ಹಾಸನ: ಮನೆಯ ಕಾಂಪೌಂಡ್ನಲ್ಲಿದ್ದ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಭೈರನಾಯಕನಹಳ್ಳಿಯಲ್ಲಿ ನಡೆದಿದೆ. ತಡರಾತ್ರಿ 2.30ರ ಸಮಯದಲ್ಲಿ ಗ್ರಾಮದೊಳಗೆ ಬಂದಿರುವ ಚಿರತೆ ಗರುಡನಗಿರಿ ರಸ್ತೆಯ ಮಲ್ಲೇಗೌಡ ಎಂಬುವವರ ಮನೆಯ ಕಾಂಪೌಂಡ್ ಒಳಗೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿದೆ. ಬೆಳಗ್ಗೆ ನಾಯಿ ಕಾಣಿಸದಿದ್ದಾಗ ಮಲ್ಲೇಗೌಡರು ಸಿಸಿಟಿವಿ ಪರಿಶೀಲಿಸಿದ್ದಾರೆ. ಚಿರತೆ ನಾಯಿಯನ್ನು ಹೊತ್ತೊಯ್ಯವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ ಕೂಡಲೇ ಚಿರತೆಯನ್ನು …
Read More »ಮಂತ್ರಾಲಯ: ಜೂ. 22ರಿಂದ ರಾಯರ ದರ್ಶನ ಪುನಾರಂಭ
ರಾಯಚೂರು: ಕೋವಿಡ್-19 ಎರಡನೇ ಅಲೆ ಹೆಚ್ಚಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ಜೂ.22ರಿಂದ ಪುನಾರಂಭಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ದರ್ಶನಕ್ಕೆ ಶ್ರೀ ಮಠದ ಆಡಳಿತ ಮಂಡಳಿ ಅವಕಾಶ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಠಕ್ಕೆ ಬರಲಾಗದ ಭಕ್ತರು https://www.srsmatha.org/online ಮೂಲಕ ರಾಯರ ದರ್ಶನ ಪಡೆಯಬಹುದು ಎಂದು ಮಠದ …
Read More »ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ
ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …
Read More »B.S.Y. ಉತ್ತಮ ಕೆಲಸ ಮಾಡಿದ್ದಾರೆ ; ಅರುಣ್ ಸಿಂಗ್
ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಕೊವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರ್ಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿಯ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಉದ್ದೇಶವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಎರಡು ಪ್ಯಾಕೇಜ್ಗಳನ್ನು ಘೋಷಿಸಿದೆ. ಆ ಮೂಲಕ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗಿದೆ. …
Read More »ರಮೇಶ್ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ
ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು. ‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು …
Read More »10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ರೈಲ್ವೆಯಲ್ಲಿ 3591 ಹುದ್ದೆಗಳ ನೇಮಕಾತಿಗೆ ಅರ್ಜಿ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 10ನೇ ತರಗತಿ ಮತ್ತು ಐಟಿಐನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ …
Read More »‘ಬಿಎಸ್‌ವೈ ಪದಚ್ಯುತಗೊಳಿಸಿದರೆ ಪರಿಣಾಮ ನೆಟ್ಟಗಿರಲ್ಲ’
ಕಲಬುರ್ಗಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚೆನ್ನಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಪದ ಚ್ಯುತಗೊಳಿಸಬಾರದು. ಒಂದೊಮ್ಮೆ ಮುಖ್ಯಮಂತ್ರಿ ಪದವಿಗೆ ಸಂಚಕಾರ ಬಂದರೆ ರಾಜ್ಯದ ಸಾವಿರ ಮಠಾಧೀಶರು ದೆಹಲಿಯ ಸಂಸತ್ತಿನ ಎದುರು ಮೆರವಣಿಗೆ ನಡೆಸಬೇಕಾ ಗುತ್ತದೆ’ ಎಂದು ಇಲ್ಲಿಯ ಸುಲಫಲ ಮಠದ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಎಚ್ಚರಿಸಿದರು. ಈ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಎಂಬುದು ಬಿಜೆಪಿ ಪಕ್ಷದ ಆಂತರಿಕ ವಿಚಾರ ಎಂದುಕೊಂಡು ಸುಮ್ಮನಿರಲು ಆಗುವು ದಿಲ್ಲ. …
Read More »ಸಿ.ಎಂ ಆಗೋ ಆಸೆ ನಂಗೂ ಇದೆ: ಕಂದಾಯ ಸಚಿವ ಆರ್. ಅಶೋಕ
ದೇವನಹಳ್ಳಿ: ‘ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ನನಗೂ ಸಿ.ಎಂ ಆಗುವ ಆಸೆ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾರೆ. ಇನ್ನೆರಡು ವರ್ಷ ಅವರೇ ಇರ್ತಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಹತ್ತಾರು ಮಂದಿ ಪರ್ಯಾಯ ನಾಯಕರಿದ್ದಾರೆ ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಸಮಯ ಬಂದಾಗ ಅವರಿಗೆ ಅವಕಾಶ …
Read More »“ಬಿಜೆಪಿಯಲ್ಲಿ ಶಾಸಕರು – ಸಚಿವರ ಮಧ್ಯೆ ಗೊಂದಲವಿರೋದು ನಿಜ” : ಈಶ್ವರಪ್ಪ
ಬೆಂಗಳೂರು : ಕರ್ನಾಟಕದ ಭಾರತೀಯ ಜನತಾ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ನಾಯಕತ್ವ ಬದಲಾವಣೆ ಅನ್ನೋದು ನೂರಕ್ಕೆ ನೂರು ಸುಳ್ಳು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಅರುಣ್ ಸಿಂಗ್ ಭೇಟಿ ಬಗ್ಗೆ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿಯಲ್ಲಿ ಶಾಸಕರು ಸಚಿವರ ನಡುವೆ ಸ್ವಲ್ಪ ಗೊಂದಲ ಇರುವುದು ನಿಜ. ಅದರ ಬಗ್ಗೆ ಮಾತುಕತೆ ನಡೆಸಿ ಗೊಂದಲ ನಿವಾರಣೆ ಮಾಡಲು ಅರುಣ್ ಸಿಂಗ್ ಬರುತ್ತಿದ್ದಾರೆ. ಮುಖ್ಯಮಂತ್ರಿ …
Read More »B.S.Y. ಅವರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ..? : ಸಿದ್ಧರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ನಿರ್ವಹಣೆ ಸರಿಯಾಗಿ ನಡೆದಿಲ್ಲ, ರಾಜ್ಯದ ಆಡಳಿತ ನೇತೃತ್ವದ ಬದಲಾಗಬೇಕು ಎಂಬ ಮಾತುಗಳ ಕೆಲವು ತಿಂಗಳುಗಿಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆಯಾದರೂ, ಕೆಲವು ದಿನಗಳಿಂದ ಅದು ತಾರಕಕ್ಕೇರಿದೆ. ನಾಯಕತ್ವದ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಕೂಡ ತಲುಪಿದ್ದು, ರಾಜ್ಯ ಬಿಜೆಪಿಯ ಸ್ಥಿತಿ ವಲಸೆ ವರ್ಸಸ್ ಮೂಲ ನಿವಾಸಿಗಳು ಎಂಬಂತಾಗಿದೆ. ಆಡಳಿತ ಪಕ್ಷ ಬಿಜೆಪಿಯಲ್ಲಿ ಭಿನ್ನಮತ ಸ್ಪಷ್ಟವಾಗಿ ಕಾಣಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ದೊಡ್ಡ …
Read More »
Laxmi News 24×7