ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. …
Read More »ಕುಡಿದ ಅಮಲಿನಲ್ಲಿ ಟೋಲ್ ಅನ್ನೆ ಗುದ್ದಿಕೊಂಡು ಹೋದ ಲಾರಿ ಚಾಲಕ: ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ದೇವನಹಳ್ಳಿ: ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 07 ರಲ್ಲಿ ಆಗಮಿಸಿದ ಲಾರಿ ಚಾಲಕನೋರ್ವ ಕುಡಿದ ಅಮಲಿನಲ್ಲಿ ಲಾರಿ ನಿಲ್ಲಿಸದೆ ಟೋಲ್ಗೆ ಗುದ್ದಿಕೊಂಡು ಹೋಗುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರ್ ಪೋರ್ಟ್ ರಸ್ತೆಯ ಟೋಲ್ನಲ್ಲಿ ಬೆಂಗಳೂರಿನಿಂದ ದೇವನಹಳ್ಳಿ ಕಡೆ ಖಾಲಿ ಲಾರಿಯೊಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದೆ. ಶುಲ್ಕ ವಸೂಲಿಗೆ ಅಡ್ಡ ಹಾಕಿದಾಗ, ಚಾಲಕ ಗಾಡಿಯನ್ನು ನಿಲ್ಲಿಸದೆ ಟೋಲ್ಗೆ ಗುದ್ದಿಕೊಂಡು ಹೋಗಿದ್ದಾನೆ. ಎಲ್ಲಾ ವಾಹನಗಳಿಂದ …
Read More »ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ …
Read More »ಕ್ಯೂ ಜಾಸ್ತಿ ಇದ್ದರು ಮೊದಲು ನನ್ನ ಗಾಡಿಗೆ ಪೆಟ್ರೋಲ್ ಹಾಕೆಂದು ಹಲ್ಲೆ..!
ಬೆಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಮೊದಲು ನನ್ನ ಗಾಡಿಗೆ ಪೆಟ್ರೋಲ್ ಹಾಕಬೇಕೆಂದು ಹಲ್ಲೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ. ಹಂಚಿಪುರದ ಪುಂಡರಿಂದ ಈ ಹಲ್ಲೆ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ತುಂಬಾ ಕ್ಯೂ ಇತ್ತು. ಕಾರಣ ಕ್ಯೂನಲ್ಲಿ ಬರದೆ ನನ್ನ ಗಾಡಿಗೆ ಪೆಟ್ರೋಲ್ ಹಾಕಬೇಕೆಂದು ಹಂಚಿಪುರದ ಡೈರಿ ರಾಮಚಂದ್ರಪ್ಪನ ಮಗ ಗುಣ ಎಗರಾಡಿದ್ದನಂತೆ. ಆ ಬಳಿಕ ಮಾತಿಗೆ ಮಾತು ಬೆಳೆದು ಗುಣನಿಂದ ಹಲ್ಲೆ ನಡೆದಿದ್ದು, ಗುಣನ ಜೊತೆಗೆ ಬಿಎಂಟಿಸಿ …
Read More »ಜಿಎಸ್ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ
ದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಅಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಜತೆ ಚರ್ಚೆ ನಡೆಸಿ ಮುಂದಿನ ತಿಂಗಳಿಂದ ರಾಜ್ಯಕ್ಕೆ 1.5 ಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸಲು ಮನವಿ ಸಲ್ಲಿಸಿದ್ದಾರೆ. ಕೊರೊನಾ ಲಸಿಕೆ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿರುವ ಅವರು, ಪ್ರಸ್ತುತ 60ರಿಂದ 65 ಲಕ್ಷ ಡೋಸ್ ಲಸಿಕೆಯಷ್ಟಿರುವ ಪೂರೈಕೆಯನ್ನು 1.5 ಕೋಟಿ ಡೋಸ್ಗೆ ಹೆಚ್ಚಳ ಮಾಡಲು ಬೇಡಿಕೆ ಇಟ್ಟಿದ್ದಾಗಿ …
Read More »ಮಹಿಳೆಯರ ಜೊತೆ ಅಸಭ್ಯ ವರ್ತನೆ; ಸಾರ್ವಜನಿಕರಿಂದ ಧರ್ಮದೇಟು
ರಾಯಚೂರು: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ನಗರದ ಆಶಾಪುರ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಓಡಾಡ್ತಿದ್ದ ಒಂಟಿ ಮಹಿಳೆಯರನ್ನು ಹಿಂಬಾಲಿಸುತ್ತಿದ್ದ ಅಪರಿಚಿತನೋರ್ವ, ಮಹಿಳೆಯರ ಸೀರೆ ಎಳೆಯಲು ಪ್ರಯತ್ನ ಮಾಡ್ತಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡಿದ್ದ ಕೆಲವು ಮಹಿಳೆಯರು ಈತ ಮೇಲೆ ಆರೋಪ ಮಾಡಿದ್ದರು. ವ್ಯಕ್ತಿಯ ಅಸಭ್ಯ ವರ್ತನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ಕೊಟ್ಟು ಪೊಲೀಸರ ವಶಕ್ಕೆ ನೀಡಿದ್ದಾರೆ.
