ಕಾರವಾರ ; ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆಗೆ ಜಿಲ್ಲೆಯ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಅಥ್ಲೆಟಿಕ್ ಕೋಚ್ ಕಾಶೀನಾಥ ನಾಯ್ಕ ಅವರ ಶ್ರಮ ಅಪಾರವಾದುದು. ಕಾಶೀನಾಥ ಅವರು ಭಾರತೀಯ ಅಥ್ಲೆಟಿಕ್ಸ್ ತಂಡದ ತರಬೇತುದಾರರಾಗಿದ್ದರು. ಈ ವೇಳೆ ಎರಡು ವರ್ಷಗಳ ಕಾಲ ನೀರಜ್‍ಗೆ ತರಬೇತಿ ನೀಡಿದ್ದ ಅವರು ಜಾವೆಲಿನ್ ಎಸೆತದ ಉತ್ಕೃಷ್ಟ ಕೌಶಲಗಳನ್ನು ಹೇಳಿಕೊಟ್ಟಿದ್ದರು.ಭಾರತೀಯ ಸೈನ್ಯದಲ್ಲಿರುವ ನೀರಜ್ …
Read More »ಬೇಕಾದ್ರೆ ಅರೆಸ್ಟ್ ಮಾಡಿ.. ಅಂಗಡಿ ಬಂದ್ ಮಾಡೋದಿಲ್ಲ : ರಾಜ್ಯ ಸರ್ಕಾರದ ‘ರೂಲ್ಸ್’ಗೆ ವ್ಯಾಪಾರಿಗಳ ಸೆಡ್ಡು.!
ಮೈಸೂರು : ಜಿಲ್ಲೆಯಲ್ಲಿ ಅವೈಜ್ಞಾನಿಕವಾಗಿ ಕೊರೋನಾ ವೀಕ್ ಎಂಡ್ ರೂಲ್ಸ್ ಅನ್ನು ಜಾರಿಗೊಳಿಸಲಾಗಿದೆ. ಮೈಸೂರು ಪ್ರವಾಸಿಗರ ನಗರ, ಗಡಿ ಭಾಗದಿಂದ ನಗರ ದೂರವೇ ಇದೆ. ಹೀಗಿದ್ದೂ ಕೊರೋನಾ ವೀಕೆಂಡ್ ರೂಲ್ಸ್ ಅನ್ನು ಸರ್ಕಾರ ಜಾರಿಗೊಳಿಸಿದೆ. ಇದಕ್ಕೆ ನಮ್ಮ ವಿರೋಧವಿದೆ. ಬೇಕಾದ್ರೆ.. ನೀವು ನಮ್ಮನ್ನು ಅರೆಸ್ಟ್ ಮಾಡಿ.. ಅಂಗಡಿ ಬಂದ್ ಮಾಡೋದಿಲ್ಲ ಎಂಬುದಾಗಿ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ವ್ಯಾಪಾರಿಗಳು ಸೆಡ್ಡು ಹೊಡೆದಿದ್ದಾರೆ. ಇಂದು ಮೈಸೂರಿನ ಸಂಘ ಸಂಸ್ಥೆಗಳ …
Read More »ಕೋವಿಡ್ ಮೂರನೇ ಅಲೆ ಆತಂಕ; ಸರಳವಾಗಿ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ
ಬೆಂಗಳೂರು: ಕೋವಿಡ್ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯೋತ್ಸವನ್ನ ಈ ಬಾರಿ ಸರಳವಾಗಿ ಆಚರಿಸಲು ಬಿಬಿಎಂಪಿ ನಿರ್ಧರಿಸಿದೆ. ಅದರಂತೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗಳ ಬಗ್ಗೆ ಸಭೆ ನಡೆಯಲಿದೆ. ಸಭೆಯಲ್ಲಿ ವಲಯವಾರು ಬಿಬಿಎಂಪಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸೋಂಕು ಹರಡದಂತೆ ಸರಳವಾಗಿ ಯಾವ ರೀತಿ ಆಚರಿಸಬೇಕು. …
Read More »ಎಸ್ಎಸ್ಎಲ್ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟ
ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್ಎಸ್ಎಲ್ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್ಗಳಿಗೆ ನೇರವಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಅಂದು ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.
