ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ಇಳಿಮುಖವಾಗುತ್ತಿರು ಮಧ್ಯೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ಎಚ್ಚರಿಕೆ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಇದೀಗ ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗ ಆರಂಭವಾಗಿದೆ. ಭಾರತ್ ಬಯೋಟೆಕ್ ಕಂಪನಿಯ ಕೋವ್ಯಾಕ್ಸಿನ್ ಲಸಿಕೆ ಮಕ್ಕಳ ಮೇಲೆ ಪ್ರಯೋಗಿಸಲಾಗುತ್ತಿದ್ದು, ದೆಹಲಿಯ ಏಮ್ಸ್ ಹಾಗೂ ಮಹಾರಾಷ್ಟ್ರದ ನಾಗ್ಪುರದಲ್ಲಿಯೂ ಪ್ರಯೋಗ ಆರಂಭವಾಗಿದೆ. 12-18 ವರ್ಷದ 175 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತಿದ್ದು, 3 ಗ್ರೂಪ್ …
Read More »ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್
ಬೆಂಗಳೂರು: ಕೊರೊನಾ ವೈರಸ್ ಮತ್ತು ಲಾಕ್‍ಡೌನ್‍ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಅವರು ಎಲ್ಲರಿಗೂ ಧೈರ್ಯ ತುಂಬಲು ಇನ್‍ಸ್ಟಾಗ್ರಾಮ್‍ನಲ್ಲಿ ಹೊಸ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಕೆಲವು ವಿಚಾರಗಳನ್ನು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್ ಹಾವಳಿಯಿಂದ ಅನೇಕರ ಬದುಕು ತತ್ತರಿಸಿ ಹೋಗಿದೆ. ಈ ಕಠಿಣ ಸಂದರ್ಭದಲ್ಲಿ ಅನೇಕ ನಟ, ನಟಿಯರು ಸಹಾಯ ಮಾಡಿದ್ದಾರೆ. ನಟ ಯಶ್ ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ …
Read More »ಶತಕ ದಾಟಿದ ಪೆಟ್ರೋಲ್ ದರ, ಸೆಸ್ ದರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ
ಬೆಂಗಳೂರು, ಜೂ. 7-ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ ರಾಜ್ಯ ಸರ್ಕಾರಗಳು ಶೇ.30-32 ರಷ್ಟು ಸೆಸ್ ವಿಧಿಸುತ್ತವೆ. ಸೆಸ್ ಪ್ರಮಾಣ ಇಳಿಕೆ ಮಾಡಿದರೆ ಡೀಸೆಲ್, ಪೆಟ್ರೋಲ್ ದರದಲ್ಲಿ ಲೀಟರ್ ಗೆ 3-4 ರೂ. ಇಳಿಕೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜನರು ಸಂಕಷ್ಡದಲ್ಲಿದ್ದಾರೆ …
Read More »ಪಿಯು ಪರೀಕ್ಷೆ ಇಲ್ಲ ; ಪರೀಕ್ಷಾ ಶುಲ್ಕವೂ ವಾಪಾಸಿಲ್ಲ
ಪಿಯು ಪರೀಕ್ಷೆಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಪಡೆದಿರುವ ಪ್ರವೇಶ ಶುಲ್ಕ ಮರುಪಾವತಿಗೆ ನಿರಾಕರಿಸುತ್ತಿದೆ. ಪ್ರತಿ ವಿದ್ಯಾರ್ಥಿಗೆ ಪರೀಕ್ಷಾ ಶುಲ್ಕವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ 190 ರೂ. ಪಡೆದಿದೆ. ಇದೇ ರೀತಿ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ 500 ರೂ.ಪಡೆದಿದೆ. ಇನ್ನು ಕೆಲವು ವಿದ್ಯಾರ್ಥಿಗಳು ತಡವಾಗಿ ಶುಲ್ಕ ಪಾವತಿಸಿರುವುದಕ್ಕೆ ದಂಡ ಶುಲ್ಕವಾಗಿ 700 ರಿಂದ 1320 ರೂ.ಹೆಚ್ಚುವರಿಯಾಗಿ ಪಡೆದಿದೆ. ಈ ಬಾರಿ 6.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ …
Read More »ರೋಹಿಣಿ ಸಿಂಧೂರಿ ಗೈರು ಹಾಜರಿ ನಡುವೆ ಗೌತಮ್ ಬಗಾದಿ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕಾರ
ವಿವಾದಗಳ ಹಿನ್ನೆಲೆಯಲ್ಲಿ ವರ್ಗಗೊಂಡ ರೋಹಿಣಿ ಸಿಂಧೂರಿ ಅನುಸ್ಥಿತಿಯಲ್ಲಿ ಗೌತಮ್ ಬಗಾದಿ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನೂತನ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಗೌತಮ್ ಬಗಾದಿ ಭಾನುವಾರ ಕಚೇರಿಗೆ ಆಗಮಿಸಿ ಸುಮಾರು ಅರ್ಧಗಂಟೆ ಕಾದರು. ಆದರೆ ವರ್ಗಗೊಂಡ ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬಾರದ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲೇ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಗೌತಮ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದು, ಜಿ.ಪಂ ಸಿಇಓ ಉಪಸ್ಥಿತರಿದ್ದರು. ವಾಟ್ಸಪ್ ಮೂಲಕ ಮೈಸೂರು …
Read More »ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ ದೂರು ದಾಖಲು
ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ …
Read More »ಮಹಿಳೆಯರಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ
ಮುಂಬೈ: ಬಹುತೇಕ ರಾಜ್ಯಗಳು ಲಾಕ್‌ಡೌನ್ ಹೇರಿವೆ. ಕರೊನಾ ವೈರಸ್ ಸಂಖ್ಯೆ ಕುಸಿತ ಕಂಡುಬರುತ್ತಿರುವ ರಾಜ್ಯಗಳಲ್ಲಿ ನಿಧಾನವಾಗಿ ಲಾಕ್‌ಡೌನ್ ತೆರವುಗೊಳಿಸಿ ಒಂದೊಂದೇ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿಯೂ ಲಾಕ್‌ಡೌನ್ ಅನ್ನು ತೆರವುಗೊಳಿಸುವ ಕಾರ್ಯ ಆರಂಭವಾಗಿದೆ. ಇಲ್ಲಿಯವರೆಗೆ ಲೋಕಲ್ ಟ್ರೇನ್‌ಗಳ ಓಡಾಟಕ್ಕೆ ಅನುಮತಿ ಇರಲಿಲ್ಲ. ಈಗ ಅನ್‌ಲಾಕ್ ಮಾಡುತ್ತಿರುವ ಕಾರಣ, ಇವುಗಳ ಓಡಾಟಕ್ಕೆ ಅನುಮತಿ ಕಲ್ಪಿಸಲಾಗುತ್ತಿದೆ. ಆದರೆ ಅಚ್ಚರಿಯ ವಿಷಯ ಎಂದರೆ ಮಹಿಳೆಯರು ಟ್ರೇನ್‌ಗಳಲ್ಲಿ ಪ್ರವೇಶಿಸುವುದಕ್ಕೆ ಕಡಿವಾಣ ಹಾಕಲಾಗಿದೆ. ಮಹಾರಾಷ್ಟ್ರ ಸರ್ಕಾರ …
Read More »ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭ
ಬೆಂಗಳೂರು – ಕೊರೋನಾ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ ಮಾಡಲಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಿಸಲು ಸರಕಾರ ಅನುಮತಿ ನೀಡಿದೆ. ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ …
Read More »27 ಲಕ್ಷ ಮಂದಿ ರೈಲ್ವೆ ಟಿಕೆಟ್ ಇಲ್ಲದೆ ಪ್ರಯಾಣ : 143.87 ಕೋಟಿ ರೂ. ದಂಡ ಸಂಗ್ರಹ
ನವದೆಹಲಿ: ಸೋಂಕಿನ ಹಿನ್ನೆಲೆಯಲ್ಲಿ ಹಲವು ನಿಯಮಗಳು ಜಾರಿ ಇದ್ದರೂ ರೈಲುಗಳಲ್ಲಿ ಟಿಕೆಟ್ ಇಲ್ಲದೆ 27 ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಸಲ್ಲಿಸಲಾಗಿದ್ದ ಅರ್ಜಿಗೆ ಉತ್ತರಿಸಿದ ಸಚಿವಾಲಯ 2020 ಏಪ್ರಿಲ್‌ನಿಂದ ಪ್ರಸಕ್ತ ವರ್ಷ ಮಾರ್ಚ್ ವರೆಗೆ 27.57 ಲಕ್ಷ ಮಂದಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 25ಕ್ಕೂ ಕಡಿಮೆ ಪ್ರಕರಣಗಳು ಎಂದಿದೆ. ಅಷ್ಟೂ ಮಂದಿಯಿಂದ 143.87 ಕೋಟಿ ರೂ. ದಂಡ ಸಂಗ್ರಹಿಸಲಾಗಿದೆ. …
Read More »ಲಸಿಕೆಗೆ ಕೊರತೆ ಇರುವಾಗ ಟ್ವಿಟರ್ ಬ್ಲೂ ಟಿಕ್ ಬಗ್ಗೆ ಚರ್ಚೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ
ದೆಹಲಿ: ಕೊರೊನಾ ಸೋಂಕು ವಿರುದ್ಧದ ಲಸಿಕೆಗೆ ಕೊರತೆ ಇರುವಾಗ, ಟ್ವಿಟರ್ನಲ್ಲಿ ಬ್ಲೂ ಟಿಕ್ ವಿಚಾರವಾಗಿ ಚರ್ಚೆಯಲ್ಲಿ ತೊಡಗಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ಲಸಿಕೆ ಹಾಗೂ ಟ್ವಿಟರ್ ಬ್ಲೂ ಟಿಕ್ ಬಗ್ಗೆ ವ್ಯಂಗ್ಯವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಯಾರಿಗಾದರೂ ಕೊವಿಡ್ ಲಸಿಕೆ ಬೇಕಾದರೆ ಅವರು ಆತ್ಮನಿರ್ಭರರಾಗಿ ಇರಬೇಕಷ್ಟೆ. ಸ್ವಾವಲಂಬಿಯಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಟ್ವಿಟರ್ನಲ್ಲಿ ಬ್ಲೂ ಟಿಕ್ಗಾಗಿ …
Read More »
Laxmi News 24×7