ಕೆಎಎಸ್ ಅಧಿಕಾರಿಗಳಾದ ಎಂ. ಕೆ.ಜಗದೀಶ್ ಮತ್ತು ಬಸವರಾಜ್ ಅವರನ್ನು ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಹುದ್ದೆಗಳಿಗೆ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಗರದ ವಕೀಲ ವಾಸುದೇವ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ‘ಐಎಎಸ್ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶನ ನೀಡಿದೆ. ‘ಕರ್ನಾಟಕ ಭೂಕಂದಾಯ …
Read More »ನಟಿ ಶಿಲ್ಪಾ ಶೆಟ್ಟಿ ಪತಿ, ರಾಜ್ ಕುಂದ್ರ ಪೋರ್ನ್ ಜಗತ್ತಿನ ಮಾಸ್ಟರ್ ಮೈಂಡ್; ಪೂನಂ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಂಧನದ ಬಳಿಕ ಅಡಲ್ಟ್ ಸ್ಟಾರ್ ಪೂನಂ ಪಾಂಡೆ ಹೇಳಿಕೆ ವೈರಲ್ ಆಗುತ್ತಿದೆ. 2019ರಲ್ಲಿ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದ ಪೂನಂ, ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ ಬಾಲಿವುಡ್ ನಲ್ಲಿ ವೈರಲ್ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಬ್ಲೂ ಫಿಲ್ಮ್ ದಂಧೆಯ ಹಿಂದೆ ಬಿದ್ದಿದ್ದ ಮುಂಬೈ …
Read More »ಬೆತ್ತಲೆಯಾಗಿ ಆಡಿಷನ್ ನೀಡಲು ಕೇಳಿದ್ದ: ರಾಜ್ ಕುಂದ್ರಾ ವಿರುದ್ಧ ಬಾಂಬ್ ಸಿಡಿಸಿದ ನಟಿ
ಅಶ್ಲೀಲ ವಿಡಿಯೋ ನಿರ್ಮಾಣ ಹಾಗೂ ಪ್ರದರ್ಶನ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನವಾಗಿದ್ದು, ಪ್ರಕರಣ ಸಂಬಂಧ ಹಲವು ಕುತೂಹಲಕಾರಿ ಅಂಶಗಳು ಹೊರಗೆ ಬರುತ್ತಿವೆ. ನಟಿ ಸಾಗರಿಕಾ ಸುಮನ್ ಮಾತನಾಡಿ, ”ರಾಜ್ ಕುಂದ್ರಾ, ಬೆತ್ತಲೆಯಾಗಿ ಆಡಿಷನ್ ನೀಡುವಂತೆ ಕೇಳಿದ್ದ” ಎಂದಿದ್ದಾರೆ. ”2020ರ ಆಗಸ್ಟ್‌ನಲ್ಲಿ ನನಗೆ ವೆಬ್ ಸರಣಿಯೊಂದರಲ್ಲಿ ನಟಿಸಲು ಅವಕಾಶ ಬಂತು. ರಾಜ್ ಕುಂದ್ರಾ ಸಂಸ್ಥೆಯ ವ್ಯವಸ್ಥಾಪಕ ಉಮೇಶ್ ಕಾಮತ್ ನನಗೆ ಕರೆ ಮಾಡಿದರು. ನನಗೆ ವಿಡಿಯೋ ಕಾಲ್‌ನಲ್ಲಿ …
Read More »ಧುಮುಕುತ್ತಿರುವ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಯುವಕರ ಹುಚ್ಚು ಸಾಹಸ
ಕಲಬುರಗಿ: ಮುಂಗಾರಿನ ಅಬ್ಬರ ಮಳೆಯಿಂದ ಭೋರ್ಗರೆಯುತ್ತಿದ್ದ ಜಲಪಾತದಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಂಕಷ್ಟಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಣೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಎತ್ತಿಪೋತ ಜಲಪಾತ ಬಳಿ ನಡೆದಿದೆ. ಸತತವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭರ್ಜರಿ ಮಳೆಗೆ ಎತ್ತಿಪೋತ ಜಲಪಾತ ಧುಮುಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿದೆ. ಹೀಗೆ ಮೈದುಂಬಿ ಹರಿಯುತ್ತಿರುವ ಜಲಪಾತ ನೋಡಲು ತೆರಳಿದ್ದ ಯುವಕರಿಬ್ಬರು ಸೆಲ್ಫಿ ತೆಗೆಯುವ ದುಸ್ಸಾಹಸಕ್ಕೆ ಮುಂದಾಗಿ ನೀರಿಗಿಳಿದಿದ್ದರು. ಆದರೆ ಜಲಪಾತದ ರಭಸಕ್ಕೆ …
Read More »‘ಪರೀಕ್ಷೆ ರದ್ದು ಮಾಡಿ’ ಅಂತ ವಿಶ್ವವಿದ್ಯಾಲಯದ ಮುಂದೆಯೇ ಪ್ರತಿಭಟನೆಗೆ ಕುಳಿತ ಸ್ಟುಡೆಂಟ್ಸ್