Read More »ಚಿನ್ನ ಖರೀದಿಗೆ ಒಳ್ಳೆ ಅವಕಾಶ; ಆಗಸ್ಟ್ 7ರಂದು ಭಾರೀ ಇಳಿಕೆಯಾಗಿದೆ ಬೆಲೆ
ನವದೆಹಲಿ, ಆಗಸ್ಟ್ 07: ಭಾರತೀಯ ಮಾರುಕಟ್ಟೆಯಲ್ಲಿ ಆಗಸ್ಟ್ ತಿಂಗಳ ಮೊದಲ ವಾರವಿಡೀ ಚಿನ್ನದ ವಹಿವಾಟು ನಿರಂತರ ಕುಸಿತ ಕಂಡಿದ್ದು, ಆಗಸ್ಟ್ 7ರ ಶನಿವಾರ ಕೂಡ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹಬ್ಬದ ಸಮಯ ಹತ್ತಿರ ಬರುತ್ತಿದ್ದು, ಚಿನ್ನ ಖರೀದಿಸಲು ಗ್ರಾಹಕರಿಗೆ ಇದು ಉತ್ತಮ ಅವಕಾಶವೂ ಆಗಿದೆ. ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಶನಿವಾರ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಬೆಳ್ಳಿ ಬೆಲೆ ಕೂಡ ಸತತ ಇಳಿಕೆಯಾಗಿದೆ. ಶನಿವಾರದ ಈ …
Read More »ಈ ಬಾರಿಯೂ ಸರಳ ದಸರಾ ಆಚರಣೆಗೆ ಚಿಂತನೆ: ಎಸ್.ಟಿ. ಸೋಮಶೇಖರ್
ಮೈಸೂರು, ಆಗಸ್ಟ್ 7: “ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ,” ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸೋಮಶೇಖರ್ …
Read More »ಬಿಎಸ್ವೈ-ಬೊಮ್ಮಾಯಿ ಇಬ್ಬರೂ ನನಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಎಂಟಿಬಿ ನಾಗರಾಜ್ ಆಕ್ರೋಶ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು. ಇದೀಗ ಎಂಟಿಬಿ ನಾಗರಾಜ್ ಕೂಡ ಇದೇ ಹಾದಿ ತುಣಿದಿದ್ದು, ಇನ್ನೆರಡು ದಿನದಲ್ಲಿ ಮುಂದಿನ ನಿರ್ಧಾರ ಪ್ರಕಟಿಸುವೆ ಎಂದು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ. ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ …
Read More »ಜೋಗ: ಅಧಿಕಾರಿಗಳ ಹಾಗೂ ಪ್ರವಾಸಿಗರ ಸಂಘರ್ಷ
ಕಾರ್ಗಲ್: ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ದೃಢೀಕರಣ ಕಡ್ಡಾಯಗೊಳಿಸಿರುವ ಜಿಲ್ಲಾಧಿಕಾರಿ ಆದೇಶ ಶುಕ್ರವಾರ ಸಂಘರ್ಷಕ್ಕೆ ಕಾರಣವಾಗಿತ್ತು. ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಪ್ರವಾಸಿಗರು, ‘ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಎಲ್ಲಿಯೂ ಮುಂಚಿತವಾಗಿ ಮಾಹಿತಿ ನೀಡಿಲ್ಲ. ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುವ ಆಶಯದಿಂದ ನೂರಾರು ಕಿ.ಮೀ. ದೂರದಿಂದ ನಿರೀಕ್ಷೆಯೊಂದಿಗೆ ಬರುವ ನಮಗೆ ನಿರಾಸೆ ಮೂಡಿಸಿದಂತಾಗಿದೆ. …
Read More »ಸಾಹುಕಾರರ ಅನ್ನದಾನ ಕಾರ್ಯಕ್ರಮ ಇಂದು ಗೋಕಾಕ ತಾಲೂಕಿನ ಖನಗಾವ ಗ್ರಾಮದಲ್ಲಿ…
ಗೋಕಾಕ: ಪ್ರತಿ ಶನಿವಾರ ದಂತೆ ಈ ಒಂದು ವಾರ ಕೂಡ ನಮ್ಮ ಸಂತೋಷ್ ಜಾರಕಿಹೊಳಿ ಅವರ ತಂಡ ಇಂದು ಗೋಕಾಕ ತಾಲೂಕಿನ ಮತ್ತೊಂದು ಹಳ್ಳಿಗೆ ಅನ್ನ ಪ್ರಸಾದ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿ ಕೊಂಡಿತ್ತು ಇಂದು ಗೋಕಾಕ ತಾಲೂಕಿನ ಖನಗಾವಿ ಕನ್ನಮ್ಮ ದೇವಸ್ಥಾನದಲ್ಲಿ ಈ ಒಂದು ಅನ್ನ ಸಂತರ್ಪಣೆ ನಡೆಯಿತು. ಇದು ಗೋಕಾಕ ತಾಲೂಕಿನ ಮೂವತ್ತೆರಡನೆಯ ಹಳ್ಳಿ ಇದು ವರೆಗೆ ಮೂವತ್ತಕ್ಕೂ ಹೆಚ್ಚಿನ ಹಳ್ಳಿ ಗಳಲ್ಲಿ ಈ ಒಂದು ಕಾರ್ಯಕ್ರಮ …
Read More »ಗಡಿಭಾಗಗಳಲ್ಲಿ ದಿಢೀರ್ ಕರ್ಫ್ಯೂ: ತರಕಾರಿಗಳನ್ನು ರಸ್ತೆಗೆ ಎಸೆದು ವ್ಯಾಪಾರಸ್ಥರ ಆಕ್ರೋಶ
ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರೈತರು ಹಾಗು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಲಾಕ್ಡೌನ್ ಸಡಲಿಕೆ ನಂತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವುದರೊಳಗೆ ಮತ್ತೆ ಕರ್ಫ್ಯೂ ಜಾರಿಯಾಗಿದ್ದರಿಂದ ರೈತರು ಮತ್ತು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಮಧ್ಯಾಹ್ನ 2 ಗಂಟೆಯವರೆಗೂ ತರಕಾರಿ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಇದ್ದರೂ ಮಾರ್ಕೆಟ್ಗೆ ಜನ ಬರುತ್ತಿಲ್ಲ ಎಂದು ಗೋಳಾಡುತ್ತಿರುವ ವ್ಯಾಪಾರಸ್ಥರು, ದಿಢೀರ್ ಕರ್ಫ್ಯೂನಿಂದ ವಹಿವಾಟು ಬಂದ್ ಆಗಿದೆ ಎನ್ನುತ್ತಿದ್ದಾರೆ. ಇನ್ನು ಕಲಬುರಗಿ …
Read More »
Laxmi News 24×7