Breaking News

ರಾಜಕೀಯ

ಶಿವಮೊಗ್ಗ: ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ಯುವಕರು

ಶಿವಮೊಗ್ಗ: ದರೋಡೆ ಮಾಡಿ ಓಡಿ ಹೋಗುತ್ತಿದ್ದವರನ್ನು ಬೆನ್ನಟ್ಟಿದ ಯುವಕರನ್ನು ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸಿನಿಮೀಯ ಶೈಲಿಯ ಘಟನೆ ನಗರದ ಕುವೆಂಪು ನಗರದಲ್ಲಿ ನಡೆದಿದೆ. ಶಿವಮೊಗ್ಗದ ಕುವೆಂಪು ರಸ್ತೆಯ ನಂದಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಚೇಸ್ ಮಾಡಿದ ಯುವಕರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಡಹಗಲೇ ದರೋಡೆಗೆ ಇಳಿದ ಇಬ್ಬರು ಖದೀಮರು ಸ್ಮಾರ್ಟ್ ಸಿಟಿ ಕಾಮಗಾರಿ ಮಾಡುತ್ತಿದ್ದವರಿಂದ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದರು. ಅಷ್ಟೇ ಅಲ್ಲದೆ …

Read More »

ಪಕ್ಷ ಬಿಟ್ಟು ಹೋದವರು ಬೇಕಾದರೆ ಮತ್ತೆ ಪಕ್ಷ ಸೇರಲು ಅರ್ಜಿ ಹಾಕಬಹುದು: ಡಿ ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದೆಯೋ ಅಂತಹ ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿಗೆ ಹೋದವರು ನಮ್ಮನ್ನು ಸಂಪರ್ಕಿಸಿಲ್ಲ. ಆದರೆ ಅವರೂ ಸೇರಿದಂತೆ ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಬಹುದು. ಸ್ಥಳೀಯ ನಾಯಕರು ಒಪ್ಪಿದರೆ ಅವರನ್ನು ಸೇರಿಸಿಕೊಳ್ಳಲಾಗುವುದು ಎಂದರು. ಯಾರು …

Read More »

ಕಸಾಯಿಖಾನೆಯಿಂದ ಮರಳಿದ ಎತ್ತಿಗೆ ಭರ್ಜರಿ ಬರ್ತ್‌ಡೇ

ಧಾರವಾಡ: ಕಸಾಯಿ ಖಾನೆಯಿಂದ ಮರಳಿ ಮನೆಗೆ ತಂದಿದ್ದ ಎತ್ತಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸುವ ಮೂಲಕ ದೇವರಹುಬ್ಬಳ್ಳಿಯ ಯುವ ರೈತ ಎಲ್ಲರ ಗಮನ ಸೆಳೆದಿದ್ದಾನೆ. 10 ಕೆಜಿ ತೂಕದ ಕೇಕ್‌ನಲ್ಲಿ ಮೈಲಾರಿ ಎಂದು ಎತ್ತಿನ ಹೆಸರು ಬರೆಯಿಸಿ, ಮನೆ ಮುಂದೆ ಪೆಂಡಾಲ್‌ ಹಾಕಿಸಿ, ಇಡೀ ಗ್ರಾಮದ ಜನರಿಗೆ ಸಿಹಿ ಊಟ ನೀಡಿದ ನಾಗಪ್ಪ ಓಮಗಣ್ಣವರ ಎತ್ತಿನ ಹುಟ್ಟುಹಬ್ಬ ಆಚರಿಸಿದ್ದಾನೆ. ಗ್ರಾಮದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಬಸವನ ಹುಟ್ಟು ಹಬ್ಬದಲ್ಲಿ ಭಾಗಿಯಾಗಿ …

Read More »

ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?