Read More »ಅಕ್ರಮ ಗಣಿಗಾರಿಕೆ ವಿರುದ್ಧ ಅಮಿತ್ ಶಾಗೆ ದೂರು; ತನಿಖೆಗೆ ಒತ್ತಾಯಿಸಿದ ಸುಮಲತಾ
ನವದೆಹಲಿ: ಕೆ.ಆರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸುಮಲತಾ, ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಗೆ ಆಗುತ್ತಿರುವ ಅಪಾಯ, ಸುತ್ತಮುತ್ತಲಿನ ರೈತರು, ಪರಿಸರ, ಅರಣ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ತನಿಖೆಗೆ ಆಗ್ರಹಿಸಿದ್ದಾರೆ. ಕೆ.ಆರ್.ಎಸ್ ಡ್ಯಾಂ ಬಿರುಕು …
Read More »ದೊಡ್ಡ ಗಂಡಾಂತರದ ಬಗ್ಗೆ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಶಾಕಿಂಗ್ ಮಾಹಿತಿ
ಕೋಲಾರ: ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದವರೆಗೆ ಜಲ ಗಂಡಾಂತರವಿದೆ. ದೇಶದಲ್ಲಿ ದೊಡ್ಡ ಅವಘಡ ಉಂಟಾಗಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು ಕೆರೆ ಕಟ್ಟೆಗಳೆಲ್ಲ ತುಂಬಲಿವೆ ಎಂದು ಅವರು ತಿಳಿಸಿದ್ದಾರೆ. ರಾಜಕಾರಣದ ಬಗ್ಗೆ ಆಷಾಢದಲ್ಲಿ ಅಶುಭ ಹೇಳುವುದು ಬೇಡ. ಪೂರ್ಣ ಪ್ರಮಾಣದ ಮಂತ್ರಿಮಂಡಲ ರಚನೆಯಾದ ನಂತರ, ಕಾರ್ತಿಕಮಾಸ ಕಳೆದ ನಂತರ ಹೇಳುತ್ತೇನೆ. ಕೊರೋನಾ …
Read More »ಬಿ ಎಸ್ ವೈ ಬಿಜೆಪಿಯಲ್ಲಿಯೇ ಇದ್ದವರು. ಅವರ ಮಾತನ್ನೇ ಕೇಳಿಲ್ಲ, ಇನ್ನು ಜನತಾದಳದಿಂದ ಬಿಜೆಪಿಗೆ ಹೋದ ಬೊಮ್ಮಾಯಿ ಮಾತು ಕೇಳ್ತಾರಾ?
ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯದ ಮೇಲೆ ಅನ್ಯಾಯವಾದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಹೊಸ ಸಿಎಂ ಬಸವರಾಜ ಬೊಮ್ಮಾಯಿ ಏನು ಮಾಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ವಿಚಾರವಾಗಿ ಮಾತನಾಡುತ್ತಾ, ಕೇಂದ್ರದಿಂದ ಜಿ ಎಸ್ ಟಿ ಪಾಲು ತರಲಾಗಿಲ್ಲ. ಜನರಿಗೆ ಈವರೆಗೆ ಪರಿಹಾರದ ಹಣವೂ ಸಿಕ್ಕಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರಿಂದಲೇ ಏನೂ ಸಾಧ್ಯವಾಗಿಲ್ಲ …
Read More »ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …
Read More »
Laxmi News 24×7