ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್ನಲ್ಲಿ …
Read More »ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ
ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. …
Read More »ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. …
Read More »ಪಿಗ್ಗಿ ಬ್ಯಾಂಕ್‌ನ ಹಣವನ್ನು ಬಡವರ ಚಿಕಿತ್ಸೆಗೆ ನೀಡಿದ ಪುತ್ತೂರಿನ ಬಾಲೆ
ಮಂಗಳೂರು, ಜುಲೈ 2: ಬಡವರ ಚಿಕಿತ್ಸೆಯ ಖರ್ಚಿಗೆ ತನ್ನ ಪಿಗ್ಗಿ ಬ್ಯಾಂಕ್‌ನ ಹಣವನ್ನು ಆಸ್ಪತ್ರೆಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪುಟ್ಟ ಬಾಲೆ ಮಾದರಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಶಾ, ತನ್ನ ಪಿಗ್ಗಿ ಬ್ಯಾಂಕ್‌ನಲ್ಲಿ ತಾನು ಜತನದಿಂದ ಕಾಪಾಡಿಕೊಂಡು ಬಂದಿದ್ದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಆಸ್ಪತ್ರೆಗೆ ನೀಡಿದ್ದಾಳೆ. ಪುತ್ತೂರಿನ ಖ್ಯಾತ ಸರ್ಜನ್ ಡಾ.ಎಂ.ಕೆ. ಪ್ರಸಾದ್‌ಗೆ ತನ್ನ ಪಿಗ್ಗಿ ಹಣ ನೀಡಿರುವ ದಿಶಾ, ಬಡವರ …
Read More »ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?
ವಿಧಾನಸೌಧ: ತಮ್ಮ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವರು ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ, ನನ್ನ ಬಳಿ ಕೆಲಸಕ್ಕಿದ್ದ ರಾಜಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದೆ, ತನಿಖೆ ಕೂಡ ನಡೆಯುತ್ತಿದೆ, ಹೀಗಾಗಿ ನಾನು ಹೆಚ್ಚಿಗೆ ಮಾತನಾಡಲು, ಪ್ರತಿಕ್ರಿಯೆ …
Read More »ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ ಪ್ರಕರಣ: ಸ್ಪಷ್ಟನೆ ನೀಡಿದ ವಿಜಯೇಂದ್ರ
ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಈ ಬಗ್ಗೆ …
Read More », ಕಾಂಗ್ರೆಸ್‌ನಲ್ಲಿ ಈಗಾಗಲೇ ಹತ್ತು ಜನ ಮುಖ್ಯಮಂತ್ರಿಯಾಗಲು ಸೂಟು-ಬೂಟು ಹೊಲಿಸಿಕೊಂಡು ಕಾದುಕುಳಿತಿದ್ದಾರೆ.: H.D.K.
ಬೆಂಗಳೂರು: “ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಹತ್ತು ಜನ ಮುಖ್ಯಮಂತ್ರಿಯಾಗಲು ಸೂಟು-ಬೂಟು ಹೊಲಿಸಿಕೊಂಡು ಕಾದುಕುಳಿತಿದ್ದಾರೆ. ಇದು ಆ ಪಕ್ಷದಲ್ಲಿ ಅಧಿಕಾರದ ದಾಹಕ್ಕೆ ಹಿಡಿದ ಕನ್ನಡಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂರಾರು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಹತ್ತು ಜನ ಈಗ ಸಿಎಂ ಗದ್ದುಗೆ ಏರಲು ತುದಿಗಾಲಲ್ಲಿ …
Read More »ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು
ಕೊಪ್ಪಳ: ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ಮೆಂತೋಪ್ಲಸ್ ಡಬ್ಬಿಯನ್ನು ಸರ್ಕಾರಿ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಎಂಬ (8) ತಿಂಗಳ ಮಗು ಆಟವಾಡುತ್ತಾ ಮೆಂತೋಪ್ಲಸ್ ಡಬ್ಬಿ ನುಂಗಿತ್ತು. ಕೂಡಲೇ ಇದನ್ನು ಅರಿತ ಮಗುವಿನ ಪೋಷಕರು, ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ.ಮಗುವನ್ನು ಪರೀಕ್ಷಿಸಿದ ವೈದ್ಯರು, ಮಗುವಿನ ಗಂಟಲಿನಲ್ಲಿ ಡಬ್ಬಿ ಸಿಲುಕಿಕೊಂಡಿದೆ. ಹೀಗಾಗಿ ಉಸಿರಾಟಕ್ಕೆ …
Read More »ಕೊರೋನಗೆ ಪೋಷಕರು ಬಲಿ ; ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಮಾಜ ಮುಖಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯರವರು ಇದೀಗ ಅದೇ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿ ಕೊರೊನಾದಿಂದ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ಶಾಸಕ ಎಂಪಿ ರೇಣುಕಾಚಾರ್ಯ ಇಂದು ಅ ಗ್ರಾಮಕ್ಕೆ ಪತ್ನಿ ಸುಮಿತ್ರಾರವರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಲ …
Read More »ಕಟುಕರ ಕೈಯಿಂದ ರಕ್ಷಿಸಲ್ಪಟ್ಟ 11 ಒಂಟೆಗಳು ಮರಳಿ ರಾಜಸ್ಥಾನಕ್ಕೆ ವಾಪಾಸ್
ಮಂಡ್ಯ: ರಾಜಸ್ಥಾನದಿಂದ ರಾಜ್ಯಕ್ಕೆ ಬಕ್ರೀದ್ ವೇಳೆ ಮಾಂಸಕ್ಕೆ ಬಳಸಲು ತರುತ್ತಿದ್ದ 11 ಒಂಟೆಗಳನ್ನು ರಕ್ಷಿಸಿ, ನ್ಯಾಯಾಲಯದ ಆದೇಶದಂತೆ ಮರಳಿ ರಾಜಸ್ತಾನಕ್ಕೆ ಕಳುಹಿಸಲು ಬುಧವಾರ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಚಾಲನೆ ನೀಡಿ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಬಕ್ರೀದ್ ಸಂದರ್ಭದಲ್ಲಿ ರಾಜ್ಯಕ್ಕೆ ಮಾಂಸಕ್ಕೆ ಬಳಸಲು ಒಂಟೆಗಳನ್ನು ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಬರುತ್ತಿದ್ದಾಗ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ದಯಾನಂದ ಸ್ವಾಮೀಜಿ ಹಾಗೂ …
Read More »
Laxmi News 24×7