ಹಾವೇರಿ: ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದು, ಕ್ಲಾಸ್ ತೆಗೆದುಕೊಂಡಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ಆರಂಭದಲ್ಲಿ ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸರಿಯಾದ ಅಂಕಿ ಅಂಶಗಳನ್ನು ನೀಡದ್ದರಿಂದ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಸರಿಯಾದ ಅಂಕಿ, ಸಂಖ್ಯೆ …
Read More »ಎಂತ ಕಾಲ ಬಂತು: ಮೃತ ಸೋಂಕಿತರ ಅಂತ್ಯಕ್ರಿಯೆ ನೆರವೇರಿಸಲು ಟೆಂಡರ್ ಆಹ್ವಾನ!
ಚಾಮರಾಜನಗರ ( ಮೇ 21) ಹಲವೆಡೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಲು ಹಿಂಜರಿಯುತ್ತಿರುವುದು ಕಂಡು ಬರುತ್ತಿದೆ. ಇದನ್ನು ಮನಗಂಡ ಸ್ವಯಂ ಸೇವಾ ತಂಡಗಳು ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಮುಂಜಾಗ್ರತಾ ಕ್ರಮಗಳೊಂದಿಗೆ ಮೃತ ಸೋಂಕಿತರ ಅಂತ್ಯ ಸಂಸ್ಕಾರ ನೆರವೇರಿಸುತ್ತಾ ಬಂದಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆ ನೆರವೇರಿಸಲೆಂದೇ ಚಾಮರಾಜನಗರ ಜಿಲ್ಲಾಡಳಿತ ಯಡಬೆಟ್ಟದ ಬಳಿ ಭೂಮಿಯನ್ನು ನಿಗದಿಪಡಿಸಿದೆ. ಸೋಂಕಿನಿಂದ ಮೃತಪಟ್ಟ ಹಲವಾರು ಮಂದಿಯ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಇಲ್ಲಿ ನೆರವೇರಿಸುತ್ತಾ ಬಂದಿದ್ದಾರೆ. …
Read More »ಗೋವಾದಲ್ಲಿ ಕೊರೋನಾ ಇಳಿಮುಖ: ಲಾಕ್ ಡೌನ್ ವಿಸ್ತರಣೆ
ಪಣಜಿ: ಗೋವಾ ರಾಜ್ಯದಲ್ಲಿ ಕರ್ಫ್ಯೂ ಲಾಕ್‍ಡೌನ್ ಮೇ 31 ರವೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಶುಕ್ರವಾರ ಮಂತ್ರಿಮಂಡಳ ಬೈಠಕ್‍ನನಂತರ ಲಾಕ್‍ಡೌನ್ ನಿರ್ಣಯವನ್ನು ಘೋಷಿಸಿದರು. ಗೋವಾ ರಾಜ್ಯಾದ್ಯಂತ ಜೀವನಾವಶ್ಯಕ ವಸ್ತುಗಳ ಮಾರಾಟದ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾನ್ಹ 1 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇಷ್ಟೇ ಅಲ್ಲದೆ ವಿವಿಧ ಉದ್ಯೋಗ, ಕಛೇರಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಮದುವೆ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ. ಮೀನು ಮಾರುಕಟ್ಟೆಯನ್ನು ಬಂದ್ …
Read More »ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಬೆಳಗಾವಿ – ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಕೊರೋನಾ ಸಂದರ್ಭದಲ್ಲಿ ಯಾವುದೇ ದುಡಿಮೆಯಿಲ್ಲದೆ ಜನ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕಿಂಚಿತ್ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲಕ್ಷ್ಮಿ ತಾಯಿ ಫೌಂಡೇಶನ್ ಈ ನೆರವು ನೀಡುತ್ತಿದೆ. ಆಸ್ಪತ್ರೆಯಲ್ಲಿರುವ ಎಷ್ಟೋ ರೋಗಿಗಳಿಗೆ, ಅವರ ಸಹಾಯಕರಿಗೆ ಆಹಾರ, ನೀರು ಸಿಗುತ್ತಿಲ್ಲ. ಹಾಗಾಗಿ ಅವರಿಗೆ ಆಹಾರದ ಕಿಟ್ , ನೀರಿನ ಬಾಟಲ್, ಮಾತ್ರೆಯ ಕಿಟ್ …
Read More »ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ
ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಟೆಲಿಕಾಮ್ ನೆಟ್ ವರ್ಕ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ. ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ. ಹೌದು, ಕೇವಲ …
Read More »ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು.!
ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು. ಗ್ರಾಮೀಣ ಪ್ರದೇಶಕ್ಕೂ …
Read More »ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕಾರಣ: ಐಸಿಎಂಆರ್
ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹಬ್ಬಲು ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಲಸೆ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ನೇತೃತ್ವದ ಅಧ್ಯಯನ ತಂಡವೊಂದು ವರದಿ ಮಾಡಿದೆ. ಐಸಿಎಂಆರ್ ಅಧ್ಯಯನದ ಪ್ರಕಾರ, ವಿದೇಶಿ ಪ್ರಯಾಣಿಕರು ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು, ದೇಶದಲ್ಲಿನ ಜನರು ಆಂತರಿಕವಾಗಿ ವಲಸೆ ಹೋಗಿರುವುದು ಮತ್ತು ದೇಶದಾದ್ಯಂತ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳು ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ನೇರವಾದ ಕಾರಣ. ಮಿಂಟ್ …
Read More »ಬಾಗಲಕೋಟೆಯಿಂದ ಗದಗಕ್ಕೆ ಶವ ತಂದ ಕುಟುಂಬಸ್ಥರು, ಆದರೆ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ
ಗದಗ: ಜಿಲ್ಲೆಯುಲ್ಲಿ ಕೊರೊನಾ ಸೋಂಕಿತ ವೃದ್ಧನ ಶವ ಸಂಸ್ಕಾರಕ್ಕೆ ಗ್ರಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದೆ. ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವೃದ್ಧ ಕೊರೊನಾಗೆ ಬಲಿಯಾಗಿದ್ದರು. ಗ್ರಮದಲ್ಲೇ ವೃದ್ಧನ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಚಿಂತಿಸಿದ್ದರು. ಆದರೆ ಗ್ರಾಮದ ಜನ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು ಮಾತಿನ ಚಕಮಕಿ ನಡೆದಿದೆ. ಮೃತ ವೃದ್ಧ ಗದಗ ಬಿಟ್ಟು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ …
Read More »ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್ಡೌನ್
ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸೀಲ್ಡೌನ್ ಜಾರಿ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಉತ್ತರಕನ್ನಡದ ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳು ನಾಳೆಯಿಂದ ಮೇ 24ರ ಸಂಜೆಯವರೆಗೆ ಸೀಲ್ಡೌನ್ ಆಗಲಿವೆ. ಇನ್ನು ಉಳಿದ ಎಲ್ಲ ತಾಲೂಕುಗಳು ಶನಿವಾರ ಮತ್ತು ಭಾನುವಾರ ಮಾತ್ರ ಸೀಲ್ಡೌನ್ ಆಗಲಿವೆ …
Read More »ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್ನಿಂದ ಬಿಡುಗಡೆಯಾಯ್ತು ಹೊಸ ಕಿಟ್
ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಯಾವುದೇ ವೈದ್ಯಕೀಯ ಸಿಬ್ಬಂದಿಯ ಇರುವಿಕೆಯ ಹೊರತಾಗಿ, ಕೊರೊನಾ ಪರೀಕ್ಷೆಯನ್ನು ನಾವೇ ಮಾಡಿಕೊಳ್ಳಬಹುದು. ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಇಂದು (ಮೇ 19) ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್ನ ಬಗ್ಗೆ ವಿವರಣೆ ನೀಡಿದೆ. ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ …
Read More »
Laxmi News 24×7