ಬಳ್ಳಾರಿ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಿನ ಪ್ರಮಾಣದ ಏರಿಕೆ ಕಂಡುಬಂದಿದೆ. ಅದೇಷ್ಟೋ ಕುಟುಂಬ ತನ್ನವರನ್ನು ಕಳೆದುಕೊಂಡು ಕಣ್ಣೀರಿನಲ್ಲಿ ಜೀವನ ಸಾಗಿಸುವಂತಾಗಿದೆ. ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡು ಜೀವನ ಸಾಗಿಸುವ ಧೈರ್ಯದಿಂದ ದೂರವಾದವರನ್ನು ಒಂದು ಕಡೆಯಾದರೆ, ಇನ್ನೊಂದು ಕಡೆ ಪ್ರಪಂಚದ ಅರಿವೇ ಇಲ್ಲದ ಆದೆಷ್ಟೋ ಕಂದಮ್ಮಗಳು ಕೊವಿಡ್ನಿಂದಾಗಿ ಹೆತ್ತವರನ್ನು ಕಳೆದುಕೊಂಡಿದ್ದು, ಅನಾಥರಾಗಿದ್ದಾರೆ. ಇಂತಹದ್ದೇ ಪರಿಸ್ಥಿತಿ ಸದ್ಯ ಬಳ್ಳಾರಿ ಜಿಲ್ಲೆಯದ್ದಾಗಿದ್ದು, 180 ಮಕ್ಕಳು ತಂದೆ- ತಾಯಿ …
Read More »ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ರೇಷನ್ ಇಲ್ಲ; ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ನಿರ್ಧಾರ
ಗದಗ: ಕೊರೊನಾ ಲಸಿಕೆ ಬಗ್ಗೆ ಜನರಿಗೆ ಈಗಲೂ ಅನುಮಾನವಿದೆ. ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮಗಳಾಗುತ್ತಾ ಎಂಬ ಭಯದಲ್ಲಿದ್ದಾರೆ. ಯಾವುದೇ ಅಡ್ಡಪರಿಣಾಮಗಳಾಲ್ಲ ಅಂತ ಲಸಿಕೆ ಪಡೆದವರು ಹೇಳಿದರೂ, ಅರಿವು ಮೂಡಿಸಿದರೂ ಬಹುತೇಕರು ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಜನರ ಒಳಿತಿಗಾಗಿ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವುದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ನೀಡಲ್ಲ ಎಂದು ಗ್ರಾಮ ಪಂಚಾಯತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದ್ದಾರೆ. ಗದಗ …
Read More »ಮಹಾರಾಷ್ಟ್ರದಲ್ಲಿ ಸೋಮವಾರದಿಂದ ಐದು ಹಂತಗಳಲ್ಲಿ ಅನ್ ಲಾಕ್
ಹೊಸದಿಲ್ಲಿ: ಮಹಾರಾಷ್ಟ್ರ ರಾಜ್ಯವು ನಿನ್ನೆ ತಡರಾತ್ರಿ ಹೊರಡಿಸಿರುವ ಆದೇಶದಂತೆ ಐದು ಹಂತದ ಅನ್ ಲಾಕ್ ಯೋಜನೆಯನ್ನು ಪ್ರಕಟಿಸಿದೆ. ಈ ಹಿಂದೆ ಸಚಿವರು ನಿರ್ಬಂಧಗಳನ್ನು ಸರಾಗಗೊಳಿಸುವ ಬಗ್ಗೆ ಘೋಷಣೆ ಮಾಡಿದ ಬಳಿಕ ರಾಜ್ಯ ಸರಕಾರ ಯು-ಟರ್ನ್ ಪಡೆದಿತ್ತು. ಇದೀಗ ಒಂದು ದಿನದ ನಂತರ ಈ ನಿರ್ಧಾರ ಪ್ರಕಟಿಸಿದೆ. ಹೊಸ ಮಾರ್ಗಸೂಚಿಗಳು ಸೋಮವಾರದಿಂದ ಜಾರಿಗೆ ಬರುತ್ತವೆ, ರಾಜ್ಯದ ಜಿಲ್ಲೆಗಳನ್ನು ಸಕಾರಾತ್ಮಕ ದರ(ಪಾಸಿಟಿವಿಟಿ ರೇಟ್) ಹಾಗೂ ಆಮ್ಲಜನಕದ ಹಾಸಿಗೆಯ ಲಭ್ಯತೆಯ ಆಧಾರದ ಮೇಲೆ ಐದು …
Read More »ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ
ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …
Read More »ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಸಿಎಂ, ಸಚಿವರಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇನ್ನಿತರ ಸಚಿವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ಕೋರ್ಟ್, “ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ …
Read More »ಕೆಎಸ್‌ಆರ್‌ಟಿಸಿ ಹೆಸರು ಕರ್ನಾಟಕದಿಂದ ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ
ಬೆಂಗಳೂರು:ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಶ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆ. ಎಸ್. ಆರ್. ಟಿ. ಸಿ. ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ …
Read More »ಹಿರಿಯ ನಟಿ ಬಿ. ಜಯಾರ ಮೃತದೇಹವನ್ನ ಕಸದರಾಶಿ ಬಳಿ ಇಟ್ಟು ಅವಮಾನ! ವಿಡಿಯೋ ವೈರಲ್
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಜನರ ಮನಸ್ಸನ್ನು ಗೆದ್ದಿದ್ದ ಜಯಾ, ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜನಪ್ರಿಯರಾಗಿದ್ದರು. ರಂಗಭೂಮಿಯಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ಜಯಾ ಇತ್ತೀಚಿನ ದಿನಗಳಲ್ಲಿ ಕೆಲವು ಧಾರಾವಾಹಿಗಳಲ್ಲೂ ಬಣ್ಣ ಹಚ್ಚಿದ್ದರು. ಇಂತಹ ಜನಪ್ರಿಯ ನಟಿ ಅಗಲಿಕೆ ಸುದ್ದಿ ಅಭಿಮಾನಿಗಳ ಪಾಲಿಗೆ ದುಃಖಕರ. …
Read More »ಕೊರೋನಾ ಹೀಗೆ ಇದ್ರೆ SSLC ಪರೀಕ್ಷೆಯೂ ರದ್ದು, ಕಡಿಮೆಯಾದ್ರೆ ಮಾತ್ರ ಎಕ್ಸಾಂ: ಸಿಎಂ B.S.Y.
