ಯಾದಗಿರಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿವೆ. ಜನ ಆಕ್ಸಿಜನ್, ಬೆಡ್ ಕೊರತೆಯಿಂದ ನರೆಳಿ ಸಾಯುತ್ತಿದ್ದಾರೆ. ಇಷ್ಟಾದರೂ ಕೆಲವರು ಮಾತ್ರ ಉದ್ಧಟತನ ಮೆರೆಯುತ್ತಿದ್ದಾರೆ. ಮೂಗೂ ನೋವು ಆಗುತ್ತೆ ಎಂದು ದಂಪತಿ ಮಾಸ್ಕ್ ಹಾಕದೆ, ಸಿಟಿ ರೌಂಡ್ಸ್ ಹೊಡೆಯುತ್ತಿದ್ದು, ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಸುಭಾಷ್ ವೃತ್ತದಲ್ಲಿ ಘಟನೆ ನಡೆದಿದ್ದು, ಮಾಸ್ಕ್ ಹಾಕದೇ ಮೊಪೆಡ್‍ನಲ್ಲಿ ನಗರ ಸುತ್ತುತ್ತಿದ್ದ ದಂಪತಿಯನ್ನು ಪ್ರಶ್ನಿಸಿದ್ದಕ್ಕೆ ಹೈ ಡ್ರಾಮಾ ಮಾಡಿ, ಉದ್ಧಟತನ ಮೆರೆದಿದ್ದಾರೆ. ಮಾಸ್ಕ್ ಹಾಕದ್ದಕ್ಕೆ …
Read More »ಇಂದು ಕೊರೊನಾ ಕೇಸ್ಗಿಂತ ಗುಣಮುಖರಾದವ್ರ ಸಂಖ್ಯೆ ಹೆಚ್ಚಳ, 24 ಗಂಟೆಗಳಲ್ಲಿ 3,56,082 ಮಂದಿ ಡಿಸ್ಚಾರ್ಜ್
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,29,942 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 3,876 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಇಂದು ವರದಿಯಾಗಿರೋ ಕೇಸ್ಗಳ ಸಂಖ್ಯೆ ಇಳಿಕೆ ಕಂಡಿದೆ. ಹಾಗೇ ಇಂದು ವರದಿಯಾಗಿರೋ ಹೊಸ ಕೇಸ್ಗಳಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು ಸಮಾಧಾನ ಮೂಡಿಸಿದೆ. ನಿನ್ನೆ ಒಂದೇ ದಿನ 3,66,161 ಕೊರೊನಾ ಪ್ರಕರಣಗಳು ಹಾಗೂ 3,754 ಸೋಂಕಿತರ ಸಾವು ವರದಿಯಾಗಿತ್ತು. 3,56,082 ಮಂದಿ ನಿನ್ನೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. …
Read More »ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ
ಬೆಂಗಳೂರು: ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ರಾಜ್ಯದಲ್ಲಿ ಕೊರೋನಾ ನಿರ್ವಹಣೆ …
Read More »ಗುಡ್ ನ್ಯೂಸ್ : ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ಸಮ ಸೆಮಿಸ್ಟರ್ ತರಗತಿಗಳಿಗೆ ಬೋಧಿಸಲು ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಹಿಂದೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆದ್ಯತೆ ನೀಡಿ ಅಥವಾ ಹೊಸ ಅಭ್ಯರ್ಥಿಗಳಿಂದ ಅರ್ಜಿ ಪಡೆದು ಕಾಲೇಜು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ವಿಭಾಗ ಮುಖ್ಯಸ್ಥರುಉ ಹಿರಿಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಸದಸ್ಯರನ್ನು …
Read More »ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ 14 ದಿನ ಮುಂದೂಡಿಕೆ?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇ. 10 ರಿಂದ 24 ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಅಗುತ್ತದೆ ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಬೆಂಗಳುರು ಸೇರಿದಂತೆ …
Read More »ಜಗತ್ತಿನ ಅತಿ ದೊಡ್ಡ ನೆಟ್ವರ್ಕ್ ಈ ಒಂದು ಪ್ರದೇಶ ದಲ್ಲಿಲ್ಲ…?
