ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್‌ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್‌ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …
Read More »ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ
ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್ 100ರ ಗಡಿ ದಾಟಿದೆ. …
Read More »ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು
ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …
Read More »ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರೇನು ಮಾಡಿಯಾರು?: ಸತೀಶ್ ಜಾರಕಿಹೊಳಿ
ಬೆಳಗಾವಿ: ‘ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು?’. ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಗಂಟೆಗೆ 50 ಕಿ.ಮೀ. ವೇಗದಲ್ಲಿ ಓಡುತ್ತಿತ್ತು. ಈಗ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ಮುಂದೆ ಗಂಟೆಗೆ 30 ಕಿ.ಮೀ. ವೇಗದಲ್ಲಿ ಹೋಗಲಿದೆ. ಮೀರಜ್‌ನಿಂದ ಪಂಢರಪುರಕ್ಕೆ ಮೆರವಣಿಗೆ …
Read More »ಅಕ್ರಮ ಕಲ್ಲು ಗಣಿಗಾರಿಕೆಗೆ ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ ಆರೋಪ
ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಇಂದಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ನಿರ್ಮಾಣದ ಹಿಂದೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಮುಂತಾದ …
Read More »ಶಾಸಕಿ ರೂಪಾಲಿ ನಾಯ್ಕ ಮೇಲಿನ ಪರ್ಸೆಂಟೇಜ್ ಆರೋಪ ನಿರಾಧಾರ: ಕಾರವಾರ ಬಿಜೆಪಿ
ಕಾರವಾರ: 150 ಕೋಟಿ ರೂ. ವೆಚ್ಚದ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ರಾಜಕಾರಣಿಯೋರ್ವರು ಪರ್ಸಂಟೇಜ್ ಕೇಳುತ್ತಿರುವ ಕಾರಣ ಕಾಮಗಾರಿ ನೆನಗುದಿಗೆ ಬಿದ್ದಿದೆ ಎಂದು ಹೇಳಿರುವ ಮಾಜಿ ಸಚಿವರ ಹೇಳಿಕೆಗೆ ಶಾಸಕಿ ರೂಪಾಲಿ ನಾಯ್ಕರೇ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ ಅವರ ಆರೋಪ ಆಧಾರ ರಹಿತವಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ್ ನಾಯ್ಕ ಹೇಳಿದ್ದು, ಮಾಧವ ನಾಯ್ಕ ಸುಳ್ಳು ಹೇಳುತ್ತಿದ್ದಾರೆಂದು ಟೀಕಿಸಿದರು. ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ …
Read More »ರೇಣುಕಾಚಾರ್ಯಗೆ ಇಷ್ಟೆಲ್ಲಾ ಸಿಕ್ಕಿದೆ ಎಂದರೆ ಅದರ ಹಿಂದೆ ನನ್ನ ಶ್ರಮವಿದೆ: ಯೋಗೇಶ್ವರ್
ರಾಮನಗರ: ರೇಣುಕಾಚಾರ್ಯ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾನೆ. ಬೆಂಗಳೂರಿನಲ್ಲಿ ಐಷಾರಾಮಿ ಮನೆ ಸಿಕ್ಕಿದೆ. ಆತನ ಕ್ಷೇತ್ರಕ್ಕೆ ಸರ್ಕಾರದಿಂದ ಸಾವಿರಾರು ಕೋಟಿ ರೂ. ಸಿಕ್ಕಿದೆ ಎಂದರೆ ಅಲ್ಲಿ ನನ್ನ ಶ್ರಮವಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ರಾಮನಗರ ತಾಲೂಕಿನ ಬಿಡದಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರೇಣುಕಾಚಾರ್ಯ ಅರೋಪಕ್ಕೆ ಏಕವಚನದಲ್ಲಿ ಪ್ರತಿಕ್ರಿಯೆ ನೀಡಿದರು. ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ನನ್ನ ನಿಲುವನ್ನು ಆಗಾಗ ವ್ಯಕ್ತ ಪಡಿಸುತ್ತೇನೆ. ಲೋಪಗಳ ಬಗ್ಗೆ ಗಟ್ಟಿಯಾಗಿ …
Read More »ಪಿಎಚ್‍ಸಿ ದುರಸ್ತಿಗೆ ಕ್ರಮ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಹೊಸ ಕಟ್ಟಡಗಳಿಗೆ ಅನುದಾನ ಬಿಡುಗಡೆಯಾಗಲು ಸ್ವಲ್ಪ ಮಟ್ಟಿಗೆ ವಿಳಂಬವಾಗುತ್ತಿರುವುದರಿಂದ …
Read More »ಧಾರವಾಡ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ
ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ. ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು. ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ …
Read More »ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಎನ್ ಒ2 ಪ್ರಮಾಣ ಹೆಚ್ಚಳ
ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ ಏಕಾ ಏಕಿ ಹೆಚ್ಚಿದೆ. ಕಾರ್ಖಾನೆಗಳ ಕೆಲಸ ಆರಂಭವಾಗುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿದೆ. ಈ ಕುರಿತು …
Read More »
Laxmi News 24×7