ವಿಜಯಪುರ, ಮೇ 31: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಪುತ್ರ ವಿಜಯೇಂದ್ರ ವಿರುದ್ದ ಕಿಡಿಕಾರುವಲ್ಲಿ ವಿರೋಧ ಪಕ್ಷದವರೂ ನಾಚಿಸುವಂತೆ ಮಂಚೂಣಿಯಲ್ಲಿ ಬರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಎಂ ವಿರುದ್ದ ಗುಡುಗಿದ್ದಾರೆ. ಈಗಿರುವ ಲಾಕ್ ಡೌನ್ ಎಲ್ಲಾ ವೇಸ್ಟ್, ಜೂನ್ ಏಳರ ನಂತರ ಲಾಕ್ ಡೌನ್ ವಿಸ್ತರಿಸಬಾರದು ಎಂದು ಅಭಿಪ್ರಾಯ ಪಟ್ಟಿರುವ ಯತ್ನಾಳ್, ಲಾಕ್ ಡೌನ್ ಇದ್ದರೆ ಮಾತ್ರ ಯಡಿಯೂರಪ್ಪನವರ ಸಿಎಂ ಕುರ್ಚಿ ಭದ್ರ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. …
Read More »ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ. ಆಹಾರವನ್ನು ಮಕ್ಕಳು ಮುಟ್ಟುತ್ತಿಲ್ಲ, ನಾವು ಸಹ ತಿನ್ನುತ್ತಿಲ್ಲ. ಅದು ತಿನ್ನುವುದಕ್ಕೆ ಬಾರದಂತಿದೆ ಎಂಬ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ …
Read More »ಮಗಳು ವಮಿಕಾ ಹೆಸರಿನ ಅರ್ಥ ಹೇಳಿದ ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಜನಿಸಿದ ಎಂದು ತಿಳಿದಾಗ ಮಗುವಿಗೆ ಏನೆಂದು ಹೆಸರಿಡಬಹುದು ಎನ್ನುವ ದೊಡ್ಡ ಚರ್ಚೆಯೇ ನಡೆದಿತ್ತು. ಕುತೂಹಲದ ನಡುವೆ ಮಗಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಿದ್ದರು ತಾರಾ ದಂಪತಿ. ವಮಿಕಾ ಎಂದು ಹೆಸರಿನ ಒಳ ಅರ್ಥವೇನು? ಯಾವ ಕಾರಣದಿಂದ ಮಗಳಿಗೆ ಅನುಷ್ಕಾ-ಕೊಹ್ಲಿ ದಂಪತಿ ಈ ಹೆಸರಿಟ್ಟರು ಎನ್ನುವುದು ಅಷ್ಟೇ ಚರ್ಚೆಯಾಗಿತ್ತು. ವಿರಾಟ್ ಹೆಸರಿನಿಂದ ‘ವ’, ಅನುಷ್ಕಾ ಹೆಸರಿನಿಂದ ‘ಕಾ’ ಒಳಗೊಂಡು ವಮಿಕಾ ಆಗಿದೆ …
Read More »ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್ಮಾಲ್
ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ. ನೀರು ಮಿಶ್ರಿತ ಹಾಲು …
Read More »ಉದ್ಯೋಗ ಖಾತ್ರಿ ಯೋಜನೆಯಿಂದ ವಂಚಿತರಾದ ಆಶ್ರಯ ಮನೆಯ ಜನ; ಕೆಲಸವಿಲ್ಲದೆ ಗ್ರಾಮಸ್ಥರ ಪರದಾಟ
ಬೀದರ್: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಇನ್ನಿತರ ದಿನಗೂಲಿಕಾರರು ನಿತ್ಯ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಬೀದರ್ ಜಿಲ್ಲೆಯ ಆಶ್ರಯ ಮನೆಯಲ್ಲಿ ವಾಸ ಮಾಡುವ ನೂರಾರು ಕುಟುಂಬಗಳು ಈ ಯೋಜನೆಯಿಂದ ದೂರ ಉಳಿದಿದ್ದು, ಕೆಲಸ ವಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್ನ 91ನೇ ಕೋರ್ಟ್ ಆದೇಶ ನೀಡಿದೆ. ಬ್ಲಾಕ್ಮೇಲ್ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳಾದ ನರೇಶ್ ಗೌಡ ಮತ್ತು ಶ್ರವಣ್ ಈ ಸಂಬಂಧ ನ್ಯಾಯಾಲಯದ …
Read More »ಧಾರವಾಡ ರೈತರ ಜಮೀನಿಗೆ ಭೇಟಿ, ಹೊಲದಲ್ಲಿ ಕುಳಿತು ಸಮಸ್ಯೆ ಆಲಿಸಿದ ಡಿಕೆ ಶಿವಕುಮಾರ್
ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಧಾರವಾಡ ತಾಲೂಕಿನ ರಾಯಪುರ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ರೈತರ ಸದ್ಯದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ರು. ಅನ್ನದಾತರ ಜೊತೆ ಹೊಲದಲ್ಲಿಯೇ ಕುಳಿತು ಅವರ ಸಮಸ್ಯೆಗಳನ್ನ ಆಲಿಸಿದರು. ಸದ್ಯ ಬಿತ್ತನೆ ಕಾರ್ಯ ಆರಂಭವಾಗಿದೆ. ಆದ್ರೆ ನಮಗೆ ಬೇಕಾದ ಬೀಜ ಸಿಗುತ್ತಿಲ್ಲ ಎಂದು ರೈತರು ಹೇಳಿದರು. 5 ಎಕರೆ ಮೇಲೆ ಎಷ್ಟೇ ಜಮೀನು ಇದ್ದರೂ ಸಹ ಸರ್ಕಾರ ಕೇವಲ …
Read More »ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು
ಗದಗ: ಕೊರೊನಾ ನಿಯಂತ್ರಿಸಲು ಲಾಕ್ಡೌನ್ ಜಾರಿಯಾದ ಕಾರಣ ಬಸ್ಗಳ ಓಡಾಡ ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಅಜ್ಜಿಯೊಬ್ಬರು ಪರದಾಟ ಪಟ್ಟಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಬರುವಂತೆ ವೃದ್ಧೆಗೆ ತಿಳಿಸಿದ್ದರು. ಹೀಗಾಗಿ ಅಜ್ಜಿ ಅಂಚೆ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಪೊಲೀಸರು ಅಜ್ಜಿಯನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ವೃದ್ಧಾಪ್ಯ ವೇತನ ಪಡೆಯಲು ಎರಡು ಕಿಲೋಮೀಟರ್ ನಡೆದುಕೊಂಡ ಬಂದ ಭಜಂತ್ರಿ ನಗರದ …
Read More »71 ಶವಗಳನ್ನು ಗಂಗಾ ನದಿಯಿಂದ ಶಪಡಿಸಿಕೊಂಡು ಅಂತ್ಯಸಂಸ್ಕಾರ
ಬಲರಾಂಪುರ್: ಉತ್ತರಪ್ರದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆಯುವ ಆಘಾತಕಾರಿ ವಿಡಿಯೋ ಬಯಲಾಗಿದೆ. ಗಂಗಾ ನದಿ ತೀರದಲ್ಲಿ ಆಳವಿಲ್ಲದ ಸಮಾಧಿಗಳಲ್ಲಿ ಸಾವಿರಾರು ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಕೆಲವು ಮೃತದೇಹಗಳನ್ನು ನದಿಗೆ ಎಸೆಯಲಾಗಿದೆ ಎಂದು ಕೆಲವು ವಾರಗಳ ಹಿಂದೆ ವಿಶ್ವದಾದ್ಯಂತ ಸುದ್ದಿಯಾಗಿತ್ತು. ನದಿಗಳಲ್ಲಿ ಮೃತದೇಹಗಳನ್ನು ಎಸೆಯದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರ ಉತ್ತರದ ಅನೇಕ ರಾಜ್ಯಗಳಿಗೆ ಆದೇಶಿಸಿದೆ. ಇಂತಹ ಘಟನೆ ಮರುಕಳಿಸದಂತೆ ನದಿ ತೀರಗಳಲ್ಲಿ ಗಸ್ತು ಹೆಚ್ಚಿಸುವಂತೆ ಕೇಂದ್ರದಿಂದ …
Read More »ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಕುಚ್ಚಲಕ್ಕಿ ನೀಡಲು ಚಿಂತನೆ -ಕರಾವಳಿ ಜಿಲ್ಲೆಗಳಲ್ಲಿ ಬೇಡಿಕೆಯಂತೆ ವಿತರಣೆ
ಬೆಂಗಳೂರು: ಪಡಿತರ ಚೀಟಿ ಹೊಂದಿದವರಿಗೆ ಅಕ್ಕಿ ಜೊತೆಗೆ ರಾಗಿ ಮತ್ತು ಜೋಳ ವಿತರಿಸಲಾಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಪರಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ರಾಗಿ ಹಾಗೂ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆ ಜೋಳ ನೀಡಲಾಗುತ್ತಿದೆ. ಅದೇ ರೀತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬಳಕೆಯಲ್ಲಿರುವ ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. …
Read More »
Laxmi News 24×7