ಹೈದರಾಬಾದ್, ಮೇ 14; ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದೊಳಗಿನವರ ಮೇಲೆ ಎರಡು ಮತ್ತು 3ನೇ ಹಂತದಲ್ಲಿ ಕ್ಲಿನಿಕಲ್ ಪ್ರಯೋಗ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ದೇಶದಲ್ಲಿ ಈ ಲಸಿಕೆ ನೀಡಲಾಗುತ್ತಿದೆ. ಕೋವಿಡ್ ಸೋಂಕಿನ ವಿರುದ್ಧ ಭಾರತದಲ್ಲಿ ಲಭ್ಯವಿರುವ ಲಸಿಕೆಯಲ್ಲಿ ಕೊವ್ಯಾಕ್ಸಿನ್ ಸಹ ಒಂದು. ಈ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಭಾರತದ ಪ್ರಧಾನ ಔಷಧ …
Read More »ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಯತ್ನ: ಸಿಎಂ
ಬೆಂಗಳೂರು : ರಾಜ್ಯದ ಜನತೆಗೆ ಆದಷ್ಟು ಬೇಗ ಲಸಿಕೆ ಕೊಡಿಸಲು ಸರಕಾರ ಸರ್ವ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಸವ ಜಯಂತಿ ಅಂಗವಾಗಿ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯಕ್ಕೆ ಅಗತ್ಯವಿರುವ ಲಸಿಕೆ ಪಡೆಯಲು ಗ್ಲೋಬಲ್ ಟೆಂಡರ್ ಕರೆಯಲಾಗಿದೆ. ಲಸಿಕೆ, ಆಮ್ಲಜನಕ ಹಾಗೂ ಔಷಧ ನೀಡುವಲ್ಲಿ ಕೇಂದ್ರ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಈಗ ಎಲ್ಲರೂ ಒಟ್ಟಾಗಿ …
Read More »ಬೆಳಗಾವಿ ಜಿಲ್ಲೆಯಲ್ಲಿ 1592 ಪಾಸಿಟಿವ್ ಪ್ರಕರಣ ಪತ್ತೆ : ಹೆಚ್ಚಿದ ಆತಂಕ
ಬೆಳಗಾವಿ: ಕೊರೊನಾ ಪಾಸಿಟಿವ್ ಸಂಖ್ಯೆ ಪ್ರಮಾಣದಲ್ಲಿ ಶುಕ್ರವಾರ ದಿಢೀರ್ ಏರಿಕೆ ಆಗಿದ್ದು, ಒಂದೇ ದಿನ 1592 ಜನರಿಗೆ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಸಾವಿರ ಸಮೀಪ ಅಥವಾ ಸಾವಿರದೊಳಗೆ ಪಾಸಿಟಿವ್ ಬರುತ್ತಿದ್ದ ಜಿಲ್ಲೆಯಲ್ಲಿ ಈಗ ಒಂದೇ ದಿನ 1500 ದಾಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಒಟ್ಟು 43,557 ಜನರಿಗೆ ಸೋಂಕು ತಗುಲಿದಂತಾಗಿದೆ. ಸದ್ಯ 6583 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯಾದ್ಯಂತ ಒಂದೇ ದಿನ 358 ಜನ ಗುಣಮುಖರಾಗಿದ್ದಾರೆ. ಈವರೆಗೆ …
Read More »ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ, ಇದೀಗ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ
ಹಾವೇರಿ: ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಹಾವೇರಿಯಲ್ಲಿ ಮೂಡುತ್ತಿರುವ ಕೊರೋನ ಸೋಂಕನ ಪ್ರಭಾವವನ್ನು ಕಡಿಮೆಗೊಳಿಸಲು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಅಲ್ಲಿ ಮಾಡಲಾಗಿದೆ. ಇದರಿಂದ …
Read More »ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ
ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು : ಹಿರಿಯ ಪತ್ರಕರ್ತ, ಸಿಎಂ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 10 ದಿನಗಳ ಹಿಂದೆ ಮಹಾದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ …
Read More »ಕಾಲ್ ಸೆಂಟರ್ ನ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್- ಸಚಿವ ಅರವಿಂದ ಲಿಂಬಾವಳಿ
