ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. …
Read More »ಬಿಎಸ್ವೈ ನಿರ್ಗಮನದ ಬೆನ್ನಲ್ಲೇ ಕೇಂದ್ರದಿಂದ ರಾಜ್ಯಕ್ಕೆ ₹629.3 ಕೋಟಿ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಇಂದು ಬರೋಬ್ಬರಿ 629.03 ಕೋಟಿ ಹಣವನ್ನ ಪ್ರಕೃತಿ ವಿಕೋಪದ ಪರಿಹಾರವಾಗಿ ಬಿಡುಗಡೆ ಮಾಡಿದೆ. ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನ ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ …
Read More »ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ …
Read More »ತುಂಗಭದ್ರಾ ಜಲಾಶಯದ ಎಲ್ಲಾ ಗೇಟ್ ಓಪನ್ -ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ ಡ್ಯಾಂ
ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಖ್ಯಾತಿ ಪಡೆದ ತುಂಗಭದ್ರಾ ಜಲಾಶಯ ವಿದ್ಯುತ್ ದೀಪಗಳಿಂದ ಕಂಗೊಳಿಸ್ತಿದೆ. ಈಗಾಗಲೇ ತುಂಗಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು. ಡ್ಯಾಂನ 33 ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಹರಿಸಲಾಗ್ತಿದೆ. ಗೇಟ್ ಗಳಿಗೆ ವಿವಿಧ ಬಣ್ಣಗಳ ವಿದ್ಯುತ್ ದೀಪಗಳನ್ನ ಅಳವಡಿಕೆ ಮಾಡಿ, ನೀರಿಗೆ ಬಣ್ಣ ಬಳಿದಂತೆ ಭಾಸವಾಗುತ್ತಿದೆ. ಇನ್ನು ತುಂಗಭದ್ರಾ ಜಲಾಶಯದ ಪಾರ್ಕ್ಗೂ ಜೀವ ಕಳೆ ಬಂದಿದೆ. ಕತ್ತಲಾಗುತ್ತಿಂದೆ ಜಲಾಶಯದ ಸೌಂದರ್ಯ ಜನರನ್ನ …
Read More »ಸಂಸದೀಯ ಮಂಡಳಿಯಲ್ಲೇ ಸಿಎಂ ಹೆಸರು ಫೈನಲ್, ನೆಪ ಮಾತ್ರಕ್ಕೆ ಶಾಸಕಾಂಗ ಸಭೆ
ಬೆಂಗಳೂರು, ಜು.27- ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿರುವುದರಿಂದ ದೆಹಲಿ ವರಿಷ್ಠರೇ ಪಕ್ಷದ ಸಂಸದೀಯ ಮಂಡಳಿಯಲ್ಲೇ ಒಬ್ಬರನ್ನು ಆಯ್ಕೆ ಮಾಡುವುದು ಖಚಿತವಾಗಿದೆ. ಸಿಎಂ ಸ್ಥಾನ ಅಲಂಕರಿಸಲು ಸುಮಾರು ಒಂದು ಡಜನ್‍ಗೂ ಅಧಿಕ ಆಕಾಂಕ್ಷಿಗಳು ಇರುವುದರಿಂದ ಸಂಸದೀಯ ಮಂಡಳಿಯಲ್ಲೇ ಹೆಸರು ಅಂತಿಮಗೊಳಿಸಿ ನೆಪಮಾತ್ರಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ವರಿಷ್ಠರ ಸೂಚನೆಯನ್ನು ವಿಧಿಯಿಲ್ಲದೆ ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಶಾಸಕರ ಅಭಿಪ್ರಾಯದಂತೆ ಶಾಸಕಾಂಗ ಪಕ್ಷದ ನಾಯಕನ್ನು ಆಯ್ಕೆ ಮಾಡಲು ಹೋದರೆ ನೂರೆಂಟು ತಾಪತ್ರಯಗಳು ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರೇ …
Read More »ಕೊಪ್ಪಳದಲ್ಲಿ ಕೊರೊನಾ ಮೂರನೇ ಅಲೆಯ ಮುನ್ಸೂಚನೆ; ಆರು ಮಕ್ಕಳಲ್ಲಿ ಕೊರೊನಾ ಸೋಂಕು ಧೃಡ
ಕೊಪ್ಪಳ: ಕೊರೊನಾ ಮೂರನೇ ಅಲೆಯ ಭೀತಿ ಹೆಚ್ಚುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಎಲ್ಲೆಡೆ ಕಟ್ಟುನಿಟ್ಟಾದ ಕ್ರಮಗಳನ್ನು ಮತ್ತೆ ಜಾರಿಗೊಳಿಸಬೇಕಾದ ಅನಿವಾರ್ಯತೆ ಕಾಣಿಸುತ್ತಿದೆ. ಅನ್ಲಾಕ್ ನಂತರ ಜನ ಸಂಪೂರ್ಣ ಮೈಮರೆತು ಮೋಜು ಮಸ್ತಿಯಲ್ಲಿ ತೊಡಗಿರುವುದರಿಂದ ಮೂರನೇ ಅಲೆ ಕಟ್ಟಿಟ್ಟ ಬುತ್ತಿ ಎನ್ನುವಂತಾಗಿದೆ. ಹೀಗಿರುವಾಗಲೇ ಕೊಪ್ಪಳದಲ್ಲಿ ಆರು ಮಕ್ಕಳಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಮತ್ತಷ್ಟು ಆತಂಕಕ್ಕೆ ಗುರಿ ಮಾಡಿದೆ. ಕೊಪ್ಪಳದ ಅಮೂಲ್ಯ ದತ್ತು ಕೇಂದ್ರದಲ್ಲಿನ ಆರು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ದತ್ತು ಕೇಂದ್ರದ …
Read More »ಮಂಗಳವಾರ ಸಂಜೆ 7 ಘಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಖಾಸಗಿ ಹೋಟೆಲ್‌ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ನಲ್ಲಿ ನಡೆಯಲಿರುವ …
Read More »ಸಂಕಷ್ಟಗಳನ್ನು ಮೆಟ್ಟಿನಿಂತು ಶಿಕ್ಷಕಿಯಾದ ಯುವತಿಗೆ ರಾಜಭವನಕ್ಕೆ ಆಹ್ವಾನಿಸಿದ ರಾಜ್ಯಪಾಲರು..!
