ಮುಂಬೈ, : ಭಾರತದ ಮುಂಚೂಣಿ 4ಜಿ ಮತ್ತು ಮೊಬೈಲ್ ಬ್ರಾಡ್‌ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ. (ಜಿಯೋ), ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಅತಿ ದೊಡ್ಡ ಅಂತಾರಾಷ್ಟ್ರೀಯ ಜಲಾಂತರ್ಗಾಮಿ (ಸಬ್‌ಮೆರಿನ್) ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ವಿವಿಧ ಪ್ರಮುಖ ಜಾಗತಿಕ ಪಾಲುದಾರರು ಮತ್ತು ವಿಶ್ವದರ್ಜೆಯ ಜಲಾಂತರ್ಗಾಮಿ ಕೇಬಲ್ ಪೂರೈಕೆದಾರ ಸಬ್‌ಕಾಮ್ ಸಹಯೋಗದೊಂದಿಗೆ ಜಿಯೋ ಪ್ರಸ್ತುತ ಪ್ರದೇಶದೆಲ್ಲೆಡೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಡೇಟಾ ಬೇಡಿಕೆಗೆ ಬೆಂಬಲ ಒದಗಿಸುವ ನಿಟ್ಟಿನಲ್ಲಿ ಮುಂದಿನ ತಲೆಮಾರಿನ …
Read More »ಲಾಕ್ಡೌನ್ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟ ಪ್ರಧಾನಿ ಮೋದಿ
ನವದೆಹಲಿ: ಕರೊನಾ ವೈರಸ್ ಬಿಕ್ಕಟ್ಟು ಹಿನ್ನೆಲೆಯಲ್ಲಿ 9 ರಾಜ್ಯಗಳ ಸಿಎಂ, 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ, ಲಾಕ್ಡೌನ್ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ಬಿಟ್ಟರು. ಕರೊನಾ ನಿಯಂತ್ರಿಸಲು ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕು. ಕರೊನಾ ವಾರಿಯರ್ಸ್ಗೆ ಸ್ಫೂರ್ತಿ ತುಂಬಿರಿ. ನಿಮ್ಮ ಸ್ಫೂರ್ತಿದಾಯಕ ಮಾತುಗಳಿಂದ ವಾರಿಯರ್ಸ್ಗೆ ವಿಶ್ವಾಸ ಹೆಚ್ಚುತ್ತದೆ. ಕರೊನಾ ನಿಯಂತ್ರಿಸಲು ಯಾವುದೇ ಮಾರ್ಗವಿದ್ದರೂ ಅದನ್ನು ಅಳವಡಿಸಿಕೊಳ್ಳಿ ಎಂದು ಪ್ರಧಾನಿ …
Read More »ಏಪ್ರಿಲ್‌ನಲ್ಲಿ ಸಗಟು ಹಣದುಬ್ಬರ ದರ ದಾಖಲೆಯ ಶೇ. 10.49ಕ್ಕೆ ಏರಿಕೆ
ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರವು(WPI) ಏಪ್ರಿ ತಿಂಗಳಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ಶೇಕಡಾ 10.49ರಷ್ಟು ತಲುಪಿದೆ. ಕಚ್ಚಾ ತೈಲ ದರ ಏರಿಕೆ ಹಾಗೂ ಉತ್ಪಾದನಾ ಸಾಮಗ್ರಿಗಳ ಬೆಲೆ ಏರಿಕೆಯು ಸಗಟು ಹಣದುಬ್ಬರ ಏರಿಕೆಗೆ ಪ್ರಮುಖ ಕಾರಣವಾಗಿದೆ. 2021ರ ಮಾರ್ಚ್ನಲ್ಲಿ ಸಗಣಟು ಹಣದುಬ್ಬರ ಶೇಕಡಾ 7.39 ರಷ್ಟಿತ್ತು. ಒಂದು ವರ್ಷದ ಹಿಂದೆ ಶೇ (-) 1.57 ಇತ್ತು. ಆದರೆ ಈ 2021ರ ಏಪ್ರಿಲ್‌ನಲ್ಲಿ ಸತತ ನಾಲ್ಕನೇ ಬಾರಿಗೆ WPI ಹಣದುಬ್ಬರ …
Read More »ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಯತ್ನಾಳ್ ಬಿಎಸ್ ವೈ ವಿರುದ್ಧ ಮತ್ತೆ ವೈಲೆಂಟ್
ವಿಜಯಪುರ: ಹೆಮ್ಮಾರಿ ಕೊರೊನಾ ರಾಜ್ಯವನ್ನೇ ಹಿಂಡಿ ಹಿಪ್ಪೆ ಮಾಡುತ್ತಿರುವ ಬೆನ್ನಲ್ಲೆ ಮತ್ತೆ ರಾಜಕೀಯ ಗುದ್ದಾಟ ಶುರುವಾಗಿದೆ. ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವೈಲೆಂಟ್ ಆಗಿದ್ದು, ಎಂದಿನಂತೆ ಸಿಎಂ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ. (ಸೋಮವಾರ) ಆರೋಗ್ಯ ಸಚಿವರ ಭೇಟಿ ಬಳಿಕ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ವಿಚಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರ್ಯ ನಮಗೆ ತೃಪ್ತಿ ತಂದಿಲ್ಲ ಎಂದು ನೇರವಾಗಿ ಆರೋಪಿಸಿದ್ದಾರೆ. ರಾಜ್ಯದಲ್ಲಿ …