ಬೆಂಗಳೂರು :ಆಸ್ಪತ್ರೆಗಳ ವಾಸ್ತವ ಸ್ಥಿತಿಗತಿಗಳನ್ನು ತಿಳಿಯಲು ಕಾಲ್ ಸೆಂಟರ್ ಗಳ ಮೂಲಕ ಆಸ್ಪತ್ರೆಗಳ ರಿಯಾಲಿಟಿ ಚೆಕ್ ಕೂಡ ಮಾಡಲಾಗುತ್ತದೆ. ಇದರಿಂದ ಆಸ್ಪತ್ರೆಗಳಲ್ಲಿ ಬಿಡುಗಡೆಯಾಗುತ್ತಿರುವ ರೋಗಿಗಳು ಮತ್ತು ದಾಖಲಾಗುತ್ತಿರುವ ರೋಗಿಗಳ ನಿಖರ ಮಾಹಿತಿ, ಬೆಡ್ ಗಳ ಲಭ್ಯತೆ ಬಗ್ಗೆ ವಾಸ್ತವ ವರದಿಗಳು ದೊರಕಲು ಸಾಧ್ಯವಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ …
Read More »ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ: 13 ರೋಗಿಗಳು ಸಾವು
ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವಿಗೀಡಾದವರ ಸಂಖ್ಯೆ 75ಕ್ಕೇರಿದೆ. ಸತತ 6 ರಾತ್ರಿ ಇಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಏರಿಳಿತ ಕಂಡು ಬಂದಿದ್ದು, ಕಳೆದ ರಾತ್ರಿ 13 ರೋಗಿಗಳು ಮೃತಪಟ್ಟಿದ್ದಾರೆ. ರೋಗಿಗಳ ಸಂಬಂಧಿಕರು ಸೋಷಿಯಲ್ ಮೀಡಿಯಾದಲ್ಲಿ ಸಹಾಯ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದು, ಆರೋಗ್ಯ ಕಾರ್ಯದರ್ಶಿ ರವಿ ಧವನ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸರಬರಾಜನ್ನು ಪುನಃಸ್ಥಾಪಿಸಲು ಆಸ್ಪತ್ರೆಗೆ ಧಾವಿಸಿದ್ದಾರೆ. …
Read More »ಕೋವಿಡ್ ಉಲ್ಬಣಗೊಳ್ಳಲು ಕೇಂದ್ರ ಸರ್ಕಾರವೇ ಕಾರಣ: ಕೋಳಿವಾಡ
ರಾಣಿಬೆನ್ನೂರು: ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳು ದೇಶದಲ್ಲಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡಲು ಕಾರಣವಾಗಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ. ಸ್ಥಳೀಯ ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, 2021ರ ಮಾರ್ಚ್‌ನಲ್ಲಿಯೇ ತಜ್ಞರು ಎರಡನೇ ಅಲೆಯ ಭೀಕರತೆ ಕುರಿತು ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಅದನ್ನು ಕಡೆಗಣಿಸಿ ವಿದೇಶಗಳಿಗೆ ಲಸಿಕೆ ರಫ್ತು ಮಾಡಿತು. ಕುಂಭಮೇಳದಲ್ಲಿ ಲಕ್ಷಾಂತರ ಜನರು ಸೇರಲು ಅವಕಾಶ ಮಾಡಿಕೊಟ್ಟಿದ್ದು ದೊಡ್ಡ ತಪ್ಪು. ರಾಜ್ಯದಲ್ಲಿ …
Read More »ಮೇ 16 ರಿಂದ 31 ವೇಳೆಗೆ ರಾಜ್ಯಗಳಿಗೆ ಕೇಂದ್ರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಆರೋಗ್ಯ ಇಲಾಖೆ
ನವದೆಹಲಿ: ಮೇ 16 ರಿಂದ 31 ವೇಳೆಗೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ 192 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮೇ 16 ರಿಂದ ಮೇ 31 ರವರೆಗೆ ಒಟ್ಟು 161.99 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಕೋವಿಡ್-19 ಲಸಿಕೆಗಳನ್ನು ಉಚಿತವಾಗಿ ಸರಬರಾಜು …
Read More »ಕೋವಿಡ್ ದುರಂತ: ಪೋಷಕರನ್ನು ಕಳೆದುಕೊಂಡ ಕುಟುಂಬ, ಮಕ್ಕಳಿಗೆ ಆರ್ಥಿಕ ನೆರವು; ಕೇಜ್ರಿವಾಲ್
ನವದೆಹಲಿ:ಕೋವಿಡ್ ಸೋಂಕಿನಿಂದ ದುಡಿಯುತ್ತಿದ್ದ ಕುಟುಂಬದ ವ್ಯಕ್ತಿಯನ್ನು ಕಳೆದುಕೊಂಡಿದ್ದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವುದನ್ನು ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ(ಮೇ 14) ಘೋಷಿಸಿದ್ದಾರೆ. ವರ್ಚುವಲ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ದೆಹಲಿ ಸರ್ಕಾರ ಭರಿಸಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 8,500 ಕೋವಿಡ್ …
Read More »
Laxmi News 24×7