ನಗರದಲ್ಲಿ ಖಾಕಿ ಪಡೆಯ ಡ್ರಗ್ಸ್ ಜಾಲದ ಬೇಟೆ ಮುಂದುವರೆದಿದೆ. ಇತ್ತೀಚೆಗೆ ಹೆಚ್ಚುತ್ತಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲಿಸ್ ಪಡೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಅದರ ಪರಿಣಾಮವಾಗಿ ದಿನವೂ ನಗರದಲ್ಲಿ ಬಹಳಷ್ಟು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಪೊಲೀಸರು ಮಾದಕ ವಸ್ತುಗಳ ಸಮೇತ ಆರೋಪಿಗಳನ್ನು ಸೆರೆಹಿಡಿಯುತ್ತಿದ್ದಾರೆ. ಇದೇ ಮಾದರಿಯಲ್ಲಿ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ …
Read More »BIG NEWS: ಕಾಂಗ್ರೆಸ್ ಪಾಳಯದಲ್ಲಿ ಗರಿಗೆದರಿದ ಚಟುವಟಿಕೆ; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಗೆ ರಾಹುಲ್ ಗಾಂಧಿ ಬುಲಾವ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೈ ಶಾಸಕರ ಸಭೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿ ಎಲ್ ಪಿ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದಾರೆ. ದೆಹಲಿಗೆ ಬರುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಬುಲಾವ್ ನೀಡಿದ್ದು, ಹೈಕಮಾಂಡ್ ಆಹ್ವಾನದ ಮೇರೆಗೆ ಇಬ್ಬರು ನಾಯಕರು ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮುಂಬರುವ …
Read More »ಹಸುವಿನ ಹೊಟ್ಟೆಯಲ್ಲಿತ್ತು ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್
ಚಿಕ್ಕಮಗಳೂರು: ಕಡೂರು ತಾಲೂಕಿನ ಪಶುಸಂಗೋಪನೆ ಇಲಾಖೆ ವೈದ್ಯರು ಹಸುವಿನ ಹೊಟ್ಟೆಯಿಂದ ಬರೋಬ್ಬರಿ 21 ಕೆಜಿ ಪ್ಲಾಸ್ಟಿಕ್ ನ್ನು ಹೊರತೆಗೆದಿದ್ದಾರೆ. 3ರಿಂದ 4 ವರ್ಷದ ಹಸುವಿಗೆ ಅನಾರೋಗ್ಯ ಸಮಸ್ಯೆ ಕಾಡಲಾರಂಭಿಸಿತು. ಅದರ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾದಂತೆ ಹೊಟ್ಟೆ ಉಬ್ಬಿದಂತೆ ಕಂಡುಬಂತು. ದೇಹದಲ್ಲಿ ನಿಶ್ಯಕ್ತಿ, ಪೌಷ್ಟಿಕಾಂಶದ ಕೊರತೆಯೂ ಕಂಡುಬಂತು ಎಂದರು. ವೈದ್ಯರ ಬಳಿಗೆ ಹೋಗಿ ತೋರಿಸಿದಾಗ ತಿಂದ ಆಹಾರ ಜೀರ್ಣವಾಗಿಲ್ಲವೆಂದು ಕಂಡುಬಂದು ವೈದ್ಯರು ಸರ್ಜರಿ ಮಾಡಲು ಮುಂದಾದರು. 4 ಗಂಟೆಗಳ ಕಾಲ ನಡೆದ …
Read More »ರಾಜ್ಯಪಾಲರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ
ಬೆಂಗಳೂರು, : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾಜ್ಯಪಾಲರನ್ನು ರಾಜಭವನದಲ್ಲಿ ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ಸಂಸದೆ ಸುಮಲತಾ ಅವರು ಭೇಟಿ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿಯೊಂದನ್ನು ಕೊಟ್ಟಿದ್ದಾರೆ. ಕೆಆರ್‌ಎಸ್ ಅಣೆಕಟ್ಟಿನ ಸುತ್ತಲೂ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಂಸದೆ ಸುಮಲತಾ ಅಂಬರೀಶ್ ಮಾಡಿದ್ದರು. ಆ ಆರೋಪದ ಬೆನ್ನಲ್ಲಿಯೇ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿರುವ ಅವರು, “ರಾಜ್ಯಪಾಲರು ಹೊಸದಾಗಿ …
Read More »ಸಂಚಾರಿ ವಿಜಯ್ ಜನ್ಮದಿನ ಇಂದು- ಅಭಿಮಾನಿಗಳಿಂದ ಸ್ಮರಣೆ
ಬೆಂಗಳೂರು: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ದಿವಂಗತ ಸಂಚಾರಿ ವಿಜಯ್ ಅವರ ಜನ್ಮದಿನ ಇಂದು. ಅವರ ಅಭಿಮಾನಿಗಳು, ಗೆಳೆಯರು ಸಾಮಾಜಿಕ ಜಾಲತಾಣಗಳ ಮುಖಾಂತರ ವಿಜಯ್ ಜೊತೆಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಜೂನ್ 12ರ ರಾತ್ರಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಜೂನ್ 15ರಂದು ಮೃತಪಟ್ಟಿದ್ದರು. ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ವಿಜಯ್, ಅವರ ಏಳು ಅಂಗಾಂಗಳನ್ನು ದಾನ ಮಾಡಲಾಗಿತ್ತು. ನಟರಾದ ನೆನಪಿರಲಿ ಪ್ರೇಮ್, ಲೂಸ್‌ಮಾದ ಯೋಗೇಶ್ ತಮ್ಮ ಗೆಳೆಯನನ್ನು ಸ್ಮರಿಸಿದ್ದಾರೆ. ಐದು ಭಾಷೆಯಲ್ಲಿ …
Read More »ರಾಜೀನಾಮೆ ವದಂತಿ ಅಪ್ಪಟ ಸುಳ್ಳು ; B.S.Y.
