ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್ ಪರಿವರ್ತಕಗಳಿಗೆ …
Read More »ಲಾಕ್‌ಡೌನ್ ಸಡಿಲಿಕೆ : ಜುಲೈ 5 ರಿಂದ ವಂಡರ್‌ಲಾ ಪ್ರಾರಂಭ
ಬೆಂಗಳೂರು: ಲಾಕ್‌ಡೌನ್ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್‌ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್‌ಲಾ ಹಾಲಿಡೇಸ್ ತಿಳಿಸಿದೆ. ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ನಿಂದಾಗಿ ವಂಡರ್‌ಲಾ ಪಾರ್ಕ್‌ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್‌ಗಳಿಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್‌ಲಾ ವ್ಯವಸ್ಥಾಪಕ …
Read More »ಹಾವನ್ನು ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೊರಟ
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »UNLOCK 3.0 : ಪಬ್ ಇಲ್ಲ, ಬಾರ್‌ನಲ್ಲಿ ಕೌಂಟರ್ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್‌ವೈ
ಬೆಂಗಳೂರು : ಅನ್‌ಲಾಕ್ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ. ಮಾಲ್ಗಳನ್ನು ಓಪನ್ ಮಾಡಲು, ಬಾರ್ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.
Read More »ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …
Read More »ಕರ್ನಾಟಕ ಪೊಲೀಸರಿಗೆ ತಲೆನೋವಾಯ್ತು ಆಂಧ್ರ-ತೆಲಂಗಾಣ ರೈತರ ಜಗಳ
ರಾಯಚೂರು: ಸುಮಾರು ವರ್ಷಗಳಿಂದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ರಾಜೋಳಿ ಬಂಡಾ ಜಲಾಶಯದ ನೀರು ಹಂಚಿಕೆ ವಿಚಾರವಾಗಿ ಆಂಧ್ರ – ತೆಲಂಗಾಣ ನಡುವೆ ಗಲಾಟೆ ನಡೆಯುತ್ತಲೇ ಇದೆ. ಇಷ್ಟು ದಿನ ರಾಜೋಳಿ ಬಂಡಾ ಜಲಾಶಯದ ನೀರನ್ನು ಕೇವಲ ತೆಲಂಗಾಣಕ್ಕೆ ಮಾತ್ರ ಬಿಡಲಾಗುತ್ತಿತ್ತು. ಈಗ ಆಂಧ್ರದ ರಾಯಲಸೀಮ ಪ್ರದೇಶಕ್ಕೂ ಈ ಜಲಾಶಯದ ನೀರು ಬೇಕು ಎಂಬ ಕೂಗು ಕೇಳಿ ಬಂದಿದೆ. ರಾಜೋಳಿ ಬಂಡಾ ಜಲಾಶಯದ ನೀರನ್ನು ನಮಗೂ ಬಿಡಿ ಎಂದು ಆಂಧ್ರದ …
Read More »ದಯಾ ಮರಣ ಕೋರಿ ಅರ್ಜಿ
ಕುಷ್ಟಗಿ: ಗಂಡ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ದಯಾ ಮರಣಕ್ಕೆ ಅವಕಾಶ ನೀಡಬೇಕು ಎಂದು ತಾಲ್ಲೂಕಿನ ಕಂದಕೂರು ಗ್ರಾಮದ ಈರಮ್ಮ ನಿಂಗಪ್ಪ ಕುರ್ನಾಳ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೆ ಸುಮಾರು 61 ವರ್ಷದ ಅವರು ಶುಕ್ರವಾರ ಬೆಳಗಿನಿಂದ ಗ್ರಾಮದ ಹನುಮಂತ ದೇವರ ದೇವಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಮಹಿಳೆ ಸ್ಥಿತಿ ಗಮನಿಸಿದ ನೆರೆಹೊರೆಯವರು ಅನ್ನ ನೀರು ಕೊಟ್ಟಿದ್ದಾರೆ. ಈ ಕುರಿತು ‘ಪ್ರಜಾವಾಣಿ’ಗೆ ದೂರವಾಣಿ …