ದಾವಣಗೆರೆ: ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ದಾವಣಗೆರೆಯ ವಿಶ್ವ ವಿದ್ಯಾಲಯದಲ್ಲಿ ನಡೆದಿದೆ. ಇತ್ತೀಚೆಗೆ ವಿಶ್ವ ವಿದ್ಯಾಲಯ ಸ್ನಾತಕೋತ್ತರ ಮತ್ತು ಪದವಿ ಪರೀಕ್ಷೆಯ ವೇಳಾ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಸದ್ಯ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಆದರೆ ಯಾವುದೇ ಕ್ಲಾಸ್ ನಡೆಸದೇ ಕೇವಲ ಎರಡು ತಿಂಗಳ ಆನ್ಲೈನ್ ಕ್ಲಾಸ್ ಮಾಡಿದ್ದು ಮತ್ತು ಎರಡು ತಿಂಗಳ ಅಂತರದಲ್ಲಿ ಎರಡು ಸೆಮ್ ಗಳ ಪರೀಕ್ಷೆ ನಡೆಸುತ್ತಿರೋದಕ್ಕೆ …
Read More »ಪೊಲೀಸ್ ಮಕ್ಕಳ ಅಧ್ಯನಕ್ಕೆ ಗ್ರಂಥಾಲಯ
ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಮೈದಾನದ ಕಟ್ಟಡದಲ್ಲಿ ಪೊಲೀಸ್ ಸಿಬ್ಬಂದಿ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ನೂತನ ಗ್ರಂಥಾಲಯ ತೆರೆಯಲಾಗಿದೆ. ಕನ್ನಡ, ಇಂಗ್ಲೀಷ ಭಾಷೆಯಲ್ಲಿರುವ 750 ಪುಸ್ತಕಗಳು ಲಭ್ಯವಿದ್ದು, ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಯೋಗದಲ್ಲಿ ಆರಂಭಿಸಲಾಗಿದೆ. ಐಎಎಸ್, ಕೆಪಿಎಸ್, ಪಿಡಿಒ ಸೇರಿದಂತೆ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಯ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳು ಇಲ್ಲಿವೆ. ಏಕಕಾಲದಲ್ಲಿ 25 ಮಂದಿ ಕೂತು ಅಧ್ಯಯನ ನಡೆಸಲು ಅನುಕೂಲವಾಗುವಂತೆ …
Read More »ಬಾಯ್ಫ್ರೆಂಡ್ ಜೊತೆ ಸೇರಿ ಗಂಡನನ್ನೇ ಕೊಂದು, ಸುಟ್ಟುಹಾಕಿದ ಹೆಂಡತಿ; 10 ವರ್ಷಗಳ ಬಳಿಕ ಸೆರೆ ಸಿಕ್ಕ ಹಂತಕಿ
ನವದೆಹಲಿ: ಆಕೆ ಇನ್ನೂ ಕಾಲೇಜಿನ ಮೆಟ್ಟಿಲೇರಿದ ದಿನಗಳವು. ಚೆನ್ನಾಗಿ ಓದಿ, ಒಳ್ಳೆಯ ಕೆಲಸ ಹಿಡಿದು, ತಾನಿಷ್ಟ ಪಟ್ಟ ಹುಡುಗನೊಂದಿಗೆ ಮದುವೆಯಾಗಬೇಕೆಂಬ ಆಸೆ ಆಕೆಗಿತ್ತು. ಆದರೆ, ಮನೆಯಲ್ಲಿ ಆಕೆಗೆ ಇಷ್ಟವಿಲ್ಲದಿದ್ದರೂ 18ನೇ ವಯಸ್ಸಿಗೆ ಮದುವೆ ಮಾಡಿದ್ದರು. ಆದರೆ, ಆಕೆಯ ಮನಸಿನಲ್ಲಿ ಆತನಿಗೆ ಜಾಗವಿರಲಿಲ್ಲ. ಹೀಗಾಗಿ, ತನ್ನ ಬಾಯ್ಫ್ರೆಂಡ್ ಜೊತೆ ಸೇರಿ ಗಂಡನನ್ನು ಕೊಲೆ (Murder) ಮಾಡಿದ್ದ ಆಕೆ ಆತನ ಶವವನ್ನು (Dead Body) ಸುಟ್ಟು ಹಾಕಿದ್ದಳು. ಅದೆಲ್ಲ ಆಗಿ ಬರೋಬ್ಬರಿ 10 …
Read More »ಬೆಳಗಾವಿ ಜಿಲ್ಲಾ ಪೋಲೀಸರು ಬಕ್ರೀದ್ ಹಬ್ಬದ ಮುನ್ನಾದಿನ 209 ಆಕಳು ಕರುಗಳನ್ನು ರಕ್ಷಿಸಿದ್ದಾರೆ
ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …
Read More »ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ: ಮಠಾಧೀಶರು ವರಿಷ್ಠರಿಗೆ ಎಚ್ಚರಿಕೆ
ಸಿಎಂ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿ ಬದಲಿಸಿದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ಮಠಾಧೀಶರು ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಚರ್ಚೆ ಬೆನ್ನಲ್ಲೇ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಯಡಿಯೂರಪ್ಪನವರನ್ನು ಭೇಟಿಯಾದ ಸ್ವಾಮೀಜಿಗಳ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ದಿಂಗಾಲೇಶ್ವರ ಶ್ರೀಗಳು, ಯಡಿಯೂರಪ್ಪನವರನ್ನು ಬದಲಾವಣೆ ಮಾಡಿದರೆ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »
Laxmi News 24×7