Breaking News

ರಾಜಕೀಯ

ವಿಜಯಪುರ ಕಲ್ಲು ಗಣಿಗಾರಿಕೆ ಸ್ಫೋಟಕ ಪ್ರಕರಣ ತನಿಖೆ ನಡೆಯುತ್ತಿದೆ : ನಿರಾಣಿ

ವಿಜಯಪುರ : ಗುರುವಾರ ಸಂಜೆ ವಿಜಯಪುರ ನಗರದ ಹೊರ ವಲಯದಲ್ಲಿನ ಕಲ್ಲು ಗಣಿಗಾರಿಕೆ ಯಲ್ಲಿ‌ ನಡೆದ ಸ್ಫೋಟದ ದುರಂತದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಗಣಿ- ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ಶುಕ್ರವಾರ ದುರಂತ ನಡೆದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ‌ ಮಾತನಾಡಿದ ಅವರು, ಅಲಿಯಾಬಾದ್, ಐನಾಪುರ …

Read More »

ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಆಪ್ತ ಸೊಮು ನ್ಯಾಮಗೌಡ ನ್ಯಾಯಾಂಗ ಬಂಧನ

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಬಿಐ ವಶಕ್ಕೆ ಪಡೆದಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈಗಾಗಲೇ ಹಲವು ಬಾರಿ ಸೋಮು ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಗುರುವಾರ ಬೆಳಗ್ಗೆ ಗದಗದಲ್ಲಿ ನ್ಯಾಮಗೌಡ ಅವರನ್ನು ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ಗೆ ಒಳಪಡಿಸಲಾಗಿತ್ತು. ಶುಕ್ರವಾರ …

Read More »

ಇದೇ 25ರಂದು ಕೆ-ಸೆಟ್ ಪರೀಕ್ಷೆ

 ಕೊರೊನಾ ಹಿನ್ನೆಲೆ ಮುಂದೂಡಲಾಗಿದ್ದ ಕೆ-ಸೆಟ್( ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ)ಯನ್ನು ಇದೇ ತಿಂಗಳ 25ರಂದು ನಡೆಯಲಿದೆ. ಮರುದಿನ ನಿಗದಿ ಮಾಡಿ ಮೈಸೂರು ವಿವಿ ಪ್ರಕಣೆಯಲ್ಲಿ ತಿಳಿಸಿದೆ. ಈ ಹಿಂದೆ ಏಪ್ರಿಲ್ 11ರಂದು ಕೆ-ಸೆಟ್ ಪರೀಕ್ಷೆಯನ್ನು ನಿಗದಿ ಮಾಡಲಾಗಿದ್ದು. ಕೋವಿಡ್ 2ನೇ ಅಲೆಯಿಂದಾಗಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶ ಹೊರಡಿಸಿತ್ತು. ಇದೀಗ ಜುಲೈ 25ರಂದು ಪರೀಕ್ಷೆ ನಡೆಯಲಿದೆ ಎಂದು ಮೈಸೂರು ವಿವಿ ತಿಳಿಸಿದೆ.

Read More »

“ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ

ದೇಶದ 75ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ, ರಸ್ತೆ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಶಾಸಕರಾದ ಶ್ರೀ ಅಭಯ್ ಪಾಟೀಲ್ ಅವರೊಂದಿಗೆ “ರಸ್ತೆ ಬದಿಯಲ್ಲಿ ಸಸ್ಯೀಕರಣ” ಕಾರ್ಯಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯೋಗಿತಾ ಪರಶುರಾಮ, ಗ್ರಾ.ಪಂ. ಸದಸ್ಯರಾದ ಶ್ರೀ ಅಶೋಕ ರುದ್ರೇಗೌಡ ಪಾಟೀಲ್, ಶ್ರೀ ಕೊನೇರಿ ಬಸವಂತ, ಶ್ರೀ ಮನೋಹರ …

Read More »

ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ! : ಮಂಗಳಾ ಅಂಗಡಿ

ಇಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ, ಕೋವಿಡ್ 19 ಉಚಿತ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆನು. ಪ್ರತಿಯೊಬ್ಬ ನಾಗರಿಕರೂ ಕೋವಿಡ್ ಲಸಿಕೆ ಪಡೆದು, ದೇಶವನ್ನು ಕೊರೋನಾ ಸೋಂಕು ಮುಕ್ತ ಮಾಡಲು ಕೈಜೋಡಿಸುವಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ವಿನಯ್ ಕದಮ್, ಬೆಳಗುಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾ ಹದಗಲ್, ಉಪಾಧ್ಯಕ್ಷರಾದ ಶ್ರೀ ಬಾಲು …

Read More »