ಬೆಳಗಾವಿ: ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿ ಎಲ್ಲ ಸಾಮಾನ್ಯ ಸ್ಥಿತಿಗೆ ಮರಳಿದಾಗ ಮಾತ್ರ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ. ಸೋಂಕು ಕಡಿಮೆಯಾಗದಿದ್ದರೆ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ಕೂಡ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಮಾಹಿತಿ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿ ಸಹಜ ಸ್ಥಿತಿಗೆ ಮರಳಿ ಪರಿಸ್ಥಿತಿ …
Read More »ಮಾರಕ ಕೊರೋನಾಗೆ ‘ಡ್ರೀಮ್ ಗರ್ಲ್’ ಖ್ಯಾತಿಯ ಸಹನಟಿ ರೈಂಕು ಸಿಂಗ್ ನಿಕುಂಬ್ ಬಲಿ
ನವದೆಹಲಿ: ಆಯುಷ್ಮಾನ್ ಖುರಾನಾ ಅವರ ‘ಡ್ರೀಮ್ ಗರ್ಲ್’ ಚಿತ್ರದಲ್ಲಿ ಅಭಿನಯಿಸಿದ್ದ ಸಹನಟಿ ರೈಂಕು ಸಿಂಗ್ ನಿಕುಂಬ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈಂಕು ಸಿಂಗ್ ನಿಕುಂಬ್ ಚೇತರಿಸಿಕೊಳ್ಳುತ್ತಿದ್ದಾಗಲೇ ಸಾವನ್ನಪ್ಪಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೇ 25 ರಂದು ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೈಂಕು ಸಿಂಗ್ ನಿಕುಂಬ್ ಅವರು ಹೋಮ್ ಐಸೋಲೇಷನ್ ನಲ್ಲಿದ್ದರು. ಕೆಲವು ದಿನ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದರೂ ಜ್ವರ ಕಡಿಮೆಯಾದ ಕಾರಣ …
Read More »ನುಡಿದಂತೆ ನಡೆದ ‘ರಾಕಿಂಗ್ ಸ್ಟಾರ್ ಯಶ್’ : ‘ಸಿನಿ ಕಾರ್ಮಿಕರ’ ಖಾತೆಗೆ ‘ಪರಿಹಾರದ ಹಣ’ ಜಮೆ ಮಾಡಿದ ರಾಕಿಭಾಯ್.!
ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯಿಂದಾಗಿ ಲಾಕ್ ಡೌನ್ ಜಾರಿಗೊಳಿಸಿದ ನಂತ್ರ, ಕನ್ನಡ ಸಿನಿ ರಂಗದ ಅನೇಕ ಕಲಾವಿಧರು, ತಂತ್ರಜ್ಞರು ಸಂಕಷ್ಟಕ್ಕೆ ಒಳಗಾಗಿದ್ದರು. ಇಂತಹ ಕಲಾವಿಧರಿಗೆ, ತಂತ್ರಜ್ಞರಿಗೆ ರಾಕಿಂಗ್ ಸ್ಟಾರ್ ಯಶ್ ನೆರವು ಘೋಷಿಸಿದ್ದರು. ಈ ನೆರವನ್ನು ತಾವು ಘೋಷಿಸಿದಂತೆ ಚಿತ್ರರಂಗದ ಕಾರ್ಮಿಕರಿಗೆ ತಲುಪಿಸುವ ಮೂಲಕ, ನುಡಿದಂತೆ ರಾಕಿಭಾಯ್ ನಡೆದುಕೊಂಡಿದ್ದಾರೆ. ಹೌದು.. ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ಯಶ್ ತಲಾ 5 ಸಾವಿರ ರೂಪಾಯಿಯನ್ನು ಕೋವಿಡ್ …
Read More »
Laxmi News 24×7