ಜಮಖಂಡಿ: ಏರ್ಟೆಲ್ ಹಾಗೂ ಜಿಯೋ. ಜಗತ್ತಿನ ಅತ್ಯಂತ ದೊಡ್ಡ ನೆಟ್ವರ್ಕ್ ಅಂತ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಜಾಹೀರಾತು ಹಾಗೂ ಇನ್ನಿತರ ಮೂಲದ ಮೂಲಕ ಜನರಿಗೆ ತಲುಪಿಸುವ ಹಾಗೆ ದೃಶ್ಯ ಮಾಧ್ಯಮ, ಪ್ರಿಂಟ್ ಮೀಡಿಯಾ, ಹಾಗೂ ಡಿಜಿಟಲ್ ಮೀಡಿಯಾ ಮೂಲಕ ತಮ್ಮ ಪ್ರಚಾರ ಮಾಡ್ತೀರಿ, ಇದನ್ನ ಲಕ್ಷಾಂತರ ಜನ ಕೂಡ ವೀಕ್ಷಣೆ ಮಾಡುತ್ತಾರೆ ಆದ್ರೆ ಇವತ್ತು ಕಳೆದ ವರ್ಷ ದಿಂದ ಶಾಲೆ ಮಕ್ಕಳಿಗೆ ರಜೆ ಕೊಟ್ಟ ಹಾಗೆ ನಮ್ಮ ರಾಜ್ಯ …
Read More »ವಾಹನವಿಲ್ಲದೆ ಪರದಾಟ: 7 ಕಿ.ಮೀ ನಡೆದ ತುಂಬು ಗರ್ಭಿಣಿ!
ಕೊಪ್ಪಳ: ನಗರದಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ತುಂಬು ಗರ್ಭಿಣಿಯು ಆಸ್ಪತ್ರೆಗೆ ತೆರಳಲು ಪರದಾಡಿದ ಪ್ರಸಂಗ ಸೋಮವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ನರೇಗಲ್ ಗ್ರಾಮದ ಲಕ್ಷ್ಮೀ ಪೂಜಾರ ಅವರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ಚೆಕಪ್ ಗೆ ಹೋಗಬೇಕಿತ್ತು. ಆದರೆ ಪೊಲೀಸರು ಎಲ್ಲ ವಾಹನಗಳನ್ನ ಹಿಡಿದು ಜಪ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲ ವಾಹನ ಚಾಲಕರು ಪೊಲೀಸರಿಗೆ ಹೆದರಿ ಗರ್ಭಿಣಿಯನ್ನ ಆಸ್ಪತ್ರೆಗೆ ಕರೆ ತರಲು ನಿರಾಕರಿಸಿದ್ದರು. ಇದರಿಂದ ಗ್ರಾಮದಿಂದ 7 …
Read More »‘ಪ್ರಚಾರ ಮಂತ್ರಿ’ ಮೋದಿ; ಪ್ರಧಾನಿ ವಿರುದ್ಧ ಕಾಂಗ್ರೆಸ್ ಕಿಡಿ
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ‘ಪ್ರಚಾರ ಮಂತ್ರಿ’ ಎಂದು ವ್ಯಂಗ್ಯವಾಡಿದೆ. ಈ ಕುರಿತು ಮಾಡಿರುವ ಟ್ವೀಟ್‌ನಲ್ಲಿ, ಬಂಗಾಳದ ಚುನಾವಣೆಗೆ ಹತ್ತಿಪ್ಪತ್ತು ಪ್ರಚಾರ ಸಭೆ ನಡೆಸಿದ ‘ಪ್ರಚಾರ ಮಂತ್ರಿ’ ಮೋದಿಯವರು ಇದುವರೆಗೂ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ನೋಡಲಿಲ್ಲ, ಆಕ್ಸಿಜನ್ ಪೂರೈಕೆ ಪರಿಸ್ಥಿತಿಯ ಅವಲೋಕನ ಸಭೆ ನಡೆಸಲಿಲ್ಲ, ವೈದ್ಯಕೀಯ ತಜ್ಞರ, ವಿಜ್ಞಾನಿಗಳ ಸಭೆ ನಡೆಸಲಿಲ್ಲ, ಪತ್ರಿಕಾಗೋಷ್ಠಿ ನಡೆಸಿ …
Read More »ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …
Read More »ಕೊರೊನಾಗೆ ತಂದೆ ಮಗ ಬಲಿ
ಧಾರವಾಡ: ಸೋಂಕು ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮಗ ಇಬ್ಬರು ಕೊರೊನಾಗೆ ಬಲಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ತಂದೆ ರವೀಂದ್ರನಾಥ ವಸ್ತ್ರದ (74) ಮಗ ವಿಶ್ವನಾಥ ವಸ್ತ್ರದ (47) ಮೃತರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಂದೆ ನಿಧನರಾಗಿದ್ದರೆ. …
Read More »
Laxmi News 24×7