ಪುನೀತ್ ‘ಜೇಮ್ಸ್’ ಸಿನಿಮಾದಲ್ಲಿ ‘ಘಟೋತ್ಕಚ’ ಖ್ಯಾತಿಯ ಕೇತನ್

ಪವರ್ ಸ್ಟಾರ್ ರಾಜ್ ಕುಮಾರ್ ಸದ್ಯ ಜೇಮ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮತ್ತಷ್ಟು ತಡವಾಗಿದೆ. ಇದೀಗ ಪವರ್ ಸ್ಟಾರ್ ಲಾಕ್ ಡೌನ್ ಮುಗಿಸಿ ಮತ್ತೆ ಚಿತ್ರೀಕರಣಕ್ಕೆ ಹಾಜರಾಗಿದ್ದಾರೆ. ಚೇತನ್ ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಜೇಮ್ಸ್ ಪಕ್ಕಾ ಆಕ್ಷನ್ ಸಿನಿಮಾವಾಗಿದ್ದು, ಹೈ ವೋಲ್ಟೇಜ್ ಆಕ್ಷನ್ ದೃಶ್ಯಗಳು ಚಿತ್ರದಲ್ಲಿದೆ. ಜುಲೈ 5ರಿಂದ ಚಿತ್ರೀಕರಣ …

Read More »

ವಂಚನೆ ಪ್ರಕರಣ: ಸಲ್ಮಾನ್ ಖಾನ್‌ಗೆ ಪೊಲೀಸರಿಂದ ಸಮನ್ಸ್

ನಟ ಸಲ್ಮಾನ್ ಖಾನ್ ಹಾಗೂ ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿ ಸೇರಿ ಒಂಬತ್ತು ಮಂದಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಸಲ್ಮಾನ್ ಖಾನ್ ‘ಬೀಯಿಂಗ್ ಹ್ಯೂಮನ್’ ಹೆಸರಿನ ಎನ್‌ಜಿಒ ನಡೆಸುತ್ತಿದ್ದು, ‘ಬೀಯಿಂಗ್ ಹ್ಯೂಮನ್’ ಹೆಸರಿನ ಬ್ರ್ಯಾಂಡ್‌ ಅಡಿಯಲ್ಲಿ ಉತ್ಪನ್ನಗಳ ಮಾರಾಟ ಸಹ ಮಾಡುತ್ತಿದ್ದಾರೆ. ಬೀಯಿಂಗ್ ಹ್ಯೂಮನ್ ಕುರಿತಾಗಿಯೇ ಚಂಡೀಗಢದ ಅರುಣ್ ಗುಪ್ತಾ ಎಂಬುವರು, ಸಲ್ಮಾನ್ ಖಾನ್, ಬೀಯಿಂಗ್ ಹ್ಯೂಮನ್ ಸಂಸ್ಥೆಯ ಸಿಇಒ, ಸಲ್ಮಾನ್ ಖಾನ್ …

Read More »

ಹಿಂದಿ ಸಿನಿಮಾರಂಗಕ್ಕೆ ನಾಗಚೈತನ್ಯ ಎಂಟ್ರಿ; ಆಮೀರ್ ಖಾನ್ ಜೊತೆ ನಟನೆ

ತೆಲುಗು ಸಿನಿಮಾರಂಗದ ಖ್ಯಾತ ನಟ ನಾಗ ಚೈತನ್ಯ ಹಿಂದಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಾಗ ಚೈತನ್ಯ ಹಿಂದಿ ಸಿನಿಮಾದ ಬಗ್ಗೆ ಅನೇಕ ತಿಂಗಳಿಂದ ಚರ್ಚೆ ನಡೆಯುತ್ತಿತ್ತು. ಇದೀಗ ನಾಗ ಚೈತನ್ಯ ಅಧಿಕೃತವಾಗಿ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ನಾಗಚೈತನ್ಯ ನಟಿಸುತ್ತಿರುವುದು ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಸಿನಿಮಾದಲ್ಲಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತಿಗಳಿಸಿರುವ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾದ …

Read More »

ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅಮಾನತು

ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ವಿರುದ್ಧ ಲಂಚ ಕೇಳಿದ್ದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. 2005-06 ರಲ್ಲಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚೆಲುವರಾಜ್ ಕರ್ತವ್ಯ ಲೋಪ ಮಾಡಿದ್ದರು ಎಂಬ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ.   ಮಂಡ್ಯದಲ್ಲಿ ಕೆಲಸ ಮಾಡುತ್ತದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು ಎನ್ನಲಾಗಿದೆ. …

Read More »

ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಮಾತು ಖಂಡಿಸಿ ಕಾಪು ಬಂಟರ ಸಂಘದ ವತಿಯಿಂದ ದೂರು

ಕಾಪು : ಪ್ರತಿಭಾನ್ವಿತ ನಟ ಮತ್ತು ನಿರ್ದೇಶಕ, ತುಳುನಾಡಿನ ಹೆಮ್ಮೆಯ ಕಲಾವಿದ ರಕ್ಷಿತ್ ಶೆಟ್ಟಿ ಅಲೆವೂರು ಅವರ ಕುರಿತಾಗಿ ಖಾಸಗಿ ಟಿವಿ ಮಾಧ್ಯಮದಲ್ಲಿ ಅವಹೇಳನಕಾರಿ ಮತ್ತು ಹೀನಾಯವಾಗಿ ನಿಂದಿಸಿರುವ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಾಪು ಬಂಟರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಕಾಪು ಬಂಟರ ಸಂಘದ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ತಳುನಾಡಿನ ಅದ್ಭುತ ಪ್ರತಿಭೆಯಾಗಿರುವ …

Read More »