Read More »ಶಾಸಕ ಪಿ.ಟಿ. ಪರಮೇಶ್ವರ್ ನಾಯ್ಕ್ ಸೋದರನಿಂದ ಮತ್ತೆ ಗೂಂಡಾಗಿರಿ ಆರೋಪ
ವಿಜಯನಗರ: ಹೂವಿನ ಹಡಗಲಿ ಶಾಸಕ ಪಿ.ಟಿ ಪರಮೇಶ್ವರ್ ನಾಯ್ಕ್ ಸಹೋದರ ಮತ್ತು ಬಿಜೆಪಿ ಮುಖಂಡ ಪಿ.ಟಿ ಶಿವಾಜಿ ನಾಯ್ಕ್ ನಡುವೆ ಮತ್ತೆಗೂಂಡಾಗಿರಿ ಮುಂದುವರಿದಿದೆ ಎನ್ನಲಾಗಿದೆ. ನನ್ನ ಮೇಲೆಯೇ ಕೇಸ್ ಮಾಡ್ತೀಯಾ? ಎಂದು ಶಿವಾಜಿ ನಾಯ್ಕ್ ತನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಾರಂತೆ. ಇಂದು ಬೆಳಿಗ್ಗೆಯೇ ಜೈಲಿನಿಂದ ಬೇಲ್ ಮೇಲೆ ಹೊರ ಬಂದ ಶಿವಾಜಿ ನಾಯ್ಕ್, ದೂರುದಾರರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹರಪನಹಳ್ಳಿ ತಾಲೂಕಿನ …
Read More »ಕೆ-ಸೆಟ್ ಪರೀಕ್ಷೆ: ದಿನ ನಿಗದಿಗೆ ಪರದಾಟ
ಮೈಸೂರು: ಕೋವಿಡ್ ಕಾರಣ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಈಗಾಗಲೇ ಎರಡು ಬಾರಿ ಮುಂದೂಡಿರುವ ಮೈಸೂರು ವಿಶ್ವವಿದ್ಯಾಲಯವು ಹೊಸದಾಗಿ ದಿನಾಂಕ ನಿಗದಿ ಮಾಡಲು ಪರದಾಡುತ್ತಿದೆ. ಸುಮಾರು 85 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಮೂರು ತಿಂಗಳಾಗಿದ್ದು, ಪರೀಕ್ಷೆಯ ದಿನಾಂಕ ಪ್ರಕಟಣೆ ಆಗುವುದನ್ನೇ ಕಾಯುತ್ತಿದ್ದಾರೆ. ಈ ನಡುವೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿಗಾಗಿ ಸದ್ಯದಲ್ಲೇ ಅರ್ಜಿ ಆಹ್ವಾನಿಸುವ ಸೂಚನೆಯನ್ನು ರಾಜ್ಯ ಸರ್ಕಾರ …
Read More »ದಾರಿತಪ್ಪಿ ಪಾಳುಬಾವಿಗೆ ಬಿದ್ದ 80 ವರ್ಷದ ವೃದ್ಧ: ಮೂರು ದಿನಗಳ ಬಳಿಕ ರಕ್ಷಣೆ ಮಾಡಿದ್ದೇ ರೋಚಕ!
ಸಿದ್ದಿಪೇಟೆ: ಜೂನ್ 29 ರಂದು 80 ವರ್ಷದ ನಾರಾಯಣ ಎಂಬುವರು ತೆಲಂಗಾಣದ ಸಿದ್ದಿಪೇಟೆ ಸಮೀಪದ ಗ್ರಾಮವೊಂದರಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಸಿದ್ದಿಪೇಟೆಗೆ ಹಿಂದಿರುಗುವಾಗ ದಾರಿತಪ್ಪಿದ ನಾರಾಯಣ ಜಮೀನಿನಲ್ಲಿದ್ದ ಪಾಳುಬಾವಿಗೆ ಆಕಸ್ಮಿಕವಾಗಿ ಬಿದ್ದು ಮೂರು ದಿನಗಳ ಬಳಿಕ ರಕ್ಷಣೆ ಒಳಗಾದ ಘಟನೆ ನಡೆದಿದೆ. ಬಾವಿಯಲ್ಲಿ ಬಿದ್ದಿದ್ದ ನಾರಾಯಣ ಮೂರು ದಿನಗಳ ಕಾಲ ನೆರವಿಗಾಗಿ ಕೂಗಾಡಿ, ಕಣ್ಣೀರಾಕಿದರು ಯಾರೊಬ್ಬರಿಗೂ ಅವರ ಸುಳಿವು ಸಿಗಲಿಲ್ಲ. ಮೂರು ದಿನಗಳ ಕಾಲವೂ ಊಟ ಇಲ್ಲದೆ ಹಿರಿಯ ಜೀವ ಸಾಕಷ್ಟು …
Read More »
Laxmi News 24×7