ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.
Read More »ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …
Read More »ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ.. ನಲಪಾಡ್ ಸೇರಿ 10 ಜನರು ವಶಕ್ಕೆ
ಕೋಲಾರ: ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯ್ತು. ಆದ್ರೆ ಅನುಮತಿ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದ ಹಿನ್ನೆಲೆ ಯೂತ್ ಕಾಂಗ್ರೆಸ್ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಕೋಲಾರ ನಗರದ ನಚಿಕೇತ ನಿಲಯ ಮುಂಭಾಗದಲ್ಲಿರುವ ಭಾರತ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಗಲ್‌ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಹ್ಯಾರೀಸ್, ಯೂತ್ ಕಾಂಗ್ರೆಸ್ ಜಿಲ್ಲಾ …
Read More »ಸಾಹುಕಾರ್ ಸಿಡಿ ಪ್ರಕರಣ – ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ಒಪ್ಪಿಕೊಂಡ ಶಂಕಿತರು!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಶಂಕಿತ ಯುವಕರ ವಿಚಾರಣೆ ನಡೆಯುತ್ತಿದೆ. ಪೊಲೀಸರ ವಿಚಾರಣೆ ವೇಳೆ ಕೆಲ ಮಾಹಿತಿ ನೀಡಿರುವ ನರೇಶ್ ಮತ್ತು ಶ್ರವಣ್ ಎಸ್‍ಐಟಿಯ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಿಚಾರಣೆ ವೇಳೆ ಯುವತಿ ಮತ್ತು ಜಾರಕಿಹೊಳಿ ಬಗೆಗಿನ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಸಂತ್ರಸ್ತ ಯುವತಿಗೆ ಸ್ಟಿಂಗ್ ಕ್ಯಾಮೆರಾ ಕೊಡಿಸಿದ್ದು ನಾವೇ ಎಂದು ಶ್ರವಣ್ ಒಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಟಿಂಗ್ ಆದ ನಂತರ ಯುವತಿ ನನಗೆ …
Read More »“ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ”
ಕಲಬುರಗಿ : ಮಠಾಧೀಶರು ರಾಜಕೀಯದಲ್ಲಿ ಮಧ್ಯಪ್ರವೇಶ ಮಾಡುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಜೇವರ್ಗಿ ತಾಲೂಕಿನ ನೆಲೋಗಿ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರವಾಗಿ ಮಲೆನಾಡಿನ ಮಠಾಧೀಶರು ಬೆಂಬಲ ನೀಡಿರುವ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀಗಳು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಯೋಗ್ಯತೆ ಇದ್ದರೆ ಸಿಎಂ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ. ಯಡಿಯೂರಪ್ಪನಿಗೆ ಯೋಗ್ಯತೆ ಇದ್ರೆ ಸಿಎಂ ಹುದ್ದೆಯಲ್ಲಿ ಹೈಕಮಾಂಡ್ …
Read More »ಸಿದ್ದರಾಮಯ್ಯ, ಜಮೀರ್, ದಿಗ್ವಿಜಯ ಸಿಂಗ್ ಪಾಕಿಸ್ತಾನದ ಪರ ಇರುವ ಜನ : ಈಶ್ವರಪ್ಪ
ಶಿವಮೊಗ್ಗ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಕ್ಯಾಬಿನೆಟ್ ಸಚಿವರು, ಕೋರ್ ಕಮಿಟಿ ಸದಸ್ಯರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಶಾಸಕರು ತಮ್ಮ ಅಭಿಪ್ರಾಯ ಹೇಳಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಹೇಳುವವರು, ಕೇಳುವವರು ಇದ್ದಾರೆ, ಇದುವೆ ಬಿಜೆಪಿ ವಿಶೇಷತೆ ಎಂದು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪರಿಸ್ಥಿತಿ ಈಗ ಹೇಗಾಗಿದೆ? ಎಂಬ ವಿಚಾರವಾಗಿ ಮಾತನಾಡಿದ ಅವರು, …
Read More »ತಮಿಳುನಾಡಿನಲ್ಲಿ’ಮಮತಾ ಬ್ಯಾನರ್ಜಿʼಯನ್ನು ಮದುವೆಯಾದ ‘ಸೋಶಿಯಲಿಸಂʼ
ಚೆನ್ನೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಡ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದಿದ್ದರೂ, ಮಮತಾ ಬ್ಯಾನರ್ಜಿ ಎಂಬ ಹೆಸರಿನ ಯುವತಿಯನ್ನು ಸೋಶಿಯಲಿಸಂ ಹೆಸರಿನ ಯುವಕನೋರ್ವ ಮದುವೆಯಾದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಹೆಸರಿನ ಕಾರಣದಿಂದಾಗಿ ಈ ಮದುವೆ ವಿಚಾರ ರಾಷ್ಟ್ರಾದ್ಯಂತ ಸುದ್ದಿಯಾಗಿದೆ. ವಧು ಪಿ. ಮಮತಾ ಬ್ಯಾನರ್ಜಿ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಕುಟುಂಬದಿಂದ ಬಂದ ವಧುವಿನ ಹೆಸರನ್ನು ಈಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರುವ …
Read More »ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ‘ಮಳೆ’ ಮುನ್ಸೂಚನೆ ನೀಡಿದ ‘ಹವಾಮಾನ ಇಲಾಖೆ’
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿ ದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, …
Read More »ಸಿದ್ದುಗೆ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ಮಾಜಿ ಸಚಿವ ಮೇಟಿ
ಬಾಗಲಕೋಟೆ : ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನೀಡಿದ ಸಿದ್ದರಾಮಯ್ಯ ಅವರು, ರಾಜ್ಯದ 224 ಕ್ಷೇತ್ರಗಳಲ್ಲಿ ಯಾವುದೇ ಭಾಗದಿಂದ ಸ್ಪರ್ಧಿಸಲು ಸಮರ್ಥರು. ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ, ಈ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಎಚ್.ವೈ. ಮೇಟಿ ಮನವಿ ಮಾಡಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು, ಕಳೆದ ಬಾರಿ …
Read More »ಗಂಡನನ್ನು ತೊರೆದು ಪ್ರೀತಿಸಿದವನ ಜೊತೆ ರೈಲಿನಲ್ಲಿ ಮದುವೆಯಾದ ಯುವತಿ
ಪಾಟ್ನಾ: ಯುವ ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ರೈಲಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಬಿಹಾರಿನಲ್ಲಿ ನಡೆದಿದೆ. ಬಿಹಾರದ ಸುಲ್ತಾನ್ಗಂಜ್ ಪ್ರದೇಶದ ಭಿರ್ ಕುರ್ದ್ ಎಂಬ ಗ್ರಾಮದ ನಿವಾಸಿ ಆಶು ಕುಮಾರ್ ಹಾಗೂ ಅನು ಕುಮಾರಿ ಹೀಗೆ ವಿಭಿನ್ನವಾಗಿ ಮದುವೆಯಾದ ಪ್ರೇಮ ಪಕ್ಷಿಗಳು. ಹಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಹುಡುಗಿ ಮನೆಯವರಿಗೆ ಗೊತ್ತಾಗಿತ್ತು. ಹೀಗಾಗಿ ತರಾತುರಿಯಲ್ಲಿ ಕಿರಣಪುರ್ ಹಳ್ಳಿಯ ಬೇರೊಬ್ಬನ ಜೊತೆ ಕಳೆದ ಎರಡು ತಿಂಗಳ ಹಿಂದ ಮದುವೆ …
Read More »
Laxmi News 24×7