ಬೆಂಗಳೂರು : ತಾವು ರಾಜೀನಾಮೆ ನೀಡುವಂತೆ ಹೈಕಮಾಂಡ್ ನನಗೆ ಯಾವುದೇ ಸೂಚನೆಯನ್ನೂ ಸಹ ನೀಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಈ ಸ್ಪಷ್ಟನೆ ನೀಡುವ ಮುನ್ನ ಬಿಜೆಪಿ ಮೂಲಗಳು ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ನೀಡಿದ್ದವು. ಸಿಎಂ ಅವರು ಆರೋಗ್ಯ ಕಾರಣದಿಂದ ರಾಜೀನಾಮೆ ನೀಡುವುದಾಗಿ ಹೇಳಿದ್ದರು ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿತ್ತು. ಆದರೆ ಪಕ್ಷ ಸೂಚಿಸಿದರೆ ಮಾತ್ರವೇ ಸಿಎಂ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ …
Read More »ಯಡಿಯೂರಪ್ಪ ದೆಹಲಿಗೆ ಒಯ್ದಿರುವ 6 ಬ್ಯಾಗ್ ರಹಸ್ಯವೇನು?
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ 6 ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಕೊಂಡೊಯ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಆ …
Read More »ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸತೀಶ್ ಜಾರಕಿಹೊಳಿ, ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಈ ಪರೀಕ್ಷೆ ಮಹತ್ವದ ಹೆಜ್ಜೆ
ಗೋಕಾಕ: ಜು. 19 ರಿಂದ ಪ್ರಾರಂಭವಾಗುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ಇಲ್ಲಿನ ಹಿಲ್ ಗಾರ್ಡನ್ ಲ್ಲಿ ಗೃಹಕಚೇರಿಯಲ್ಲಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಕೆಪಿಸಿಸಿಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪರೀಕ್ಷಾ ಕೇಂದ್ರಗಳಿಗೆ ಮಾಸ್ಕ್, ಸ್ಯಾನಿಟೈಸರ್ , ಕೋವಿಡ್ ಜಾಗೃತಿ ಕರಪತ್ರ ಶನಿವಾರ ವಿತರಿಸಿದರು. ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಕೂಡ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.ಈ ಭಾರೀ ಕೂಡ ಯಮಕನಮರಡಿ ಕ್ಷೇತ್ರದ ಶಾಲಾ ಮಕ್ಕಳಿಗೆ …
Read More »ನಾಯಕತ್ವ ಬದಲಾವಣೆ ವಿಚಾರವಾಗಿ ಮಾರ್ಮಿಕ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ
ನಾಲ್ಕನೇ ಅವಧಿಗೆ ಸಿಎಂ ಆಗಿ 2 ವರ್ಷಗಳನ್ನ ಪೂರೈಸಿರುವ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರನ್ನ ಭೇಟಿಯಾದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಊಹಾಪೋಹಗಳು ಕೇಳಿ ಬರ್ತಿರುವ ಬೆನ್ನಲ್ಲೇ ಸಿಎಂ ದೆಹಲಿ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ಸಾಕಷ್ಟು ನಾಯಕರು ದನಿ ಎತ್ತಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಜೊತೆಗೆ ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಸಂಜೆ ಪ್ರಧಾನಿ ಮೋದಿಯನ್ನ …
Read More »ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್
ಕೋಲ್ಕತ್ತಾ: ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಎಸ್ಪ್ಲನಡೆ ಬಸ್ ಟರ್ಮಿನಸ್ನಲ್ಲಿದ್ದ ಆರೋಪಿಯನ್ನು ಚಂದನ್ ರಾಯ್ (38) ಎಂದು ಗುರುತಿಸಲಾಗಿದೆ. ಆತ ಡಮ್ ಡಮ್ ಪ್ರದೇಶದ ನಿವಾಸಿ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಸಂಸದರಿಗೆ ಅಪರಿಚಿತ ಸಂಖ್ಯೆಯಿಂದ ಕರೆ …
Read More »
Laxmi News 24×7