ಬೆಳಗಾವಿ: ಜನಪ್ರತಿನಿಧಿ ಅಂದರೆ ಜನರ ಸೇವಕರು. ಆದರೆ ಸಚಿವ ಶ್ರೀಮಂತ ಪಾಟೀಲ ಮಾತ್ರ ಅಭಿಮಾನಿ ಒಬ್ಬರಿಂದ ಕಾಲಿಗೆ ಶೂ ಹಾಕಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಸಚಿವ ಶ್ರೀಮಂತ ಪಾಟೀಲ ಅರ್ಚಕರನ್ನು ಕರೆಸಿ ಬಾಗಿಲು ತೆಗೆಸಿದ್ದಾರೆ. ಮಾತ್ರವಲ್ಲ ಪೂಜೆಯನ್ನೂ ಮಾಡಿಸಿದ್ದಾರೆ. ಸಚಿವರು ಪೂಜಾ ಕೈಂಕರ್ಯ …
Read More »ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗುತ್ತಿರುವ ಕಾರಣ ಉಡುಪಿ, ಶಿವಮೊಗ್ಗ ಸೇರಿದಂತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದಿನಿಂದ ಅನ್ ಲಾಕ್ ಪ್ರಕ್ರಿಯೆಗೆ ಒಳಪಟ್ಟ 16 ಜಿಲ್ಲೆಗಳೊಂದಿಗೆ ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನಿಯಮ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದರಂತೆ ಈ ಜಿಲ್ಲೆಗಳಲ್ಲಿ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ …
Read More »2024ರ ಸಾರ್ವತ್ರಿಕ ಚುನಾವಣೆ ಗುರಿ: ಎರಡನೇ ಬಾರಿ ಶರದ್ ಪವಾರ್, ಪ್ರಶಾಂತ್ ಕಿಶೋರ್ ಚರ್ಚೆ
ಮುಂಬಯಿ: ಭಾರತೀಯ ಜನತಾ ಪಕ್ಷದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ 2024ರ ಚುನಾವಣೆಯ ಪೂರ್ವಸಿದ್ಧತೆಗಾಗಿ ಎರಡು ವಾರಗಳ ಅವಧಿಯಲ್ಲಿ ಚುನಾವಣಾ ನೀತಿ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಎನ್ ಸಿಪಿ ಮುಖಂಡ ಎರಡನೇ ಬಾರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬಯಿಯ ಶರದ್ ಪವಾರ್ ನಿವಾಸದಲ್ಲಿ ಜೂನ್ 11ರಂದು ಕಿಶೋರ್ ಜತೆ ಚರ್ಚೆ ನಡೆಸಿದ ನಂತರ ಇದೀಗ ದೆಹಲಿಯಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ …
Read More »ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತ
ಖಾನಾಪುರ: ಶನಿವಾರ ಇಡೀ ದಿನ ಸತತ ವರ್ಷಧಾರೆಯ ಪರಿಣಾಮ ತಾಲ್ಲೂಕಿನ ಲೋಂಡಾ ಗ್ರಾಮದ ಬಳಿ ಹರಿಯುವ ಪಾಂಡರಿ ನದಿಯಲ್ಲಿ ಪ್ರವಾಹವೇರ್ಪಟ್ಟಿದ್ದರಿಂದ ಲೋಂಡಾ ರೈಲು ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ಕೆಲಕಾಲ ಜಲಾವೃತಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನದ ಬಳಿಕ ಲೋಂಡಾ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪಾಂಡರಿ ನದಿಯ ನೀರು ಹರಿದುಬಂದಿದ್ದರಿಂದ ಕೆಳ ಸೇತುವೆ, ಪ್ರವೇಶದ್ವಾರ, ರೈಲ್ವೆ ಹಳಿಗಳು, ಮೊದಲ ಪ್ಲಾಟ್ ಫಾರ್ಮ್ ಸೇರಿದಂತೆ ರೈಲು ನಿಲ್ದಾಣ ಮತ್ತು ಅಕ್ಕಪಕ್ಕದ …
Read More »ಮೂರನೇ ಅಲೆ ತಡೆಗೆ ಮಹತ್ವದ ಕ್ರಮ: ಆರೋಗ್ಯ ವ್ಯವಸ್ಥೆ ಉತ್ತಮ ಪಡಿಸಲು 7500 ವೈದ್ಯ ಸಿಬ್ಬಂದಿ ನೇಮಕ
