ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಪ್ರಯತ್ನ ಮಾಡುತ್ತಿದ್ದು, ಇದುವರೆಗೂ …

Read More »

ಇನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿಗಿಲ್ಲ ಜಾಗ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ …

Read More »