Read More »ʼಲಾಕ್ ಡೌನ್ʼ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಲಾಕ್ಡೌನ್ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ಡೌನ್ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ಲಾಕ್ಡೌನ್ ಮುಂದುವರಿಕೆ ಬಗ್ಗೆ ಸೂಚನೆ ನೀಡಿದ್ರು. ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡುಬರ್ತಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನ …
Read More »ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು
ಬೆಂಗಳೂರು: ಕೊರೊನಾ ಎರಡನೇ ಅಲೆ ದೇಶದಲ್ಲಿ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಈ ಬೆನ್ನೆಲ್ಲೆ ದಿನಗೂಲಿ ಕಾರ್ಮಿಕರು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದರೆ ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಶಾಲೆಗಳು ಮಾತ್ರ ಶುಲ್ಕ ಕಟ್ಟಿಸಿಕೊಳ್ಳಲು ಮುಂದಾಗಿದೆ. ಮೇ 24ರವರೆಗೆ ಶಾಲೆಗಳ …
Read More »ಕೊರೊನಾ ಹಬ್ಬಲು ಬಿಜೆಪಿ ಕಾರಣ: ಸತೀಶ್ ಜಾರಕಿಹೊಳಿ
ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …
Read More »ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಬೋಟ್ 9 ಜನರ ರಕ್ಷಣೆ
ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಎನ್ ಎಂಪಿಟಿ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಟ್ ನಲ್ಲಿದ 9 ಜನರನ್ನು ರಕ್ಷಣೆ ಮಾಡಲಾಗಿದೆ. ಚಂಡಮಾರುತದಿಂದಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಟಗ್ ಬೋಟ್ ಶನಿವಾರ ಅರಬ್ಬಿ ಸಮುದ್ರದಲ್ಲಿ ಮಗುಚಿಬಿದ್ದಿತ್ತು. ಕಾಪುವಿನ ದೀಪಸ್ತಂಭದಿಂದ 13 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿತ್ತು. ಇಬ್ಬರು ಈಜಿ ದಡ ಸೇರಿದ್ದರೆ ಬೋಟ್ ನಲ್ಲಿದ್ದ 9 ಜನರು …
Read More »ಎಲ್ಲದಕ್ಕೂ ಕಾಂಗ್ರೆಸ್ ದೂರುವ ಬಿಜೆಪಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಈಶ್ವರ ಖಂಡ್ರೆ
ಬೀದರ್: ‘ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದಂತೆ’ ಎಂಬ ಗಾದೆಯಂತೆ, ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿ ಸಾವಿರಾರು ಮುಗ್ಧ ಜನರ ಸಾವಿಗೆ ಕಾರಣವಾದ ಬಿಜೆಪಿ ಈಗ ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ವೆಚ್ಚ ಮಾಡಿದ್ದರೆ ಕೋವಿಡ್ ನಿಯಂತ್ರಿಸಬಹುದಾಗಿತ್ತು ಎಂದು ಆರೋಪಿಸುತ್ತಿರುವುದು ಅರ್ಥ ಹೀನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳ ಬೇಜವಾಬ್ದಾರಿತನ, ಹೊಣೆಗೇಡಿ, ತಿಳಿಗೇಡಿತನದ …
Read More »ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ : ಓರ್ವ ಸವಾರನಿಗೆ ಗಂಭೀರ ಗಾಯ
ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಗಳ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ( ಮೇ.17) ನಡೆದಿದೆ. ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ ಮಾವಿನಕೊಪ್ಪ ಬಡಾವಣೆಯ ಸಾಧಿಕ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಈತ ಬೈಕ್ ನಲ್ಲಿ ತೆರಳುವಾಗ ಮರ ಬಿದ್ದಿದೆ. ಚಿಕಿತ್ಸೆಗಾಗಿ ಈತನನ್ನು ಮಣಿಪಾಲ …
Read More »
Laxmi News 24×7