ಮೈಸೂರು: ಕೊರೋನಾ ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ, ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಮೈಸೂರು ಜಿಲ್ಲೆ ಸರಗೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಆವರಣದಲ್ಲಿ ಕೋವಿಡ್ ವಾರ್ಡ್ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು, ನರ್ಸುಗಳು, ಡಿ ಗ್ರೂಪ್, ಪ್ಯಾರಾ ಮೆಡಿಕಲ್ ಸೇರಿದಂತೆ 7500 ವೈದ್ಯ ಸಿಬ್ಬಂದಿಯನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಮೂರನೇ ಅಲೆ ಸೇರಿ …
Read More »ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಚೆಲ್ಲಾಪಿಲ್ಲಿ ಮಾಡಿ ದರ್ಪ ತೋರಿದ್ದ PSI ಸಸ್ಪೆಂಡ್
ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು. ರಾಯಚೂರಿನ ಚಂದ್ರಮೌಳೇಶ್ವರ ವೃತ್ತದ …
Read More »ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ
ಗೋಕಾಕ ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …
Read More »ರಾಮಮಂದಿರ ಟ್ರಸ್ಟ್ ಇನ್ನಷ್ಟು ಭೂ ಹಗರಣ ಬಯಲಿಗೆ
ಲಕ್ನೋ, ಜೂನ್ 20: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ನಿರ್ವಹಣೆ ಹೊಣೆ ಹೊತ್ತುಕೊಂಡಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವಿರುದ್ಧ ಗಂಭೀರ ಭೂಹಗರಣದ ಆರೋಪ ಕೇಳಿ ಬಂದಿದೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಈ ಟ್ರಸ್ಟ್‌ನ ಮೂಲಕ ಮಾಡಲಾಗುತ್ತಿದೆ. ಇದರಲ್ಲಿ 15 ಮಂದಿ ಸದಸ್ಯರಿದ್ದು ಇದರಲ್ಲಿ 12 ಮಂದಿ ಸದಸ್ಯರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ”ಆಸ್ತಿ ಖರೀದಿಯಲ್ಲಿ ಸುಮಾರು 16. 5ಕೋಟಿ ರು ಅವ್ಯವಹಾರ ನಡೆದಿದೆ,” …
Read More »ಬಾಲಕಿಗೆ ವಿಚಿತ್ರ ಪೂಜೆ ಮಾಡಿ ವಾಮಾಚಾರ ಮಾಂತ್ರಿಕ ನಾಪತ್ತೆ – ಬಾಲಕಿಯ ರಕ್ಷಣೆ
ಬೆಂಗಳೂರು: ದುಷ್ಟ ಶಕ್ತಿಯನ್ನು ಪಡೆಯಲು ಬಾಲಕಿಯನ್ನು ಬಳಸಿಕೊಂಡು ವಾಮಾಚಾರ ಮಾಡಿರುವ ಘಟನೆ, ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಒಂದು ಪುಟ್ಟ ಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕಿಯ ರಕ್ಷಣೆ ಮಾಡಲಾಗಿದೆ. ಕೊರೊನಾ ಲಾಕ್‍ಡೌನ್ ನಡುವೆ ಮಂತ್ರವಾದಿಗಳ ಕುತಂತ್ರ ಬೆಳಕಿಗೆ ಬಂದಿದೆ. ಕೆಲವು ಸ್ಥಳೀಯರು ಸೇರಿದಂತೆ ಮಾಂತ್ರಿಕನ ನೆರವಿನಿಂದ ದುಷ್ಟ ಶಕ್ತಿಯನ್ನು ಪಡೆಯಲು ಬಾಲಕಿಗೆ ವಿಚಿತ್ರವಾದ ಪೂಜೆ ಮಾಡಿ ವಾಮಾಚಾರ ಮಾಡಿ ನರಬಲಿ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ …
Read More »
Laxmi News 24×7