ತಿರುವನಂತಪುರಂ: ಕಡಕ್ಕವೂರ್​ ಪೊಕ್ಸೊ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆಂದು ತಪ್ಪಾಗಿ ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್​ ವರದಿ ಮೇಲೆಯೇ ಅನುಮಾನ ಮೂಡಿದೆ. ಸಂತ್ರಸ್ತ ಮಹಿಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣದಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ. ಆದರೆ, ನನ್ನ ಮಗನನ್ನು ಅಪರಾಧಿ ಎಂಬಂತೆ ವರದಿಯಲ್ಲಿ ಬಿಂಬಿಸಲಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸಿದವರ ಬಗ್ಗೆ ವರದಿಯಲ್ಲಿ ಯಾವುದೇ ಉಲ್ಲೇಖ ಇರಲಿಲ್ಲ. ಹೀಗಾಗಿ ಕಡಕ್ಕವೂರ್ ಪೊಲೀಸರ ವಿರುದ್ಧ …

Read More »

ಬಾಂಬೆ ಟೀಂಗೆ ಆಹ್ವಾನ; ಕಾಂಗ್ರೆಸ್ – ಬಿಜೆಪಿಯಲ್ಲಿ ಭಾರಿ ಸಂಚಲನ ತಂದ ಡಿಕೆಶಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷ ಸಂದೇಶ ರವಾನಿಸಿ ಪಕ್ಷಕ್ಕೆ ಸೇರಲು ಆಹ್ವಾನಿಸಿದ್ದಾರೆ. ವಲಸಿಗರು ಕೂಡ ಅರ್ಜಿ ಹಾಕಬಹುದು ಎಂದು ಅವರು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆ ಕಾಂಗ್ರೆಸ್ ಮತ್ತು ಬಿಜೆಪಿ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮುಂಬೈ ಟೀಮ್ ಗೆ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. …

Read More »

ಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ

ಮಂಗಳೂರು, ಜುಲೈ 02; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತಪಡಿಸಲಾಗಿದೆ. ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಆನಿಮಲ್ ಕೇರ್ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ. ಆನಿಮಲ್ ಕೇರ್ ಟ್ರಸ್ಟ್‌ನ ಸದಸ್ಯರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ‌ಬುಲೆಟ್ ಗಾಯ ನಾಯಿಯ ಬೆನ್ನ …

Read More »

ಹಾನಗಲ್ ಉಪ ಚುನಾವಣೆ; ಮಹತ್ವದ ಹೆಜ್ಜೆ ಇಟ್ಟ ಜೆಡಿಎಸ್

ಬೆಂಗಳೂರು, ಜುಲೈ 01; “ಹಾನಗಲ್ ಉತ್ತರ ಕರ್ನಾಟಕದ ಹೆಬ್ಬಾಗಿಲು. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಬಾಗಿಲು ತೆರೆಯುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಗುರುವಾರ ಬೆಂಗಳೂರಿನ ಜೆಪಿ ಭವನದಲ್ಲಿ ಹಾನಗಲ್ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಚ್. ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.   ಸಮಾರಂಭದಲ್ಲಿ ಮಾತನಾಡಿದ …

Read More »

ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ ಫೋಟೋ ಹಾಕಿ ಮರಣಪತ್ರ ನೀಡಿ: ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ

ಮೈಸೂರು,ಜು.1: ಲಸಿಕೆ ಪಡೆದವರಿಗೆ ಪ್ರಧಾನಮಂತ್ರಿ ಭಾವಚಿತ್ರವಿರುವ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ ರೀತಿ ಪ್ರಧಾನಮಂತ್ರಿ ಫೋಟೊ ಹಾಕಿ ಮರಣಪತ್ರ ನೀಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ ನಾಥ್ ವಾಗ್ದಾಳಿ ನಡೆಸಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಸಿಕೆ ನೀಡುತ್ತಿರುವುದು ನಮ್ಮ ತೆರಿಗೆ ಹಣದಲ್ಲಿ ಹೀಗಿರುವಾಗ ನಿಮ್ಮ ಫೋಟೊ ಏಕೆ?. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ …

Read More »

ಕೇಂದ್ರ ಜಿಎಸ್‌ಟಿ ಪರಿಹಾರ ವಂಚಿಸಿರುವಾಗ ರಾಜ್ಯಗಳು ಸಂಭ್ರಮಿಸಬೇಕೆ?: H.D.K.

ಬೆಂಗಳೂರು: ಜಿಎಸ್‌ಟಿ ಜಾರಿಗೆ ಬಂದು 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ …

Read More »

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ. ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ‌ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ. ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು …

Read More »