ಕುಮಿಲಿ: ಅನೇಕ ಸಂಕಷ್ಟಗಳನ್ನು ಮೆಟ್ಟಿ ನಿಂತು ಹೈಸ್ಕೂಲ್ ಶಿಕ್ಷಕಿಯಾದ ಕೇರಳದ ಛೋಟ್ಟುಪರಾ ನಿವಾಸಿ ಸೆಲ್ವಮರಿಯನ್ನು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅಭಿನಂದಿಸಿದ್ದು, ರಾಜಭವನಕ್ಕೆ ಆಹ್ವಾನಿಸಿದ್ದಾರೆ. ಬಾಲ್ಯದ ದಿನಗಳಿಂದಲೂ ಸೆಲ್ವಮರಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ರಜಾದಿನಗಳಲ್ಲಿ ತಮ್ಮ ತಾಯಿಯ ಜತೆ ಏಲಕ್ಕಿ ತೋಟದಲ್ಲಿ ಕೆಲಸ ಮಾಡಿಕೊಂಡು ಕುಟುಂಬಕ್ಕೆ ಆಧಾರವಾಗಿ ನಿಲ್ಲುತ್ತಿದ್ದ ಸೆಲ್ವಮರಿ, ಕೆಲಸದ ನಡುವೆಯೂ ಓದಿನಲ್ಲೂ ಶ್ರಮವಹಿಸಿ ಇಂದು ಹೈಸ್ಕೂಲ್ ಶಿಕ್ಷಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಟುಂಬದ ಸಂಕಷ್ಟಗಳನ್ನು ಇನ್ನಷ್ಟು ದೂರ …
Read More »1000ಕ್ಕೆ ಏರಿಕೆಯಾಗುತ್ತಾ ಲೋಕಸಭೆ ಕ್ಷೇತ್ರಗಳ ಸಂಖ್ಯೆ..?
ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಹೊಸ ಬಾಂಬ್ ಸಿಡಿಸಿದ್ದಾರೆ. ಸೆಂಟ್ರಲ್ ವಿಸ್ತಾದ ಹೊಸ ಸಂಸತ್ನಲ್ಲಿ ಲೋಕಸಭೆಯಲ್ಲಿ 1000 ಸೀಟುಗಳು ಇರಲಿವೆ ಅಂತ ನನಗೆ ಬಿಜೆಪಿ ಮೂಲಗಳಿಂದಲೇ ಮಾಹಿತಿ ಬಂದಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಲೋಕಸಭೆ ಸೀಟುಗಳ ಸಂಖ್ಯೆಯನ್ನು 1000ಕ್ಕೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕಳ್ಳುವ ಸಾಧ್ಯತೆ ಇದೆ ಅಂತ ತಿಳಿಸಿದ್ದಾರೆ. ಜೊತೆಗೆ ಸಂಸತ್ನಲ್ಲಿ ಹೊಸ ಸಂಸತ್ನ ಕಟ್ಟಡ ವಿನ್ಯಾಸದ ಯೋಜನೆಯನ್ನು ಸಂಸತ್ನಲ್ಲಿ ಮಂಡಿಸಬೇಕು.. ಒಂದು ವೇಳೆ …
Read More »ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಲಿದೆಯೇ ಒಲಾ ಸ್ಕೂಟರ್ ?
ಬೆಂಗಳೂರು ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಿರುವ ಈ ಸಮಯದಲ್ಲಿ ಜನರು ಹೆಚ್ಚಾಗಿ ಎಲೆಕ್ಟ್ರಿಕ್ ವಾಹನಗಳ ಕಡೆಗೆ ದೃಷ್ಟಿ ಹಾಯಿಸುತಿದ್ದಾರೆ. ಇದೀಗ ದೇಶದ ಪ್ರಮುಖ ಆನ್ ಲೈನ್ ಕಾರು ಬುಕಿಂಗ್ ಸಂಸ್ಥೆ ಓಲಾ ಬೆಂಗಳೂರು ಸಮೀಪದ ಹೊಸೂರಿನಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಣಾ ಘಟಕವನ್ನು ಆರಂಬಿಸಿದ್ದು ಇನ್ನೆರಡು ತಿಂಗಳಿನಲ್ಲಿ ಸ್ಕೂಟರ್ ಗಳು ರಸ್ತೆಗಿಳಿಯಲಿವೆ. ಈ ಸ್ಕೂಟರ್ ಒಂದು ಛಾರ್ಜಿಗೆ 240 ಕಿಲೋ ಮೀಟರ್ ಮೈಲೇಜ್ ಕೊಡುತ್ತದೆ ಎಂದು ತಿಳಿದು ಬಂದಿದ್ದು …
Read More »
Laxmi News 24×7